Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸ್ಥಳೀಯ ಗ್ರಾಹಕರ ಮೇಲೆ ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಗಳು ಮಾಡುವ ಭಾಷಾ ಪ್ರಹಾರವನ್ನು ತಡೆಯುವಲ್ಲಿ ರಾಷ್ಟ್ರಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು, ರಾಜ್ಯದ ಎಲ್ಲ ಸಂಸದರು ಸಂಸತ್ತಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಈ ಕುರಿತಂತೆ ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲ ಸಂಸತ್ ಸದಸ್ಯರಿಗೆ ಪತ್ರ ಬರೆಯಲಾಗಿದೆ ಎಂಬ ಮಾಹಿತಿಯನ್ನು ನೀಡಿರುವ ಬಿಳಿಮಲೆ, ಈ ರೀತಿಯ ಘಟನೆಗಳ ಪುನರಾವರ್ತನೆ ಕನ್ನಡಿಗರ ಆತ್ಮಸ್ಥೈರ್ಯವನ್ನು ಕದಡುತ್ತದೆ. ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಹ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸಹಮತದ ನಿಲುವನ್ನು ವ್ಯಕ್ತಪಡಿಸಿದ್ದು, ಕಳೆದ ಡಿಸೆಂಬರ್ ನಲ್ಲಿ ಪ್ರಾಧಿಕಾರದ ನಿಯೋಗವು ತಮ್ಮನ್ನು ಭೇಟಿ ಮಾಡಿ ಕ್ರಮಕ್ಕೆ ಕೋರಿತ್ತು ಎಂಬುದನ್ನು ಸ್ಮರಿಸಿದ್ದಾರೆ. ಯಾವುದೇ ರಾಜ್ಯದ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೂ ಸ್ಥಳೀಯ ಭಾಷಾ ಜ್ಞಾನದ ಕುರಿತಂತೆ ಪರೀಕ್ಷೆಯನ್ನು ಎದುರಿಸಿ ಉತ್ತೀರ್ಣರಾಗಬೇಕು, ಸ್ಥಳೀಯ ಭಾಷೆಯ ಮೇಲೆ ಪ್ರಭುತ್ವ ಹೊಂದಿದವರಾಗಬೇಕು ಎಂಬ ಷರತ್ತನ್ನು ನೇಮಕಾತಿ ಸಂದರ್ಭದಲ್ಲಿ ವಿಧಿಸಬೇಕೆಂದು…
ಬೆಂಗಳೂರು: ನೆರೆ ಹೊರೆ ರಾಜ್ಯಗಳ ಉತ್ತಮ ಬಾಂಧವ್ಯಕ್ಕೆ ಪಕ್ಷ ರಾಜಕೀಯ ಅಡ್ಡಿ ಬರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದ ಪೂರ್ವದ್ವಾರದಲ್ಲಿಂದು ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ನೆರೆ ರಾಜ್ಯಗಳೊಂದಿಗೆ ಉತ್ತಮ ಬಾಂಧವ್ಯಕ್ಕೆ ಇಂದಿನ ಈ ಆನೆಗಳ ಹಸ್ತಾಂತರ ಸಹಕಾರಿಯಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯಲ್ಲಿಯೂ ಗಣನೀಯ ಸುಧಾರಣೆ ತರಲಾಗಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ಎದುರಿಸಲು ಮರ ಬೆಳೆಸುವುದೊಂದೇ ಪರಿಹಾರ ಎಂಬುದನ್ನು ಮನಗಂಡು ಕಳೆದ 2 ವರ್ಷದಲ್ಲಿ 8.5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗಿದೆ. ಇವುಗಳಲ್ಲಿ ಎಷ್ಟು ಬದುಕಿ ಉಳಿದಿವೆ ಎಂಬುದನ್ನು ಆಡಿಟ್ ಮಾಡಿಸಿ ಅರಣ್ಯ ಇಲಾಖೆಯ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ ಎಂದರು. ಅರಣ್ಯ ಒತ್ತುವರಿ ತೆರವಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಪಕ್ಷಿ ಸಂಕುಲದ ಉಳಿವಿಗಾಗಿ ಅವುಗಳ ಸಂತಾನೋತ್ಪತ್ತಿಯ ತಾಣವಾದ ಬೆಂಗಳೂರು…
ಬೆಂಗಳೂರು: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು. https://kannadanewsnow.com/kannada/transfer-of-krishna-abhimanyu-ranjan-and-dev-elephant-from-karnataka-to-andhra-pradesh/ https://kannadanewsnow.com/kannada/big-news-big-success-in-bullet-train-project-300-km-viaduct-work-completed-video-shared-by-ashwini-vaishnav-watch-video/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಹಾಗೂ ದೇವ ಎನ್ನುವಂತ ನಾಲ್ಕು ಆನೆಗಳನ್ನು ಹಸ್ತಾಂತರಿಸಿದೆ. ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆನೆಗಳಿಗೆ ಪೂಜೆ ಸಲ್ಲಿಸಿದರು. ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಕೃಷ್ಣ, ಅಭಿಮನ್ಯು, ರಂಜನ್ ಮತ್ತು ದೇವ ಎಂಬ ನಾಲ್ಕು ಆನೆಗಳನ್ನು ಇಂದು ವಿಧ್ಯುಕ್ತವಾಗಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೆ.ಜೆ. ಜಾರ್ಜ್, ಸುಧಾಕರ್, ಬೈರತಿ ಸುರೇಶ್, ರಹೀಂಖಾನ್, ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು. https://kannadanewsnow.com/kannada/take-precautions-to-ensure-that-drinking-water-does-not-get-contaminated-by-rain-minister-priyank-kharge/ https://kannadanewsnow.com/kannada/big-news-big-success-in-bullet-train-project-300-km-viaduct-work-completed-video-shared-by-ashwini-vaishnav-watch-video/
ಬೆಂಗಳೂರು: ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕೆಂದು ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರಲ್ಲದೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸೂಚಿಸಿದ್ದಾರೆ. ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ, ಇದರಿಂದ ಮನೆಗಳಿಗೆ ಸರಬರಾಜಾಗುವ ನೀರು ಕಲುಷಿತಗೊಳ್ಳುವ ಸಂಭವವಿರುತ್ತದೆ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಮುಂಜಾಗರೂಕತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ, ಆದಾಗ್ಯೂ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ನೀರನ್ನು ಕಾದಾರಿಸಿ ಕುಡಿಯುವುದು ಕ್ಷೇಮ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಡು ಬೇಸಿಗೆಯ ನಂತರ ಒಮ್ಮೆಲೆ ಮಳೆ ಸುರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹಬ್ಬಬಹುದಾಗಿದೆ, ಈ ಬಗ್ಗೆಯೂ ಗ್ರಾಮೀಣವಾಸಿಗಳು ಜಾಗ್ರತೆಯಿಂದ ಇರಬೇಕು, ಶಾಲೆಗಳು ಪುನರಾರಂಭವಾಗುವ ದಿನಗಳು ಸಮೀಪಿಸಿರುವುದರಿಂದ ಮಕ್ಕಳ…
ಬೆಂಗಳೂರು: ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ. ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ (ಹೃದಯ ದೀಪ)ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾದ ಸಂದರ್ಭದಲ್ಲಿಯೇ ಹಾಸನದಲ್ಲಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಶುಭ ಕೋರಿದ್ದನ್ನು ನೆನಪಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಲಂಡನ್ ನಲ್ಲಿ ಬುಕರ್ ಪ್ರಶಸ್ತಿ ಘೋಷಣೆ ಮಾಡಿದ ಕ್ಷಣ, ಕನ್ನಡಿಗರ ಪಾಲಿಗೆ ಹೆಮ್ಮೆಯ ಅಮೃತ ಘಳಿಗೆಯಾಗಿದೆ ಎಂದು ಶ್ಲಾಘಿಸಿದ್ದಾರೆ. ಹಾಸನದಿಂದ ಪಿ.ಲಂಕೇಶ್ ಪತ್ರಿಕೆಗೆ ವರದಿಗಾರರಾಗಿದ್ದ ಭಾನುಮುಷ್ತಾಕ್ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದರು. ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು. ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಹೃದಯ ದೀಪ ಕೃತಿ ಬುಕರ್ ಪ್ರಶಸ್ತಿಯನ್ನು ಗೆದ್ದಿರುವುದು ಕನ್ನಡಿಗರ ಹೃದಯ ಗೆದ್ದಂತಾಗಿದೆ. ಹೃದಯ…
ಶಿವಮೊಗ್ಗ : ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್ ಅಸಿಸ್ಟಂಟ್ (peon) ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಬ್ಯಾಂಕ್ ವೆಬ್ಸೈಟ್ www.bankofbaroda.co.in>Career Page>Current Opportunities>Recruitment of Office Assistant(peon) ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಜಾಹಿರಾತು ಸಂ:BOB/HRM/REC/ADVT/2025/05 ನ್ನು ವೀಕ್ಷಿಸಬಹುದಾಗಿದೆ. https://kannadanewsnow.com/kannada/big-news-big-success-in-bullet-train-project-300-km-viaduct-work-completed-video-shared-by-ashwini-vaishnav-watch-video/ https://kannadanewsnow.com/kannada/breaking-supreme-court-grants-bail-to-trainee-ias-officer-pooja-khedkar-pooja-khedkar/
ಬೆಂಗಳೂರು: ಮೇ.22ರ ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಅಮೃತ್ ಭಾರತ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿ ಬಾಗಲಕೋಟೆಯ ಮುನಿರಾಬಾದ್ ಗೋಕಾಕ್, ಗದಗ್, ಧಾರವಾಡ ರೈಲ್ವೆ ನಿಲ್ದಾಣಗಳನ್ನು ಕೂಡ ಅಭಿವೃದ್ಧಿ ಗೊಳಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋವಣ್ಣ ನಾಳೆ ಬಾಗಲಕೋಟೆಯಲ್ಲಿ ಭಾಗಿಯಾಗಲಿದ್ದಾರೆ. ಹೌದು..ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರು ಮೇ.22 ರಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದಾದ್ಯಂತ ಅಮೃತ ಭಾರತ್ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಹೊಂದಿದ 103 ರೈಲ್ವೆ ನಿಲ್ದಾಣಗಳ ಉದ್ಘಾಟನಾ ಕಾರ್ಯಕ್ರಮವನ್ನು ಏಕಕಾಲಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸುವ ಕಾರ್ಯಕ್ರಮವದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಬಾಗಲಕೋಟೆ ಮುನಿರಾಬಾದ್ ಗೋಕಾಕ್ ಗದಗ್ ಧಾರವಾಡ ರೈಲ್ವೆ ನಿಲ್ದಾಣಗಳು ಸಹ ಇದರಲ್ಲಿ ಸೇರಿವೆ. ಸೋಮಣ್ಣ ರವರು ಬಾಗಲಕೋಟೆ ರೈಲ್ವೆ ನಿಲ್ದಾಣದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸುವರು. ಬಳಿಕ ಮಧ್ಯಾಹ್ನ 2 ಗಂಟೆಗೆ ತೇಜಸ್ ಇಂಟರ್ನ್ಯಾಷನಲ್ ಎಜುಕೇಶನಲ್ ಇನ್ಸ್ಟಿಟ್ಯೂಷನ್ ನಲ್ಲಿ ನೂತನ…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಜಲಾವೃತಗೊಂಡು ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಇನ್ನೂ ಐದು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೇ.23ರಂದು ಬೆಂಗಳೂರಲ್ಲಿ ನಡೆಯಬೇಕಿದ್ದಂತ ಆರ್ ಸಿಬಿ ವರ್ಸಸ್ ಎಸ್ ಆರ್ ಹೆಚ್ ಪಂದ್ಯಾವಳಿಯನ್ನು ಲಖನೌಗೆ ಸ್ಥಳಾಂತರಿಸಲಾಗಿದೆ. ಮೇ.23ರಂದು ಬೆಂಗಳೂರಲ್ಲಿ ಆರ್ ಸಿ ಬಿ ವರ್ಸಸ್ ಎಸ್ ಆರ್ ಹೆಚ್ ತಂಡದ ನಡುವೆ ಪಂದ್ಯಗಳನ್ನು ನಿಗದಿ ಪಡಿಸಲಾಗಿತ್ತು. ಆದರೇ ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಈ ಹಿಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಈ ಹಿನ್ನಲೆಯಲ್ಲಿ ಮೇ.23ರ ಪಂದ್ಯಕ್ಕೂ ಮಳೆಯ ಕಾರಣದಿಂದ ರದ್ದಾಗುವ ನಿರೀಕ್ಷೆಯಲ್ಲಿ ಬೆಂಗಳೂರಿನಿಂದ ಲಖನೌಗೆ ಪಂದ್ಯವನ್ನು ಶಿಫ್ಟ್ ಮಾಡಲಾಗಿದೆ. ಅಂದಹಾಗೇ ಮೇ.23ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದಂತ ಐಪಿಎಲ್ ಪಂದ್ಯಗಳನ್ನು ಲಖನೌಗೆ ಏಕನಾಥ್ ಸ್ಟೇಡಿಯಂನಲ್ಲಿ ನಡೆಸಲು ನಿಗಧಿ ಪಡಿಸಲಾಗಿದೆ.
ಸೇಡಂ: ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವಿನ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಅಭೂತ ಪೂರ್ವ ಸಾಧನೆಗೈದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿಯಿಂದ ಸೇಡಂ ತಾಲ್ಲೂಕಿನಲ್ಲಿ ಮೇ.24ರಂದು ಬೃಹತ್ ತಿರಂಗ ಯಾತ್ರೆ ಆಯೋಜಿಸಲಾಗಿದೆ. ಈ ಕುರಿತಂತೆ ಸೇಡಂನ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಮಾಹಿತಿ ಹಂಚಿಕೊಂಡಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನಲೆಯಲ್ಲಿ ನಮ್ಮ ಸೇಡಂ ತಾಲ್ಲೂಕಿನಲ್ಲಿ ಮೇ.24ರಂದು ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ ಎಂದಿದ್ದಾರೆ. ಮೇ.24ರ ಶನಿವಾರದಂದು ಬೆಳಗ್ಗೆ 9 ಗಂಟೆಗೆ ಸೇಡಂನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ಬೃಹತ್ ತಿರಂಗ ಯಾತ್ರೆ ಆರಂಭಿಸಲಾಗುತ್ತಿದೆ. ಈ ಯಾತ್ರೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ, ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/big-news-charge-sheet-filed-against-mla-harish-poonja-high-court-granted-permission-to-amend-the-petition/ https://kannadanewsnow.com/kannada/after-calling-virat-kohli-a-joker-rahul-threatened-to-kill-the-doctors/













