Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮಾತೃ ಇಲಾಖೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಇಲಾಖಾ ನೌಕರರೂ ಮಾತೃ ಹೃದಯದಿಂದ ಜನ ಸೇವೆ ಮಾಡಬೇಕೆಂದು ಮದ್ದೂರು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿ.ಎ ಮುರಳೀಧರ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾಗಿದ್ದ ಎಚ್.ಮಂಜುನಾಥ್ ಅವರು ಮಂಡ್ಯ ತಾಲೂಕಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ರಾಜಸ್ವ ನಿರೀಕ್ಷಕ ವಿ.ಎ.ಮುರಳೀಧರ ಅವರನ್ನು ಜಿಲ್ಲಾ ಸಮಿತಿಯಿಂದ ಅವರನ್ನು ನೇಮಕ ಮಾಡಲಾಗಿದೆ. ವಿ.ಎ.ಮುರಳೀಧರ ಅವರು ದಶಕಗಳ ಮೇಲ್ಪಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಅವರಿಗೆ ತಾಲೂಕು ಅಧ್ಯಕ್ಷರಾಗಿ ನೇಮಕ ಮಾಡಿದ್ದು ಖುಷಿ ವಿಚಾರ. ನೌಕರರ ಸಹಕಾರ ಇಲ್ಲದೆ ಜನಸೇವೆ ಹಾಗೂ ಉತ್ತಮ ಆಡಳಿತ ನೀಡಲು ಅಸಾಧ್ಯ. ಕಂದಾಯ ಇಲಾಖೆ ಪ್ರತಿದಿನ ಒಂದಲ್ಲಾ ಒಂದು ರೀತಿಯಲ್ಲಿ ಜನರ ಜೊತೆಗೆ…
ಮಂಡ್ಯ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದನ್ನು ಖಂಡಿಸಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಮತ್ತು ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಶುಕ್ರವಾರ ಮದ್ದೂರು ಪಟ್ಟಣ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮದ್ದೂರು ಪಟ್ಟಣ ವ್ಯಾಪ್ತಿಯ ಸರ್ಕಾರಿ ಕಛೇರಿಗಳು, ಬ್ಯಾಂಕ್, ಆಸ್ಪತ್ರೆ, ಶಾಲಾ ಕಾಲೇಜುಗಳು, ಚಿತ್ರ ಮಂದಿರಗಳು, ಮೆಡಿಕಲ್ ಶಾಪ್ ಹಾಗೂ ಅಗತ್ಯ ವಸ್ತುಗಳ ಮಾರಾಟ ಹೊರತು ಪಡಿಸಿ ಉಳಿದೆಲ್ಲಾ ವ್ಯಾಪಾರ ವಹಿವಾಟು ಬೆಳಿಗ್ಗೆಯಿಂದ ಸಂಜೆವರೆಗೂ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಹಿಂದೂ ಜಾಗರಣ ವೇದಿಕೆ, ವಿಶ್ವ ಒಕ್ಕಲಿಗರ ಸಂಘ, ಆರ್.ಎಸ್.ಎಸ್ ಧರ್ಮಸ್ಥಳ ಸಮಿತಿ, ವಕೀಲರ ಸಂಘ, ವರ್ತಕರ ಸಂಘ, ಜೆಡಿಎಸ್, ಬಿಜೆಪಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಟ್ಟಣದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ನೂರಾರು ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೇಸರಿ ಬಾವುಟಗಳನ್ನು ಹಿಡಿದುಕೊಂಡು ಸಂಚರಿಸಿ ಘೋಷಣೆ ಕೂಗುತ್ತ ತಾಲೂಕು ಕಛೇರಿ ಮುಂದೆ ಕೆಲಕಾಲ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ…
ಬೆಂಗಳೂರು: ಅಮೆರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಎಂಜಿನಿಯರ್ಸ್ (ಎಎಸ್‌ಎಂಇ) ಭಾರತದಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ (ಐಎಂಸಿಇ) ಸಮ್ಮೇಳನ ಆಯೋಜಿಸಿದೆ. ಸೆಪ್ಟೆಂಬರ್ 10 ರಿಂದ 13 ರವರೆಗೆ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆಯಲಿರುವ ಈ ಸಮ್ಮೇಳನವು ನಾವಿನ್ಯತೆ, ಸಂಶೋಧನೆ ಮತ್ತು ಜಾಗತಿಕ ನಿಶ್ಚಿತಾರ್ಥದ ಪರಂಪರೆಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲನ್ನು ಗುರುತಿಸುತ್ತದೆ. ಈ ಕುರಿತು ಮಾತನಾಡಿದ IMECE ಇಂಡಿಯಾ ಆವೃತ್ತಿಯ ಬಿಡುಗಡೆಯ ಕುರಿತು ಮಾತನಾಡಿದ ASME ಇಂಡಿಯಾ ಪ್ರೈ.ಲಿ.ನ ನಿರ್ದೇಶಕ ಮಧುಕರ್ ಶರ್ಮಾ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸಾಂಪ್ರದಾಯಿಕವಾಗಿ ನಡೆಯುವ IMECE, ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿನ ಪ್ರಗತಿಯನ್ನು ಅನ್ವೇಷಿಸಲು ಪ್ರಪಂಚದಾದ್ಯಂತದ ಚಿಂತಕರು, ಸಂಶೋಧಕರು, ಉದ್ಯಮ ವೃತ್ತಿಪರರು, ನೀತಿ ನಿರೂಪಕರು ಮತ್ತು ವಿದ್ಯಾರ್ಥಿಗಳನ್ನು ಒಟ್ಟುಗೂಡಿಸುತ್ತದೆ. 650 ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ತಾಂತ್ರಿಕ ಪ್ರಸ್ತುತಿ, 1500 ಪ್ರತಿನಿಧಿಗಳು ಮತ್ತು 100 ಪ್ರದರ್ಶಕರನ್ನು ಒಳಗೊಂಡ ಮೊದಲ IMECE ಇಂಡಿಯಾ 2025 ಆಗಲಿದೆ. ಈ ಸಮ್ಮೇಳನವು ಎಂಜಿನಿಯರಿಂಗ್ ಜ್ಞಾನವನ್ನು ಹೆಚ್ಚಿಸಲು,…
ಮೈಸೂರು: ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ, ರೈಲ್ವೆ ಮಂಡಳಿ 06281/06282 ಮೈಸೂರು–ಅಜ್ಮೀರ್– ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಅವಧಿ ವಿಸ್ತರಣೆಯನ್ನು ಅನುಮೋದಿಸಿದೆ. ಈ ರೈಲುಗಳು ಹಳೆಯ ಸಮಯ, ನಿಲ್ದಾಣಗಳು ಮತ್ತು ಸಂಚಾರದಂತೆ ಮುಂದುವರೆಯಲಿವೆ. 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್, ಮೊದಲು 30.08.2025 ರವರೆಗೆ ಮಾತ್ರ ಓಡುವಂತೆ ಪ್ರಕಟಿಸಲಾಗಿತ್ತು. ಇದೀಗ ಇದು 06.09.2025 ರಿಂದ 29.11.2025 ರವರೆಗೆ ಪ್ರತಿ ಶನಿವಾರ ಓಡಲಿದೆ. ಅದೇ ರೀತಿ, 06282 ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್, ಮೊದಲು 01.09.2025 ರವರೆಗೆ ಮಾತ್ರ ಓಡುವಂತೆ ಪ್ರಕಟಿಸಲಾಗಿತ್ತು. ಇದೀಗ ಇದು 08.09.2025 ರಿಂದ 01.12.2025 ರವರೆಗೆ ಪ್ರತಿ ಸೋಮವಾರ ಓಡಲಿದೆ.
ಬೆಂಗಳೂರು: ಕನ್ನಡದ ಸುಪ್ರಸಿದ್ದ ಆಂಕರ್ ಅನುಶ್ರೀ ವೆಡ್ಸ್ ರೋಷನ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್.28ರಂದು ಬೆಂಗಳೂರಲ್ಲಿ ಮದುವೆ ನಡೆಯಲಿದೆ. ಅನುಶ್ರೀ ಅವರ ಆಮಂತ್ರಣ ಪತ್ರಿಕೆ ರಿಲೀವ್ ಆಗಿದ್ದು, ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರಕ್ಕೆ ಸಮಯ ಬಂದಿದೆ. ಅನುಶ್ರೀ ವೆಡ್ಸ್ ರೋಷನ್ ಮಹೂರ್ತವು ದಿನಾಂಕ 28-08-2025ರ ಗುರುವಾರ ಬೆಳಗ್ಗೆ 10.56ಕ್ಕೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ಅನುಶ್ರೀ ವೆಡ್ ರೋಷನ್ ಅವರ ಮದುವೆಯು ಆಗಸ್ಟ್.28ರಂದು ಬೆಂಗಳೂರಿನ ಕಗ್ಗಲಿಪುರದ ತಿಟ್ಟೆಹಳ್ಳಿಯ ಸಂಭ್ರಮ ಬೈ ಸ್ಪಾನ್ ಲೈನ್ಸ್ ಸ್ಟುಡಿಯೋಸ್ ನಲ್ಲಿ ನೆರವೇರಲಿದೆ. ಒಟ್ಟಾರೆಯಾಗಿ ಆಂಕರ್ ಅನುಶ್ರೀ ಅವರ ಮದುವೆಯೂ ಇದೇ ಆಗಸ್ಟ್.28ರಂದು ಬೆಂಗಳೂರಿನ ಕಗ್ಗಲಿಪುರ ಸಮೀಪದ ತಿಟ್ಟೆಹಳ್ಳಿಯಲ್ಲಿ ನೆರವೇರಲಿದೆ. ಅವರ ವಿವಾಹಕ್ಕೆ ಸಿನಿ ರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಗಣ್ಯಾತಿ ಗಣ್ಯರು ಭಾಗಿಯಾಗಲಿದ್ದಾರೆ. https://kannadanewsnow.com/kannada/seven-special-deputy-commissioners-have-been-appointed-to-the-bengaluru-city-district-deputy-commissioners-court-case/ https://kannadanewsnow.com/kannada/cabinet-approves-illegal-mining-report-do-you-know-whats-in-the-report/
ಬೆಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರ ಮೇ 2023 ರಲ್ಲಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 7460 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 6393, 1 ವರ್ಷಕ್ಕಿಂತ ಹೆಚ್ಚು ಅವಧಿ ಮೀರಿದ ಬಾಕಿ ಪ್ರಕರಣಗಳಿದ್ದವು. ಅದರಲ್ಲಿ 5 ವರ್ಷಕ್ಕೂ ಹೆಚ್ಚು ಮೇಲ್ಪಟ್ಟ 4894 ಪ್ರಕರಣಗಳು ಬಾಕಿ ಇದ್ದವು ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳ ಪ್ರಯತ್ನದಿಂದ 3729 ಬಾಕಿ ಇದ್ದ ತಕರಾರು ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೆ ಮಾಡಲಾಗಿದೆ. ಅದಾಗ್ಯೂ ಇದೇ ಅವಧಿಯಲ್ಲಿ 1545 ಹೊಸ ಪ್ರಕರಣಗಳೂ ದಾಖಲಾಗಿವೆ. ಪ್ರಸ್ತುತ 5276 ಪ್ರಕರಣಗಳು ಬಾಕಿ ಇದ್ದು, ಪ್ರತಿ ತಿಂಗಳು ಸರಾಸರಿಯಾಗಿ 143 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಇದೇ ಪ್ರಮಾಣದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಹಲವು ವರ್ಷಗಳೇ ಬೇಕಾಗುತ್ತದೆ. ಈ ವಿಳಂಬವು ಜನಸಾಮಾನ್ಯರಿಗೆ ಹೊರೆಯಾಗಲಿದೆ. ಸೂಕ್ತ ನ್ಯಾಯಾಲಯದ ಆದೇಶವನ್ನು ಪಡೆಯುವಲ್ಲಿ ವಿಳಂಬವು ಸಾಮಾನ್ಯ ಜನರಿಗೆ ಅಪಾರ ಅನಾನುಕೂಲತೆಯನ್ನು ಉಂಟುಮಾಡುವುದಲ್ಲದೆ ಜನಸಾಮಾನ್ಯರ ಕಿರುಕುಳಕ್ಕೂ ಕಾರಣವಾಗುತ್ತದೆ. ಕೆಲವು ಪ್ರಕರಣಗಳಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಿದಂತ ಬರೋಬ್ಬರಿ 37 ಮಸೂದೆಗಳಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲೂ ಅಂಗೀಕಾರವನ್ನು ಪಡೆದಿದೆ. ಈ ಕುರಿತಂತೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ವಿಧಾನಸಭೆಯಲ್ಲಿ ಅಂಗೀಕೃತಗೊಂಡು, ವಿಧಾನ ಪರಿಷತ್ತಿನಲ್ಲಿ 37 ಮಸೂದೆಗಳಿಗೆ ಸಹಮತಿಯನ್ನು ಪಡೆದಿರುವುದಾಗಿ ತಿಳಿಸಿದ್ದಾರೆ. ಹೀಗಿವೆ ಉಭಯ ಸದನಗಳಲ್ಲಿ ಅಂಗೀಕಾರ ಪಡೆದ ಮಸೂದೆಗಳ ಪಟ್ಟಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ, 2025 (ವಿಧೇಯಕ ಸಂ.28) ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ, 2025 (ವಿಧೇಯಕ ಸಂ.29) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಯಲಯಗಳ (ತಿದ್ದುಪಡಿ) ವಿಧೇಯಕ, 2025 (ವಿಧೇಯಕ ಸಂ.30) ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಮಾಭಿವೃದ್ಧಿ) ವಿಧೇಯಕ, 2025 (ವಿಧೇಯಕ ಸಂ.31) ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ, 2025 (ವಿಧೇಯಕ ಸಂ.32) 6 ಕರ್ನಾಟಕ ಕೆರೆ…
ಕಲಬುರ್ಗಿ: ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಗೊಂಡಿದೆ. ಈ ವೇಳೆ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರಿಂದಾಗಿ ಮೂವರು ಗಾಯಗೊಂಡಿದ್ದಾರೆ. ಶಾಲಾ ಮೇಲ್ಛಾವಣಿ ಕುಸಿತಗೊಂಡ ಪರಿಣಾಮ ಶ್ರೀನಿವಾಸ್, ಕಾವೇರಿ, ಅಕ್ಷತಾ ಎಂಬಂತ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವಂತ ಇಬ್ಬರು ವಿದ್ಯಾರ್ಥಿಗಳನ್ನು ಗುರುಮಠಕಲ್ ತಾಲ್ಲೂಕು ಆಸ್ಪತ್ರೆಗೆ, ಮತ್ತೋರ್ವ ವಿದ್ಯಾರ್ಥಿಯನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/cabinet-approves-illegal-mining-report-do-you-know-whats-in-the-report/ https://kannadanewsnow.com/kannada/bumper-news-for-job-seekers-2-5-lakh-new-jobs-available-in-banking-finance-sector/
ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿರುವ ಬಗ್ಗೆ ಸರ್ಕಾರದ ಹೇಳಿಕೆ. ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011 ರವರೆಗೆ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದವು. ಈ ಅಕ್ರಮದಲ್ಲಿ ಅಧಿಕಾರಸ್ಥ ರಾಜಕಾರಣಿಗಳು, ವ್ಯಾಪಾರಸ್ಥರು, ಅಧಿಕಾರಿಗಳು ಹಾಗೂ ಇನ್ನಿತರರು ಶಾಮೀಲಾಗಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ್ದರು ಎಂಬುದು ದೇಶದ ಮುಂದೆ ಜಗಜ್ಜಾಹೀರಾಗಿರುವ ಸಂಗತಿ. ಈ ಅಕ್ರಮಗಳನ್ನು ಲೋಕಾಯುಕ್ತ ಸಂಸ್ಥೆಯು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಿ ವರದಿ ನೀಡಿತ್ತು. 2013 ರಿಂದ 2018ರ ನಮ್ಮ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿತ್ತು. ಉಪ ಸಮಿತಿಯು ಗಣಿ ಅಕ್ರಮಗಳಿಂದ ರಾಜ್ಯದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಿ ದಿನಾಂಕ: 16.10.2015 ರಂದು ನಡೆದ ಉಪ ಸಮಿತಿ ಸಭೆಯಲ್ಲಿ ಕೆಲವು ಶಿಫಾರಸ್ಸುಗಳನ್ನು ಮಾಡಿರುತ್ತದೆ. ಆ ಸಂದರ್ಭದಲ್ಲಿ, ಅಕ್ರಮ ಗಣಿಗಾರಿಕೆ ಕುರಿತು ನಮ್ಮ ಸರ್ಕಾರವು…
ಬೆಂಗಳೂರು: ಈಗಾಗಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸಿ, ಅನುಭವಿಸುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ವಿರುದ್ಧದ 3ನೇ ಕೇಸಲ್ಲಿ ದೋಷಾರೋಪವನ್ನು ಕೋರ್ಟ್ ನಿಗದಿ ಪಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಕೇಸಲ್ಲಿ 3ನೇ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಪಡಿಸಿದೆ. ದೋಷಾರೋಪ ಹೊರಿಸಲು ಇಂಗ್ಲಿಷ್ ಆಯ್ಕೆಯನ್ನು ಪ್ರಜ್ವಲ್ ರೇವಣ್ಣ ಮಾಡಿದ್ದರು. ನ್ಯಾಯಾಧೀಶರು ಓದಿದ ಎಲ್ಲಾ ದೋಷಾರೋಪಗಳನ್ನು ಪ್ರಜ್ವಲ್ ರೇವಣ್ಣ ನಿರಾಕರಿಸಿದ್ದಾರೆ. ಸಾಕ್ಷ್ಯ ವಿಚಾರಣೆ ದಿನಾಂಕವನ್ನು ಸೆಪ್ಟೆಂಬರ್.11ರಂದು ಕೋರ್ಟ್ ನಿಗದಿ ಪಡಿಸಿದೆ. https://kannadanewsnow.com/kannada/kea-has-announced-the-final-round-results-of-dcet/














