Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ಇಲ್ಲಿನ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿತು. ಮಾಲತಿ ಪಟ್ಟಣಶೆಟ್ಟಿ, ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಸತ್ಯ ಪ್ರಕಾಶ್ ಶಾಸ್ತ್ರಿ, ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ.ಅನೂಪ್ ದಯಾನಂದ ಸಾಧು, ನೈರುತ್ಯ ರೈಲ್ವೆ ಕನ್ನಡ ಸಂಘದ ಅಧ್ಯಕ್ಷ ಮಹಾಂತಪ್ಪ ನಂದೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಡಾ.ಮಾಲತಿ ಪಟ್ಟಣಶೆಟ್ಟಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಆಚರಣೆಯನ್ನು ಶ್ಲಾಘಿಸಿದರು ಮತ್ತು ಕನ್ನಡ ಪುಸ್ತಕ “ನುಡಿ ತೋರಣ” ವನ್ನು ಅನಾವರಣಗೊಳಿಸಿದರು. ಸಾಮಾನ್ಯ ಜನರ ಜೀವನಾಡಿಯಾಗಿ ರೈಲ್ವೆ ಸೇವೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ರೈಲ್ವೆ ಇಲಾಖೆಯಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿರುವುದನ್ನು ಶ್ಲಾಘಿಸಿದರು. ರಾಷ್ಟ್ರವನ್ನು ಸಂಪರ್ಕಿಸುವಲ್ಲಿ ರೈಲ್ವೆಯ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೈಋತ್ಯ ರೈಲ್ವೆ ಆಡಳಿತದ ಕೊಡುಗೆಗಳನ್ನು ಒತ್ತಿ ಹೇಳಿದರು. ರೈಲ್ವೆ ಆಡಳಿತದಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ನೌಕರರ ಪ್ರಾತಿನಿಧ್ಯ ಹೆಚ್ಚುತ್ತಿರುವುದನ್ನು ಸತ್ಯ ಪ್ರಕಾಶ್ ಶಾಸ್ತ್ರಿ…
ಜೀವನದಲ್ಲಿ ಏನಾಗುತ್ತದೋ ಇಲ್ಲವೋ ಎಂಬ ಭಯದಲ್ಲಿ ಬದುಕುತ್ತಿರುವವರು ಅನೇಕರಿದ್ದಾರೆ. ಮನದಲ್ಲಿ ಭಯವಿದ್ದರೆ ಚಿಂತೆ, ಅವಾಂತರಗಳು.. ಎಂತಹ ಭಯ, ಚಿಂತೆ, ಕಷ್ಟಗಳು ಬಂದರೂ ಅವೆಲ್ಲವನ್ನೂ ಹೋಗಲಾಡಿಸುವ ಆಪದ್ಬಾಂಧವನಾಗಿ ಸಹಾಯಕ್ಕೆ ಬರುವವನು ನರಸಿಂಹ. ಮನೆಯಲ್ಲಿ ನರಸಿಂಹನನ್ನು ಪೂಜಿಸಿ ಪೂಜೆ ಮಾಡಿದರೆ ಹೇಗೆ ಫಲ ಸಿಗುತ್ತದೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನೋಟದಲ್ಲಿ ಉಗ್ರನಾದರೂ ನರಸಿಂಹ ಹೃದಯದಲ್ಲಿ…
ಶ್ರೀರಂಗಪಟ್ಟಣ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್ ಚಿಟ್ ಎನ್ನುತ್ತಿದ್ದಾರೆ. ಇದು ಕ್ಲೀನ್ ಚಿಟ್ ಅಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಗ್ಗಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎಲ್ಲಿಯವರೆಗೆ ಬಡವರಿಗೆ ನ್ಯಾಯ ಸಿಗುವುದಿಲ್ಲವೋ, ಅಲ್ಲಿವರೆಗೆ ಪಾಪಿಗಳ ಸರ್ಕಾರ ಎಂದು ಹೇಳುತ್ತೇನೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಮೂರು ಸೀಟು ಗೆದ್ದಿದೆ. ಆದರೆ ಬಿಜೆಪಿ ಅಂದು 18 ಸೀಟು ಗೆದ್ದಿತ್ತು. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್ ಕೂಡ ಸೋತು ಮೂರು ನಾಮ ಹಾಕಿಕೊಳ್ಳಲಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಭಯದಿಂದಾಗಿ ಅನೇಕರು ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಇದು ಭವಿಷ್ಯ ಹೇಳುವ ಚುನಾವಣೆಯಲ್ಲ ಎಂದರು. ಚುನಾವಣಾ ಫಲಿತಾಂಶವನ್ನು ಕ್ಲೀನ್ ಚಿಟ್ ಎನ್ನಲಾಗುವುದಿಲ್ಲ. ಕ್ಲೀನ್ ಚಿಟ್ ಅನ್ನು ನ್ಯಾಯಾಲಯ ಕೊಡಬೇಕಿದೆ. 14 ಸೈಟುಗಳನ್ನು ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯ ಅದನ್ನು ಬಡವರಿಗೆ ನೀಡಬೇಕಿತ್ತು. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಆರೋಪಕ್ಕೆ ಸಾಕ್ಷಿ ಇಲ್ಲದೆ ಪ್ರಕರಣ…
ಕನಕಪುರ : “ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ ‘ಮಾಝಿ ಲಡಕಿ ಬಹಿನ್ ಯೋಜನಾ’ ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು. ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ…
ಸೌದಿ: ಬಹುನಿರೀಕ್ಷಿತ ಐಪಿಎಲ್ ಹರಾಜು ಇಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಪ್ರಾರಂಭವಾಯಿತು. ಮಾರ್ಕ್ಯೂ ಸೆಟ್ನಲ್ಲಿ ಮೊದಲ 12 ಆಟಗಾರರು ಸಾಕಷ್ಟು ಹಣವನ್ನು ಖರ್ಚು ಮಾಡಿದರು. ರಿಷಭ್ ಪಂತ್ ಹರಾಜು ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರನ್ನು ಲಕ್ನೋ ಸೂಪರ್ ಜೈಂಟ್ಸ್ 27 ಕೋಟಿ ರೂ.ಗೆ ಖರೀದಿಸಿದರೆ, ಶ್ರೇಯಸ್ ಅಯ್ಯರ್ ಅವರನ್ನು ಪಂಜಾಬ್ ಕಿಂಗ್ಸ್ 26.75 ಕೋಟಿ ರೂ.ಗೆ ಖರೀದಿಸಿತು. ಈವರೆಗೆ ಯಾವ ಆಟಗಾರ, ಯಾವ ತಂಡಕ್ಕೆ ಎಷ್ಟು ಕೋಟಿಗೆ ಮಾರಾಟ ಎನ್ನುವ ಪಟ್ಟಿ ಈ ಕೆಳಗಿದೆ ಅರ್ಷ್ದೀಪ್ ಸಿಂಗ್ ಪಿಬಿಕೆಎಸ್ (ಆರ್ಟಿಎಂ) 18 ಕೋಟಿ ಕಗಿಸೊ ರಬಾಡ ಜಿಟಿ 10.75 ಕೋಟಿ ಶ್ರೇಯಸ್ ಅಯ್ಯರ್ ಪಿಬಿಕೆಎಸ್ 26.75 ಕೋಟಿ ಜೋಸ್ ಬಟ್ಲರ್ ಜಿಟಿ 15.75 ಕೋಟಿ ಮಿಚೆಲ್ ಸ್ಟಾರ್ಕ್ ಡಿಸಿ 11.75 ಕೋಟಿ ರಿಷಭ್ ಪಂತ್ ಎಲ್ಎಸ್ಜಿ 27 ಕೋಟಿ ಮೊಹಮ್ಮದ್ ಶಮಿ ಎಸ್ಆರ್ಹೆಚ್ 10 ಕೋಟಿ ಡೇವಿಡ್ ಮಿಲ್ಲರ್ ಎಲ್ಎಸ್ಜಿ 7.5 ಕೋಟಿ ಯಜುವೇಂದ್ರ ಚಾಹಲ್…
ಬೆಂಗಳೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಅವರ ಮನವಿ ಮೇಲೆ ಈ ಆದೇಶ ಮಾಡಲಾಗಿದೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ. ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆಯಾಗಿದ್ದಾಳೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿಯಾಗಿದ್ದಾಳೆ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡ ಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿಯಾಗಿ ಬೇಡಿಕೆ ಸಲ್ಲಿಸಿ, ಕೆಲವು ಸಲಹೆ ನೀಡಿದ್ದೆ. ಚಿನ್ನದ ರಥ…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಬ್ಯಾಂಕ್ ನಿಂದ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chikkamagalurudccbank.com ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ ಎಂದಿದೆ. ಹುದ್ದೆಗಳ ವಿವರ ಸಹಾಯಕ ವ್ಯವಸ್ಥಾಪಕರು – 4 ಹುದ್ದೆ ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು – 18 ಹುದ್ದೆ ಕಿರಿಯ ಸಹಾಯಕರು – 53 ಹುದ್ದೆ ಡಿ ವೃಂದದ ಸಹಾಯಕರು, ಅಟೆಂಡರ್ – 10 ಹುದ್ದೆ ವೇತನ ಸಹಾಯಕ ವ್ಯವಸ್ಥಾಪಕರು – ರೂ.36,000ದಿಂದ 67,550. ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು – ರೂ.27,650 ರಿಂದ ರೂ.52,650 ಕಿರಿಯ ಸಹಾಯಕರು – ರೂ.21,400 ರಿಂದ ರೂ.42,000 ಡಿ ವೃಂದದ ಸಹಾಯಕರು,…
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟದ ನಿರ್ಣಾಯಕ ವಿಜಯದ ನಂತರ, ಹೇಮಂತ್ ಸೊರೆನ್ ನವೆಂಬರ್ 28 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಈ ಬಳಿಕ ರಾಜಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸೊರೆನ್, ನವೆಂಬರ್ 28 ರ ಗುರುವಾರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ದೃಢಪಡಿಸಿದರು. ಜೆಎಂಎಂ ನೇತೃತ್ವದ ಮೈತ್ರಿಕೂಟವು ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ರಾಂಚಿಯಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿಯಾಗಿ ಸೊರೆನ್ ಅವರ ನಾಯಕತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ನಾವು ಸಮ್ಮಿಶ್ರ ಸರ್ಕಾರದ ನಾಯಕನನ್ನು ಆಯ್ಕೆ ಮಾಡುತ್ತೇವೆ ಮತ್ತು ಸಮಯವನ್ನು ವ್ಯರ್ಥ ಮಾಡದೆ, ಸರ್ಕಾರ ರಚನೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಕಾಂಗ್ರೆಸ್ನ ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. https://kannadanewsnow.com/kannada/hemant-soren-to-take-oath-as-new-chief-minister-of-jharkhand-on-november-28/ https://kannadanewsnow.com/kannada/eat-more-amla-in-winter-and-get-this-benefit/
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಮತ್ತು ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಇಂದು ನಾವು (ಭಾರತ) ಮೈತ್ರಿ ಸರ್ಕಾರವನ್ನು ರಚಿಸುವ ಕಾರ್ಯವಿಧಾನವನ್ನು ಪ್ರಾರಂಭಿಸಿದ್ದೇವೆ ಮತ್ತು ಆ ಸರಣಿಯಲ್ಲಿ, ನಾವು ರಾಜ್ಯಪಾಲರ ಮುಂದೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ನಾನು ಕೂಡ ನನ್ನ ರಾಜೀನಾಮೆಯನ್ನು ಅವರಿಗೆ ಸಲ್ಲಿಸಿದ್ದೇನೆ… ಕಾಂಗ್ರೆಸ್ ಮತ್ತು ಆರ್ಜೆಡಿ ಉಸ್ತುವಾರಿ ಕೂಡ ಇಲ್ಲಿ ಹಾಜರಿದ್ದರು… ನವೆಂಬರ್ 28ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದಿದ್ದಾರೆ. https://twitter.com/ANI/status/1860639683774148727 https://kannadanewsnow.com/kannada/eat-more-amla-in-winter-and-get-this-benefit/ https://kannadanewsnow.com/kannada/breaking-peanut-test-begins-at-basavanagudi-in-bengaluru/
ರಾಯಚೂರು: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯರಿಂದಲೇ ಹಾಸ್ಟೆಲ್ ವಾರ್ಡನ್ ಒಬ್ಬರು ಶೌಚಾಲಯ ಕ್ಲೀನ್ ಮಾಡಿಸಿರುವಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರುವಂತ ಮೆಟ್ರಿಂಕ್ ನಂತ್ರ ಬಾಲಕಿಯರ ವಿದ್ಯಾರ್ಥಿನಿಯರಿಂದ ವಾರ್ಡನ್ ರಜಿಯಾ ಸುಲ್ತಾನ್ ಎಂಬುವರು ಪ್ರತಿ ನಿತ್ಯ ಹಾಸ್ಟೆಲ್ ಶೌಚಾಲಯ ಕ್ಲೀನ್ ಮಾಡಿಸಿದಂತ ಆರೋಪ ಕೇಳಿ ಬಂದಿದೆ. ಇದಷ್ಟೇ ಅಲ್ಲದೇ ವಿದ್ಯಾರ್ಥಿನಿಯರಿಂದಲೇ ಹಾಸ್ಟೆಲ್ ಶೌಚಾಲಯ ಕ್ಲೀನ್ ಮಾಡಿಸಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶವನ್ನು ಹೊರ ಹಾಕಿದ್ದಾರೆ. ಇನ್ನೂ ನಾವು ಓದಬೇಕು ಮೇಡಂ. ಓದೋದಕ್ಕೆ ಬಂದಿರೋದು, ನಮ್ಮನ್ನು ಓದುವುದಕ್ಕೆ ಬಿಡಿ ಅಂತ ಹೇಳಿದ್ರೂ ಬಿಡದಂತ ವಾರ್ಡನ್ ರಜಿಯಾ ಸುಲ್ತಾನ್ ಶೌಚಾಲಯ ಕ್ಲೀನ್ ಮಾಡಿಸುವುದು ಸೇರಿದಂತೆ ವಿವಿಧ ಕೆಲಸ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ವಿದ್ಯಾರ್ಥಿನಿಯರು ಪತ್ರ ಬರೆದು ಆಕ್ರೋಶ ಹೊರ ಹಾಕಿದ್ದಾರೆ. https://kannadanewsnow.com/kannada/glucose-bottle-contains-rotten-fibre-state-health-department-orders-not-to-use-it/ https://kannadanewsnow.com/kannada/eat-more-amla-in-winter-and-get-this-benefit/