Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು ಲ್ಯಾಟರಲ್ ಎಂಟ್ರಿ ಮೂಲಕ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ರದ್ದುಗೊಳಿಸಿದೆ. ಜಂಟಿ ಕಾರ್ಯದರ್ಶಿ, ನಿರ್ದೇಶಕ ಮತ್ತು ಉಪ ನಿರ್ದೇಶಕರ ಮಟ್ಟದ 45 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಈ ನೇಮಕಾತಿ ಡ್ರೈವ್ ಹೊಂದಿತ್ತು. ವಿವಿಧ ಇಲಾಖೆಗಳಲ್ಲಿ ಜಂಟಿ ಕಾರ್ಯದರ್ಶಿ / ನಿರ್ದೇಶಕ / ಉಪ ಕಾರ್ಯದರ್ಶಿ ಮಟ್ಟದ 45 ಹುದ್ದೆಗಳಿಗೆ ಲ್ಯಾಟರಲ್ ನೇಮಕಾತಿಗೆ ಸಂಬಂಧಿಸಿದ ಜಾಹೀರಾತು ಸಂಖ್ಯೆ 54/2024 ಅನ್ನು ಆಗಸ್ಟ್ 17 ರಂದು ಉದ್ಯೋಗ ಸುದ್ದಿ, ವಿವಿಧ ಪತ್ರಿಕೆಗಳು ಮತ್ತು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಕೋರಿಕೆ ಪ್ರಾಧಿಕಾರದ ಕೋರಿಕೆಯ ಮೇರೆಗೆ 2024 ಅನ್ನು ರದ್ದುಪಡಿಸಲಾಗಿದೆ” ಎಂದು ಯುಪಿಎಸ್ಸಿ ನೋಟಿಸ್ನಲ್ಲಿ ತಿಳಿಸಿದೆ. ಇದಕ್ಕೂ ಮುನ್ನ ಸಿಬ್ಬಂದಿ ಮತ್ತು ತರಬೇತಿ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಪತ್ರ ಬರೆದು, ಆಗಸ್ಟ್ 17, 2024 ರಂದು ಹೊರಡಿಸಲಾದ ಲ್ಯಾಟರಲ್ ಎಂಟ್ರಿ ನೇಮಕಾತಿಯ ಜಾಹೀರಾತನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು. ಲ್ಯಾಟರಲ್ ಪ್ರವೇಶವನ್ನು 2005 ರಲ್ಲಿ ಎರಡನೇ ಆಡಳಿತ…
ನವದೆಹಲಿ: ಮುಂಬರುವ ಜೀವನಚರಿತ್ರೆ ಚಲನಚಿತ್ರವು ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಸ್ಪೂರ್ತಿದಾಯಕ ಪ್ರಯಾಣವನ್ನು ನಿರೂಪಿಸುತ್ತದೆ ಎಂದು ತಯಾರಕರು ಮಂಗಳವಾರ ಪ್ರಕಟಿಸಿದ್ದಾರೆ. ಇನ್ನೂ ಹೆಸರಿಡದ ಈ ಜೀವನಚರಿತ್ರೆಯನ್ನು ಭೂಷಣ್ ಕುಮಾರ್ ಅವರ ಟಿ-ಸೀರೀಸ್ ನಿರ್ಮಿಸಲಿದ್ದು, “ಸಚಿನ್: ಎ ಬಿಲಿಯನ್ ಡ್ರೀಮ್ಸ್” ಮತ್ತು ಮುಂಬರುವ ಅಮೀರ್ ಖಾನ್ ಅಭಿನಯದ “ಸಿತಾರೆ ಜಮೀನ್ ಪರ್” ಚಿತ್ರಗಳಿಗೆ ಹೆಸರುವಾಸಿಯಾದ ರವಿ ಭಾಗ್ಚಂದ್ಕಾ ಸಹ-ನಿರ್ಮಾಣ ಮಾಡಲಿದ್ದಾರೆ. ಈ ಚಿತ್ರವು ಸಿಂಗ್ ಅವರ ಸಾಟಿಯಿಲ್ಲದ ಪ್ರಯಾಣ ಮತ್ತು ಕ್ರಿಕೆಟ್ಗೆ ನೀಡಿದ ಕೊಡುಗೆಗಳ ಭವ್ಯ ಆಚರಣೆಯಾಗಿದೆ. ಅವರ ವೃತ್ತಿಜೀವನದ ಸಾರವನ್ನು ಸೆರೆಹಿಡಿಯುತ್ತದೆ. 2007 ರ ಟಿ 20 ವಿಶ್ವಕಪ್ನಲ್ಲಿ ಮರೆಯಲಾಗದ ಆರು ಸಿಕ್ಸರ್ಗಳು, ಅವರ ಧೈರ್ಯಶಾಲಿ ಆಫ್-ಫೀಲ್ಡ್ ಕದನಗಳು ಮತ್ತು ನಂತರ 2012 ರಲ್ಲಿ ಕ್ರಿಕೆಟ್ಗೆ ಮರಳಿದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಸಿಂಗ್, ತಮ್ಮ ಜೀವನ ಕಥೆ ಸವಾಲುಗಳನ್ನು ಜಯಿಸಲು ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಆಶಿಸುತ್ತೇನೆ ಎಂದು…
ಬೆಂಗಳೂರು: ನಗರದ ಸಿಲಿಕಾನ್ ಸಿಟಿಯ ಕೇಂದ್ರ ಬಿಂದುವಾಗಿರುವಂತ ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನು ಮರು ನಾಮಕರಣಗೊಳಿಸಲಾಗುತ್ತಿದೆ. ಇನ್ಮುಂದೆ ಎಲೆಕ್ಟ್ರಾನಿಕ್ ಸಿಟಿ ಹೆಸರು ಮರು ನಾಮಕರಣಗೊಳಿಸಲಾಗಿತ್ತು, ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರಿಸಲಾಗಿದೆ. ಇಂದು ಸಿಎಂ ಸಿದ್ಧರಾಮಯ್ಯ ಈ ಕುರಿತಂತೆ ಮಾತನಾಡಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೆಸರನ್ನು ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರು ನಾಮಕರಣಗೊಳಿಸುತ್ತಿರುವುದಾಗಿ ಘೋಷಿಸಿದರು. ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ…
ಬೆಂಗಳೂರು: ನಾವು ಜನರಿಗೆ ಮನವರಿಕೆ ಮಾಡಲು ಪಾದಯಾತ್ರೆ ಮಾಡಿದೆವು. ಆದರೆ, ನೀವ್ಯಾಕೆ ನಮ್ಮಿಂದ ಮುಂಚೆ ಹೋಗಿ ನಾನು ಕಳ್ಳನಲ್ಲ; ನನ್ನಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಹೇಳಿದ್ದೀರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದರು. ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ನಿರಪರಾಧಿ ಎಂದು ಸಾಬೀತುಪಡಿಸುವ ಬದಲಾಗಿ ಹಿಂದುಳಿದವರು ಎಂಬ ರಕ್ಷಣಾ ಕವಚದಡಿ ಆಶ್ರಯ ಪಡೆಯಲೆತ್ನಿಸುತ್ತಿದ್ದಾರೆ ಎಂದು ಟೀಕಿಸಿದರು. ಸದನದಲ್ಲಿ ನಮ್ಮ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಇನ್ನೂ ಒಂದು ದಿನ ಸದನ ಇದ್ದರೂ ನೀವ್ಯಾಕೆ ಓಡಿ ಹೋದಿರಿ ಎಂದು ಕೇಳಿದರು. ನೀವು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೀರಲ್ಲವೇ? ಎಂದರಲ್ಲದೆ, ನಮ್ಮ ತಪ್ಪಿಲ್ಲದ ಕಾರಣ ಹಿಂದೆ ಹಿಂದೆ ಬಂದು ನಾವು ಉತ್ತರ ಕೊಟ್ಟೆವಾ ಎಂದು ಪ್ರಶ್ನಿಸಿದರು. ಕೋವಿಡ್ ಮಹಾಮಾರಿ ಇದ್ದರೂ ಕಾಂಗ್ರೆಸ್ಸಿಗರು ಮೇಕೆದಾಟು ಪಾದಯಾತ್ರೆ ಮಾಡಿ ನಾಟಕ ಪ್ರದರ್ಶನ ಮಾಡಿದ್ದಾಗಿ ಆಕ್ಷೇಪಿಸಿದರು. ಆದರೂ ನಾವು ಅಡ್ಡಿ ಮಾಡಲಿಲ್ಲ ಎಂದರಲ್ಲದೆ, ಹಿಂದುಳಿದ ಸಮಾಜಕ್ಕೆ ಸೇರಿದ ಪ್ರಾಮಾಣಿಕ ಪ್ರಧಾನಿಯವರ…
ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಪ್ರತಿಭಟನೆ ನಡೆಸುವ ವೇಳೆ ಮಾನ್ಯ ರಾಜ್ಯಪಾಲರ ಫೋಟೊಗೆ ಚಪ್ಪಲಿಯಿಂದ ಹೊಡೆದುದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಟೀಕಿಸಿದರು. ಎಂಎಲ್ಸಿ ಐವಾನ್ ಡಿಸೋಜ ಅವರು ರಾಜ್ಯಪಾಲರಿಗೆ ಧಮ್ಕಿ ಹಾಕುವ ರೀತಿ ಮಾತನಾಡಿದ್ದಾರೆ. ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ರಾಜ್ಯಪಾಲರನ್ನು ಓಡಿಸುವುದಾಗಿ ತಿಳಿಸಿದ್ದು, ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ಬರುತ್ತಿದೆ. ಅವರ ಹೇಳಿಕೆ ಖಂಡನೀಯ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ…
ಬೆಂಗಳೂರು: ಘನತೆವೆತ್ತ ರಾಜ್ಯಪಾಲರಿಗೆ ಧಮ್ಕಿ ಹಾಕುವ ಕೆಲಸವನ್ನು ಸಚಿವ ಜಮೀರ್ ಅಹ್ಮದ್ ಅವರು ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜುನಾಥ್ ಅವರು ಆಕ್ಷೇಪಿಸಿದರು. ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಇಂದು ಭೇಟಿ ನೀಡಿ ದೂರು ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಆಡಳಿತ ಪಕ್ಷವಾದ ಕಾಂಗ್ರೆಸ್ಸಿನವರು ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಲು ಅವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. 3 ಜನ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ತನಿಖೆ ಮಾಡಲು ಅವರು ಅವಕಾಶ ಕೊಟ್ಟಿದ್ದಾರೆ. ರಾಜ್ಯಪಾಲರ ಭಿತ್ತಿಪತ್ರಕ್ಕೆ ಚಪ್ಪಲಿಯಲ್ಲಿ ಹೊಡೆದ ಇವರು ಸಂವಿಧಾನಕ್ಕೆ ಗೌರವ ಕೊಡುತ್ತಾರಾ ಎಂದು ಪ್ರಶ್ನಿಸಿದರು. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯಪಾಲರೇ ಕಾರಣ ಎಂದು ಜಮೀರ್ ಅಹ್ಮದ್ ಅವರು ಹೇಳಿದ್ದು, ಅವರ ವಿರುದ್ಧ ದೂರು ಕೊಡಲಾಗಿದೆ ಎಂದರು. ಜಮೀರ್ ಅಹ್ಮದ್ ಅವರನ್ನು ಬಂಧಿಸಲು ಕೋರಿದ್ದಾಗಿ ಹೇಳಿದರು. ಐವಾನ್ ಡಿಸೋಜಾ, ರಕ್ಷಿತ್…
ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ ಕಾರಜೋಳ ಅವರು ತಿಳಿಸಿದರು. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾಂಗ್ರೆಸ್ಸಿನದು ಸರಕಾರಿ ಪ್ರೇರೇಪಿತ ಪ್ರತಿಭಟನೆ. ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯಪಾಲರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ಷೇಪಿಸಿದರು. ಪ್ರತಿಭಟನೆ ನಡೆಸುವ ವೇಳೆ ಮಾನ್ಯ ರಾಜ್ಯಪಾಲರ ಫೋಟೊಗೆ ಚಪ್ಪಲಿಯಿಂದ ಹೊಡೆದುದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಟೀಕಿಸಿದರು. ಎಂಎಲ್ಸಿ ಐವಾನ್ ಡಿಸೋಜ ಅವರು ರಾಜ್ಯಪಾಲರಿಗೆ ಧಮ್ಕಿ ಹಾಕುವ ರೀತಿ ಮಾತನಾಡಿದ್ದಾರೆ. ಬಾಂಗ್ಲಾದ ಪರಿಸ್ಥಿತಿ ಕರ್ನಾಟಕದಲ್ಲೂ ಬರಲಿದೆ; ರಾಜಭವನಕ್ಕೆ ನುಗ್ಗಿ ರಾಜ್ಯಪಾಲರನ್ನು ಓಡಿಸುವುದಾಗಿ ತಿಳಿಸಿದ್ದು, ಐವಾನ್ ಡಿಸೋಜ ಅವರಿಗೆ ಪಾಕ್ ಉಗ್ರರ ನಂಟಿದೆಯೇ ಎಂಬ ಸಂಶಯ ಬರುತ್ತಿದೆ. ಅವರ ಹೇಳಿಕೆ ಖಂಡನೀಯ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ…
ಅಜ್ಮೀರ್: 1992ರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದ್ದು, ಮೂರು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ಅಂತ್ಯ ಹಾಡಿದೆ. ನಫೀಸ್ ಚಿಸ್ತಿ, ನಸೀಮ್ ಅಲಿಯಾಸ್ ಟಾರ್ಜಾನ್, ಸಲೀಮ್ ಚಿಸ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಘನಿ ಮತ್ತು ಸೈಯದ್ ಜಮೀನ್ ಹುಸೇನ್ ಎಂಬ ಆರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5 ಲಕ್ಷ ರೂ. 1992 ರಲ್ಲಿ ದೇಶಾದ್ಯಂತ ಆಘಾತಗಳನ್ನು ಉಂಟುಮಾಡಿದ ಈ ಹಗರಣವು ಆರೋಪಿಗಳು ಬಾಲಕಿಯರ 250 ಕ್ಕೂ ಹೆಚ್ಚು ನಗ್ನ ಛಾಯಾಚಿತ್ರಗಳನ್ನು ಪಡೆದುಕೊಂಡು, 100 ಕ್ಕೂ ಹೆಚ್ಚು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಮೇಲೆ ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲು ಬ್ಲ್ಯಾಕ್ಮೇಲ್ ಮಾಡಿದ್ದರು. ದುರಂತವೆಂದರೆ, ಆಘಾತದಿಂದಾಗಿ ಆರು ಹುಡುಗಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತ್ರಸ್ತರನ್ನು ಬ್ಲ್ಯಾಕ್ಮೇಲ್ ಮಾಡಲು ಆರೋಪಿಗಳಿಗೆ ಸಹಾಯ ಮಾಡಲು ನಗ್ನ ಛಾಯಾಚಿತ್ರಗಳನ್ನು ಮುದ್ರಿಸುವಲ್ಲಿ ಮತ್ತು ಪ್ರಸಾರ ಮಾಡುವಲ್ಲಿ ಫೋಟೋ…
ಮಂಗಳೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಅನ್ಯಕೋಮಿನ ವಿದ್ಯಾರ್ಥಿನಿಗೆ ಮತ್ತೊಂದು ಕೋಮಿನ ಅಪ್ರಾಪ್ತ ವಿದ್ಯಾರ್ಥಿ ಚಾಕುವಿನಿಂದ ಕೈಗೆ ಇರಿದಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಹಿಂದೂ ವಿದ್ಯಾರ್ಥಿಯೊಬ್ಬ, ಮುಸ್ಲೀಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿರುವುದಾಗಿ ಹೇಳಲಾಗುತ್ತಿದೆ. ಚಾಕು ಇರಿತಕ್ಕೆ ಒಳಗಾದಂತ ವಿದ್ಯಾರ್ಥಿನಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಬ್ಬರು ವಿದ್ಯಾರ್ಥಿಗಳು ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನವರು. ಸಹಪಾಠಿಯೇ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ಈ ಘಟನೆಯ ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಅಪ್ರಾಪ್ತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/important-information-for-state-government-employees-these-documents-are-mandatory-to-apply-for-pension/ https://kannadanewsnow.com/kannada/breaking-country-cant-wait-for-another-rape-sc/
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಿವೃತ್ತ ವೇತನದ ಕುರಿತಂತೆ ರಾಜ್ಯ ಸರ್ಕಾರವು ನಿವೃತ್ತಿ ವೇತನ ನಿಯಮಗಳನ್ನು ಸರಳೀಕರಿಸಿದ್ದು, ನಿವೃತ್ತಿ ವೇತನ ಕಡತಗಳನ್ನು ವಿಳಂಬ ಮಾಡದೆ ಸಿದ್ದಪಡಿಸಬೇಕು. ವಿಳಂಬವಾದಲ್ಲಿ ನೌಕರನಿಗೆ ಆರ್ಥಿಕ ತೊಂದರೆಗಳಾಗುತ್ತವೆ ಎಂದು ಸೂಚನೆ ನೀಡಲಾಗಿದೆ. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ನಾನ್ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದಿರಬೇಕು. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸಬೇಕು. ನಿವೃತ್ತನಾಗುವ ಸರ್ಕಾರಿ ನೌಕರನಿಂದ ಪಡೆದ ನಮೂನೆ-1ಬಿ ವಿವರಗಳನ್ನು ಮತ್ತು ಇತರೆ ದಾಖಲೆಗಳನ್ನು ನಿವೃತ್ತಿ ದಿನಾಂಕಕ್ಕಿಂತ ಮೂರು ತಿಂಗಳು ಮುಂಚಿತವಾಗಿ ಮಹಾಲೇಖಪಾಲರಿಗೆ ಕಳುಹಿಸಬೇಕು. 285 ಮೇರೆಗೆ ನಿವೃತ್ತರಾಗುವ ನೌಕರರ ವಿವರಗಳನ್ನು 1 ಬಿ ನಮೂನೆಯಲ್ಲಿ ಸ್ವಯಂ ನಿವೃತ್ತಿ ಅಂಗೀಕಾರ ಆದೇಶ ಬಂದ ನಂತರ ಪಡೆದು ನಿವೃತ್ತಿ ವೇತನ ಕಡತ ತಯಾರಿಸಬೇಕು. ಮಹಾಲೇಖಪಾಲರು ಪ್ರತಿ ವರ್ಷದ ಜನವರಿ31 ಮತ್ತು ಜುಲೈ-31 ನಲ್ಲಿ ಮುಂದಿನ 12 ಮತ್ತು 18…