Author: kannadanewsnow09

ಬೆಂಗಳೂರು: ಕೆಲ ತಿಂಗಳ ಹಿಂದೆ ನಡೆದಿದ್ದಂತ ಕೆ-ಸೆಟ್-23ರ ಪರೀಕ್ಷೆಯ ಕೀ ಉತ್ತರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಮಾಹಿತಿ ನೀಡಿದ್ದು, ಕಳೆದ ಜನವರಿ 13ರಂದು 42 ವಿವಿಧ ವಿಷಯಗಳಿಗೆ ನಡೆಸಲಾಗಿದ್ದ ಕೆ-ಸೆಟ್-2023ರ ಎಲ್ಲಾ ವಿಷಯಗಳ ಅಂತಿಮ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KEA_karnataka/status/1776223066726817887 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇ 4 ಕೊನೆ ದಿನ ಬೆಂಗಳೂರು: ಕಂದಾಯ ಇಲಾಖೆಯ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಸಂಬಂಧಿಸಿದ ಅರ್ಜಿ…

Read More

ನ್ಯೂಯಾರ್ಕ್: ಜನನಿಬಿಡ ನ್ಯೂಯಾರ್ಕ್ ನಗರದ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ನ್ಯೂಜೆರ್ಸಿಯ ಲೆಬನಾನ್ ಬಳಿ 4.8 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಏಜೆನ್ಸಿ ವರದಿ ಮಾಡಿದೆ. ಹಾನಿಯ ಬಗ್ಗೆ ಯಾವುದೇ ಆರಂಭಿಕ ವರದಿಗಳಿಲ್ಲ ಎಂದು ನ್ಯೂಯಾರ್ಕ್ನ ಅಗ್ನಿಶಾಮಕ ಇಲಾಖೆ ತಿಳಿಸಿದೆ. https://twitter.com/USGS_Quakes/status/1776259765376778694 ಮಿಡ್ ಟೌನ್ ಮ್ಯಾನ್ಹ್ಯಾಟನ್ ನಲ್ಲಿ, ವಾಹನ ಚಾಲಕರು ಕ್ಷಣಕಾಲ ನಡುಗುವ ಬೀದಿಗಳಲ್ಲಿ ತಮ್ಮ ಹಾರ್ನ್ ಗಳನ್ನು ಬಾರಿಸುತ್ತಿದ್ದಂತೆ ಸಂಚಾರದ ಸಾಮಾನ್ಯ ಗದ್ದಲವು ಜೋರಾಗಿತ್ತು. ಕೆಲವು ಬ್ರೂಕ್ಲಿನ್ ನಿವಾಸಿಗಳು ಪ್ರವರ್ಧಮಾನಕ್ಕೆ ಬರುತ್ತಿರುವ ಶಬ್ದವನ್ನು ಕೇಳಿದರು. ಅವರ ಕಟ್ಟಡವು ನಡುಗಿತು. ಮ್ಯಾನ್ಹ್ಯಾಟನ್ನ ಈಸ್ಟ್ ವಿಲೇಜ್ನಲ್ಲಿರುವ ಅಪಾರ್ಟ್ಮೆಂಟ್ ಮನೆಯಲ್ಲಿ, ಹೆಚ್ಚು ಭೂಕಂಪ ಪೀಡಿತ ಕ್ಯಾಲಿಫೋರ್ನಿಯಾದ ನಿವಾಸಿಯೊಬ್ಬರು ಆತಂಕಗೊಂಡ ನೆರೆಹೊರೆಯವರನ್ನು ಶಾಂತಗೊಳಿಸಿದರು. ಬಾಲ್ಟಿಮೋರ್, ಫಿಲಡೆಲ್ಫಿಯಾ ಮತ್ತು ಇತರ ಪ್ರದೇಶಗಳಲ್ಲಿನ ಜನರು ಸಹ ನೆಲದ ಕಂಪನವನ್ನು ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್ ಅವರು ತಮ್ಮ ತಂಡವು ಪರಿಣಾಮಗಳು ಮತ್ತು ಯಾವುದೇ ಸಂಭಾವ್ಯ ಹಾನಿಯನ್ನು…

Read More

ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸಾಧಿಸಲು ಕೆಲವು ವಿಷಯಗಳನ್ನು ಹೊಂದಿರುತ್ತಾರೆ. ನಾವು ಆ ವಿಷಯಗಳನ್ನು ಪ್ರಯತ್ನಿಸಿದಾಗ, ನಾವು ದೇವತೆಗೆ ಅನುಗುಣವಾದ ಪ್ರಾರ್ಥನೆಯನ್ನು ಮಾಡುತ್ತೇವೆ. ಯಾವುದೇ ಕೋರಿಕೆಯನ್ನು ಸಲ್ಲಿಸಿದರೂ ಅದು ಸಮಂಜಸವಾದ ಮನವಿಯಾಗಿದ್ದರೆ ಕೋರಿಕೆಯನ್ನು ಈಡೇರಿಸಲಾಗುವುದು. ಇದಕ್ಕೆ ಅನೇಕ ಪರಿಹಾರಗಳು ಮತ್ತು ಆಚರಣೆಗಳಿವೆ. ಕೆಲವು ವಾರಗಳು ಅಥವಾ ದಿನಗಳವರೆಗೆ ನಾವು ಈ ಪರಿಹಾರಗಳನ್ನು ಮತ್ತು ಆಚರಣೆಗಳನ್ನು ನಿಯಮಿತವಾಗಿ ಮಾಡಬೇಕು. ಆಗ ಮಾತ್ರ ಆ ಆಸೆ ಈಡೇರುತ್ತದೆ. ಅದೂ ಅಲ್ಲದೆ ಆಧ್ಯಾತ್ಮದ ಬಗ್ಗೆ ಈ ಪೋಸ್ಟ್ ನಲ್ಲಿ ನೋಡಲಿದ್ದೇವೆ , ನಮ್ಮ ಪ್ರಾರ್ಥನೆ ಒಂದೇ ದಿನದಲ್ಲಿ ನೆರವೇರಬೇಕಾದರೆ ಯಾವ ರೀತಿಯಲ್ಲಿ ಪೂಜೆ ಮಾಡಬೇಕು . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ,…

Read More

ಬೆಂಗಳೂರು: ತಾಂತ್ರಿಕ ಕಾರಣದಿಂದಾಗಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಸ್ಥಗಿತಗೊಂಡಿತ್ತು. ಈಗ ಸಮಸ್ಯೆ ಸರಿ ಪಡಿಸಿರುವಂತ ಕೆಇಎ ಮತ್ತೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಹಂಚಿಕೊಂಡಿದ್ದು,  ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ ಎಂದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 03.04.2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದೆ ಎಂದು ದಿನಾಂಕ 07.03.2024 ರಂದು ಪ್ರಕಟಣೆ ಹೊರಡಿಸಿ ತಿಳಿಸಲಾಗಿರುತ್ತದೆ. ಇದೀಗ http://kea.kar.nic.in ಲಿಂಕ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು…

Read More

ಬೆಂಗಳೂರು: ರಾಜ್ಯದಲ್ಲಿ ಏಕಾಏಕಿ ಕಾಲರಾ, ಬಿಸಿಗಾಳಿ ಹೆಚ್ಚಾಗಿದೆ. ಬಿಸಿಲ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲ ಧಗೆಯ ಜೊತೆಗೆ ಕಾಲರಾ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿಯಂತ್ರಣ, ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಅದರಲ್ಲಿ ರಾಜ್ಯದಲ್ಲಿ ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಉಷ್ಣತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ತಡೆಯಲು, ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ರಾಷ್ಟ್ರೀಯ ಕಾರ್ಯಕ್ರಮ (NPCCHH) ಹೊರಡಿಸಿದ ನಿರ್ದೇಶನಗಳು ಮತ್ತು ಸಲಹೆಗಳ ಆಧಾರದಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (SDMA), ಕಂದಾಯ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಸಂಬಂಧಿತ ಅಂಶಗಳನ್ನು ರಾಜ್ಯವು ಹೊರಡಿಸಿದ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳಲ್ಲಿ ಸಹ ಅಳವಡಿಸಲಾಗಿದೆ. ತಾಪಮಾನವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ವಿವರ 1. ಸದ್ಯದ ತಾಪಮಾನದ ಪರಿಸ್ಥಿತಿಯಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ…

Read More

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿಸ್ಕೃತಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಹೀಗಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತಗೊಳ್ಳೋ ಸಾಧ್ಯತೆ ಇದೆ. ಇಂದು ಬಿಜೆಪಿಯ ಲೋಕಸಭಾ ಚುನಾವಣಾ ಅಭ್ಯರ್ಥಿ ಬಾಲರಾಜು, ಜಿಲ್ಲಾ ಮಾಜಿ ಅಧ್ಯಕ್ಷರು, ಏಜೆಂಟ್ ನಾರಾಯಮ ಪ್ರಸಾದ್ ಅವರನ್ನೊಳಗೊಂಡ ಬಿಜೆಪಿ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚಾಮರಾಜನರಗ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ತಿರಸ್ಕೃತಗೊಳಿಸುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ಸಲ್ಲಿಸಿರುವಂತ ದೂರಿನಲ್ಲಿ ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಲ್ಲಿಸಲಾಗಿರುವಂತ ಪ್ರಮಾಣ ಪತ್ರದಲ್ಲಿ ಪ್ರಮುಖ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂಬುದಾಗಿ ಆರೋಪಿಸಿದೆ. ವೈವಾಹಿಕ ಜೀನವದ ಕುರಿತು ಮಾಹಿತಿ ಮರೆ ಮಾಚಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಹೆಂಡತಿ, ಮಕ್ಕಳ, ಕುಟುಂಬದ ಮಾಹಿತಿ ಮುಚ್ಚಿಟ್ಟಿರೋದಾಗಿ ಗಂಭೀರ ಆರೋಪ ಮಾಡಲಾಗಿದೆ. ಪತ್ನಿ, ಮಕ್ಕಳು, ತಂದೆ-ತಾಯಿಯ ಆಸ್ತಿ ವಿವರವನ್ನು ನಾಮಪತ್ರದ ಜೊತೆಗೆ ಸಲ್ಲಿಸಲಾಗಿರುವಂತ…

Read More

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಬೇಸಿಗೆ ರಜೆಯ ಅವಧಿಯು ದಿನಾಂಕ 11-04-2024ರಿಂದ ದಿನಾಂಕ 28-05-2024ರವರೆಗೆ ಒಟ್ಟು 41 ದಿನಗಳ ಅವಧಿಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಕೈಗೊಳ್ಳಬೇಕು ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿಯ ಜೊತೆಗೆ ಆದೇಶ ಹೊರಡಿಸಿದೆ.  ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಘೋಷಿಸಿರುವ 31 ಕಂದಾಯ ಜಿಲ್ಲೆಗಳ 223 ಬರ ಪೀಡಿತ ತಾಲ್ಲೂಕುಗಳಲ್ಲಿ ಮಧ್ಯಾಹ್ನ  ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಸರ್ಕಾರಿ ಮತ್ತು ಅನುದಾನಿತ 1 ರಿಂದ 10ನೇ ತರಗತಿಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲಿ ಅನುಷ್ಠಾನಗೊಳಿಸುವಂತೆ ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, 2023-24ನೇ ಸಾಲಿನ ರಾಜ್ಯ ಸರ್ಕಾರದ ನಡವಳಿಯಂತೆ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ 31 ಕಂದಾಯ ಜಿಲ್ಲೆಗಳಲ್ಲಿ ಒಟ್ಟು 236ರ ಪೈಕಿ 223 ಬರಪೀಡಿತ ತಾಲ್ಲೂಕುಗಳು ಎಂದು ಸರ್ಕಾರ ಆದೇಶಿಸಿದೆ ಎಂದಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಸಾರವಾಗಿ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲೂ ಸಹ ಎಲ್ಲಾ…

Read More

ಬೆಂಗಳೂರು: ನಗರದ ವೈಟ್ಫೀಲ್ಡ್ನ ಐಟಿಪಿಎಲ್ ರಸ್ತೆಯಲ್ಲಿ ದಿನಾಂಕ 01.03.2024 ರಂದು ನಡೆದ ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯ ಭಾಗವಾಗಿ (ಆರ್ಸಿ -01/2024 / ಎನ್ಐಎ / ಬಿಎಲ್ಆರ್), ಐಇಡಿ ಸ್ಫೋಟ ನಡೆಸಿದ ಆರೋಪಿಯನ್ನು ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಹಾ ಎಂದು ಎನ್ಐಎ ಗುರುತಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ NIA ಮಾಹಿತಿ ಹಂಚಿಕೊಂಡಿದ್ದು, ಇದಲ್ಲದೆ, ತನಿಖೆಯ ಭಾಗವಾಗಿ, ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ಸ್ ಬೆಂಬಲವನ್ನು ನೀಡಿದ ಚಿಕ್ಕಮಗಳೂರಿನ ಖಾಲ್ಸಾದ ಮುಜಮ್ಮಿಲ್ ಶರೀಫ್ ಎಂಬಾತನನ್ನು 26.03.2024 ರಂದು ಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಹೇಳಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚುವ ಮತ್ತು ಬಂಧಿಸುವ ಪ್ರಯತ್ನಗಳ ಭಾಗವಾಗಿ, ಎನ್ಐಎ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿತು. ಇದಲ್ಲದೆ, 29.03.2024 ರಂದು ಪರಾರಿಯಾದವರಿಗೆ ತಲಾ ಹತ್ತು ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಲಾಯಿತು. ಈ ಪ್ರಕರಣದಲ್ಲಿ ಸಾಕ್ಷ್ಯಗಳು ಮತ್ತು ಮಾಹಿತಿಯನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಗಾಳಿಯ ಜೊತೆಗೆ ಹೆಚ್ಚಾದ ತಾಪ ಮಾನದ ಪರಿಣಾಮವಾಗಿ ಕಾಲರಾ ರೋಗ ಹೆಚ್ಚಾಗುತ್ತಿದೆ. ರಾಜ್ಯಾಧ್ಯಂತ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಅಲ್ಲದೇ ಓರ್ವ ಬಿಸಿಗಾಳಿಯ ಪರಿಣಾಮದಿಂದ ಬಲಿಯಾಗಿರೋದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಈ ಕುರಿತಂತೆ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು 6 ಮಂದಿಗೆ ಕಾಲರಾ ರೋಗ ದೃಷಪಟ್ಟಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು, ರಾಮನಗರ ಸೇರಿದಂತೆ 6 ಮಂದಿಗೆ ಕಾಲರಾ ರೋಗ ಪತ್ತೆಯಾಗಿದೆ. ಬಿಸಿಲ ತಾಪ ಹೆಚ್ಚಾಗುತ್ತಿರೋದು, ಬಿಸಿಗಾಳಿಯ ಪರಿಣಾಮವೇ ಕಾಲರಾ ಹೆಚ್ಚಳಕ್ಕೆ ಕಾರಣ ಎಂಬುದಾಗಿ ಹೇಳಿದರು. ಬೆಂಗಳೂರಿನಲ್ಲಿ ಇಬ್ಬರಿಗೆ ಕಾಲರಾ ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರಿಗೆ ಕಾಲರಾ ಸೋಂಕು ತಗುಲಿರೋದು ಪರೀಕ್ಷೆಯಲ್ಲಿ ತಿಳಿದು ಬಂದಿದೆ. ರಾಮನಗರದಲ್ಲಿ ಒಬ್ಬ ವ್ಯಕ್ತಿ ಸೇರಿದಂತೆ 6 ಮಂದಿಗೆ ಕಲರಾ ರಾಜ್ಯಾಧ್ಯಂತ ದೃಢಪಟ್ಟಿರೋದಾಗಿ ಹೇಳಿದರು. ರಾಜ್ಯದಲ್ಲಿ ಕಾಲರಾ ತಡೆಗಾಗಿ ಆರೋಗ್ಯ ಇಲಾಖೆ ಕ್ರಮವಹಿಸಿದೆ. ಇಂದು ತಡರಾತ್ರಿ…

Read More

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ ಅಭಿವೃದ್ಧಿ ವಿಚಾರದಲ್ಲಿ ಕೂಡ ಮಂಡ್ಯ ಹೆಸರು ಇಂಡಿಯಾದ್ಯಂತ ಕೇಳಬೇಕು. ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು. ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಡ್ಯ ಜಿಲ್ಲೆ ಪ್ರಾಕೃತಿಕವಾಗಿ, ರಾಜಕೀಯವಾಗಿ ಸಾಕಷ್ಟು ಹೆಸರುವಾಸಿ. ಜಿಲ್ಲೆಯಲ್ಲಿ ಕೃಷಿಯೇ ಜೀವಾಳ. ಈ ಭಾಗದ ರೈತರ ಕಲ್ಯಾಣಕ್ಕೆ ಕಂಕಣಬದ್ಧನಾಗಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿದ್ದು ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿಕೊಡಬೇಕೆಂಬ ಕನಸು ಹೊಂದಿದ್ದೇನೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಬಡವರ ದೀನದಲಿತರ ಪರ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ, ಆರೋಗ್ಯ ಸೇವೆ ಸೇರಿದಂತೆ ರಾಷ್ಟ್ರದ ಜನತೆಯ ಕಲ್ಯಾಣ ಬಯಸಿ  25 ಭರವಸೆಗಳನ್ನು…

Read More