Author: kannadanewsnow09

ಬೆಳಗಾವಿ: ಇಂದು ಬೆಳಗಾವಿ, ಬಾಗಲಕೋಟೆ ಪ್ರಾದೇಶಿಕ ಸಾರಿಗೆ ಕಛೇರಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಅಲ್ಲದೇ RTO ಕಛೇರಿಗಳು ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಖಡಕ್ ಸೂಚನೆಯನ್ನು ನೀಡಿದರು. RTO ಹೊಸ ಕಛೇರಿಯ ಕಟ್ಟಡ ಕಾಮಗಾರಿಗೆ ಒಟ್ಟು ರೂ 974.05 ಲಕ್ಷಗಳಿಗೆ ಮಂಜೂರಾಗಿದ್ದು, ಪ್ರಾದೇಶಿಕ ಸಾರಿಗೆ ಕಛೇರಿ ಮತ್ತು ಜಂಟಿ ಸಾರಿಗೆ ಆಯುಕ್ತರು, ಬೆಳಗಾವಿ ವಿಭಾಗದ ಕಚೇರಿ ಒಳಗೊಂಡಿರುತ್ತದೆ. ಪರಿವೀಕ್ಷಣೆ ನಡೆಸಿದ ಸಾರಿಗೆ ಸಚಿವರು ಏಪ್ರಿಲ್ 2025ಕ್ಕೆ ಹೊಸ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುವಂತೆ ಆಗಬೇಕು, ಅದರೊಳಗೆ ಎಲ್ಲಾ ರೀತಿಯಲ್ಲೂ ಕಾಮಗಾರಿ ಮುಕ್ತಾಯವಾಗಿರಬೇಕು ಎಂದು ಸೂಚನೆ ನೀಡಿದರು. ಬೆಳಗಾವಿ RTO 2024-25ನೇ ಸಾಲಿನ ರಾಜಸ್ವ ಗುರಿ ರೂ.23,260 ಲಕ್ಷ, ಅದರಲ್ಲಿ ರೂ.17625 ಲಕ್ಷ ವಸೂಲಾತಿ ಮಾಡಿ 90.93% ಪ್ರಗತಿ ಸಾಧಿಸಿದೆ. 5076 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, ದಂಡ ಮೊತ್ತ ರೂ. 95,29,578/- ವಸೂಲು ಮಾಡಲಾಗಿರುತ್ತದೆ. ರಸ್ತೆ ಸುರಕ್ಷತೆ ಗುರಿ 6300 ವಾಹನಗಳ ಗುರಿಯನ್ನು ಹೊಂದಿದ್ದು, ಈವರೆಗೂ 5076 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದು,…

Read More

ಬೆಂಗಳೂರು: ಹಿರಿಯ ರಂಗ ಕಲಾವಿದೆ, ಸಾಂಸ್ಕೃತಿಕ ಪೋಷಕಿ, ಎಂ ಇ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದ ವಿಮಲಾ ರಂಗಾಚಾರ್ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ವಿಮಲಾ ರಂಗಾಚಾರ್ ರವರು ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು, ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಅವರು ಸ್ವತಹ ಕಲಾವಿದರಾಗಿ ಹೆಸರು ಮಾಡಿದ್ದರು. ಶಿಕ್ಷಣ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾದದ್ದು ,ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕ ಒಂದು ಸ್ಪೂರ್ತಿ ಚಿಲುಮೆಯನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ನಿಧನದ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/veteran-kannada-theatre-artiste-and-organiser-vimala-rangachar-passes-away/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/

Read More

ಬೆಂಗಳೂರು: ಕನ್ನಡದ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಅವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ದುಡಿದಿದ್ದಾರೆ. ಅವರ ಮಗಳು ರೇವತಿ ವಿದೇಶದಲ್ಲಿದ್ದು, ಅವರು ಬಂದ ನಂತರ ವಿಮಲಾ ಅವರ ಅಂತ್ಯಕ್ರಿಯೆ ಗುರುವಾರ ಅಂದರೆ ಫೆಬ್ರುವರಿ 27ರಂದು ನಡೆಯಲಿದೆ. https://kannadanewsnow.com/kannada/by-vijayendra-to-meet-cm-on-feb-28-to-seek-solution-to-bengalurus-burning-issue/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/

Read More

ಬೆಂಗಳೂರು: ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಣಕಾಸಿನ ಸಚಿವರೂ ಆದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಆಗಿದೆ ಎಂದರು. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ ಎಂದು ಒತ್ತಾಯಿಸಿದರು. ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಮಾತನಾಡುತ್ತಿದ್ದಾರೆ. ಟನೆಲ್ ರಸ್ತೆ ಯೋಜನೆ ಕೈಬಿಟ್ಟು…

Read More

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ತರಬೇತಿ ನೀಡಲು ರಾಜ್ಯದಲ್ಲಿ 7 ಕಡೆಯಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳು ಸ್ಥಾಪನೆಯಾಗಲಿದ್ದಾವೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್‌ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್‌ ಆಫ್‌ ಎಕ್ಸಲೆನ್ಸ್‌ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್‌ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1894269269774606833 https://kannadanewsnow.com/kannada/ima-case-victims-to-get-relief-before-ramzan-minister-krishna-byre-gowda/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/

Read More

ಮುಂಬರುವ ಮಹಾ ಶಿವರಾತ್ರಿಯಂದು (26/0272025) ಬ್ರಹ್ಮ ಮೂರ್ಹತ ಸಮಯದಲ್ಲಿ, ಶಿವನ ಈ ಒಂದು ಸಾಲಿನ ಮಂತ್ರವನ್ನು ಜಪಿಸಿದರೆ ಸಾಕು, ಜೀವನದಲ್ಲಿ ಎಲ್ಲಾ ಸಂಪತ್ತು ಲಾಭಗಳು ಸಿಗುತ್ತವೆ. ಮಹಾ ಶಿವರಾತ್ರಿ ದಿನವನ್ನು ಈ ತಿಂಗಳಲ್ಲಿ 26/02/2025 ರಂದು ಆಚರಿಸಲಾಗುತ್ತದೆ. ಶಿವನಿಗೆ ಅನೇಕ ವಿಶೇಷ ದಿನಗಳು ಮತ್ತು ಉಪವಾಸ ದಿನಗಳು ಇದ್ದರೂ, ಈ ಮಹಾ ಶಿವರಾತ್ರಿಯು ಬಹಳ ಮುಖ್ಯವಾದ ಉಪವಾಸ ದಿನವಾಗಿದೆ. ಈ ದಿನ ಶಿವನನ್ನು ಪ್ರಾರ್ಥಿಸಿದರೆ ನಾವು ಕೇಳಿದ್ದೆಲ್ಲ ಸಿಗುತ್ತದೆ ಎಂಬ ನಂಬಿಕೆ ಇದೆ. ಈ ಮಹತ್ವದ ದಿನದಂದು ನಾವು ಶಿವನನ್ನು ಪ್ರಾರ್ಥಿಸಬೇಕು ಮತ್ತು ದಿನದ ಆರಂಭದಲ್ಲಿ ಶಿವನ ಈ ಒಂದು ಮಂತ್ರವನ್ನು ಹೇಳಬೇಕು. ಈ ಮೂಲಕ ನಾವು ನಮ್ಮ ಜೀವನದಲ್ಲಿ ಎಲ್ಲಾ ಸಂಪತ್ತು ಲಾಭಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಆಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕು ಎಂಬುದನ್ನು ನೀವು ಕಂಡುಹಿಡಿಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್…

Read More

ಬೆಂಗಳೂರು: ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್‌ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1894310215874744673 ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸುವುದಾಗಿ ಘೋಷಿಸಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್‌ಫೋರ್ಸ್‌ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್‌, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. https://twitter.com/KarnatakaVarthe/status/1894273171932762592 ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಬೆಂಬಲ ಬೆಲೆ ಎಷ್ಟು? ಹೈಬ್ರಿಡ್ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3371 ಮಾಲ್ದಂಡಿ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3421 ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ 20 ಕ್ವಿಂಟಾಲ್ ಪ್ರತಿ ರೈತರಿಂದ ಖರೀದಿ ಪ್ರಮಾಣ 150 ಕ್ವಿಂಟಾಲ್ ಮಾರಾಟ ಹೇಗೆ.? ಬಿಳಿಜೋಳ ಬೆಳಗಾರರು ಪ್ರೂಟ್ಸ್ ಐಡಿಯೊಂದಿಗೆ…

Read More

ಬೆಂಗಳೂರು: ತಮ್ಮ ಬಟ್ಟೆ ಅಂಗಡಿಗೆ ಬಟ್ಟೆ ಖರೀದಿಸಿ ತರೋದಕ್ಕೆ ದೆಹಲಿ, ಮುಂಬೈಗೆ ತೆರಳೋದಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ಕೋರ್ಟ್ ಅನುಮತಿ ನೀಡಿದೆ. ಈ ಸಂಬಂಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರವಾಗಿ ರವೀಂದ್ರ ಗೌಡ ಎಂಬುವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಮೂರ್ತಿ ಜೈಶಂಕರ್ ವಿಚಾರಣೆ ನಡೆಸಿದರು. ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ ದೆಹಲಿ ಹಾಗೂ ಮುಂಬೈಗೆ ಪವಿತ್ರಾ ಗೌಡ ಅವರು ತಮ್ಮ ಅಂಗಡಿಗೆ ಬಟ್ಟೆ ಖರೀದಿಸಲು ತೆರಳುತ್ತಿದ್ದಾರೆ. ಇದಕ್ಕೆ ಅನುಮತಿ ನೀಡುವಂತೆ ಮನವಿ ಮಾಡಲಾಗಿತ್ತು. ಈ ಮನವಿ ಪುರಸ್ಕರಿಸಿರುವಂತ ಕೋರ್ಟ್, ಪವಿತ್ರಾ ಗೌಡ ಅವರಿಗೆ ದೆಹಲಿ, ಮುಂಬೈಗೆ ತೆರಳಲು ಅನುಮತಿ ನೀಡಿದೆ. https://kannadanewsnow.com/kannada/man-arrested-for-stealing-gold-from-sai-gold-palace-gold-ornaments-worth-rs-63-lakh-seized/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/

Read More

ಬೆಂಗಳೂರು: ಜೆಡಿಎಸ್ ಎಂಎಲ್ಸಿ ಶರವಣ ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಕಳ್ಳತನ ಮಾಡಲಾಗಿತ್ತು. ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಬಂಧಿಸಿರುವಂತ ಪೊಲೀಸರು 63 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 15 ದಿನಗಳ ಹಿಂದೆ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ಮೌನೇಶ್ ಎಂಬಾತನ ಕೈಗೆ ಒಂದೂವರೆ ಕೆಜಿ ಚಿನ್ನ ಕೊಟ್ಟು ಹಾಲ್ ಮಾರ್ಕ್ ಹಾಕಿಸಿಕೊಂಡು ಬರೋದಕ್ಕೆ ಕಳುಹಿಸಲಾಗಿತ್ತು. ಆದರೇ ಆ ಚಿನ್ನದೊಂದಿಗೆ ಮೌನೇಶ್ ರಾಜಸ್ಥಾನಕ್ಕೆ ಪರಾರಿಯಾಗಿದ್ದನು. ಈ ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳ್ಳತನ ಮಾಡಿದ್ದಂತ ಚಿನ್ನಾಭರಣವನ್ನು ಸ್ನೇಹಿತ ಮಹಾವೀರ್ ಮನೆಯಲ್ಲಿ ಮಾರಾಟ ಮಾಡಲು ಆಗದೇ ಇರಿಸಿದ್ದನು. ಆದರೇ ಮಹಾವೀರ್ ಎರಡು ದಿನಗಳ ಬಳಿಕ ಮೌನೇಶ್ ಗೆ ಕರೆ ಮಾಡಿ ನನ್ನ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಚಿನ್ನವನ್ನು ತೆಗೆದುಕೊಂಡು ಹೋಗಿದ್ದಾರೆ ಅಂತ ಕತೆ ಹೇಳಿದ್ದಾನೆ. ಇತ್ತ ಹಲಸೂರು ಗೇಟ್ ಪೊಲೀಸರು ರಾಜಸ್ಥಾನಕ್ಕೆ ತೆರಳಿ ಆರೋಪಿ ಮೌನೇಶ್ ಬಂಧಿಸಿ…

Read More