Author: kannadanewsnow09

ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 2026ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಹಾಗೂ ದಿನಾಂಕ 01-01-2026 ರಂತೆ 111/2 ವರ್ಷದಿಂದ 13 ವರ್ಷದೊಳಗಿರಯವ ಅಂದರೆ (ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತç ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಸರ್ವ ರೀತಿಯ ವಿದ್ಯಾಭ್ಯಾಸ/ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 98,650/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 81,850/-(ಎಸ್‌ಟಿ/ಎಸ್‌ಟಿ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ…

Read More

ಬೆಂಗಳೂರು: 66/11ಕೆವಿ ಪುರ್ವಾಂಕರ್ ಪಾಮ್ ಬೀಚ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್,ಕಲ್ಕೇರೆ ರೋಡ,ಪೂರ್ಣ ಪ್ರಜ್ನಾ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಬೆಂಗಳೂರಿನ 66/11ಕೆವಿ ಸ್ಟಿನ್ ಟೌನ್ ಕೇಂದ್ರದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.01.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 15:00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ರಾಯಭಾರ ಕಚೇರಿ ಎತ್ತರ, ಅಭರಣ…

Read More

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸಚಿವ ಸಂಪುಟದ ಅನುಮತಿ ಪಡೆಯದೆ ಸುಪ್ರೀಂಕೋರ್ಟ್ ಗೆ ಡಿನೋಟಿಫಿಕೇಷನ್ ಅನುಮತಿ ಕೋರಿ ಐ.ಎ.ಹಾಕಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಅವರ ಉತ್ತರ ಪರಿಶೀಲಿಸಿ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಎಚ್.ಎಂ.ಟಿ. ವಶದಲ್ಲಿರುವ 443 ಎಕರೆ ಅರಣ್ಯ ಭೂಮಿ ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ತಿಳಿಸಿ ಕೆಲವು ಅಧಿಕಾರಿಗಳು, ಸಚಿವ ಸಂಪುಟದ ಗಮನಕ್ಕೂ ತಾರದೆ ತಾವೇ 2020ರಲ್ಲಿ ಸುಪ್ರೀಂಕೋರ್ಟ್ ನಲ್ಲಿ ಇಂಟರ್ ಲೊಕೇಟರಿ ಅರ್ಜಿ – ಐ.ಎ. ಹಾಕಿದ್ದರು. ಈ ಐ.ಎ. ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಐಎ ಹಿಂಪಡೆಯಲು, ಘಟನೋತ್ತರ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು. ಎಚ್.ಎಂ.ಟಿ.…

Read More

ಬೆಂಗಳೂರು : ಹಾಸನ ಜಿಲ್ಲೆ, ಯಸಳೂರು ಅರಣ್ಯದಲ್ಲಿ 2023ರ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಗಜಶ್ರೇಷ್ಠ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಮುಖಿರಹಿತ ಪ್ರಮಾಣಪತ್ರ ನೀಡಿಕೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಅರ್ಜುನನ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು. ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿ.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು. ಬಳ್ಳೆಯಲ್ಲೂ ಸ್ಮಾರಕ: ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ…

Read More

ಬೆಂಗಳೂರು : ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದರು. ಆದರೆ ಕಾಂತಾರಾ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ. ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಚಿತ್ರತಂಡದಿಂದ…

Read More

ಬೆಂಗಳೂರು: ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ/ನಿಯಂತ್ರಿಸಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲುಗಳ ಭಾಗಶಃ ರದ್ದು: 1. ಜನವರಿ 25 ಮತ್ತು ಫೆಬ್ರವರಿ 1, 2025 ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ. ರೈಲುಗಳ ಮರು ವೇಳಾಪಟ್ಟಿ/ನಿಯಂತ್ರಣ: 1. ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16213 ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆಯಿಂದ 75 ನಿಮಿಷ ತಡವಾಗಿ ಹೊರಡಲಿದೆ. 2. ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 56906 ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ ರೈಲು ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ.…

Read More

ಬೆಳಗಾವಿ : “ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ ಕಾರ್ಯಕ್ರಮವಿರುವ ಕಾರಣ ಗಣ್ಯರು ಉಳಿದುಕೊಳ್ಳಲು ಅವರ ಶಿಕ್ಷಣ ಸಂಸ್ಥೆಗಳಿಂದ 170 ಕ್ಕೂ ಹೆಚ್ಚು ಕೊಠಡಿಗಳನ್ನು ನೀಡಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಂಸ್ಥೆಯಿಂದ ಬೇಕಾದ ಸಹಾಯ ಮಾಡುತ್ತಿದ್ದಾರೆ” ಎಂದು ಹೇಳಿದರು. “ಈ ಕಾರಣಕ್ಕೆ ಅವರ ಮನೆಗೆ ಬಂದು ಸೌಹಾರ್ದಯುತ ಭೇಟಿ ನೀಡಿ, ಊಟ ಮಾಡಿದೆ. ಒಳ್ಳೆಯ ಜೋಳದ ರೊಟ್ಟಿ ಊಟ ನೀಡಿದ್ದಾರೆ. ಜೋಳವನ್ನು ತಿನ್ನುವವನು ಜಟ್ಟಿಯಂತೆ ಆಗುವನು ಎನ್ನುವ ಮಾತಿದೆ” ಎಂದರು. “ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕೋರೆ ಅವರ ಕುಟುಂಬ…

Read More

ಬೆಂಗಳೂರು: ಬಿಎಂಟಿಸಿಯ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಸಂಭವನೀಯ ಆಯ್ಕೆ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ನಿರ್ವಾಹಕ (ಉಳಿಕೆ ಮೂಲ ವೃಂದದ) ಹುದ್ದೆಗೆ ಅಭ್ಯರ್ಥಿಗಳಿಗೆ ದಿನಾಂಕ:01/09/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಉಲ್ಲೇಖ-2ರಂತೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿತ್ತು ಎಂದಿದೆ. ಅದರಂತೆ ಮೂಲ ದಾಖಲೆ / ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳ ಪೈಕಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳಿಗೆ ಅನುಗುಣವಾಗಿ ನಿರ್ವಾಹಕ, ದರ್ಜೆ-೩ (ಮೇಲ್ವಿಚಾರಕೇತರ) ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳು ಈ ಕೆಳಕಂಡಂತಿದೆ. ಮೀಸಲಾತಿ ಶೇಕಡವಾರು ಮಹಿಳಾ ಗ್ರಾಮೀಣ ಕನ್ನಡ ಮಾಧ್ಯಮ ಯೋಜನಾ ನಿರಾಶ್ರಿತ ಸಾಮಾನ್ಯ ವರ್ಗ ಪರಿಶಿಷ್ಟ ಜಾತಿ ಶೇಕಡ…

Read More

ಬೆಂಗಳೂರು: ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್ ಎನ್ನುವಂತೆ ಚಿತ್ರತಂಡ ಷರತ್ತು ಉಲ್ಲಂಘನೆಯ ಬಗ್ಗೆ ಪರಿಶೀಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಒಂದು ವೇಳೆ ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿಯಾಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆಯೂ ಖಡಕ್ ಆದೇಶ ಮಾಡಿದ್ದಾರೆ. ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತ ಬಳಿ ಇರುವ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ದಿ.03.01.2025 ರಿಂದ 15.01.2025 ರವರೆಗೆ ತಾತ್ಕಾಲಿಕ ಸೆಟ್ ನಿರ್ಮಾಣ ಮಾಡಿಕೊಳ್ಳಲು ಹಾಗೂ ದಿ.15.01.2025 ರಿಂದ 25.01.2025 ರವರೆಗೆ ಒಟ್ಟು 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣಕ್ಕೆ ಷರತ್ತುಬದ್ಧ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಕಾಂತಾರಾ ತಂಡ ಕಾಡಿನಂಚಿನ ಪರಿಭಾವಿತ ಅರಣ್ಯ ಪ್ರದೇಶದ ಬಳಿ…

Read More

ಬಳ್ಳಾರಿ: ಜಿಲ್ಲೆಯ ಕರ್ನಾಟಕ ಹಾಲು ಉತ್ಪಾದ ಮಹಾಮಂಡಳದ ಕಚೇರಿಯ ಮುಂದೆಯೇ ವಾಮಾಚಾರ ಮಾಡಿರುವಂತ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಬಳ್ಳಾರಿ ನಗರದಲ್ಲಿರುವಂತ ಕೆಎಂಎಫ್ ಕಚೇರಿಯ ಮುಂದೆಯೇ ವಾಮಾಚಾರ ಮಾಡಲಾಗಿದೆ. ನಿಂಬೆಹಣ್ಣು, ಕುಡಿಕೆ, ಮಡಿಕೆ, ಕುಂಕುಮ ಇರಿಸಿ ವಾಮಾಚಾರವನ್ನು ಮಾಡಿರೋದಾಗಿ ಹೇಳಲಾಗುತ್ತಿದೆ. ಈಗಾಗಲೇ ನಷ್ಟದಲ್ಲಿರುವಂತ ಕೆಎಂಎಫ್ ಮುಂದೆಯೇ ವಾಮಾಚಾರದಿಂದಾಗಿ ಕಚೇರಿಯ ಸಿಬ್ಬಂದಿ ಬೆಚ್ಚಿ ಬಿದ್ದಿದ್ದಾರೆ. ಬಳ್ಳಾರಿಯ ಕೆಎಂಎಫ್ ನಲ್ಲಿನ ಆಂತರಿಕ ವೈಮನಸ್ಸಿನಿಂದಲೇ ಈ ಕೃತ್ಯ ಎಸಗಿರೋದಾಗಿ ಹೇಳಲಾಗುತ್ತಿದೆ. ಮಡಿಕೆ, ತಾಯತ, 8 ನಿಂಬೆಹಣ್ಣು, ಕುಂಬಳಕಾಯಿಗೆ ಬಣ್ಣದ ದಾರ ಕಟ್ಟಿರುವಂತ ದುಷ್ಕರ್ಮಿಗಳು ವಾಮಾಚಾರ ಮಾಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/eds-press-release-on-muda-politically-motivated-cm-siddaramaiah/ https://kannadanewsnow.com/kannada/now-melania-has-a-meme-coin-out-after-trumps-new-cryptocurrency/

Read More