Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರುವುದು ಒಂದಾಗಿತ್ತು. ನೌಕರರ ಬಹು ದಿನಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈಡೇರಿಸಿದ್ದಾರೆ. ಅವರಿಗೆ ನೌಕರರ ಬೇಡಿಕೆ ಈಡೇರಿಸಿದ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬಸ್ಥರಿಗೆ ಶತಾಯಗತಾಯ ಜಾರಿಗೊಳಿಸಲೇ ಬೇಕು ಎನ್ನುವ ಪಣವನ್ನು ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತೊಟ್ಟಿದ್ದರು.…
ಶಿವಮೊಗ್ಗ : ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು,…
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2025-26 ನೇ ಸಾಲಿನ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶ್ರಮಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಸಾಂತ್ವಾನ ಯೋಜನೆ ಹಾಗೂ ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆಯಡಿ www.kmdconline.karnataka.gov.in ಮೂಲಕ ಅ.16 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ರೂ.6 ಲಕ್ಷದೊಳಗಿರಬೇಕು. ವೃತ್ತಿ ಪ್ರೋತ್ಸಾಹ ಯೋಜನೆಗೆ ನಗರ ಪ್ರದೇಶ ರೂ.1.30ಲಕ್ಷ ಹಾಗೂ ಗ್ರಾಮೀಣ ಪ್ರದೇಶ ರೂ.81000, ಸಾಂತ್ವಾನ ಯೋಜನೆಯಲ್ಲಿ ರೂ.8 ಲಕ್ಷದೊಳಗೆ ವಾರ್ಷಿಕ ಆದಾಯ ಇರಬೇಕು. ವಯಸ್ಸು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಅರ್ಜಿದಾರರ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ,…
ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC…
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಅಕ್ಟೋಬರ್.1, 2025ರಿಂದ ಜಾರಿಗೊಳಿ ಆದೇಶಿಸಿದೆ. ಇದಕ್ಕೆ ಕಾರಣರಾದಂತ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ಚಿಕಿತ್ಸೆ ನೀಡುವಂತ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರುವುದು ಒಂದಾಗಿತ್ತು. ನೌಕರರ ಬಹು ದಿನಗಳ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಈಡೇರಿಸಿದ್ದಾರೆ. ಅವರಿಗೆ ನೌಕರರ ಬೇಡಿಕೆ ಈಡೇರಿಸಿದ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರಿ ನೌಕರರು, ಅವರ ಅವಲಂಬಿತ ಕುಟುಂಬಸ್ಥರಿಗೆ ಶತಾಯಗತಾಯ ಜಾರಿಗೊಳಿಸಲೇ ಬೇಕು ಎನ್ನುವ ಪಣವನ್ನು ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತೊಟ್ಟಿದ್ದರು. ಅದರಂತೆ ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅವರ…
ಶಿವಮೊಗ್ಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಹೌದು ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮೀಕ್ಷೆ ನಡೆಯುತ್ತಿದ್ದರು ಕೂಡ ಎಂ ರಂಗನಾಥ ಕೆಲಸಕ್ಕೆ ರಜೆ ಹಾಕಿದ್ದಾರೆ. ಸಮೀಕ್ಷೆ ಮಾಡುವ ಒಂದಿಷ್ಟು ಜವಾಬ್ದಾರಿ ಹೊಂದಿದ್ದಾರೆ. ರಂಗನಾಥ್ ಬಿ ಆರ್ ಎಸ್ ಕೇಂದ್ರದ ಸಮನ್ವಯ ಅಧಿಕಾರಿಯಾಗಿದ್ದಾರೆ. ರಜೆ ಹಾಕಿ ಅಧಿಕಾರಿಗಳ ದೂರವಾಣಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ರಂಗನಾಥ್ ಅಮಾನತುಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.…
ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎನ್ನುವಂತೆ 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೊರಡಿಸಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶವಾಗಿರುತ್ತದೆ. ಅದರನ್ವಯ 2025- 26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ಪರಿಷ್ಕರಿಸಿದೆ ಎಂದು ತಿಳಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕದ ಹೆಚ್ಚಳ ವಿವರ ಎಸ್ ಎಸ್…
ಶಿವಮೊಗ್ಗ: ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಸಾಗರ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಬರೋಬ್ಬರಿ 3 ಕೋಟಿ ಅನುದಾನವನ್ನು ಸರ್ಕಾರದಿಂದ ತಂದಿದ್ದಾರೆ. ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ 1 ಕೋಟಿ ಅನುದಾನ ಮಂಜೂರಾತಿ ಪಡೆದಿದ್ದರೇ, ಸಾರಿಗೆ ಇಲಾಖೆಯಿಂದ 2 ಕೋಟಿ ಅನುದಾನವನ್ನು ನೀಡಲಾಗಿದೆ. ಈ ಮೂಲಕ ಸಾಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಹೈಟೆಕ್ ಆಗಿ ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ನಗರ ಭೂ ಸಾರಿಗೆ ನಿರ್ದೇಶನಾಲಯದ ವಿಶೇಷಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಕೋರಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವಂತ ಸರ್ಕಾರವು 3 ಕೋಟಿ ವೆಚ್ಚದಲ್ಲಿ ಸಾಗರದ ಕೆ ಎಸ್ ಆರ್ ಟಿಸಿ…
ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನಗಳ ಕಾಲ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕಾವೇರಿ…
ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ವಿಶೇಷ ಅನುದಾನದಿಂದ, ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರೂ.47 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಪೂಜೆ ಸಲ್ಲಿಸುವ ಮೂಲಕ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಈಜಿಪುರ ಒಳ ರಿಂಗ್ ರಸ್ತೆ (ಶ್ರೀನಿವಾಗಿಲು) ಯಿಂದ ಸರ್ಜಾಪುರ ಮುಖ್ಯ ರಸ್ತೆ (ಓಆರ್‌ಆರ್) ವರೆಗೆ ರಕ್ಷಣಾ ಭೂಮಿ ಮೂಲಕ ಸಾಗುವ 80 ಅಡಿ ಅಗಲದ (24.0 ಮೀಟರ್) ಸಂಪರ್ಕ ರಸ್ತೆ ನಿರ್ಮಾಣ ಹಾಗೂ ರಕ್ಷಣಾ ಭೂಮಿ ತೋಟಗಾರಿಕೆ ಕೆಲಸ (ಪ್ರಥಮ ಹಂತ – 5.34 ಏಕರೆ) ಒಟ್ಟು 3 ಕಿ.ಮೀ ಉದ್ದದಲ್ಲಿ ಪ್ರಾರಂಭಿಸಲಾಗಿದೆ. 2015ರ ಮಾಸ್ಟರ್ ಪ್ಲಾನ್‌ನಲ್ಲಿ, ಈಜಿಪುರ ಸಿಗ್ನಲ್ (ಶ್ರೀನಿವಾಗಿಲು) ಯಿಂದ ಸರಜಾಪುರ ಮೈನ್ ರಸ್ತೆ (ಓಆರ್‌ಆರ್) ವರೆಗೆ ಸಂಪರ್ಕ ರಸ್ತೆಯನ್ನು ಕಲ್ಪಿಸಲಾಗಿತ್ತು. ಇದು ಪೂರ್ವ ಬೆಂಗಳೂರು ಮತ್ತು ಓಆರ್‌ಆರ್, ಹೆಚ್‌ಎಸ್‌ಆರ್ ನಡುವೆ ಸಂಪರ್ಕ ಕಲ್ಪಿಸಲು ಉದ್ದೇಶಿತವಾಗಿತ್ತು. ಆದರೆ…