Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಕೆಲವು ಶತ್ರುಗಳು ನಮಗೆ ತಿಳಿಯದಂತೆ ನಮ್ಮ ಜೀವನವನ್ನು ಹಾಳುಮಾಡಲು ಸಂಚು ಹೂಡುತ್ತಾರೆ. ಅವರು ನಮ್ಮೊಂದಿಗೆ ಕೆಲಸ ಮಾಡುತ್ತಾರೆ. ಆದರೆ ಅವರು ನಮಗೆ ತಿಳಿಯದೆ ನಮ್ಮೊಂದಿಗೆ ಇರುತ್ತಾರೆ, ನಮ್ಮ ಪ್ರಗತಿಗೆ ಅಡ್ಡಿಯಾಗಲು ನಮ್ಮ ಬೆನ್ನ ಹಿಂದೆ ಗುಂಡಿಗಳನ್ನು ಅಗೆಯುತ್ತಾರೆ. ಅವರು ತಮ್ಮ ಮೇಲಧಿಕಾರಿಗಳಿಗೆ ನಮ್ಮ ಬಗ್ಗೆ ಸುಳ್ಳುಗಳನ್ನು ಹೇಳುತ್ತಾರೆ. ಇದರಿಂದಾಗಿ ನಮಗೆ ಸಿಗಬೇಕಾದ ಬಡ್ತಿ ಸಿಗುವುದಿಲ್ಲ. ಕೆಲವರು ವ್ಯವಹಾರದಲ್ಲಿ ನಮ್ಮನ್ನು ರಹಸ್ಯವಾಗಿ ಬಳಸಿಕೊಳ್ಳುತ್ತಾರೆ. ಅವರು ನಮ್ಮನ್ನು ಸೋಲಿಸುತ್ತಾರೆ. ಇದರಿಂದಾಗಿ ನಮಗೆ ನಷ್ಟವಾಗುತ್ತದೆ. ಇಂತಹ ಕೆಲವು ಸಂಬಂಧಿಕರು ಇರುತ್ತಾರೆ. ನಮ್ಮ ಪ್ರಗತಿಯ ಬಗ್ಗೆ ಅಸೂಯೆ ಪಟ್ಟವರು ನಮ್ಮನ್ನು ಬದುಕಲು ಬಿಡುವುದಿಲ್ಲ ಮತ್ತು ನಮ್ಮ ವಿರುದ್ಧ ಏನಾದರೂ ಮಾಡುತ್ತಲೇ ಇರುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೀರಿನ ಬಾಕಿ, ಅಸಲು ಬಿಲ್ ಪಾವತಿಸಿದರೇ ಬಡ್ಡಿ ಮನ್ನಾ ಮಾಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ನಾಗರಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬಾಕಿ, ಅಸಲು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತ ನಿರ್ಧಾರ ಕೈಗೊಂಡಿದೆ. ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆಯನ್ನು ಸಂಪುಟ ನೀಡಿದೆ. ಇನ್ನೂ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 200  ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮುಳ್ಕೋಡು ಗ್ರಾಮದ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಮೇಲ್ದರ್ಜೇಗೇರಿಕೆ ನಿರ್ಧರಿಸಿದೆ. ಗ್ರೇಡ್-1 ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಿದೆ. ಕೆಲವು ಅಕ್ಕಪಕ್ಕದ ಗ್ರಾಮಗಳ ಸೇರ್ಪಡೆಗೆ ಒಪ್ಪಿಗೆ ನೀಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ 100 ಕೋಟಿ ಮೊತ್ತದಲ್ಲಿ BSWML ಮೂಲಕ ಅನುಷ್ಠಾನವಾಗಲಿದೆ. ತಿಪ್ಪಗೊಂಡನಹಳ್ಳಿ ಜಲಾನಯನದ…

Read More

ಭಾರತೀಯ ಸಂಸ್ಕೃತಿಯಲ್ಲಿ ಗುರುಹಿರಿಯರನ್ನು ಗೌರವಿಸುವ ಪದ್ಧತಿ ಇದೆ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ. ಹಾಗಾದರೆ ಯಾವ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳುವ ಬನ್ನಿ. ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ವಿಜ್ಞಾನದ ಪ್ರಕಾರ ಈ ರೀತಿ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಬಿಳಿ ಅಕ್ಕಿ, ಸ್ವಲ್ಪ ತುಪ್ಪ, ನೀರು ಮತ್ತು ಅರಿಶಿನವನ್ನು ಸೇರಿಸಿ ಅಕ್ಷತೆ ಮಾಡಿಕೊಳ್ಳಬೇಕು. ಒಂದು ವೇಳೆ ಮನೆಯಿಂದ ಹೊರಗಡೆ ಹೋಗಬೇಕಾದರೆ ಮನೆಯಲ್ಲಿರುವ ಹಿರಿಯರಿಗೆ ಅಕ್ಷತೆಯನ್ನು ಕೊಟ್ಟು ಆಶೀರ್ವಾದವನ್ನು ಪಡೆದುಕೊಂಡು ಆ ಅಕ್ಷತೆಯನ್ನು ನಿಮ್ಮ ತಲೆ ಮೇಲೆ ಹಾಕಿಸಿಕೊಂಡು ಹೋಗಬೇಕು. ಈ ರೀತಿ ಮಾಡುವುದರಿಂದ ಅಂದುಕೊಂಡು ಮಾಡುವ ಕೆಲಸ ಯಶಸ್ವಿಯಾಗುತ್ತದೆ. ಇನ್ನು ನಿಮ್ಮ ಜೇಬಿನಲ್ಲಿ ಕೆಂಪು ಅಕ್ಷತೆಯನ್ನು ಇಟ್ಟುಕೊಂಡು ಹೋಗುವುದರಿಂದ ನೀವು ಯಾವ ಕೆಲಸಕ್ಕೆ…

Read More

ಮೈಸೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲು ಸಂಖ್ಯೆ 06281/06282 ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ನ ಸೇವೆಗಳನ್ನು ವಿಸ್ತರಿಸಲಾಗಿದೆ. 1. ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‌ಪ್ರೆಸ್ ರೈಲು ಈ ಮೊದಲು ನವೆಂಬರ್ 29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 6 ರಿಂದ 2026ರ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಶನಿವಾರದಂದು ಸಂಚರಿಸಲಿದೆ. 2. ಅದೇ ರೀತಿ, ರೈಲು ಸಂಖ್ಯೆ 06282 ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಈ ರೈಲು ಡಿಸೆಂಬರ್ 1ರವರೆಗೆ ಚಲಿಸಲು ನಿಗದಿಯಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 8 ರಿಂದ 2026ರ ಫೆಬ್ರವರಿ 2ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಸೋಮವಾರದಂದು ಸಂಚರಿಸಲಿದೆ. ಈ ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಮಯ, ನಿಲುಗಡೆಗಳು ಮತ್ತು ಕೋಚ್ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. https://kannadanewsnow.com/kannada/companies-invited-to-bangalore-international-job-fair-to-be-held-in-karnataka/ https://kannadanewsnow.com/kannada/ban-on-supply-of-only-halal-meat-in-trains-nhrc-notice-to-railways-seeking-report/

Read More

ದುಬೈ : ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ಜನವರಿ-ಫೆಬ್ರವರಿ 2026 ರಲ್ಲಿ ನಡೆಯಲಿರುವ ಬೆಂಗಳೂರು ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿವೆ. ಸಚಿವರಾದ ಶರಣಪ್ರಕಾಶ್‌ ಪಾಟೀಲ್‌ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಗುರುವಾರ ದುಬೈನಲ್ಲಿ ರೋಡ್ ಶೋ ನಡೆಯಿತು. ಸಾರಿಗೆ, ಮಾನವ ಸಂಪನ್ಮೂಲ ತಂತ್ರಜ್ಞಾನ, ಸಾಫ್ಟ್ ಸೇವೆಗಳು, ಮಾಧ್ಯಮ ತಂತ್ರಜ್ಞಾನ, ಗೇಮಿಂಗ್, ರಿಯಲ್ ಎಸ್ಟೇಟ್, ಇಂಧನ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನಗಳಂತಹ ಕ್ಷೇತ್ರಗಳ ಕಂಪನಿಗಳು ಆಸಕ್ತಿಯನ್ನು ತೋರಿಸಿದವು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಶಿಕ್ಷಣ ಮತ್ತು ಕೌಶಲ್ಯತೆ ವಿಷಯದಲ್ಲಿ ಕರ್ನಾಟಕ ವಿಶೇಷ ಸಾಮರ್ಥ್ಯ ಹೊಂದಿದೆ. ರಾಜ್ಯದ ಯುವಕರನ್ನು ನೇಮಿಸಿಕೊಳ್ಳಲು ಕಂಪನಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು. “ನಮ್ಮ ರಾಜ್ಯದ ಕೌಶಲ್ಯ ಭರಿತ…

Read More

ಬೆಂಗಳೂರು: ಮೃತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಬಿವೈ ವಿಜಯೇಂದ್ರ ಅವರು, ಕರ್ನಾಟಕ ಸರ್ಕಾರದ ಖನಿಜ ನಿಗದಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಕಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿರುವುದು ತಮಗೆ ಗೊತ್ತಿರುವಂತ ವಿಚಾರವಾಗಿದೆ ಎಂದಿದ್ದಾರೆ. ಒಬ್ಬ ಸರ್ಕಾರಿ ಅಧಿಕಾರಿಯಾಗಿ ಕೇವಲ ಸರ್ಕಾರಿ ಕೆಲಸ ಎಂದು ಪರಿಗಣಿಸದೇ ಬಡವರ, ಅಶಕ್ತರ ಅಭಿವೃದ್ಧಿಗಾಗಿ ಅಂತಹಕರಣದಿಂದ ಕೆಲಸ ಮಾಡಿದ ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟು ಜನಸೇವೆಗೈದ ಮಹಾಂತೇಶ್ ಬೀಳಗಿ ಅವರು ಒಬ್ಬ ಆದರ್ಶ ಅಧಿಕಾರಿಯಾಗಿದ್ದರು. ಅವರ ಅಕಾಲಿಕ ನಿಧನವು ಕೇವಲ ಅವರ ಕುಟುಂಬಕ್ಕೆ ಮಾತ್ರವಲ್ಲದೇ ಇಡೀ ಸಮಾಜಕ್ಕೆ ನಷ್ಟವನ್ನು ಉಂಟು ಮಾಡಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಹಿಂದೆ ಅಧಿಕಾರಿಗಳು ಆಕಾಲಿಕವಾಗಿ…

Read More

ದಾವಣಗೆರೆ: ನಗರದಲ್ಲಿ ಚಿನ್ನದ ವ್ಯಾಪಾರಿಯೊಬ್ಬರಿಂದ 78 ಗ್ರಾಂ ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪ್ರೊಬೇಷನರಿ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟಿಯವರನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಪೂರ್ವ ವಲಯದ ಐಜಿಪಿ ಬಿಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರಿಗೆ ರಕ್ಷಣೆ ನೀಡೋದು, ನೊಂದವರಿಗೆ ನ್ಯಾಯ ಕೊಡಿಸೋದು ಪೊಲೀಸರ ಮುಖ್ಯ ಕೆಲಸವಾಗಿದೆ. ಇಂತಹ ಜವಾಬ್ದಾರಿಯುತ ಹುದ್ದೆಯಲ್ಲಿ ಇದ್ದುಕೊಂಡೇ ದರೋಡೆ ಕೃತ್ಯವನ್ನು ಎಸಗಿದ್ದು ಮಾತ್ರ ಘೋರ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಇನ್ನೂ ಮೊದಲ ಆರೋಪಿ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ್ ಠಾಣೆಯ ಪ್ರೊಬೇಷನರಿ ಪಿಎಸ್ಐ ಮಾಳಪ್ಪ ಚಿಪ್ಪಲಹಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಿದದ್ರೇ, ರಾಣೆಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಗೊಂಡಿದ್ದಂತ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ನವೆಂಬರ್.24ರಂದು ಕಾರವಾರದ ಆಭರಣ ತಯಾರಕ ವಿಶ್ವನಾಥ್ ಅರ್ಕಸಾಲಿ ಎಂಬುವರನ್ನು ತಡೆದು 7.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ…

Read More

ಬೆಂಗಳೂರು : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿಜ್ಞಾನ ಶಿಕ್ಷಣವನ್ನು ತಲುಪಿಸುವ ಮಹತ್ವಾಕಾಂಕ್ಷಿ “ಶಾಲೆಯ ಅಂಗಳದಲ್ಲಿ ತಾರಾಲಯ” ಡಿಜಿಟಲ್ ಮೊಬೈಲ್ ಪ್ಲಾನೆಟೇರಿಯಂ ಯೋಜನೆಗೆ ಇಂದು ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ ಈಗಾಗಲೇ 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ್ದು, ಈ ಸಾಧನೆ ಹೆಮ್ಮೆಯ ವಿಷಯ ಎಂದು ತಿಳಿಸಿದರು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು ಮಾತನಾಡಿ, “ನಮ್ಮ ಸರ್ಕಾರವು ವಿಜ್ಞಾನ ಶಿಕ್ಷಣಕ್ಕೆ ದೃಢವಾಗಿ ಬದ್ಧವಾಗಿದೆ. ಈ ಯೋಜನೆಗೆ ಹೊಸ ಚೈತನ್ಯ ಮತ್ತು ಸುಧಾರಿತ ತಂತ್ರಜ್ಞಾನದ ಸ್ಪರ್ಶ ನೀಡಲಾಗಿದೆ. ಪ್ರಸ್ತುತ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿರುವ ಈ ಮಹತ್ವದ ಸೇವೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು…

Read More

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರಗೊಂಡಿದೆ. ಈ ಹೊತ್ತಿನಲ್ಲೇ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನುಡೆವ ನಡೆಯುತ್ತಿರುವ ಕುರ್ಚಿ ಕಿತ್ತಾಟ ಈಗ ಬೀದಿಗೆ ಬಿದ್ದಂತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಮಾಡಿರುವಂತ ಎಕ್ಸ್ ಪೋಸ್ಟ್ ಆಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದಂತ ಡಿ.ಕೆ ಶಿವಕುಮಾರ್ ಗೆ ನೇರಾನೇರ ಟಾಂಗ್ ನೀಡಿದ್ದಾರೆ. ಅದೇ ಒಂದು ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ ಎಂದು ಹೇಳಿದ್ದಾರೆ. ಇನ್ನೂ ಶಕ್ತಿ ಯೋಜನೆಯು ನಮ್ಮ ರಾಜ್ಯದ ಮಹಿಳೆಯರಿಗೆ 600 ಕೋಟಿಗೂ ಹೆಚ್ಚು ಉಚಿತ ಪ್ರವಾಸಗಳನ್ನು ತಲುಪಿಸಿದೆ ಎಂದು ಘೋಷಿಸಲು ಹೆಮ್ಮೆಪಡುತ್ತೇನೆ. ಸರ್ಕಾರವನ್ನು ರಚಿಸಿದ ಮೊದಲ ತಿಂಗಳಿನಿಂದಲೇ, ನಾವು ನಮ್ಮ ಭರವಸೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇವೆ. ಅದು ಪದಗಳಲ್ಲಿ ಅಲ್ಲ. ಕಾರ್ಯರೂಪದಿಂದ ಆಗಿದೆ ಎಂಬುದಾಗಿ ಹೇಳಿದ್ದಾರೆ. ✅ ಶಕ್ತಿ – 600 ಕೋಟಿಗೂ ಹೆಚ್ಚು ಉಚಿತ ಪ್ರವಾಸಗಳು, ದುಡಿಯುವ…

Read More

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಆಯ್ತು, ಇದೀಗ ಸಿದ್ಧರಾಮಯ್ಯ ಅವರು ಕೊಟ್ಟ ಮಾತಿನ ಬಾಣ ಬಿಟ್ಟಿದ್ದಾರೆ. ಕೊಟ್ಟ ಮಾತಿನ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾರ್ಮಿಕ ಪೋಸ್ಟ್ ಮಾಡಿ, ಒಂದು ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ ಎಂಬುದಾಗಿ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಮಾತು ಉತ್ತಮವಾಗದ ಹೊರತು ಅದು ಶಕ್ತಿಯಲ್ಲ. ಶಕ್ತಿ ಯೋಜನೆ, ಗೃಹಲಕ್ಷ್ಮೀ, ಯುವನಿಧಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿದ್ದಾರೆ. ನಾವು ನಮ್ಮ ಭರವಸೆಗಳನ್ನ ಪದಗಳಲ್ಲಿ ಅಲ್ಲ ನಿಜ ರೂಪದಲ್ಲಿ ಕಾರ್ಯರೂಪಕ್ಕೆ ತಂದಿದ್ದೇವೆ. ಕರ್ನಾಟಕಕ್ಕೆ ನಮ್ಮ ಮಾತು ಒಂದು ಘೋಷಣೆಯಲ್ಲ. ಅದು ನಮಗೆ ಒಂದಿಡೀ ಜಗತ್ತು ಎಂಬುದನ್ನು ಅರ್ಥೈಸುತ್ತದೆ ಎಂದಿದ್ದಾರೆ. ನನ್ನ ಮೊದಲ ಅವಧಿಯಾಗಿದ್ದಂತ 2013ರಿಂದ 18ರಲ್ಲಿ 165 ಭರವಸೆಗಳಲ್ಲಿ 157ಕ್ಕೂ ಹೆಚ್ಚು ಈಡೇರಿಸಿದ್ದೇವೆ. ಈ ಅವಧಿಯಲ್ಲಿ 593 ಭರವಸೆಗಳಲ್ಲಿ 243ಕ್ಕೂ ಹೆಚ್ಚು ಈಡೇರಿಸಿದ್ದಾಗಿ ಹೇಳಿದ್ದಾರೆ. ✅ ಶಕ್ತಿ – 600 ಕೋಟಿಗೂ ಹೆಚ್ಚು ಉಚಿತ ಪ್ರವಾಸಗಳು, ದುಡಿಯುವ ಮಹಿಳೆಯರಿಗೆ ಘನತೆ…

Read More