Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಅಟ್ಲಾಂಟಾ: ಜಗತ್ತಿನ ಮೊದಲ 24 ಗಂಟೆಗಳ ಸುದ್ದಿ ವಾಹಿನಿ ‘CNN’ (ಸಿಎನ್‌ಎನ್) ಸ್ಥಾಪಿಸುವ ಮೂಲಕ ಟೆಲಿವಿಷನ್ ಸುದ್ದಿ ಪ್ರಸಾರ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದ್ದ ಮಾಧ್ಯಮ ಮೊಗಲ್ ಮತ್ತು ಲೋಕೋಪಕಾರಿ ಟೆಡ್ ಟರ್ನರ್ (87) ಅವರು ಬುಧವಾರ ನಿಧನರಾದರು. ಟರ್ನರ್ ಎಂಟರ್‌ಪ್ರೈಸಸ್ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಅವರು ತಮ್ಮ ಕುಟುಂಬದವರ ಸಮ್ಮುಖದಲ್ಲಿ ಶಾಂತಿಯುತವಾಗಿ ಕೊನೆಯುಸಿರೆಳೆದಿದ್ದಾರೆ. ‘ದ ಮೌತ್ ಆಫ್ ದ ಸೌತ್’: ಮಾಧ್ಯಮ ಸಾಮ್ರಾಜ್ಯದ ನಿರ್ಮಾತೃ ಓಹಿಯೋದಲ್ಲಿ ಜನಿಸಿ ಅಟ್ಲಾಂಟಾವನ್ನು ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡಿದ್ದ ಟರ್ನರ್, ತಮ್ಮ ನೇರ ನುಡಿಯ ಸ್ವಭಾವದಿಂದಾಗಿ ‘ದ ಮೌತ್ ಆಫ್ ದ ಸೌತ್’ ಎಂದೇ ಖ್ಯಾತರಾಗಿದ್ದರು. ಕೇವಲ ಸುದ್ದಿ ವಾಹಿನಿ ಮಾತ್ರವಲ್ಲದೆ, ಕೇಬಲ್ ಟಿವಿಯ ಮೊದಲ ‘ಸೂಪರ್ ಸ್ಟೇಷನ್’, ಚಲನಚಿತ್ರ ಮತ್ತು ಕಾರ್ಟೂನ್ ಚಾನೆಲ್‌ಗಳು ಹಾಗೂ ‘ಅಟ್ಲಾಂಟಾ ಬ್ರೇವ್ಸ್’ ನಂತಹ ಕ್ರೀಡಾ ತಂಡಗಳನ್ನು ಒಳಗೊಂಡ ಬೃಹತ್ ಮಾಧ್ಯಮ ಸಾಮ್ರಾಜ್ಯವನ್ನು ಅವರು ಕಟ್ಟಿದ್ದರು. ಪರಿಸರ ಪ್ರೇಮಿ ಮತ್ತು ಲೋಕೋಪಕಾರಿ ಟೆಡ್ ಟರ್ನರ್ ಕೇವಲ ಉದ್ಯಮಿಯಾಗಿರದೆ, ಬಹುಮುಖ ವ್ಯಕ್ತಿತ್ವದವರಾಗಿದ್ದರು: ಪರಿಸರ…

Read More

ಯಸಳೂರು: ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಹುತಾತ್ಮ ಅರ್ಜುನನ ಸ್ಮಾರಕ ಸ್ಥಳಕ್ಕೆ ಹೋಗಲು ಈಗ ನಿರ್ಮಿಸಿರುವ ಕಚ್ಚಾ ರಸ್ತೆಯಲ್ಲಿ ಪಕ್ಕಾ ರಸ್ತೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಉದ್ಘಾಟನೆ ನೆರವೇರಿಸಿದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಮಾರಕ ಪ್ರದೇಶ ಆನೆ ಸಂಚರಿಸುವ ಸ್ಥಳವಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗರ ಸುರಕ್ಷತೆಯೂ ನಮಗೆ ಪ್ರಥಮ ಆದ್ಯತೆಯಾಗಿದೆ ಎಂದರು. ಅರ್ಜುನ ಆನೆಯ ಗುಣಗಾನ: 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಹೆಜ್ಜೆಹಾಕಿದ್ದ ಅರ್ಜುನ, ಅರಣ್ಯ ಇಲಾಖೆಯ ನೆಚ್ಚಿನ ಆನೆಯಾಗಿತ್ತು. ಯಾವುದೇ ಪುಂಡಾನೆ ಸೆರೆ ಕಾರ್ಯಾಚರಣೆ ಅಥವಾ ಹುಲಿ ಸೆರೆ ಕಾರ್ಯಾಚರಣೆ ಎಂದೊಡನೆ ಮೊದಲು ನೆನಪಿಗೆ ಬರುತ್ತಿದ್ದುದೇ ಆರ್ಜುನ ಎಂದರು. ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಇದೇ…

Read More

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ರಾಜ-ರಾಣಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೀಟು ಹಂಚಿಕೆ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ದುಷ್ಕರ್ಮಿಗಳು ಇಬ್ಬರು ಪ್ರಯಾಣಿಕರಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಜಗಳ ಬಿಡಿಸಲು ಹೋದವರ ಮೇಲೆ ದಾಳಿ ರೈಲಿನಲ್ಲಿ ಸೀಟಿನ ವಿಚಾರವಾಗಿ ಆರೋಪಿಗಳು ಮತ್ತು ಇತರ ಪ್ರಯಾಣಿಕರ ಮಧ್ಯೆ ತೀವ್ರ ಗಲಾಟೆ ನಡೆಯುತ್ತಿತ್ತು. ಈ ವೇಳೆ ಪ್ರಯಾಣಿಕ ಶಿವಕುಮಾರ್ ಅವರು “ಏಕೆ ಜಗಳ ಮಾಡುತ್ತೀರಿ?” ಎಂದು ಪ್ರಶ್ನಿಸಿ ಗಲಾಟೆ ಸರಿಪಡಿಸಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಆರೋಪಿಗಳು ಏಕಾಏಕಿ ಶಿವಕುಮಾರ್ ಅವರ ಮೇಲೆ ಮುಗಿಬಿದ್ದಿದ್ದಾರೆ. ಚಾಕುವಿನಿಂದ ಇರಿದ ದುಷ್ಕರ್ಮಿಗಳು ಗಲಾಟೆ ನಡೆಸುತ್ತಿದ್ದ ಸುಭಾನ್ ಖುರೇಷಿ, ಶೋಯಬ್ ಮತ್ತು ವಾಸಿನ್ ಎಂಬುವವರು ಈ ಕೃತ್ಯ ಎಸಗಿದ್ದಾರೆ. ಮೊದಲು ಸುಭಾನ್ ಖುರೇಷಿ ಎಂಬಾತ ಶಿವಕುಮಾರ್ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ತದನಂತರ ಮತ್ತೊಬ್ಬ ಆರೋಪಿ ಶೋಯಬ್ ಕೂಡ ಶಿವಕುಮಾರ್ ಅವರ ಮೇಲೆ ಚಾಕು ದಾಳಿ ನಡೆಸಿದ್ದಾನೆ. ದಾಳಿಯ ವೇಳೆ ಶಿವಕುಮಾರ್ ಅವರೊಂದಿಗೆ ಇದ್ದ ಕುಮಾರ್ ಎಂಬುವವರಿಗೂ…

Read More

ದುಬಾರೆ : ಜಗತ್ತಿನಲ್ಲಿ ಅತಿ ಹೆಚ್ಚು ಸುಳ್ಳು ಹೇಳುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ದುಬಾರೆಯಲ್ಲಿಂದು ನೂತನ ತೂಗು ಸೇತುವೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರು ಶೃಂಗೇರಿ ಶಾಸಕ ಸ್ಥಾನದ ವಿವಾದಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ನುಡಿದಂತೆ ನಡೆಯಲಿಲ್ಲ ಎಂದರು. ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ ಪಕ್ಷ ಅದನ್ನು ಈಡೇರಿಸಿತೇ, ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಹೇಳಿದ ಬಿಜೆಪಿ ಅದನ್ನಾದರೂ ಈಡೇರಿಸಿತೆ. ಬರಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ವಂಚಿಸುತ್ತಿದೆ ಎಂದರು. ಶೃಂಗೇರಿ ವಿಧಾನಸಭಾ ಕ್ಷೇತ್ರದ ವಿಧಾನಸಭೆ ಚುನಾವಣೆ ನಡೆದ 3 ವರ್ಷ ಆಗಿದೆ. ಈಗ ಅಂಚೆ ಮತಗಳ ಎಣಿಕೆಯಲ್ಲಿ ಗೆದ್ದಿರುವುದಾಗಿ ಬಿಜೆಪಿ ಹೇಳಿಕೊಳ್ಳುತ್ತಿದೆ. ಇದು ಮತ ಡಕಾಯಿತಿಯಲ್ಲದೆ ಬೇರೇನೂ ಅಲ್ಲ,…

Read More

ಮೈಸೂರು: ಕರ್ತವ್ಯದ ವೇಳೆಯಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರೊಂದಿಗೆ ಜಗಳವಾಡಿದ ಮತ್ತು ಮಹಿಳಾ ಸಿಬ್ಬಂದಿಗೆ ಅಶ್ಲೀಲವಾಗಿ ವಿಡಿಯೋ ಕಾಲ್ ಮಾಡಿದ ಗಂಭೀರ ಆರೋಪದ ಮೇಲೆ ಮೈಸೂರು ತಾಲ್ಲೂಕಿನ ವೈದ್ಯಾಧಿಕಾರಿಯೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಯ ವಿವರ: ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್ ಅಮಾನತುಗೊಂಡವರು. ಇವರ ವಿರುದ್ಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ನೀಡಿದ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿ ಮೇಲಿರುವ ಗಂಭೀರ ಆರೋಪಗಳು: ಅಶ್ಲೀಲ ವಿಡಿಯೋ ಕಾಲ್: ಡಾ. ಅನಿಲ್ ಕುಮಾರ್ ಅವರು ತಮ್ಮ ಅಧೀನದ ಮಹಿಳಾ ಸಿಬ್ಬಂದಿಗಳಿಗೆ ಮಧ್ಯರಾತ್ರಿಯಲ್ಲಿ WhatsApp ಮೂಲಕ ವಿಡಿಯೋ ಕಾಲ್ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದರು ಎಂಬ ಆರೋಪವಿದೆ. ಸಾರ್ವಜನಿಕರೊಂದಿಗೆ ಜಗಳ: ದಿನಾಂಕ 28.04.2026 ರಂದು ಆಸ್ಪತ್ರೆಗೆ ಪಾನಮತ್ತರಾಗಿ ಬಂದು ಸಾರ್ವಜನಿಕರೊಂದಿಗೆ ಜಗಳವಾಡುತ್ತಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕುಟುಂಬದ ಮಾಹಿತಿ: ಸದರಿ ವೈದ್ಯರು ವಿಪರೀತವಾಗಿ…

Read More

ಕೊಪ್ಪಳ: ಜಿಲ್ಲೆಯ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇ-ಸ್ವತ್ತು ಮತ್ತು ಖಾತಾ ಬದಲಾವಣೆ ಮಾಡಿಕೊಡಲು ಸಾರ್ವಜನಿಕರಿಂದ ಲಂಚ ಪಡೆಯುತ್ತಿದ್ದ ಮೂವರು ಸಿಬ್ಬಂದಿಗಳು ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಖಾತಾ ಬದಲಾವಣೆಗೆ ಬೇಡಿಕೆ ಇಟ್ಟಿದ್ದ ಲಂಚ ಕೋಳೂರು ಗ್ರಾಮ ಪಂಚಾಯ್ತಿಯಲ್ಲಿ ಇ-ಸ್ವತ್ತು ಮಾಡಿಕೊಡುವುದು ಮತ್ತು ಖಾತಾ ಬದಲಾವಣೆಯ ಕೆಲಸಕ್ಕಾಗಿ ಜ್ಞಾನೇಶ್ವರ ಎಂಬುವರಿಂದ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಜ್ಞಾನೇಶ್ವರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ದಾಳಿ ನಡೆಸಿದ ಅಧಿಕಾರಿಗಳು, ಜ್ಞಾನೇಶ್ವರ ಅವರಿಂದ 75,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಯಾರು? ಈ ಭ್ರಷ್ಟಾಚಾರ ಪ್ರಕರಣದಲ್ಲಿ ಕೋಳೂರು ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮರಿಯಪ್ಪ, ಬಿಲ್ ಕಲೆಕ್ಟರ್ ನಾಗರಾಜ ಹಾಗೂ ಗುತ್ತಿಗೆ ನೌಕರ ನಾಗರಾಜ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂವರು ಲಂಚದ ಹಣವನ್ನು ಹಂಚಿಕೊಳ್ಳುತ್ತಿದ್ದ ವೇಳೆ…

Read More

ಬೆಂಗಳೂರು: ಕರ್ತವ್ಯದ ಸಮಯದಲ್ಲಿ ಮದ್ಯಪಾನ, ಗುಟ್ಕಾ ಸೇವನೆ ಹಾಗೂ ಸಹೋದ್ಯೋಗಿಗಳೊಂದಿಗೆ ಗಲಾಟೆ ನಡೆಸಿ ದುರ್ನಡತೆ ತೋರಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವೈದ್ಯಾಧಿಕಾರಿಯೊಬ್ಬರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪ್ರಕರಣದ ವಿವರ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿ.ವಿ. ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಡಾ. ಚಂದ್ರಮೌಳಿ ಎಸ್. ಅಮಾನತುಗೊಂಡವರು. ಫೆಬ್ರವರಿ 8, 2025 ರಂದು ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದಾಗ ಇವರು ಆಸ್ಪತ್ರೆಯ ಅಡುಗೆ ಕೋಣೆಯಲ್ಲಿ ಮದ್ಯಪಾನ ಮಾಡುತ್ತಿರುವುದು ಕಂಡುಬಂದಿತ್ತು. ಆಸ್ಪತ್ರೆಯಲ್ಲಿ ಇಂತಹ ಕೃತ್ಯ ಎಸಗಬಾರದೆಂದು ಸಹೋದ್ಯೋಗಿ ಡಾ. ಹನಮಂತರಾಯ ಅವರು ತಿಳಿಸಿದಾಗ, ಡಾ. ಚಂದ್ರಮೌಳಿ ಅವರು ಗಲಾಟೆ ಆರಂಭಿಸಿ ವಿಡಿಯೋ ಮಾಡಿಕೊಂಡಿದ್ದರು ಎಂಬ ಅಂಶ ತನಿಖಾ ವರದಿಯಿಂದ ತಿಳಿದುಬಂದಿದೆ. ತನಿಖಾ ವರದಿಯ ಮುಖ್ಯಾಂಶಗಳು: ಡಾ. ಚಂದ್ರಮೌಳಿ ಅವರು ಹಗಲು ಮತ್ತು ರಾತ್ರಿ ವೇಳೆ ಯಾವಾಗಲೂ ಮದ್ಯಪಾನ ಹಾಗೂ ಗುಟ್ಕಾ ಸೇವಿಸಿ ಕರ್ತವ್ಯಕ್ಕೆ ಬರುತ್ತಾರೆ ಎಂದು ಆಸ್ಪತ್ರೆಯ…

Read More

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಅವರು ಬುಧವಾರ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಜೀವರಾಜ್‌ಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸಮಾರಂಭದ ಮುಖ್ಯಾಂಶಗಳು: ಪ್ರಮಾಣವಚನ: ಜೀವರಾಜ್ ಅವರು ಶೃಂಗೇರಿ ಶಾರದಾಂಬೆ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಗಣ್ಯರ ಉಪಸ್ಥಿತಿ: ಈ ಸಮಾರಂಭದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಮುನಿರಾಜು ಭಾಗಿಯಾಗಿದ್ದರು. ಅಭಿನಂದನೆ: ಪ್ರಮಾಣವಚನದ ಬಳಿಕ ಸ್ಪೀಕರ್ ಯು.ಟಿ. ಖಾದರ್ ಅವರು ಜೀವರಾಜ್ ಅವರಿಗೆ ಬೊಕ್ಕೆ ಹಾಗೂ ವಿಧಾನಸಭೆ ನಡಾವಳಿಗಳ ಪುಸ್ತಕವನ್ನು ನೀಡಿ ಅಭಿನಂದಿಸಿದರು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಜೀವರಾಜ್ ಅವರಿಗೆ ಪೇಟ ತೊಡಿಸಿ, ಹಾರ ಹಾಕಿ ಸನ್ಮಾನಿಸಿದರು. ಹಿನ್ನೆಲೆ ಮತ್ತು ಮರುಎಣಿಕೆ ಪ್ರಕ್ರಿಯೆ: ಚುನಾವಣಾ ಫಲಿತಾಂಶ: 2023ರಲ್ಲಿ ನಡೆದ ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಅಲ್ಪ ಮತಗಳ ಅಂತರದಿಂದ ಜಯಗಳಿಸಿದ್ದರು. ಆದರೆ,…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳ ಮಧ್ಯೆ, ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಸೊಸೆ ಅಭಿಷೇಕ್ ಬ್ಯಾನರ್ಜಿ ಅವರ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂಬ ವದಂತಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸಿದ್ಧನಾಥ್ ಗುಪ್ತಾ ಅವರು ಬುಧವಾರ ಸ್ಪಷ್ಟನೆ ನೀಡಿದ್ದಾರೆ. ಭದ್ರತೆಯನ್ನು ಹಿಂತೆಗೆದುಕೊಂಡಿಲ್ಲ, ಬದಲಿಗೆ ಹೆಚ್ಚುವರಿ ನಿಯೋಜನೆಯನ್ನು ಮಾತ್ರ ತೆಗೆದುಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ. ಭದ್ರತೆ ಕುರಿತು ಡಿಜಿಪಿ ಸ್ಪಷ್ಟನೆ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಅವರಿಗೆ ‘Z+’ ವರ್ಗದ ಭದ್ರತೆಯನ್ನು ನೀಡಲಾಗಿದ್ದು, ಇದನ್ನು ‘ಯೆಲ್ಲೋ ಬುಕ್’ (Yellow Book) ನಿಯಮಾವಳಿಗಳ ಪ್ರಕಾರವೇ ಮುಂದುವರಿಸಲಾಗಿದೆ ಎಂದು ಡಿಜಿಪಿ ಸ್ಪಷ್ಟಪಡಿಸಿದರು. “ಕೆಲವರು ಭದ್ರತೆ ಹಿಂತೆಗೆತದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಯೆಲ್ಲೋ ಬುಕ್‌ನಲ್ಲಿ ನಿರ್ದಿಷ್ಟಪಡಿಸಿದ ಭದ್ರತಾ ಶಿಷ್ಟಾಚಾರದಂತೆಯೇ ಬಲವನ್ನು ನಿಯೋಜಿಸಲಾಗಿದೆ. ನಿಯಮಕ್ಕಿಂತ ಹೆಚ್ಚಿನದಾಗಿ ಇದ್ದ ಹೆಚ್ಚುವರಿ ಭದ್ರತೆಯನ್ನು ಮಾತ್ರ ಹಿಂಪಡೆದು, ಕಾನೂನು ಸುವ್ಯವಸ್ಥೆ ಕಾಪಾಡಲು ಬಳಸಿಕೊಳ್ಳಲಾಗುತ್ತಿದೆ,” ಎಂದು ಅವರು ಹೇಳಿದರು. https://twitter.com/ANI/status/2051982423165169969 ಚುನಾವಣೋತ್ತರ ಹಿಂಸಾಚಾರ: 433 ಮಂದಿ ಬಂಧನ ಬಂಗಾಳದಲ್ಲಿ ನಡೆದ…

Read More

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರ ರಚನೆಯ ಪ್ರಕ್ರಿಯೆ ಸದ್ಯಕ್ಕೆ ಕೊಂಚ ವಿಳಂಬವಾಗುವ ಲಕ್ಷಣಗಳು ಕಾಣಿಸುತ್ತಿವೆ. ನಾಳೆ ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ರಾಜ್ಯಪಾಲರ ನಡೆ ಏನು? ವಿಜಯ್ ಅವರು ತಮಗೆ 112 ಶಾಸಕರ ಬೆಂಬಲವಿದೆ ಎಂದು ತಿಳಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಆದರೆ, ತಮಿಳುನಾಡಿನಲ್ಲಿ ಬಹುಮತ ಸಾಬೀತುಪಡಿಸಲು ಮತ್ತು ಸರ್ಕಾರ ರಚಿಸಲು ಕನಿಷ್ಠ 118 ಶಾಸಕರ ಬೆಂಬಲ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯಪಾಲರು ವಿಜಯ್ ಅವರಿಗೆ 118 ಶಾಸಕರ ಬೆಂಬಲದೊಂದಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕಾನೂನು ಹೋರಾಟ ಅಥವಾ ಸಲಹೆ? ಸಂಖ್ಯಾಬಲದ ಕೊರತೆಯ ನಡುವೆಯೂ ಸರ್ಕಾರ ರಚನೆಯ ಹಕ್ಕು ಮಂಡಿಸಿರುವ ಹಿನ್ನೆಲೆಯಲ್ಲಿ, ರಾಜ್ಯಪಾಲರು ಈ ಬಗ್ಗೆ ತಜ್ಞರಿಂದ ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಸಂವಿಧಾನಾತ್ಮಕವಾಗಿ ಬಹುಮತದ ಕೊರತೆ ಇರುವಾಗ ಮುಂದಿನ ಕ್ರಮ ಏನು ಎಂಬ ಬಗ್ಗೆ ರಾಜ್ಯಪಾಲರು ಗಂಭೀರ ಚಿಂತನೆ…

Read More