Author: kannadanewsnow09

ನವದೆಹಲಿ: ಜುಲೈ1ರಿಂದ ತತ್ಕಾಲ್ ರೈಲು ಟಿಕೆಟ್ ಬುಕ್ಕಿಂಗ್ ನಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ಹಾಗಾದ್ರೆ ಏನೆಲ್ಲಾ ಹೊಸ ನಿಯಮಗಳು ಜಾರಿ ಎನ್ನುವ ಬಗ್ಗೆ ಮುಂದೆ ಓದಿ. ಜುಲೈ.1, 2025ರಿಂದ ಆಧಾರ್ ದೃಢೀಕೃತ ಬಳಕೆದಾರರು ತತ್ಕಾಲ್ ಯೋಜನೆಯಡಿಯಲ್ಲಿ ತಮ್ಮ ರೈಲು ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ಜೂನ್ 10, 2025 ರಂದು ಹೊರಡಿಸಲಾದ ಸುತ್ತೋಲೆಯಲ್ಲಿ, ತತ್ಕಾಲ್ ಯೋಜನೆಯ ಪ್ರಯೋಜನಗಳನ್ನು ಸಾಮಾನ್ಯ ಬಳಕೆದಾರರು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಸಚಿವಾಲಯ ಎಲ್ಲಾ ವಲಯಗಳಿಗೆ ತಿಳಿಸಿದೆ. 01-07-2025 ರಿಂದ ಜಾರಿಗೆ ಬರುವಂತೆ, ತತ್ಕಾಲ್ ಯೋಜನೆಯಡಿಯಲ್ಲಿ ಟಿಕೆಟ್‌ಗಳನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ವೆಬ್‌ಸೈಟ್ / ಅದರ ಅಪ್ಲಿಕೇಶನ್ ಮೂಲಕ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ಬುಕ್ ಮಾಡಬಹುದು ಎಂದು ಸಚಿವಾಲಯ ತಿಳಿಸಿದೆ. ಜುಲೈ 15 ರಿಂದ OTP ದೃಢೀಕರಣ ಕಡ್ಡಾಯ ತರುವಾಯ, ಜುಲೈ 15, 2025 ರಿಂದ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್…

Read More

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.‌ ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.‌ ಡೆತ್ ಆಡಿಟ್ ರಿಪೋರ್ಟ್ ಬಳಿಕವೇ ಕೋವಿಡ್ ಡೆತ್ ರಿಪೋರ್ಟ್ ಘೋಷಿಸುವಂತೆ ಇಂದು ನಡೆದ ಸಿಎಂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ ಒಳಗಾಗುವುದು ಸಹಜ..…

Read More

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಮೇಜರ್ ಸರ್ಜರಿ ಮಾಡಲಾಗಿದೆ.  10 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ 2024-25ರ ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ದೇಶಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದೆ. ಇದರ ಅಂಗವಾಗಿ ರಾಜ್ಯದಲ್ಲಿ 2ನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ ಎಂದಿದ್ದಾರೆ. ರಾಜ್ಯ ಚುನಾವಣಾಧಿಕಾರಿಯಾದ ನಾನು ಈ ಕೆಳಕಂಡ ಜಿಲ್ಲಾಧ್ಯಕ್ಷರನ್ನು ಅಭಿನಂದಿಸುತ್ತಾ, ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ಸೂಚಿಸಿದ್ದಾರೆ. ಹೀಗಿದೆ 10 ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಲೀಸ್ಟ್ ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ ಹಾಸನ- ಸಿದ್ದೇಶ್ ನಾಗೇಂದ್ರ ಕೊಡಗು- ರವಿ ಕಾಳಪ್ಪ ಉಡುಪಿ – ಕುತ್ಯಾರು ನವೀನ್ ಶೆಟ್ಟಿ ಹಾವೇರಿ –…

Read More

ಬೆಂಗಳೂರು: ರಾಜ್ಯದಲ್ಲಿ ಬುಧವಾರ 28 ಮಂದಿಗೆ ಕೊರೋನಾ ಪಾಸಿಟಿವ್ ಅಂತ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 20 ಮಂದಿ ಗುಣಮುಖರಾಗಿದ್ದಾರೆ. ಆದರೇ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಸಾವನ್ನಪ್ಪಿಲ್ಲ ಎಂಬುದಾಗಿ ಆರೋಗ್ಯ ಇಲಾಖೆಯ ಆಡಿಟ್ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ. ಬುಧವಾರ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಿರುವಂತ ಆರೋಗ್ಯ ಇಲಾಖೆಯು ಕಳೆದ 24 ಗಂಟೆಯಲ್ಲಿ 619 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 28 ಮಂದಿಗೆ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದ್ದಾಗಿ ಹೇಳಿದೆ. ಬುಧವಾರ 28 ಮಂದಿಗೆ ಕೊರೋನಾ ಸೋಂಕು ದೃಢಪಟ್ಟ ಕಾರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 467ಕ್ಕೆ ಏರಿಕೆಯಾಗಿದೆ. 463 ಮಂದಿ ಹೋಂ ಐಸೋಲೇಷನ್ ನಲ್ಲಿದ್ದರೇ, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಇನ್ನೂ ಕೊರೋನಾ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ ಎನ್ನಲಾದಂತ 11 ಮಂದಿಯು ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ಈ ಬಗ್ಗೆ ಕೋವಿಡ್-19 ರಾಜ್ಯ ಮಟ್ಟದ ಡೆತ್ ಆಡಿಟ್ ನಡೆಸಿ ಖಚಿತ ವರದಿಯನ್ನು ಪಡೆಯಲಾಗಿದೆ. ಈ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 8 ಡಿವೈಎಸ್ಪಿ, 28 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಆದೇಶ ಮಾಡಿದ್ದು, ಡಿವೈಎಸ್ಪಿ ಕವಿತಾ ಎಂ.ಸಿ ಅವರನ್ನು ಬೆಂಗಳೂರಿನ ಸಂಚಾರ ಉತ್ತರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಪುನೀತ್ ಕುಮಾರ್.ಆರ್ ಅವರನ್ನು ಸಿಐಡಿಯಿಂದ ಬೆಂಗಳೂರಿನ ಈಶಾನ್ಯ ವಿಭಾಗದ ಸಿಇಎನ್ ಗೆ ವರ್ಗಾವಣೆಗೊಳಿಸಿದ್ದರೇ, ವೆಂಕಟೇಶ್.ಆರ್ ಅವರನ್ನು ಎಸ್ ಟಿ ಎಫ್ ಬೆಂಗಳೂರು ಇಲ್ಲಿಗೆ ಟ್ರಾನ್ಸ್ ಫರ್ ಮಾಡಲಾಗಿದೆ. ಇನ್ನೂ ಪೊಲೀಸ್ ಇನ್ಸ್ ಪೆಕ್ಟರ್ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿರುವಂತ ರಾಮಚಂದ್ರಪ್ಪ.ಎಸ್ ಚೌಧರಿ ಅವರನ್ನು ಬೆಂಗಳೂರಿನ ತಲಘಟ್ಟಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಮೋದ್ ಕುಮಾರ್.ಪಿ ಅವರನ್ನು ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಗೆ, ಗವಿರಾಜು ಆರ್.ಪಿ ಅವರನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಹೀಗಿದೆ 8 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ ಇಲ್ಲಿದೆ 28 ಪಿಐ ವರ್ಗಾವಣೆಯ ಪಟ್ಟಿ…

Read More

ಚಿಕ್ಕಬಳ್ಳಾಪುರ: ರಾಜ್ಯದ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಎಂ ಕುಸುಮ್-ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಹಗಲಿನಲ್ಲೂ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಕೃಷಿ ಫೀಡರ್ ಗಳ ಸೌರೀಕರಣದ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್- ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಇಂಧನ ಸಚಿವ ಕೆಜೆ ಜಾರ್ಜ್ ಉದ್ಘಾಟಿಸಿದರು. ಈ ಮೂಲಕ ರಾಜ್ಯ ಮಟ್ಟದ ಬೃಹತ್ ಯೋಜನೆಯೊಂದ್ನು ಉದ್ಘಾಟನೆಯಾದಂತೆ ಆಗಿದೆ. ಏನಿದು ಕುಸುಮ್-ಸಿ ಯೋಜನೆ? “ಕುಸುಮ್ – ಸಿ ಯೋಜನೆ ನಾಲ್ಕೈದು…

Read More

ಬೆಂಗಳೂರು: ನಾನು ಇಡಿ ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ. ಅವರು ಕೇಳಿದ ಮಾಹಿತಿಯನ್ನು ನೀಡಿದ್ದೇನೆ ಎಂಬುದಾಗಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಸಂಸದ ತುಕಾರಾಂ ತಿಳಿಸಿದ್ದಾರೆ. ಇಡಿ ದಾಳಿಯ ನಂತ್ರ ಮೊದಲ ಬಾರಿಗೆ ಪ್ರತಿಕ್ರಿಯಿಸಿದಂತ ಅವರು, ಇಡಿಯವರಿಗೆ ಏನು ಮಾಹಿತಿ ಬೇಕು ಅದನ್ನು ಕೊಟ್ಟಿದ್ದೇನೆ. ಇಡಿಯವರ ಜೊತೆಗೆ ಗೌರವಯುತವಾಗಿ ನಡೆದುಕೊಂಡಿದ್ದೇನೆ. ಇಡಿಯವರು ಮುಂದೆ ಏನು ಕೇಳಿದ್ರೂ ಮಾಹಿತಿ ಕೊಡುತ್ತೇನೆ ಎಂದರು. ಇಡಿಯವರು ಕೆಲ ಮಾಹಿತಿ ಕೇಳಿದ್ರು, ಅದಕ್ಕೂ ನನಗೂ ಸಂಬಂಧವಿಲ್ಲ. ವಾಲ್ಮೀಕಿ ನಿಗಮದ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/no-patient-has-died-from-corona-in-the-state-health-department-audit-report/ https://kannadanewsnow.com/kannada/rt-pcr-test-made-mandatory-for-ministers-before-meeting-pm-modi-amid-covid-19-surge-report/

Read More

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಇಂದು ಜೂನ್ 11 ರಂದು 2025 ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಫಲಿತಾಂಶದ PDF ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಈಗ ಮುಖ್ಯ ಪರೀಕ್ಷೆಗೆ ಹಾಜರಾಗಬಹುದಾದ ಅಭ್ಯರ್ಥಿಗಳ ರೋಲ್ ಸಂಖ್ಯೆಗಳನ್ನು ಒಳಗೊಂಡಿದೆ. ಪಟ್ಟಿಯಲ್ಲಿ ತಮ್ಮ ರೋಲ್ ಸಂಖ್ಯೆಯನ್ನು ತ್ವರಿತವಾಗಿ ಕಂಡುಹಿಡಿಯಲು ತಮ್ಮ ಕೀಬೋರ್ಡ್‌ನಲ್ಲಿ Ctrl+F ಅನ್ನು ಬಳಸಬಹುದು. UPSC CSE ಪ್ರಿಲಿಮ್ಸ್ 2025 ಫಲಿತಾಂಶವನ್ನು ಈ ಹಂತ ಅನುಸರಿಸಿ ಪರಿಶೀಲಿಸಿ UPSC ವೆಬ್‌ಸೈಟ್‌ಗೆ ಹೋಗಬೇಕು: upsc.gov.in ಮುಖಪುಟದಲ್ಲಿ, “ಹೊಸತೇನಿದೆ” ಅಥವಾ “ಪರೀಕ್ಷೆಗಳು” ಕ್ಲಿಕ್ ಮಾಡಿ “UPSC CSE ಪ್ರಿಲಿಮ್ಸ್ 2025 ಫಲಿತಾಂಶ” ಎಂದು ಓದುವ ಲಿಂಕ್‌ಗಾಗಿ ನೋಡಿ PDF ಫೈಲ್ ತೆರೆಯಿರಿ ಅಥವಾ ಡೌನ್‌ಲೋಡ್ ಮಾಡಿ ಪಟ್ಟಿಯಲ್ಲಿ ನಿಮ್ಮ ರೋಲ್ ಸಂಖ್ಯೆಯನ್ನು ನೋಡಿ ಈ ವರ್ಷ ಹೊಸ OTR ವ್ಯವಸ್ಥೆಯನ್ನು…

Read More

ಬೆಂಗಳೂರು: ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ, ಸಚಿವರನ್ನೊಳಗೊಂಡು ಸಭೆಯನ್ನು ನಡೆಸಿದರು. ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.  ಕಳೆದ 10 ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು…

Read More

ನವದೆಹಲಿ: ಮಂಗಳವಾರ ದೆಹಲಿಯ ಫರಿದಾಬಾದ್ ಪ್ರದೇಶದಲ್ಲಿ ಅಮನ್ ತನ್ನ ನಾಲ್ವರು ಮಕ್ಕಳೊಂದಿಗೆ ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳದಿಂದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಮೃತರನ್ನು ಬಿಹಾರ ನಿವಾಸಿ ಮನೋಜ್ ಮಹಾತೋ ​​ಎಂದು ಗುರುತಿಸಲಾಗಿದೆ. ಪೊಲೀಸರು ಅವರ ಪತ್ನಿಯ ಫೋನ್ ಸಂಖ್ಯೆಯನ್ನು ಪತ್ತೆ ಹಚ್ಚಿ, ನಂತರ ಅವರ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಲಾಗಿದ್ದು, ಅವರು ಸ್ಥಳಕ್ಕೆ ಬಂದು ಶವಗಳನ್ನು ಗುರುತಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಾದ್‌ಶಾ ಖಾನ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್‌ನ ಚಾಲಕ ಘಟನೆಯ ಬಗ್ಗೆ ಸ್ಟೇಷನ್ ಮಾಸ್ಟರ್‌ಗೆ ಮಾಹಿತಿ ನೀಡಿದ್ದಾನೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಲುಪಿದ ನಂತರ, ಅವರ ಹೆಸರು ಮತ್ತು ಅವರ ಪತ್ನಿಗೆ ಸೇರಿದ ಫೋನ್ ಸಂಖ್ಯೆಯನ್ನು ಒಳಗೊಂಡ ಆಧಾರ್ ಕಾರ್ಡ್ ನಮಗೆ ಸಿಕ್ಕಿತು. ಘಟನೆಯ ಬಗ್ಗೆ ಅವರಿಗೆ ತಿಳಿಸಲಾಯಿತು ಮತ್ತು ಶವಗಳನ್ನು ಅವರು ಗುರುತಿಸಿದ್ದಾರೆ ಎಂದು ಜಿಆರ್‌ಪಿ ಎಸ್‌ಎಚ್‌ಒ ರಾಜ್ ಪಾಲ್ ಹೇಳಿದರು. ಪೊಲೀಸರ…

Read More