Author: kannadanewsnow09

ಬೆಂಗಳೂರು: ಬೆಂಗಳೂರು ಹವಾಮಾನ ಕ್ರಿಯಾ ಕೋಶ ಫೆಲೋಶಿಪ್ ನ ಎರಡು (02) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹವಾಮಾನ ಕ್ರಿಯಾ ಕೋಶದ ಅಧ್ಯಕ್ಷರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಪರವಾಗಿ ಹವಾಮಾನ ಕ್ರಿಯಾ ಕೋಶ (ಸಿಎಸಿ) ದಲ್ಲಿ ಹವಾಮಾನ ಬದಲಾವಣೆ ಮತ್ತು ನಗರ ಆಡಳಿತದ ಬಗ್ಗೆ ಆಸಕ್ತಿ ಹೊಂದಿರುವ ಉಜ್ವಲ ಮನಸ್ಸಿನ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಬೆಂಗಳೂರು ಎದುರಿಸುತ್ತಿರುವ ನಿಜ ಜೀವನದ ಸವಾಲುಗಳನ್ನು ಪರಿಹರಿಸಲು ಹೊಸ ದೃಷ್ಟಿಕೋನಗಳು, ಕೌಶಲ್ಯಗಳು ಮತ್ತು ನಾವೀನ್ಯತೆಯನ್ನು ತರಬಲ್ಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳಲು ಹವಾಮಾನ ಕ್ರಿಯಾ ಕೋಶವು ಪ್ರಯತ್ನಿಸುತ್ತದೆ. ಈ ಹಿನ್ನೆಲೆಯಲ್ಲಿ, ಈ ಕೆಳಗಿನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ: * ಫೆಲೋ- ಎಂ.ಇ.ಆರ್, ಹವಾಮಾನ ಆಯವ್ಯಯ (1 ಹುದ್ದೆ) * ಸಲಹೆಗಾರ – ಸಂವಹನ ಮತ್ತು ಪ್ರಚಾರ (1 ಹುದ್ದೆ) 12 ತಿಂಗಳ ಅವಧಿಯ ಈ ಹುದ್ದೆಗಳಿಗೆ ಆಹ್ವಾನಿಸಲಾಗುತ್ತಿದ್ದು, ತಿಂಗಳಿಗೆ 50,000 ರೂ. ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಹವಾಮಾನ…

Read More

ಬೆಂಗಳೂರು : ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ‌. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದರು. ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ.‌ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ…

Read More

ಕಲ್ಬುರ್ಗಿ : ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣ ಪ್ರಕಾಶ್…

Read More

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು. ಸಾಮಾಜಿಕ,…

Read More

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್‌ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್‌ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್‌(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ. ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ…

Read More

ಬೆಳಗಾವಿ: ಡಾ. ಬಾಬಾಸಾಹೇಬ ಅಂಬೇಡ್ಕರರ ಹೆಸರಿನ ಪ್ರಶಸ್ತಿ ಕೊಡುವುದರಲ್ಲಿ ಭ್ರಷ್ಟಾಚಾರ ನಡೆದಿದೆ; ಹಣ ವಸೂಲಿ ಮಾಡಿದ್ದಾರೆ ಎಂದು ಸಾಹಿತಿಯೊಬ್ಬರು ಹೇಳಿದ್ದಾರೆ. ರಾಜ್ಯದಲ್ಲಿರುವುದು ನಾಚಿಕೆ ಪಡುವಂಥ ಸರಕಾರ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್ ಅವರು ಟೀಕಿಸಿದ್ದಾರೆ. ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಮ್ಮ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹೋರಾಟ ಮಾಡುತ್ತಿದೆ. ಎಲ್ಲ ಕಡೆ ಜನಾಕ್ರೋಶ ಹೆಚ್ಚಾಗಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಹೋಗುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇವತ್ತು ಅಭಿವೃದ್ಧಿ ಕೆಲಸ ಕಾರ್ಯಗಳಿಲ್ಲ. ಎಲ್ಲವೂ ನಿಂತು ಹೋಗಿವೆ. ಕೇವಲ ಭ್ರಷ್ಟಾಚಾರದ ಸರಕಾರವಿದು. ರಾಜಕೀಯದಲ್ಲಿ ತಮ್ಮ ಕೊನೆಯ ಹಂತದ ಕ್ಷಣಗಳೆಂದು ಸಿದ್ದರಾಮಯ್ಯನವರು ಭಾವಿಸಿರಬೇಕು. ಡಿಕೆ ಶಿವಕುಮಾರ್ ಕಾದುಕೊಂಡು ನಿಂತಿದ್ದಾರೆ. ಇನ್ನು ನವೆಂಬರೋ, ಡಿಸೆಂಬರೋ ಎಂದು ಸಿದ್ದರಾಮಯ್ಯನವರಿಗೆ ಕನಸು ಬೀಳುತ್ತಿರಬೇಕು ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ಸಿನಲ್ಲಿ ಒಳಜಗಳ, ಪ್ರಾಕ್ಸಿ ಯುದ್ಧ ನಡೆದಿದೆ. ಸಿದ್ದರಾಮಯ್ಯರನ್ನು ಇಳಿಸಬೇಕೆಂದು ಕೆಲವರು,…

Read More

ಬೆಳಗಾವಿ: ಮಾನ್ಯ ಸಿದ್ದರಾಮಯ್ಯನವರೇ, ಬಾಬಾ ಸಾಹೇಬ ಅಂಬೇಡ್ಕರರನ್ನು ಸಾವರ್ಕರ್ ಸೋಲಿಸಿದ್ದಾಗಿ ಋಜುವಾತು ಪಡಿಸಿದರೆ ನನ್ನ ವಿಪಕ್ಷ ಸ್ಥಾನಕ್ಕೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆ ಸಭೆಯಲ್ಲಿ ಮಾತನಾಡಿದ ಅವರು, ಆ ಸುಳ್ಳನ್ನು ನೀವು ಸಾಬೀತು ಮಾಡದಿದ್ದರೆ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧರಾಗಿ ಎಂದು ಆಗ್ರಹಿಸಿದರು. ನಿಮಗೆ ವಯಸ್ಸೂ ಆಗಿದೆ. ಎಲ್ಲ ಪದವಿ ಅನುಭವಿಸಿದ್ದೀರಿ. ಇದಕ್ಕಿಂತ ಹೆಚ್ಚಿನ ಪದವಿ ನಿಮಗೆ ಕಾಂಗ್ರೆಸ್ಸಿನಲ್ಲಿ ಸಿಗಲಾರದು ಎಂದು ತಿಳಿಸಿದರು. ನನಗೆ ಮೊದಲು ಆತ್ಮೀಯರಾಗಿದ್ದ ಸಿದ್ದರಾಮಯ್ಯನವರು ಈ ಹಿಂದೆ ಇಷ್ಟು ಸುಳ್ಳು ಹೇಳುತ್ತಿರಲಿಲ್ಲ; ಈಗ ಅವರನ್ನು ಪ್ರಶ್ನಿಸಿದರೆ ಹೇಗಾದರೂ ಮಾಡಿ ಅಧಿಕಾರದಲ್ಲಿ ಇರಬೇಕಲ್ಲಪ್ಪ; ಕಾಂಗ್ರೆಸ್‍ನವರು ಸುಳ್ಳು ಹೇಳದಿದ್ರೆ ಬಿಡ್ತಾರ ಎನ್ನುತ್ತಾರೆ ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಬಾಬಾ ಸಾಹೇಬ ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಎಂಬುದಾಗಿ ಬಾಬಾ ಸಾಹೇಬರೇ ಬರೆದಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದಕ್ಕಿಂತ ಅಪ್ಪಟ…

Read More

ಬೆಳಗಾವಿ: ಜಿಲ್ಲೆಯಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕನಕದಾಸ ಸರ್ಕಲ್ ನಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ಕಾಮಗಾರಿಯನ್ನು ನಡೆಸಲಾಗುತ್ತಿತ್ತು. ಈ ಕಾಮಗಾರಿಯಲ್ಲಿ ಕಾರ್ಮಿಕರು ನಿರತರಾಗಿದ್ದರು. ಕುಡಿಯುವ ನೀರಿನ ಕಾಮಗಾರಿಯ ವೇಳೆಯಲ್ಲಿ ದಿಢೀರ್ ಮಣ್ಣು ಕುಸಿದ ಪರಿಣಾಮ ಅದರಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ಶಿವಲಿಂಗ, ಬಸವರಾಜ್ ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಕರೆ ನೀಡಿದರು. ಅವರು, ಮಂಗಳವಾರದAದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರಿಗೆ ಮತ್ತು ಸಾಹಿತ್ಯ ಪ್ರೇಮಿಗಳಿಗೆ ಹಬ್ಬ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ. ಮುಖ್ಯವಾಗಿ ಸಮ್ಮೇಳನಗಳಲ್ಲಿ ಕನ್ನಡ ನಾಡು ನುಡಿಗೆ ಸಂಬAಧಿಸಿದತೆ, ಭಾಷೆ ಬೆಳವಣಿಗೆ, ಗಡಿ ಭಾಗದ ಶಾಲಾ ವಿಚಾರಗಳ ಸಂಬAಧಿಸಿದAತೆ ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಮುಂದಿಡಲಾಗುತ್ತದೆ ಎಂದು ಅವರು ತಿಳಿಸಿದರು. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 5 ಸಾಹಿತ್ಯ…

Read More

ನವದೆಹಲಿ: 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ಬುಧವಾರ (ಏಪ್ರಿಲ್ 16) ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಸಲಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸೇರಿದಂತೆ ರಾಜಕೀಯ ನಾಯಕರು ಮತ್ತು ಧಾರ್ಮಿಕ ಗುಂಪುಗಳು ಸಲ್ಲಿಸಿದ ಅರ್ಜಿಗಳ ಗುಂಪಿನ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ. ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ಸುಗಮಗೊಳಿಸಲು ಪ್ರಯತ್ನಿಸುವ ಈ ಕಾಯ್ದೆಗೆ ಮುಸ್ಲಿಂ ಸಮುದಾಯದ ಒಂದು ವರ್ಗದಿಂದ ತೀವ್ರ ವಿರೋಧ ವ್ಯಕ್ತವಾಗಿದೆ ಮತ್ತು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. “ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ, ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು 16.04.2025 ರಂದು (ಬುಧವಾರ) ಮಧ್ಯಾಹ್ನ 2:00 ಗಂಟೆಗೆ ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದಲ್ಲಿ…

Read More