Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಯುವನಿದಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 9901914601 ಇವರುಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/bihar-assembly-election-results-bjp-celebrates/ https://kannadanewsnow.com/kannada/alert-diabetes-can-cause-these-serious-problems-including-heart-attacks/
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ಮಾಜಿ ಸಂಸದ ಡಾ. ಉಮೇಶ್ ಜಾಧವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಎಸ್‍ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ‘ಇಂದು ಬಿಹಾರ, ನಾಳೆ ಕರ್ನಾಟಕ’ ‘ಭಾರತ್ ಮಾತಾಕೀ ಜೈ’ ‘ನರೇಂದ್ರ…
ನವದೆಹಲಿ: ಚೆನ್ನೈನ ತಂಬ್ರಾಮ್ ಬಳಿ ನಿಯಮಿತ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ವಾಯುಪಡೆಯ ಪಿಸಿ-7 ಪಿಲಾಟಸ್ ಮೂಲ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ. ಪೈಲಟ್ ಸುರಕ್ಷಿತವಾಗಿ ಹೊರಜಿಗಿದಿದ್ದು, ಕಾರಣವನ್ನು ಕಂಡುಹಿಡಿಯಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ. ಶುಕ್ರವಾರ ಚೆನ್ನೈನ ತಾಂಬರಂ ವಾಯುನೆಲೆಯ ಬಳಿ ನಿಯಮಿತ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ವಾಯುಪಡೆಯ (IAF) ತರಬೇತಿ ವಿಮಾನವೊಂದು ಪತನಗೊಂಡಿತು. ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಮಾನ ಪತನವಾಯಿತು, ಆದರೆ ಪೈಲಟ್ ಡಿಕ್ಕಿ ಹೊಡೆಯುವ ಮೊದಲು ಸುರಕ್ಷಿತವಾಗಿ ಹೊರಕ್ಕೆ ಹಾರುವಲ್ಲಿ ಯಶಸ್ವಿಯಾದರು. ಸ್ವಲ್ಪ ಸಮಯದ ನಂತರ ಬಿಡುಗಡೆಯಾದ ಹೇಳಿಕೆಯಲ್ಲಿ, ಘಟನೆ ಸಂಭವಿಸಿದಾಗ ಪಿಲಾಟಸ್ PC-7 ಮೂಲ ತರಬೇತಿ ವಿಮಾನವು ಪ್ರಮಾಣಿತ ತರಬೇತಿ ಹಾರಾಟದಲ್ಲಿತ್ತು ಎಂದು IAF ತಿಳಿಸಿದೆ.
ಹಾಸನ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪು ಮರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಗೀಜಿಹಳ್ಳಿ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಪುತ್ತೂರು ಡಿಪೋ ಬಸ್ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮರಕ್ಕೆ ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು. https://kannadanewsnow.com/kannada/alert-diabetes-can-cause-these-serious-problems-including-heart-attacks/
ಬೆಂಗಳೂರು: ವಾರಾಂತ್ಯದ ದಟ್ಟಣೆ ಮತ್ತು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂದಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದ ಹಿನ್ನೆಲೆಯಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ತಿರುವನಂತಪುರಂ ನಾರ್ತ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ. ಈ ವಿಶೇಷ ರೈಲುಗಳ ವಿವರ ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 06543/06544 ಬೆಂಗಳೂರು ಕಂಟೋನ್ಮೆಂಟ್ – ತಿರುವನಂತಪುರಂ ನಾರ್ತ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06543 ನವೆಂಬರ್ 15 ರಂದು ಮಧ್ಯಾಹ್ನ 1:00 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಟು, ಮರುದಿನ ಬೆಳಿಗ್ಗೆ 6:40ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ. ಹಿಂದಿರುಗುವ ಸೇವೆ, ರೈಲು ಸಂಖ್ಯೆ 06544 ನವೆಂಬರ್ 16 ರಂದು ಬೆಳಿಗ್ಗೆ 9:30ಕ್ಕೆ ತಿರುವನಂತಪುರಂ ನಾರ್ತ್’ದಿಂದ ಹೊರಟು, ನವೆಂಬರ್ 17 ರಂದು ಬೆಳಿಗ್ಗೆ 3:30ಕ್ಕೆ ಬೆಂಗಳೂರು ಕಂಟೋನ್ಮೆಂಟ್’ಗೆ ಆಗಮಿಸಲಿದೆ. 2. ರೈಲು ಸಂಖ್ಯೆ 06549/06550 ಎಸ್ಎಂವಿಟಿ ಬೆಂಗಳೂರು…
ಬೆಂಗಳೂರು: ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ಅವರು ನಿಧನರಾಗಿದ್ದಾರೆ. ಆ ಮೂಲಕ ಹಿರಿಯ ಪತ್ರಕರ್ತ, ಕಲಾವಿದ ಇನ್ನಿಲ್ಲವಾಗಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಪ್ರಜಾವಾಣಿ ಹಿರಿಯ ಪತ್ರಕರ್ತ&ಕಲಾವಿದ ಬಾವು ಪತ್ತಾರ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದೆ ಎಂದಿದ್ದಾರೆ. ಸರಳ ಸಜ್ಜನಿಕೆಯ ಪತ್ತಾರ್, ಗ್ರಾಫಿಕ್ ಡಿಸೈನರ್ ಆಗಿ ಗಮನ ಸೆಳೆದವರು. ಅವರ ಅಗಲಿಕೆಯಿಂದ ಸುದ್ದಿಮನೆಯ ಪ್ರತಿಭಾವಂತ ಕೊಂಡಿಯೊಂದು ಕಳಚಿದೆ ಎಂದು ಶೋಕಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. https://twitter.com/kuwj_r/status/1989252289518068088
ಶಿವಮೊಗ್ಗ: “ವೃಕ್ಷ ಮಾತೆ” ಸಾಲುಮರದ ತಿಮ್ಮಕ್ಕ ಅವರ ನಿಧನ ಮನಸ್ಸಿಗೆ ಆಘಾತ ತಂದಿದೆ. ಪರಿಸರ ಸಂರಕ್ಷಣೆಗೆ ತಮ್ಮ ಬದುಕನ್ನೇ ಸಮರ್ಪಿಸಿದ ತಿಮ್ಮಕ್ಕ ಅವರ ಸೇವೆ ಎಂದಿಗೂ ಮರೆಯಲಾಗದು. ಅವರು ನೆಟ್ಟ ಹಸಿರು ಗಿಡಗಳಂತೆ ಅವರ ನೆನಪುಗಳೂ ಸದಾ ಜೀವಂತವಾಗಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಧೈರ್ಯ ದೊರಕಲಿ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು ಎಂದಿದ್ದಾರೆ. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಅಂತ ಹೇಳಿದ್ದಾರೆ. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ…
ಬೆಂಗಳೂರು: 2025ನೇ ಸಾಲಿನ ಬಿ. ಇಡಿ. ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2025ನೇ ಅಕ್ಟೋಬರ್ 03 ರಿಂದ ನವೆಂಬರ್ 03 ರ ವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದವರಲ್ಲಿ 28976 ಅರ್ಹ ಮತ್ತು 6793 ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in ರಲ್ಲಿ ಪ್ರಕಟಿಸಲಾಗಿದೆ. ಇವರಲ್ಲಿ 6174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ನೀಡಿದರೂ, ನೋಡಲ್ ಕೇಂದ್ರದವರು ಫೋನ್ ಮೂಲಕ ಸಂಪರ್ಕಿಸಿ ತಿಳಿಸಿ ಹೇಳಿದರೂ ಸಹಾ ದಾಖಲೆಗಳ ಪರಿಶೀಲನೆಯನ್ನು ಮಾಡಿಸಿಕೊಂಡಿರುವುದಿಲ್ಲ. ಆದರೂ ಇವರಿಗೆ ದಾಖಲೆಗಳನ್ನು ಪರಿಶೀಲಿಸಿಕೊಂಡು ಅಪ್‌ಡೇಟ್ ಮಾಡಿಸಿಕೊಳ್ಳಲು ಇನ್ನೊಂದು ಅವಕಾಶವನ್ನು ನೀಡಿ ಈ ಮೂಲಕ ಅಂತಿಮ ಸೂಚನೆಯನ್ನು ನೀಡಲಾಗಿದೆ. ಈ ಎರಡೂ ಪಟ್ಟಿಗಳಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಯೂ ಪಟ್ಟಿಯಲ್ಲಿ ನೀಡಲಾಗಿರುವ ಕೋಡ್ ಸಂಖ್ಯೆಯನುಸಾರ ಪಟ್ಟಿಯನ್ನು ಪುನಃ ಪರಿಶೀಲಿಸಿಕೊಳ್ಳತಕ್ಕದು ಮತ್ತು ಅದರಲ್ಲಿ ಯಾವುದೇ ತಪ್ಪು ಅಥವಾ ದೋಷ ಇದ್ದರೆ 2025ನೇ ನವೆಂಬರ್ 15 ರೊಳಗೆ ಸಂಬಂಧಿತ ನೋಡಲ್ ಕೇಂದ್ರಕ್ಕೆ ಎಲ್ಲಾ ಮೂಲ…
ಕಲಬುರ್ಗಿ: ದಿನಾಂಕ 16-11-2025ರಂದು ಚಿತ್ತಾಪೂರ ಪಟ್ಟಣದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಹಾಗೂ ಕಾರ್ಯಕ್ರಮಕ್ಕೆ ಷರತ್ತು ಬದ್ಧ ಅನುಮತಿಯನ್ನು ನೀಡಿ ತಹಶೀಲ್ದಾರ್ ಅಧಿಕೃತ ಆದೇಶ ಮಾಡಿದ್ದಾರೆ. ಈ ಕುರಿತಂತೆ ಚಿತ್ತಾಪೂರ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಅನುಮತಿಸಿ ಪತ್ರದಲ್ಲಿ ಆದೇಶ ಮಾಡಿದ್ದು, ಚಿತ್ತಾಪೂರ ಪಟ್ಟಣದಲ್ಲಿ ಆರ್,ಎಸ್,ಎಸ್ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆಂದು ಉಲ್ಲೇಖ (1) ರನ್‌ವಯ ಅಶೋಕ ಪಾಟೀಲ ರವರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಹಾಗೂ ಮಾನ್ಯ ಉಚ್ಚ ನ್ಯಾಯಲಯ ಕಲಬುರಗಿ ಪೀಠದಲ್ಲಿ WP NO. 203166/2025 ರ ಪ್ರಕರಣ ದಾಖಲಿಸಿರುತ್ತಾರೆ. ಮಾನ್ಯ ನ್ಯಾಯಾಲಯದ ನಿರ್ದೇಶನದಂತೆ ದಿನಾಂಕ: 28-10-2025 ರಂದು ಶಾಂತಿ ಸಭೆ ನಡೆಸಲಾಗಿರುತ್ತದೆ. ಹಾಗೂ ದಿನಾಂಕ: 30-10-2025 ರಂದು ಮಾನ್ಯ ಉಚ್ಚ ನ್ಯಾಯಲಯ ಕಲಬುರಗಿ ಪೀಠದಲ್ಲಿ ನೀಡಿದ ನಿರ್ದೇಶನದಂತೆ ದಿನಾಂಕ: 05-11-2025 ರಂದು ಮಾನ್ಯ ಅಡ್ವಕೇಟ್ ಜನರಲ್ ಬೆಂಗಳೂರು ರವರ ಕಛೇರಿಯಲ್ಲಿ ಮತ್ತೊಮ್ಮೆ ಶಾಂತಿ ಸಭೆಯನ್ನು ಅರ್ಜಿದಾರರು ಮತ್ತು ಅವರ ವಕೀಲರ ಜೊತೆ ನಡೆಸಲಾಯಿತು. ಮಾನ್ಯ ನ್ಯಾಯಲಯದ ನಿರ್ದೇಶನದಂತೆ ಹಾಗೂ…
ಬೆಂಗಳೂರು: 2025-26ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಮೂರನೇ ತ್ರೈಮಾಸಿಕ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 148 ರನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ.1000/- ಗಳ (ಒಂದು ಸಾವಿರ ರೂಪಾಯಿಗಳು) ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ತಗಲುವ ವೆಚ್ಚ ರೂ. 1800.48 ಲಕ್ಷಗಳನ್ನು ಲೆಕ್ಕಶೀರ್ಷಿಕೆ:2211-00-103-0-11-324 ರಡಿ ಒದಗಿಸಲಾದ ರೂ.2500.00 ಲಕ್ಷಗಳ ಅನುದಾನದಲ್ಲಿ ಭರಿಸಲು ಅನುಮೋದನೆ ನೀಡಲಾಗಿರುತ್ತದೆ. ಈ ಆದೇಶದನ್ವಯ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಲೆಕ್ಕಶೀರ್ಷಿಕೆ: 2211-00-103-0-11-324…














