Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸಚಿವರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದನು. ಆದರೇ ಅವರು ಕೇಂದ್ರ ಸಚಿವರು ಅಲ್ಲ ಎಂಬುದಾಗಿ ತನಿಖೆಯಲ್ಲಿ ದೃಢಪಟ್ಟಿತ್ತು. ಹೀಗಾಗಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಎಂಬುದಾಗಿ ಹೇಳಿ ಭಾನುವಾರ ಮಧ್ಯಾಹ್ನ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ 2 ಬಾರಿ ಕರೆ ಮಾಡಲಾಗಿತ್ತು. ಮೊದಲ ಬಾರಿಗೆ ಕರೆ ಮಾಡಿದ್ದಂತ ಅಪರಿಚಿತ ರಾಜ್ಯಪಾಲರ ಆರೋಗ್ಯವನ್ನು ವಿಚಾರಿಸಿದ್ದರೇ, ಕೇಂದ್ರ ಸಚಿವರ ಆರೋಗ್ಯವನ್ನು ರಾಜ್ಯಪಾಲರು ವಿಚಾರಿಸಿದ್ದರು. ಆರ್ಧ ಗಂಟೆಯ ನಂತ್ರ ಮತ್ತೆ ರಾಜ್ಯಪಾಲರಿಗೆ ಕರೆ ಮಾಡಿದ್ದಂತ ಅಪರಿಚಿತ ವ್ಯಕ್ತಿ, ಅದೇ ರೀತಿ ಮಾತನಾಡಿದ್ದನು. ಈ ವೇಳೆ ಅನುಮಾನಗೊಂಡಂತ ರಾಜ್ಯಪಾಲರು ಆತನ ಬಗ್ಗೆ ವಿಚಾರಿಸಿದಾಗ ಏಕಾಏಕಿ ಕರೆ ಕಡಿತವಾಗಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಆತ ಕೇಂದ್ರ ಸಚಿವ ಅಲ್ಲ ನಕಲಿ ವ್ಯಕ್ತಿ ಅನ್ನೋದು ತಿಳಿದು ಬಂದಿತ್ತು. ಹೀಗಾಗಿ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಎಫ್ಐಆರ್…
ಬೆಂಗಳೂರು: ನೇಪಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಈ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸಿಲುಕಿರುವಂತ ಕರ್ನಾಟಕದ 39 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಪಾಳದಲ್ಲಿ ವಿದ್ಯಾರ್ಥಿ – ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸಿದ್ದಾರೆ. ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. https://twitter.com/CMofKarnataka/status/1965441973436948805 https://kannadanewsnow.com/kannada/starting-from-22nd-a-social-and-educational-survey-will-be-conducted-across-the-state-cm-siddaramaiah-made-this-appeal-to-the-people/ https://kannadanewsnow.com/kannada/fir-registered-against-organizers-for-bursting-colored-paper-firecrackers-during-ganesh-procession-in-chitradurga/
ಬೆಂಗಳೂರು: ಸೆಪ್ಟೆಂಬರ್.22ರಿಂದ ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಈ ಸಮೀಕ್ಷೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತೆಗೆ ಈ ಕೆಳಗಿನಂತೆ ಮನವಿ ಮಾಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ ಎಂದಿದ್ದಾರೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋರಿದ್ದಾರೆ. https://twitter.com/CMofKarnataka/status/1965410150032048578 https://kannadanewsnow.com/kannada/mla-satish-sail-arrested-by-ed-officials-in-bangalore/ https://kannadanewsnow.com/kannada/breaking-nepal-president-ramachandra-poudel-resigns-nepals-president-resigns/
ಬೆಂಗಳೂರು: ಇಡಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಅಕ್ರಮ ಆಸ್ತಿ ಪತ್ರೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಂತ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಆಗಸ್ಟ್.13, 14ರಂದು ಇಡಿ ಅಧಿಕಾರಿಗಳಿಂದ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ವೇಳೆಯಲ್ಲಿ ಅವರನ್ನು ಬಂಧಿಸಲಾಗಿದೆ.
ಬೆಂಗಳೂರು: ಮದ್ದೂರು ಗಲಭೆ ಘಟನೆಗೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಮದ್ದೂರಿನಲ್ಲಿ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ಕೊಟ್ಟರು. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಧೋರಣೆ ಸರಿಪಡಿಸಿಕೊಳ್ಳದಿದ್ದರೆ ಖಂಡಿತವಾಗಿ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಗಣಪತಿ ಮೆರವಣಿಗೆಯಲ್ಲಿ ಕೇಸರಿ ಶಾಲು ಹಾಕಿ ಡ್ಯಾನ್ಸ್ ಮಾಡಿದ ಪಿಎಸ್‍ಐ ಒಬ್ಬರನ್ನು ಅಮಾನತು ಮಾಡುವ ಮಾಹಿತಿ ನನಗೆ ಬಂದಿದೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ?…
ನವದೆಹಲಿ: ಮಂಗಳವಾರ ನಡೆದ ಉಪಾಧ್ಯಕ್ಷ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಸ್ವತಂತ್ರರು ಚುನಾವಣೆಯಿಂದ ದೂರ ಉಳಿದ 13 ಶಾಸಕರಲ್ಲಿ ಒಬ್ಬರು. ವಿರೋಧ ಪಕ್ಷದ ಎಲ್ಲಾ 315 ಸಂಸದರು ಮತದಾನಕ್ಕೆ ಹಾಜರಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದರು. https://twitter.com/ANI/status/1965414148030038218 “ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಂತಿವೆ. ಅದರ 315 ಸಂಸದರಲ್ಲಿ ಎಲ್ಲರೂ ಮತದಾನಕ್ಕೆ ಹಾಜರಾಗಿದ್ದಾರೆ. ಇದು ಅಭೂತಪೂರ್ವ 100% ಮತದಾನವಾಗಿದೆ” ಎಂದು ಅವರು X ನಲ್ಲಿ ಬರೆದಿದ್ದಾರೆ. ತಮಿಳುನಾಡಿನ ಬಿಜೆಪಿಯ ಹಿರಿಯ ರಾಧಾಕೃಷ್ಣನ್ ಪ್ರಸ್ತುತ ಮಹಾರಾಷ್ಟ್ರದ…
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆಯ ಮೇಲೆ ಇಡಿ ಆನ್ ಲೈನ್, ಆಫ್ ಲೈನ್ ಬೆಟ್ಟಿಂಗ್ ಸಂಬಂಧ ದಾಳಿ ನಡೆಸಿತ್ತು. ಈ ಇಡಿ ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 21.43 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಜಾರಿ ನಿರ್ದೇಶನಾಲಯವು, ಕೆ.ಸಿ. ವೀರೇಂದ್ರ ಮತ್ತು ಇತರರ ವಿರುದ್ಧ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಸಾರ್ವಜನಿಕರನ್ನು ವಂಚಿಸಿದ ಪ್ರಕರಣದಲ್ಲಿ, 2002 ರ ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಬೆಂಗಳೂರಿನ ಇಡಿ, ಚಳ್ಳೇಕೆರೆಯಲ್ಲಿ 06.09.2025 ರಂದು ದಾಳಿ ನಡೆಸಲಾಗಿತ್ತು ಎಂದಿದೆ. ಈ ದಾಳಿಯ ಸಮಯದಲ್ಲಿ, 21.43 ಕೆಜಿ ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿ, 10.985 ಕೆಜಿ ತೂಕದ 11 ಯೂನಿಟ್ ಚಿನ್ನದ ಲೇಪಿತ ಬೆಳ್ಳಿ ಗಟ್ಟಿಗಳು ಮತ್ತು ಸುಮಾರು 1 ಕೆಜಿ (ಅಂದಾಜು) ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದರ ಮೌಲ್ಯ ಸುಮಾರು 24 ಕೋಟಿ ರೂ.ಗಳು. ಈ ವಶಪಡಿಸಿಕೊಳ್ಳುವಿಕೆಯನ್ನು ಪರಿಗಣಿಸಿದ…
ಬೀದರ್: ಜಿಲ್ಲೆಯಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ನಾಲ್ವರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮರೂರು ಬಳಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿದೆ. ಕಾಲುವೆಗೆ ಹಾರಿ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾರಂಜ ಡ್ಯಾಮ್ ನ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರೇ, ಆರು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…
ಬೆಳಗಾವಿ: ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ನೇಮಕದಲ್ಲಿ ಒತ್ತಡ ಅಥವಾ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಇಲಾಖೆಯ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮೆರಿಟ್ ಆಧಾರದ ಮೇಲೆ ಅಂಗನವಾಡಿ ನೇಮಕ ನಡೆಯುತ್ತದೆ. ಇದರಲ್ಲಿ ನಾನು ಎಂದೂ ಹಸ್ತಕ್ಷೇಪ ಮಾಡುವುದಿಲ್ಲ. ಜೊತೆಗೆ ಯಾರ ಒತ್ತಡಕ್ಕೂ ಒಳಗಾಗುವುದು ಬೇಡ. ಅಲ್ಲದೆ ಒಂದು ರೂಪಾಯಿ ಕೂಡ ಭ್ರಷ್ಟಾಚಾರ ನಡೆಯುವುದನ್ನು ಸಹಿಸುವುದಿಲ್ಲ. ಹಾಗೇನಾದರೂ ಆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಪೂರ್ಣ ಪಾರದರ್ಶಕವಾಗಿ ನೇಮಕಾತಿ ನಡೆಸಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. ಅಂಗನವಾಡಿಗಳು ಆರಂಭವಾಗಿ 50 ವರ್ಷವಾಗಿದೆ. ಇಲಾಖೆಗೆ ಇತಿಹಾಸವಿದೆ. ಈ ವರ್ಷ ಸುವರ್ಣ ಮಹೋತ್ಸವ ಆಚರಿಸಲು ತಯಾರಿ ನಡೆಸುತ್ತಿದ್ದೇವೆ. ಶೇ.80ರಷ್ಟು ಅಂಗನವಾಡಿಗಳು ಖಾಸಗಿ ನರ್ಸರಿಗಳಿಗಿಂತ ಚೆನ್ನಾಗಿ ನಡೆಯುತ್ತಿದೆ. ಮಕ್ಕಳಿಗೆ ಎಲ್ಲ ಸೌಲಭ್ಯ ಕೊಡುತ್ತಿದ್ದೇವೆ. ಬೀದಿ ಬೀದಿಗಳಲ್ಲಿ ಹೋಗಿ. ಪ್ರಚಾರ ಮಾಡಿ. ಸಂಖ್ಯೆ ಕಡಿಮೆಯಾಗಲು ಬಿಡಬೇಡಿ. ಪಾಲಕರ ಮನವೊಲಿಸಿ. ಮಕ್ಕಳನ್ನು ಹೆಚ್ಚು…












