Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ( Congress Government ) ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ವರ್ಗಾವಣೆ ದಂಧೆಯಲ್ಲಿ ಸರ್ಕಾರ ತೊಡಗಿರುವಂತ ಗಂಭೀರ ಆರೋಪ ಮಾಡುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಕೆಪಿಟಿಸಿಎಲ್ ನಿಂದ 226 ಕಿರಿಯ ಇಂಜಿನಿಯರ್ ವರ್ಗಾವಣೆಯಲ್ಲೂ ( Junior Engineer Transfer ) ಕಾಸಿಗಾಗಿ ಪೋಸ್ಟಿಂಗ್ ವಾಸನೆ ಎದ್ದು ಕಾಣುತ್ತಿದೆ. ಪ್ರತಿ ಹುದ್ದೆಗೂ ಷರತ್ತು ಮೀರಿ ಪೋಸ್ಟಿಂಗ್ ಮಾಡಿರೋ ಗಂಭೀರ ಆರೋಪ ಕೇಳಿ ಬಂದಿದೆ. 226 ಜೆಇ ಅಲ್ಲ, ಡಬಲ್ ವರ್ಗಾವಣೆ ದಿನಾಂಕ 31-07-2024ರಂದು ಕೆಪಿಟಿಸಿಎಲ್ ನಿಂದ ಕಿರಿಯ ಇಂಜಿನಿಯರ್ ( KPTCL Junior Engineer – JE ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಗ್ರೂಪ್-ಸಿ ಹಾಗೂ ಡಿ ಪದವೃಂದದ 226 ನೌಕರರನ್ನು ವರ್ಗಾವಣೆ ಮಾಡಲಾಗಿದೆ. ಇದು ಕೇವಲ ಮೇಲ್ನೋಟಕ್ಕೆ 226 ವರ್ಗಾವಣೆಯಾದರೂ, ಆಂತರಿಕವಾಗಿ ಮಾಡಿರುವ ವರ್ಗಾವಣೆ ದಂಧೆ ಮಾತ್ರ ಡಬಲ್. ಅಂದರೆ ವರ್ಗಾವಣೆ ಮಾಡಿರುವುದು 226 ಜೆಇ ಆದರೇ, ಅವರನ್ನು ವರ್ಗಾವಣೆ ಮಾಡಿರುವಂತ ಸ್ಥಳದಲ್ಲಿದ್ದಂತ ಜೆಇಗಳನ್ನು ಆಂತರಿಕ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವನ್ನೊಳಗೊಂಡ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ಆ ವಿಚಾರಣೆಯ ಸಂಪೂರ್ಣ ಸಾರಾಂಶ ಮುಂದೆ ಓದಿ. ಸಿದ್ದರಾಮಯ್ಯನವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಆಧರಿಸಿ ಮುಂದಿನ ವಿಚಾರಣೆಯವರೆಗೆ ಯಾವುದೆ ಕ್ರಮ ತೆಗೆದುಕೊಳ್ಳದಂತೆ ಗೌರವಾನ್ವಿತ ಉಚ್ಚ ನ್ಯಾಯಾಲಯ ಆದೇಶ ಮಾಡಿದೆ. 1. ರಾಜ್ಯಪಾಲರು ರಾಜ್ಯದ ಮುಖ್ಯಮಂತ್ರಿಗಳ ವಿರುದ್ಧ ನೀಡಿದ್ದ ಪ್ರಾಸಿಕ್ಯೂಷನ್ ಪರ್ಮಿಷನ್ ಕುರಿತಂತೆ ಗೌರವಾನ್ವಿತ ಉಚ್ಚ ನ್ಯಾಯಾಲಯವು ಇಂದು ದೀರ್ಘ ಸಮಯ ಎರಡೂ ಕಡೆಯ ವಾದವನ್ನು ಆಲಿಸಿತು. 2. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರೆ ಅಪಿಯರ್ ಆಗಿದ್ದರು. ಅವರು ರಾಜ್ಯಪಾಲರ ಪರವಾಗಿ ವಾದ ಮಂಡಿಸುವ ಜೊತೆಗೇನೆ ಪ್ರತಿವಾದಿಗಳ ಪರವಾಗಿಯೂ ಆಗಾಗ ಮಾತನಾಡಿದರು. [ಟಿ ಜೆ ಅಬ್ರಹಾಂ, ಸ್ನೇಹ ಮಯಿ ಕೃಷ್ಣ ಮತ್ತು ಜೆಡಿಎಸ್ನ ಕಾನೂನು ಕೋಶದ…
ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಸ್ ಆರ್ಭಟಿಸಿದೆ. ಬೆಂಗಳೂರಲ್ಲಿ 6 ಹಾಗೂ ಶಿವಮೊಗ್ಗದಲ್ಲಿ ಮೂವರು ಸೇರಿದಂತೆ 9 ಪ್ರಕರಣಗಳು ಪತ್ತೆಯಾಗಿವೆ. ಇಂದಿನ ವರದಿಯಂತೆ ಕರ್ನಾಟಕದಲ್ಲಿ ಝೀಕಾ ವೈರಸ್ ಗೆ 73 ವರ್ಷದ ವೃದ್ಧ ಸಾವನ್ನಪ್ಪುವ ಮೂಲಕ ಮೊದಲ ಬಲಿಯಾಗಿದೆ. ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ವೇಳೆ ಮಂಕಿಪಾಕ್ಸ್ ವೈರಸ್ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು. ರಾಜ್ಯದಲ್ಲಿ ಹಾಗೂ ದೇಶದಲ್ಲಿ ಇಲ್ಲಿಯ…
ಬೆಂಗಳೂರು: 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ JEE/NEET ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಮೂಲಕ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ NEET ಹಾಗೂ JEE (MAINS & ADVANCED) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದ್ದಾರೆ. ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿ.ಯು.ಸಿ/10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ DO:25.08.2024 ಸಂಜೆ 5:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ಅನ್ನು…
ಬೆಂಗಳೂರು: ರಾಜ್ಯಪಾಲರು ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಸಲ್ಲಿಸಲಾಗಿತ್ತು. ಇಂದು ರಿಟ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್.29ಕ್ಕೆ ಮುಂದೂಡಿದೆ. ಇಂತಹ ನ್ಯಾಯಾಲಯದ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆ. ಸತ್ಯಮೇವ ಜಯತೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆಯಿಟ್ಟಿರುವ, ಈ ನೆಲದ ಕಾನೂನನ್ನು ಗೌರವಿಸುವ ಓರ್ವ ಪ್ರಜೆಯಾಗಿ ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಘನ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದೇನೆ ಎಂದು ಹೇಳಿದ್ದಾರೆ. ಉಚ್ಚ ನ್ಯಾಯಾಲಯವು ಈ ವಿಚಾರವನ್ನು ಆಲಿಸಿ, ಮುಂದಿನ ವಿಚಾರಣೆಯ ವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂಬ ಮಧ್ಯಂತರ ಆದೇಶವನ್ನು ನೀಡಿದೆ ಎಂದಿದ್ದಾರೆ.…
ಬೆಂಗಳೂರು: ಶಿವಮೊಗ್ಗಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಲ್ಲೆಯ ಮೂವರಿಗೆ ಝೀಕಾ ವೈರಸ್ ದೃಢಪಟ್ಟಿದೆ. ಇವರಲ್ಲಿ ಒಬ್ಬರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗುಣಮುಖರಾಗಿದ್ದಾರೆ. ಈ ಕುರಿತಂತೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು 9 ಝೀಕಾ ವೃರಸ್ ಪ್ರಕರಣಗಳು ಪತ್ತೆಯಾಗಿದ್ದು, ಝೀಕಾ ಹೆಚ್ಚಾಗಿ ಕಂಡುಬಂದಿರುವ ಸ್ಥಳಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಿ. ಶಿವಮೊಗ್ಗ 3 ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಝೀಕಾ ವೈರಸ್ ಪತ್ತೆಯಾಗಿದೆ. ಬೆಂಗಳೂರಿನ ಜಿಗಣಿಯಲ್ಲಿ 5 ಮಹಿಳೆಯರಿಗೆ ಝೀಕಾ ಪತ್ತೆಯಾಗಿದ್ದು, ವೈರಸ್ ಗೆ ತುತ್ತಾದ ಗರ್ಭೀಣಿ ಸ್ತ್ರೀಯರ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗದ 73 ವರ್ಷದ…
ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್, ಝೀಕಾ ವೈರಸ್ ಬಗ್ಗೆ ಮುಂಜಾಗೃತ ಕ್ರಮವನ್ನು ವಹಿಸಲಾಗಿದೆ. ಇದರ ನಡುವೆ ಈವರೆಗೆ 9 ಝೀಕಾ ವೈರಸ್ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿದ್ದಾವೆ. ಜನರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ವೇಳೆ ಮಂಕಿಪಾಕ್ಸ್ ವೈರಸ್ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು. ರಾಜ್ಯದಲ್ಲಿ ಹಾಗೂ…
ಬೆಂಗಳೂರು: ಕಾಂಗ್ರೆಸ್ಸಿನವರು ಮಾನ್ಯ ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ. ರಾಜ್ಯಪಾಲರು ದಲಿತ ವರ್ಗಕ್ಕೆ ಸೇರಿದವರು, ಅತ್ಯಂತ ಹಿಂದುಳಿದ ವರ್ಗದಿಂದ ಬಂದವರು; ದಲಿತರ ಬಗ್ಗೆ ಕಾಳಜಿ ಇದೆ ಎಂದು ಹೇಳುತ್ತಾರೆ, ದಲಿತರ ಉದ್ಧಾರಕರು ತಾವೇ ಅಂತಾರೆ. ಕಾಂಗ್ರೆಸ್ ಪಕ್ಷದವರು ಇವತ್ತು ಈ ರೀತಿ ನಡೆದುಕೊಂಡಿದ್ದು ಗಂಭೀರವಾದ ವಿಚಾರ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರಿಗೆ ಬಾಂಗ್ಲಾದಲ್ಲಿ ಬಂದAತಹ ಪರಿಸ್ಥಿತಿ ಬರಬಹುದು ಎಂದು ಕಾಂಗ್ರೆಸ್ಸಿನ ನಾಯಕರೊಬ್ಬರು ಹೇಳಿದ್ದಾರೆ ಎಂದು ಅವರು ಆಕ್ಷೇಪಿಸಿದರು. ಕಾನೂನು ಹೋರಾಟ ಮಾಡಿ ಆದರೆ ಹಿಂಸಾಚಾರ ಪ್ರತಿಭಟನೆ ಯಾಕೆ? ಎಂದು ಅವರು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಕಲ್ಲು ತೂರಿದ್ದಾರೆ, ಮೈಸೂರಲ್ಲಿ ಹಿಂಸಾಚಾರ…
ಬೆಂಗಳೂರು : “ಪ್ರಾಥಮಿಕ ಶಿಕ್ಷಣದಲ್ಲಿ ಕರ್ನಾಟಕ ಕ್ರಾಂತಿ ಮಾಡಬೇಕು. ರಾಜ್ಯದ ಎಲ್ಲಾ ಕಂಪೆನಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಮೂರು ವರ್ಷಗಳಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣದ ಕನಸನ್ನು ನನಸು ಮಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಿಎಸ್ ಆರ್ ಶಿಕ್ಷಣ ಸಮ್ಮೇಳನದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ಕೆಪಿಎಸ್ ಶಾಲೆಗಳ ನಿರ್ಮಾಣಕ್ಖಾಗಿ ಸಮತ್ವ ಎನ್ನುವ ಕಾರ್ಯಕ್ರಮವನ್ನು ಸರ್ಕಾರ ಪರಿಚಯಿಸುತ್ತಿದೆ. ಶಾಲೆಗಳ ನಿರ್ಮಾಣ ಮಾಡುವ ಕಂಪೆನಿಗಳಿಗೆ ಗುತ್ತಿಗೆದಾರರು, ಶಾಲಾ ಕಟ್ಟಡ ವಾಸ್ತುಶಿಲ್ಪಿಗಳು ಸೇರಿದಂತೆ ತಾಂತ್ರಿಕ ಬೆಂಬಲ ನೀಡಲಾಗುವುದು. ಸರ್ಕಾರದ ಸಲಹೆ ಪಡೆದು ಕಂಪೆನಿಗಳು ಅವರ ಕಲ್ಪನೆಯ ವಿನ್ಯಾಸದ ಶಾಲೆಗಳನ್ನು ನಿರ್ಮಿಸಬಹುದು.” “ಕರ್ನಾಟಕದಲ್ಲಿ 43 ಬೃಹತ್ ಕಂಪೆನಿಗಳಿವೆ. ಇವುಗಳು 4 ಲಕ್ಷದ 8 ಸಾವಿರ ಕೋಟಿ ಲಾಭಾಂಶವನ್ನು ಘೋಷಿಸಿಕೊಂಡಿವೆ. ಇವುಗಳ ಸಿಎಸ್ ಆರ್ ಅನುದಾನದ ಮೊತ್ತ 8.63 ಸಾವಿರ ಕೋಟಿಯಾಗಲಿದೆ. ಇದರಲ್ಲಿ 6.6 ಸಾವಿರ ಕೋಟಿಯನ್ನು ಶಿಕ್ಷಣದ ಮೇಲೆ ಖರ್ಚು ಮಾಡುತ್ತಿವೆ. ಕೇವಲ 50 ಕಂಪೆನಿಗಳು 10…
ಬೆಂಗಳೂರು: ಕರ್ನಾಟಕಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಗಣಿಯಲ್ಲಿ ಐವರಿಗೆ ಝೀಕಾ ವೈರಸ್ ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಸಾರ್ವಜನಿಕರು ಝಿಕಾ ವೈರಸ್ ಬಗ್ಗೆ ಭಯಬೇಡ. ಕೆಲ ಎಚ್ಚರಿಕೆ ಇರಲಿ ಅಂತ ಆರೋಗ್ಯ ಇಲಾಖೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಝಿಕಾ ವೈರಸ್ ಲಕ್ಷಣಗಳು ಅಂದ್ರೆ ಅತಿಯಾದ ತೆಲೆನೋವು, ಕೆಂಪಾದ ಕಣ್ಣು, ಜ್ವರ ಹಾಗೂ ಮೈಯಲ್ಲಿ ಗಂಧೆಗಳು ಉಂಟಾಗುತ್ತವೆ ಎಂದು ತಿಳಿಸಿದೆ. ಈ ಲಕ್ಷಣಗಳು ಕಂಡು ಬಂದಲ್ಲಿ, ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಅದು ಝೀಕಾ ವೈರಸ್ ಹೌದೋ ಅಲ್ಲವೋ ಎನ್ನುವ ಬಗ್ಗೆಯೂ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದೆ. https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/ https://kannadanewsnow.com/kannada/congress-worker-dies-of-cardiac-arrest-during-press-conference-in-bengaluru/