Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗಳಷ್ಟು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಹಾಗಾದ್ರೇ ಯಾವ ಪ್ಯಾಕೇಟ್ ಹಾಲು ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಅಂತ ಮಾಹಿತಿ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಅನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ ನೀಲಿ ಪ್ಯಾಕೇಟ್ ಹಾಲಿನ ದರ 44 ರೂಪಾಯಿಯಿಂದ 48 ರೂಪಾಯಿಗೆ ಏರಿಕೆ. ಆರೇಂಜ್ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.54 ರಿಂದ 58 ರೂಗೆ ಏರಿಕೆ. ಸಮೃದ್ಧಿ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.56 ರಿಂದ 60ಕ್ಕೆ ಏರಿಕೆ. ಗ್ರೀನ್ ಸ್ಪೆಷಲ್ ಹಾಲಿನ ದರ ರೂ.54 ರಿಂದ 58ಕ್ಕೆ ಏರಿಕೆ. ನಾರ್ಮಲ್ ಗ್ರೀನ್ ಹಾಲಿನ ದರ ರೂ.52ರಿಂದ…
ಶಿವ ಪರಿವಾರದ ಪೂಜೆಗೆ ಪ್ರದೋಷ ವ್ರತ ಮಂಗಳಕರ. ಈ ದಿನ ಭಕ್ತಿಯಿಂದ ಪರಶಿವನನ್ನು ಧ್ಯಾನಿಸಿದರೆ ಎಲ್ಲಾ ಕಷ್ಟಗಳು ದೂರವಾಗುತ್ತವೆ ಎಂಬುದು ನಂಬಿಕೆ. ಹಿಂದೂ ಧರ್ಮದಲ್ಲಿ ಪ್ರದೋಷ ವ್ರತಕ್ಕೆ ಬಹಳ ಮಹತ್ವವಿದೆ. ಶ್ರದ್ಧೆಯಿಂದ ಉಪವಾಸ ಕೈಗೊಂಡು ಈ ದಿನ ವ್ರತವನ್ನು ಎಲ್ಲರೂ ಆಚರಿಸುತ್ತಾರೆ. ಅಂತೆಯೇ, ಈ ಸಲ ಗುರುವಾರ ಪ್ರದೋಷ ವ್ರತ ಬಂದಿದೆ. ಹೀಗಾಗಿ, ಇದನ್ನು ಗುರು ಪ್ರದೋಷ ವ್ರತ ಎಂದೂ ಕರೆಯಲಾಗುತ್ತದೆ. ಗುರು ಪ್ರದೋಷ ವ್ರತದ ಮಹತ್ವ, ಮುಹೂರ್ತ, ಪೂಜಾ ವಿಧಿ ಮತ್ತು ಪರಿಹಾರಗಳ ಬಗ್ಗೆ ಇಲ್ಲಿ ನೋಡೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…
ಬೆಂಗಳೂರು: ಬಿಜೆಪಿ ಮತ್ತು ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಂವಿಧಾನ ಬದಲಾಯಿಸುವುದ್ದಿಲ್ಲ ಎಂಬ ಘೋಷಣೆಯನ್ನು ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಮಾಣ ಮಾಡಿ ಹೇಳಲು ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲ್ ಹಾಕಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ ಮಾಡುವ ಹೇಳಿಕೆಗಳನ್ನು ನೀಡಿಕೊಂಡು ಬಂದಿರುತ್ತದೆ ಎಂದಿದ್ದಾರೆ. ದೆಹಲಿಯ ಖಾಸಗಿ ಮಾಧ್ಯಮದಲ್ಲಿ ಸಂದರ್ಶನ ಒಂದರಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು…
ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ದೂರು ನೀಡದಂತ ಎಂಎಲ್ಸಿ ರಾಜೇಂದ್ರ ಅವರು, ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿರುವಂತ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ದೂರು ನೀಡಿದ್ದಾರೆ. ದೂರಿನ ಜೊತೆಗೆ ಆಡಿಯೋ ಕ್ಲಿಪ್ ಗಳನ್ನು ನೀಡಿದ್ದಾರೆ. ಅಲ್ಲದೇ ನಮ್ಮ ಮನೆಗೆ ಶಾಮಿಯಾನ ಹಾಕಲು ಬಂದಿದ್ದವರು ನನ್ನ ಕೊಲೆಗೆ ಯತ್ನ ಮಾಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಎಂಎಲ್ಸಿ ರಾಜೇಂದ್ರ ಅವರಿಗೆ ತುಮಕೂರು ಎಸ್ಪಿಗೆ ದೂರು ನೀಡುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ. ಹೀಗಾಗಿ ನಾಳೆ ತುಮಕೂರು ಎಸ್ಪಿ ಭೇಟಿಯಾಗಿ ಈ ಸಂಬಂಧ ದೂರು ನೀಡುವುದಾಗಿ ಎಂಎಲ್ಸಿ ರಾಜೇಂದ್ರ ತಿಳಿಸಿದ್ದಾರೆ. https://kannadanewsnow.com/kannada/nandini-milk-price-hiked-by-rs-4-per-litre-state-cabinet/ https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಇಂದಿನ ರಾಜ್ಯ ಸಚಿವ ಸಂಪು ಸಭೆಯಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡುವಂತ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಕೆ ಎಂ ಎಫ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಅಂದು ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ದಿನೇ ದಿನೇ ರಾಜ್ಯದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಆಗಿದೆ. ಮೆಟ್ರೋ, ಬಿಎಂಟಿಸಿ, ಕೆ ಎಸ್…
ಬೆಂಗಳೂರು: ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಏರಿಕೆ ಮಾಡಲಾಗಿದೆ. ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದಲ್ಲಿ ನಂದಿನಿ ಹಾಲಿನದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡುವುದಕ್ಕೆ ಅನುಮೋದಿಸಿದೆ. ಕೆಲ ದಿನಗಳ ಹಿಂದೆ ಕೆಎಂಎಫ್ ಅಧ್ಯಕ್ಷರು, ಹಾಲಿನ ಒಕ್ಕೂಟದೊಂದಿಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಈ ಸಭೆಯಲ್ಲಿ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಳಿಕ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.
ಯಾವುದೇ ಜೀವನದಲ್ಲಿ ಪ್ರಗತಿಯು ಜೀವನ ನೀಡಬಹುದು. ನಿಂತ ನೀರಿನಂತೆ ಜೀವ ಒಂದೆಡೆ ನಿಂತರೆ ಪಾಚಿಯಂತೆ ಕೊಳೆಯುತ್ತದೆ. ನಿಮ್ಮ ಜೀವನವು ಹರಿಯುವ ಸ್ಪಷ್ಟ ಹೊಳೆಯಂತೆ ಭವ್ಯವಾಗಲು, ಪ್ರಗತಿಗೆ ಪೂರ್ವಜರ ಆಶೀರ್ವಾದ ಖಂಡಿತವಾಗಿಯೂ ಬೇಕು. ನಿಮ್ಮ ಪೂರ್ವಜರ ಆಶೀರ್ವಾದ ಪಡೆಯಲು ನೀವು ಎಲ್ಲಿ ದೀಪವನ್ನು ಹಚ್ಚುತ್ತೀರಿ? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ನಮ್ಮ ಪೂರ್ವಜರ ಆಶೀರ್ವಾದವಿಲ್ಲದೆ ನಾವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುದು ಸತ್ಯ. ಮನೆಯಲ್ಲಿ ಪೂರ್ವಿಕರ ಶಾಪವಿದ್ದರೆ ಪಿತೃ ದೋಷ ಕಾಡುತ್ತದೆ, ಏನೇ ಪ್ರಯತ್ನ ಮಾಡಿದರೂ ಜೀವನದಲ್ಲಿ ಪ್ರಗತಿ ಕಾಣುವುದಿಲ್ಲ ಎಂಬುದು ನಿಯಮ. ಇದರಿಂದ ಸುಲಭವಾಗಿ ಮುಕ್ತಿ ಹೊಂದಲು ಪ್ರತಿ ಅಮಾವಾಸ್ಯೆಯಲ್ಲಿ ಈ ಸರಳ ಪೂಜೆಯನ್ನು ಮಾಡಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ…
ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ. ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ,…
ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಮುಂದಿನ ಹುದ್ದೆಗೆ ಪದೋನ್ನತಿ ಪಡೆಯಲು ಅರ್ಹತೆಯನ್ನು ನಿಗದಿಪಡಿಸುವ ಸಂಬಂಧ ‘ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯ) ನಿಯಮಗಳು, 2025″ ಎಂಬ ಕರಡು ನಿಯಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸದರಿ…
ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಯುಗಾದಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ದಿನಾಂಕ: 30.03.2025 ರಂದು ಚಂದ್ರಮಾನ ಯುಗಾದಿ, ದಿನಾಂಕ 31.03.2025ರಂದು ರಂಜಾನ್ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:28.03.2025 ರಿಂದ 30.03.2025 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ,…