Author: kannadanewsnow09

ಮಂಡ್ಯ: ಬಿರಿಯಾನಿ ಅಂದ್ರೆ ಅನೇಕರು ಇಷ್ಟ ಪಡ್ತಾರೆ. ರುಚಿಯಾಗಿದ್ದರಂತೂ ಆ ಹೋಟೆಲ್ ಗೆ ಖಾಯಂ ಗಿರಾಕಿ ಆಗಿಬಿಡ್ತಾರೆ. ಹೀಗೆ ನೀವು ಬಿರಿಯಾನಿ ರುಚಿಯಾಗಿರುತ್ತೆ ಅಂತ ತಿನ್ನೋದಕ್ಕೆ ಹೋಗೋ ಮುನ್ನಾ ಶಾಕಿಂಗ್ ಸುದ್ದಿ ಮುಂದಿದೆ ಓದಿ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದಲ್ಲಿ ಜನರಿಗೆ ನಾಯಿ‌ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಬಂಧಿಸಲಾಗಿದೆ. ಚಿನಕುರಳಿ ಗ್ರಾಮದಲ್ಲಿ ಮದೀನಾ ಹೆಸರಿನ ಹೋಟೇಲ್ ಅನ್ನು ಅನ್ಯಕೋಮಿನ ವ್ಯಕ್ಯಿ ನಡೆಸುತ್ತಿದ್ದನು. ತನ್ನ ಹೋಟೇಲ್ ನಲ್ಲಿ ಬಿರಿಯಾನಿಗೆ ನಾಯಿ ಮಾಂಸ ಬೆರಿಸಿ ಜನರಿಗೆ ತಿನ್ನಿಸ್ತಿದ್ದ ಆರೋಪ ಮಾಡಲಾಗಿತ್ತು. ಮಂಗಳವಾರದಂದು ನಾಯಿ ಮಾಂಸದ ಸಾಕ್ಷಿಯೊಂದಿಗೆ ಜನರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹೀಗಾಗಿ ಹೋಟೆಲ್ ಮಾಲೀಕ ಅಜಾದ್ ನನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಕ್ಕೂ ಮುನ್ನಾ ಮದೀನಾ ಹೋಟೇಲ್ ನಲ್ಲಿ ನಾಯಿ ಮಾಂಸದ ಬಿರಿಯಾನಿ ತಿನ್ನಿಸಿದ್ದಕ್ಕೆ ರೊಚ್ಚಿಗೆದ್ದ ಜನರಿಂದ ಆರೋಪಿಗೆ ಧರ್ಮಧೇಟು ನೀಡಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಪಾಂಡವಪುರ…

Read More

ನವದೆಹಲಿ: 2025 ರಲ್ಲಿ ಅಂದಾಜು 1.46 ಶತಕೋಟಿ ಜನರೊಂದಿಗೆ ಭಾರತವು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಮುಂದುವರೆದಿದ್ದರೂ, ದೇಶದ ಒಟ್ಟು ಫಲವತ್ತತೆ ದರವು 1.9 ಕ್ಕೆ ಇಳಿದಿದೆ. ಇದು ಬದಲಿ ಮಟ್ಟ 2.1 ಕ್ಕಿಂತ ಕಡಿಮೆಯಾಗಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ (UNFPA) ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ. 2025 ರ ವಿಶ್ವ ಜನಸಂಖ್ಯಾ ಸ್ಥಿತಿ (SOWP) ವರದಿಯು ನಿಜವಾದ ಬಿಕ್ಕಟ್ಟು ಜನಸಂಖ್ಯೆಯ ಗಾತ್ರದಲ್ಲಿಲ್ಲ, ಬದಲಿಗೆ ಯಾವಾಗ, ಮತ್ತು ಎಷ್ಟು ಮಕ್ಕಳನ್ನು ಹೊಂದಬೇಕು ಎಂಬುದನ್ನು ಮುಕ್ತವಾಗಿ ಮತ್ತು ಜವಾಬ್ದಾರಿಯುತವಾಗಿ ನಿರ್ಧರಿಸುವ ವ್ಯಕ್ತಿಗಳ ಹಕ್ಕನ್ನು ಬೆಂಬಲಿಸುವ ವ್ಯಾಪಕ ಸವಾಲುಗಳಲ್ಲಿದೆ ಎಂದು ಒತ್ತಿಹೇಳುತ್ತದೆ. ಯುಎನ್ ವರದಿಯು “ಪ್ರಸ್ತುತ ಭಾರತದ ಜನಸಂಖ್ಯೆ 1,463.9 ಮಿಲಿಯನ್” ಎಂದು ಅಂದಾಜಿಸಿದೆ. “ಭಾರತವು ಈಗ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದ್ದು, ಸುಮಾರು 1.5 ಶತಕೋಟಿ ಜನರನ್ನು ಹೊಂದಿದೆ. ಇದು ಕುಸಿಯಲು ಪ್ರಾರಂಭಿಸುವ ಮೊದಲು ಸುಮಾರು 1.7 ಶತಕೋಟಿಗೆ ಬೆಳೆಯುವ ನಿರೀಕ್ಷೆಯಿದೆ” ಎಂದು ವರದಿ ಹೇಳಿದೆ.…

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಲ್ಲದೇ 67 ಜನರಿಗೆ ಕೊರೋನಾ ಪಾಸಿಟಿವ್ ಅಂತ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 571 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 67 ಜನರಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದೆ. ಇನ್ನೂ ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 165 ಜನರು ಗುಣಮುಖರಾಗಿದ್ದಾರೆ. ಆರು ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ, 453 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 459 ಸಕ್ರೀಯ ಸೋಂಕಿತರು ಇರುವುದಾಗಿ ಹೇಳಿದೆ. https://twitter.com/DHFWKA/status/1932442924887036155 https://kannadanewsnow.com/kannada/the-theoretical-approval-for-the-caste-census-report-decision-for-re-survey-cm-siddaramaiah/ https://kannadanewsnow.com/kannada/a-single-phone-call-rs-1-4-crores-disappeared-from-the-account-you-will-be-shocked-to-know-how-it-happened/

Read More

ನವದೆಹಲಿ : ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು ಹಾಗೂ ಜಾತಿ ಗಣತಿಯ ದತ್ತಾಂಶ ಹತ್ತು ವರ್ಷ ಹಳೆಯದಾಗಿರುವುದರಿಂದ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ. ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕಾಗುವುದು ಎಂದು ತಿಳಿಸಿದರು. ಕಾಲ್ತುಳಿತ ಪ್ರಕರಣ: ಸರ್ಕಾರದ ಕ್ರಮಗಳ ಬಗ್ಗೆ ವರಿಷ್ಠರಿಗೆ ವಿವರಣೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣದ…

Read More

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ. ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ ಕಾಯಕಲ್ಪ ಕುರಿತು 60 ಕಂಪನಿಗಳ 80 ಮುಖ್ಯಸ್ಥರು ಮತ್ತು ಸಿಇಒಗಳೊಂದಿಗೆ ನಡೆದ `ಉತ್ಪಾದನಾ ಮಂಥನ’ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಸಮಾವೇಶದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ಸ್, ಕ್ಯಾಪಿಟಲ್ ಗೂಡ್ಸ್ ಮತ್ತು ರೋಬೋಟಿಕ್ಸ್, ಆಟೋ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್, ಟೆಕ್ನಿಕಲ್ ಮತ್ತು ಎಂಎಂಎಫ್ ಬೇಸ್ಡ್ ಟೆಕ್ಸ್ಟೈಲ್ಸ್ ಹಾಗೂ ಪಾದರಕ್ಷೆ, ಗೊಂಬೆ ಮತ್ತು ಎಫ್ಎಂಸಿಜಿ ಉತ್ಪನ್ನಗಳನ್ನು ಒಳಗೊಂಡಿರುವ ಗ್ರಾಹಕ ಉತ್ಪನ್ನಗಳ ವಲಯಗಳ ಮೇಲೆ ಗಮನ…

Read More

ಮಂಡ್ಯ : ಕಾರಿನಲ್ಲಿ ತೆರಳುವಂತವರು ಮುಂಭಾಗದಲ್ಲಿನ ಡ್ರೈವರ್ ಹಾಗೂ ಕೋ ಪ್ಯಾಸೆಂಜರ್ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಸೀಟ್ ಬೆಲ್ಟ್ ಧರಿಸಿದ್ದಾಗ ಮಾತ್ರವೇ ಮುಂಭಾಗದಲ್ಲಿನ ಏರ್ ಬ್ಯಾಗ್ ಓಪನ್ ಆಗಿ ಅಮೂಲ್ಯ ಜೀವ ಉಳಿಯೋದಕ್ಕೆ ಸಾಧ್ಯ. ಒಂದು ವೇಳೆ ನೀವು ಸೀಟ್ ಬೆಲ್ಟ್ ಹಾಕದೇ ಕಾರಿನಲ್ಲಿ ಹೋಗ್ತೀರಿ ಅಂದ್ರೆ ಅದಕ್ಕೂ ಮುನ್ನಾ ಮುಂದೆ ಸುದ್ದಿ ಓದಿ. ಮದ್ದೂರು – ತುಮಕೂರು ರಸ್ತೆಯ ತೊರೆಶೆಟ್ಟಿಹಳ್ಳಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಪಾದಚಾರಿಗಳಿಗೆ ಸಣ್ಣಪುಣ್ಣ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ಜರುಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯದ ವಿನಾಯಕ ಬಡಾವಣೆಯ ಉದಯ್, ಮದ್ದೂರು ಪಟ್ಟಣದ ನಿವಾಸಿ ಅವಿನಾಶ್ ಹಾಗೂ ಪಾದಚಾರಿಗಳಾದ ತೊರೆಶೆಟ್ಟಿಹಳ್ಳಿ ಗ್ರಾಮದ ದೀಪಿಕಾ, ಸುಶೀಲಮ್ಮ ಅವರು ಗಾಯಗೊಂಡಿದ್ದಾರೆ. ಉಮೇಶ್ ಎಂಬುವರ ಮನೆ ಸ್ವಲ್ಪ ಮಟ್ಟಿಗೆ ಜಖಂಗೊಂಡಿದೆ. ಘಟನೆ ವಿವರ: ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಗ್ರಾಮದ ಮದ್ದೂರು – ತುಮಕೂರು ರಸ್ತೆಯಲ್ಲಿ ಕುಣಿಗಲ್ ಕಡೆಯಿಂದ…

Read More

ಬೆಂಗಳೂರು: ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮರು ಜಾತಿ ಗಣತಿ ನಿರ್ಣಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗ ಈ ಹಿಂದೆ ನಡೆಸಿದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯನ್ನು ಸರ್ಕಾರ ತಾತ್ವಿಕವಾಗಿ ಒಪ್ಪುತ್ತದೆ ಎಂದು ಹೇಳಿತ್ತು. ಆದರೆ, ಆ ಗಣತಿಯ ಬಗ್ಗೆ ಮಠಾಧೀಶರು, ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳು, ಪ್ರಮುಖ ಜಾತಿ ಸಂಘಟನೆಗಳು ಮರು ಗಣತಿಗೆ ಒತ್ತಾಯಿಸಿದ್ದರು. ಈ ಹಿಂದೆ ಮಾಡಿದ ಜಾತಿ ಗಣತಿಯಲ್ಲಿ ಹಲವು ಗೊಂದಲಗಳಿವೆ ಎಂದು ಆಕ್ಷೇಪಿಸಿದ್ದವು. ಸರ್ಕಾರಕ್ಕೆ ಮನವಿ ಸಲ್ಲಿಸಿ ಮರು ಸಮೀಕ್ಷೆಗೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ಸೂಚನೆಯಂತೆ ಸರ್ಕಾರ ಮರು ಸಮೀಕ್ಷೆ ನಿರ್ಣಯ ಪ್ರಕಟಿಸಿರುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ. ಈ ಸಮೀಕ್ಷೆ ನಿಗದಿತ ಕಾಲಾವಧಿಯಲ್ಲಿ ಮುಗಿಯಬೇಕು, ಗೊಂದಲಗಳು ಬಗೆಹರಿಯಬೇಕು…

Read More

ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕ ಆರ್.ಅಶೋಕ್, ನಮ್ಮ ಶಾಸಕರು ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ನುಡಿದರು. ಈ ರಾಜ್ಯದ ಗೌರವ ಎತ್ತಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದು ತಿಳಿಸಿದರು. ವಿಧಾನಸೌಧದಲ್ಲಿ ಆದ ಕಾರ್ಯಕ್ರಮ ನಾನು ನೋಡಿಕೊಂಡೆ. ನನಗೆ ಬೇರೆ ಯಾವುದೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗಮನ ಸೆಳೆದರು. ಹಾಗಿದ್ದರೆ ನೀವು ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಗಳೇ? ಈ ರಾಜ್ಯಕ್ಕೆ ಮುಖ್ಯಮಂತ್ರಿ ಯಾರು? ಡಿ.ಕೆ.ಶಿವಕುಮಾರ್? ಪರಮೇಶ್ವರ್ ಅವರೇ? ಅಥವಾ ಮುಖ್ಯ ಕಾರ್ಯದರ್ಶಿಗಳೇ? ಎಂದು ಕೇಳಿದರು. ನೀವು ಯಾವ ಯೋಗ್ಯತೆ ಇಟ್ಟುಕೊಂಡು ಮುಖ್ಯಮಂತ್ರಿ ಎಂದು ಕರೆಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ‘ಯು ಮಸ್ಟ್ ರಿಸೈನ್’…

Read More

ಬೆಂಗಳೂರು: ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ. ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. Shall I add ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264…

Read More

ಬೆಂಗಳೂರು : ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ (55) ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇಂದು ಬೆಳಗ್ಗೆ ಮಹಿಳೆ ರಂಗಮ್ಮ ಬಹಿರ್ದೆಸೆಗೆ ಹೋಗಿದ್ದಾಗ ಹುಲಿ ದಾಳಿ ಮಾಡಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮನುಷ್ಯರ ರಕ್ತದ ರುಚಿ ಕಂಡ ಹುಲಿ ಅಪಾಯಕಾರಿ, ಹೀಗಾಗಿ ಕೂಡಲೇ ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಂತೆ ಸೂಚಿಸಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿಸಿದ್ದಾರೆ. ಹುಲಿ ದಾಳಿಯಿಂದ ಗಾಯಗೊಂಡಿರುವ ರವಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಸಚಿವರು, ಮೃತ ರಂಗಮ್ಮ ಅವರ ಕುಟುಂಬದ ಸದಸ್ಯರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ, ಮೃತರ…

Read More