Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಹಾವೇರಿ : ಶಿಗ್ಗಾಂವ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ನಾನು ಕಂಡ ಕನಸು ಇಂದು ಬಹುತೇಕ ಸಾಕಾರಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಶಿಗ್ಗಾಂವಿ ತಾಲೂಕಿಗೊಂದು ಸಾರಿಗೆ ಇಲಾಖೆಯ ನೂತನ ಬಸ್ ಘಟಕ ಹಾಗೂ ವಾಹನ ಚಾಲನಾ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಅತ್ಯಂತ ಅಗತ್ಯ ಎಂದು ಭಾವಿಸಿ, ನಾನು ಸಿಎಂ ಆಗಿದ್ದ ಅವಧಿಯಲ್ಲಿ 28 ಕೋಟಿ ರೂ. ಬಿಡುಗಡೆಗೊಳಿಸಿದ ಕಾರಣ, ಇದೀಗ ಆ ಘಟಕ ಲೋಕಾರ್ಪಣೆಯಾಗಿದೆ. ಈ ಘಟಕ ಲೋಕಾರ್ಪಣೆಯಾದ ಕಾರಣದಿಂದ, ಕ್ಷೇತ್ರದ ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳಿಗೆ ಸುಗಮ ಬಸ್ ಸಂಚಾರದ ಅನುಕೂಲವನ್ನು ಒದಗಿಸಲಿದೆ. ವಾಹನ ಚಾಲನಾ ತರಬೇತಿ ಕೇಂದ್ರದ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ದೊಡ್ಡ ಮಟ್ಟದ ನೆರವು ನೀಡಲಿದೆ. ಶಿಗ್ಗಾಂವಿ ಕ್ಷೇತ್ರದ ಪ್ರಗತಿಯಲ್ಲಿ ಇದೊಂದು ಮಹತ್ವದ ಹೆಜ್ಜೆ. ಈ ಅಭಿವೃದ್ಧಿ ಕಾರ್ಯ ಜನರಿಗೆ ತಲುಪಿದಾಗ ಮಾತ್ರ ನನ್ನ ಶ್ರಮ ಸಾರ್ಥಕ ಎಂದು ತಿಳಿಸಿದ್ದಾರೆ. https://kannadanewsnow.com/kannada/development-of-spice-park-on-ppp-model-in-chikkamagalur-minister-ramalingareddy/ https://kannadanewsnow.com/kannada/big-news-attention-state-government-employees-just-apply-for-the-arogya-sanjeevini-yojana-like-this/

Read More

ಬೆಳಗಾವಿ ಸುವರ್ಣ ವಿಧಾನಸೌಧ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಇವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದರು. ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ.…

Read More

ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು” ಎಂದಿದ್ದು ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಇದು ನಿರಂತರ…

Read More

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು,  ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. 2025-26ನೇ ಸಾಲಿನ ಬಜೆಟ್ ಸಂಖ್ಯೆ 116 ರ ಅಡಿಯಲ್ಲಿ ಘೋಷಣೆಯ ಪುಕಾರ, “ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ರೂ. 125.00 ಕೋಟಿ ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ರೂ.50.00 ಕೋಟಿಗಳನ್ನು ನಿಗದಿಪಡಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ…

Read More

ಬೆಳಗಾವಿ : “ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ” ಎಂದು ತಿಳಿಸಿದರು. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ ನಿನ್ನೆ ಡಿನ್ನರ್ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, “ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ…

Read More

1)ಸಾಮಾನ್ಯವಾಗಿ ನಾವೆಲ್ಲರೂ ಕೂಡ ಯಾವುದೇ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದರೆ ನೀವು ದೇವರ ಮೊರೆ ಹೋಗುವುದು ಸತ್ಯ ಹೌದು ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಬ್ಬರು ಎಲ್ಲ ದೇವಾನುದೇವತೆ ಗಳನ್ನು ಅಷ್ಟೇ ಭಕ್ತಿಯಿಂದ ಆರಾಧನೆ ಮಾಡುತ್ತಾರೆ. 2)ಅವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅಭಿವೃದ್ಧಿ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆ ಅವರಲ್ಲಿ ಇದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ,…

Read More

ಬೆಳಗಾವಿ ಸುವರ್ಣಸೌಧ: ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ (6) ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರ ಉತ್ತರಿಸಿದರು. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇರೆಗೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು…

Read More

ಹುಬ್ಬಳ್ಳಿ: ಅರಸೀಕೆರೆ ಯಾರ್ಡ್ನಲ್ಲಿ ಡಿಸೆಂಬರ್ 15 ರಿಂದ 27, 2025 ರವರೆಗೆ (ಶುಕ್ರವಾರ ಹೊರತುಪಡಿಸಿ) ಕೈಗೊಳ್ಳುತ್ತಿರುವ ಪ್ಲಾಟ್ಫಾರ್ಮ್ ಶೆಲ್ಟರ್ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತದೆ. 1. ಡಿಸೆಂಬರ್ 14 ರಿಂದ 26, ರವರೆಗೆ, ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ–ಅರಸೀಕೆರೆ ಎಕ್ಸ್ ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಬೀರೂರು ನಿಲ್ದಾಣದಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ. 2. ಡಿಸೆಂಬರ್ 15 ರಿಂದ 27, 2025 ರವರೆಗೆ, ರೈಲು ಸಂಖ್ಯೆ 16213 ಅರಸೀಕೆರೆ–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಂಡು, ನಿಗದಿತ ಸಮಯಕ್ಕೆ ಬೀರೂರು ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. 3. ಡಿಸೆಂಬರ್ 15 ರಿಂದ 27, 2025 ರವರೆಗೆ, ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಅರಸೀಕೆರೆ ಮತ್ತು ಹಾಸನ ನಡುವೆ ಭಾಗಶಃ ರದ್ದುಗೊಂಡು, ನಿಗದಿತ ಸಮಯಕ್ಕೆ ಹಾಸನ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. https://kannadanewsnow.com/kannada/human-skull-found-on-hospital-premises/ https://kannadanewsnow.com/kannada/people-with-this-blood-group-are-at-higher-risk-of-cancer/

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಆಸ್ಪತ್ರೆ ಆವರಣದಲ್ಲಿಯೇ ಮಾನವನ ತಲೆ ಬುರುಡೆ ಪತ್ತೆಯಾಗಿದ್ದು, ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯ ಆವರಣದಲ್ಲೇ ಮಾನವನ ತಲೆ ಬುರುಡೆ ಪತ್ತೆಯಾಗಿದೆ. ಸಾರ್ವಜನಿಕರು ಓಡಾಡುವಂತ ಸ್ಥಳದಲ್ಲೇ ತಲೆ ಬುರುಡೆ ಪತ್ತೆಯಾಗಿರುವುದನ್ನು ಕಂಡಂತ ಜನರು ಬೆಚ್ಚಿ ಬಿದ್ದಿದ್ದಾರೆ. ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲೇ ಕಸ ಬಿಸಾಡುವ ಸ್ಥಳದಲ್ಲಿ ಮಾನವನ ತಲೆ ಬುರುಡೆ ನೋಡಿ ಜನರು ಶಾಕ್ ಆಗಿದ್ದಾರೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/cognizant-unveils-ai-lab-and-cognizant-moment-studio/ https://kannadanewsnow.com/kannada/people-with-this-blood-group-are-at-higher-risk-of-cancer/

Read More