Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC…
ಶಿವಮೊಗ್ಗ: ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್.26, 2025ರ ನಾಳೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಸಾಗರ ಮೆಸ್ಕಾಂ ಇಲಾಖೆಯು ದಿನಾಂಕ: 26.09.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ 26.09.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ, ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ,…
ಇತ್ತೀಚಿನ ದಿನಗಳಲ್ಲಿ, ಅನೇಕ ಯುವಕರು ತಮ್ಮ ಅಧ್ಯಯನವನ್ನು ಬದಿಗಿಟ್ಟು ಪ್ರೀತಿಯ ಹೆಸರಿನಲ್ಲಿ ದಾರಿ ತಪ್ಪುತ್ತಿದ್ದಾರೆ. ಕೆಲವರು ಕೆಟ್ಟ ಅಭ್ಯಾಸಗಳಿಗೆ ವ್ಯಸನಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಶಾಲೆಗೆ ಹೋಗುತ್ತೇನೆ ಎಂಬುದಾಗಿ ಹೊರಟು ಹೋದಂತ ಮಗಳನ್ನು ಹಿಂಬಾಲಿಸಿ ತೆರಳಿದಂತ ತಾಯಿಗೆ ಕಂಡದ್ದು ಮಾತ್ರ ಶಾಕಿಂಗ್ ಆಗುವಂತದ್ದು. ಆ ಬಗ್ಗೆ ಮುಂದೆ ಓದಿ. ಇತ್ತೀಚೆಗೆ 18 ವರ್ಷ ತುಂಬದ ಕೆಲವು ಹುಡುಗಿಯರು ಪ್ರೀತಿಯ ಹೆಸರಿನಲ್ಲಿ ಮೋಸ ಹೋಗುವುದನ್ನು ನಾವು ನೋಡಿದ್ದೇವೆ. ಇನ್ನು ಕೆಲವರನ್ನು ಅವರ ಪೋಷಕರು, ಅವರ ಪ್ರೇಮಿಗಳು ಸೇರಿದಂತೆ ರೆಡ್ ಹ್ಯಾಂಡ್ ಆಗಿ ಹಿಡಿಯುತ್ತಿದ್ದಾರೆ. ಇಂತಹ ಘಟನೆಗಳ ವೀಡಿಯೊಗಳನ್ನು ನಾವು ಸಾಮಾಜಿಕ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಇಂತಹ ವೀಡಿಯೊವೊಂದು ಹರಿದಾಡುತ್ತಿದೆ. ಶಾಲೆಗೆ ಹೋಗುತ್ತಿದ್ದ ತನ್ನ ಮಗಳ ಮೇಲೆ ತಾಯಿಗೆ ಅನುಮಾನ ಬಂತು. ಅವಳು ಹಿಂದೆ ಹೋಗಿ ಕೊನೆಗೆ ಏನಾಯಿತು ಎಂದು ನೋಡಿದಳು. ಒಂದು ವಿಡಿಯೋ (ವೈರಲ್ ವಿಡಿಯೋ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶಾಲೆಗೆ ಹೋಗುತ್ತಿದ್ದ ಹುಡುಗಿ ಮನೆಯಿಂದ ಹೊರಟಿದ್ದಳು. ಆದರೆ, ಕೆಲವು…
ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಕೂಡ ಕಾರಣ ಏನು ಅಂತ ರಿವೀಲ್ ಮಾಡಿದ್ದಾರೆ. ರೇಷನ್ ಕಾರ್ಡ್ ರದ್ದುಗೊಳ್ಳೋದಕ್ಕೆ ಮುಖ್ಯ ಕಾರಣ ಆ ಕುಟುಂಬದವರಲ್ಲಿ ಒಬ್ಬರು ಆದಾಯ ತೆರಿಗೆ ಪಾವತಿಸಿರೋದಾಗಿದೆ. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ನೆನಪಿದ್ಯೋ ಇಲ್ಲವೋ ಗೊತ್ತಿಲ್ಲ ಮೊದಲು ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ, ಆ ಬಳಿಕ ಆಧಾರ್ ಗೆ ಪ್ಯಾನ್ ನಂಬರ್ ಕೂಡ ಲಿಂಕ್…
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026 ರ 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ತಾತ್ಕಾಲಿಕ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗಳು ಫೆಬ್ರವರಿ 17 ರಂದು ಪ್ರಾರಂಭವಾಗಲಿವೆ. 10 ನೇ ತರಗತಿ ಪರೀಕ್ಷೆಗಳು ಮಾರ್ಚ್ 9 ರಂದು ಮತ್ತು 12 ನೇ ತರಗತಿ ಪರೀಕ್ಷೆಗಳು ಏಪ್ರಿಲ್ 9, 2026 ರಂದು ಕೊನೆಗೊಳ್ಳಲಿವೆ. 10 ನೇ ತರಗತಿಯ ಮಾಧ್ಯಮಿಕ ಶಾಲಾ ಪರೀಕ್ಷೆಗಳು ಗಣಿತ ಪ್ರಮಾಣಿತ ಮತ್ತು ಮೂಲ ಪರೀಕ್ಷೆಗಳೊಂದಿಗೆ ಪ್ರಾರಂಭವಾಗಲಿವೆ. ಪರೀಕ್ಷೆಗಳು ಫೆಬ್ರವರಿ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ. 10 ನೇ ತರಗತಿಯ ಪರೀಕ್ಷೆಗಳು ಭಾಷೆಗಳು ಮತ್ತು ಸಂಗೀತ ಪರೀಕ್ಷೆಗಳೊಂದಿಗೆ ಕೊನೆಗೊಳ್ಳಲಿವೆ. 12 ನೇ ತರಗತಿ ಅಥವಾ ಹಿರಿಯ ಶಾಲಾ ಪರೀಕ್ಷೆಯು ಫೆಬ್ರವರಿ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಜೈವಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಸಂಕ್ಷಿಪ್ತ ರೂಪ (ಇಂಗ್ಲಿಷ್ ಮತ್ತು ಹಿಂದಿ) ಯೊಂದಿಗೆ…
ರೈಲ್ವೆ ನೇಮಕಾತಿ ಮಂಡಳಿಗಳು (RRBs) ಅಧಿಕೃತವಾಗಿ RRB NTPC 2025 ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದಾದ್ಯಂತ ಒಟ್ಟು 8,875 ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿ ಅಭಿಯಾನವು ಪದವೀಧರ ಮತ್ತು 12 ನೇ ತರಗತಿಯ ಅರ್ಹ ಅಭ್ಯರ್ಥಿಗಳಿಗೆ ಅವಕಾಶಗಳನ್ನು ಒಳಗೊಂಡಿದೆ ಮತ್ತು ವಿವಿಧ ರೈಲ್ವೆ ಇಲಾಖೆಗಳಲ್ಲಿ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಈ ಖಾಲಿ ಹುದ್ದೆಗಳಲ್ಲಿ, 5,817 ಹುದ್ದೆಗಳು ಪದವಿ ಹಂತದ ಅಭ್ಯರ್ಥಿಗಳಿಗೆ, ಆದರೆ 3,058 ಹುದ್ದೆಗಳು 12 ನೇ ತರಗತಿಯ ಉತ್ತೀರ್ಣ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಅರ್ಜಿಗಳನ್ನು ಅಧಿಕೃತ RRB ಪೋರ್ಟಲ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಲಾಗುತ್ತದೆ, ವಿವರವಾದ ಅಧಿಸೂಚನೆಗಳು rrbcdg.gov.in ನಲ್ಲಿ ಲಭ್ಯವಿದೆ. RRB NTPC 2025 ಕ್ಕೆ ಅರ್ಹತಾ ಮಾನದಂಡಗಳು ಪದವಿ ಹುದ್ದೆಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 12 ನೇ ತರಗತಿಯ ಹುದ್ದೆಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.…
ಶಿವಮೊಗ್ಗ: 2024-25ನೇ ಸಾಲಿನಲ್ಲಿ ಆಪ್ಸ್ ಕೋಸ್ ಗೆ 4.20 ಕೋಟಿ ಲಾಭಾಂಶ ಬಂದಿದೆ. ಅಡಿಕೆ ಬೆಳೆಗಾರರ ಹಿತಕಾಯಲು ಸಂಘವು ಸಿದ್ಧವಿದೆ. ಯಾವುದೇ ಬೆಳೆಗಾರರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಅಧ್ಯಕ್ಷ ಬಿ.ಎ ಇಂದೂದರ ಬೇಸೂರು ತಿಳಿಸಿದ್ದಾರೆ. https://youtu.be/HSMZ-CSzGsc ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಭದ್ರಕಾಳಿ ಸಭಾಭವನದಲ್ಲಿ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ, ಹೊಸನಗರ, ಸೊರಬ ತಾಲ್ಲೂಕಿನ ನಮ್ಮ ಸದಸ್ಯರು ಇಂದು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ 4.20 ಕೋಟಿ ಲಾಭ ಗಳಿಸಿದೆ. ಎಲೆಚುಕ್ಕಿ, ಕೊಳೆರೋಗ ಬಂದು ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಅವರೊಂದಿಗೆ ಆಪ್ಸ್ ಕೋಸ್ ಇದೆ ಎಂಬುದಾಗಿ ಧೈರ್ಯ ತುಂಬಿದರು. ಕೃಷಿ ವಲಯದಲ್ಲಿ ರೈತರಿಗೆ ಅನುಕೂಲವಾಗುವಂತ ಎಲ್ಲಾ ವಸ್ತುಗಳನ್ನು ನೀಡಲಾಗುತ್ತಿದೆ. 2.50 ಕೋಟಿ ಮೌಲ್ಯದ ಎಲ್ಲಾ ಕೃಷಿ ಉಪಕರಣಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ನಾವು ರೈತರಿಗಾಗಿ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಅಪಘಾತ ವಿಮೆ ಮಾಡಲಾಗುತ್ತಿದೆ. ಅಡಿಕೆ ಕೊಯ್ಲಿನ…
ಮಂಡ್ಯ: ನಾಳೆ ಶ್ರೀರಂಗಪಟ್ಟಣದಲ್ಲಿ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರೆಗಯ ಮೂಲ ಶ್ರೀರಂಗಪಟ್ಟಣ ದಸರಾ ಆಗಿದೆ. 415ನೇ ದಸರಾ ಆಚರಣೆ ಶ್ರೀರಂಗಪಟ್ಟಣದಲ್ಲಿ ಸಕಲ ಸಿದ್ದತೆಯನ್ನು ಜಿಲ್ಲಾಡಳಿತ ಕೈಗೊಳ್ಳಲಾಗಿದೆ. ಶ್ರೀರಂಗ ಪಟ್ಟಣದ ಕಿರಂಗೂರು ಬನ್ನಿ ಮಂಟಪದ ಬಳಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ಕಿರಂಗೂರು ಬನ್ನಿ ಮಂಟಪದ ಬಳಿ ಜಂಬೂ ಸವಾರಿಗಾಗಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ದಸರಾ ಬನ್ನಿಮಂಟದ ಬಳಿ ಬನ್ನಿಮರಕ್ಕೆ ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ನಾಳೆ ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ಸಂಪ್ರದಾಯದಂತೆ ಅರ್ಚಕ ಭಾನುಪ್ರಕಾಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಲಿದೆ. ಪೂಜೆ ಸಲ್ಲಿಕೆ ಬಳಿಕ ಗಣ್ಯರ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯೊಂದಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಕಿರಂಗೂರು ಬನ್ನಿ ಮಂಟಪದಿಂದ ಪಟ್ಟಣದ ರಂಗನಾಥ ದೇಗುಲವರೆಗೂ ಸಾಗಲಿರುವ ಜಂಬೂ ಸವಾರಿ ಮೆರವಣಿಗೆ ಸಾಗಲಿದೆ. ಜಂಬೂ ಸವಾರಿಯ ಮೆರವಣಿಗೆಯಲ್ಲಿ ಸಾಗಲಿರುವ ಸ್ತಬ್ಧಚಿತ್ರ ಹಾಗು ಹಲವು ಕಲಾ ಪ್ರದರ್ಶನ ತಂಡಗಳು ಪಾಲ್ಗೊಳ್ಳಲಿದ್ದಾವೆ. ಆನೆಯ ಮೇಲೆ ಮೇಲಿನ ಮರದ ಅಂಬಾರಿಯಲ್ಲಿ…
ಮಂಡ್ಯ : ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ( ಸಿಎಸ್‌ಆರ್ ) ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಗೆಜ್ಜಲಗೆರೆ ಶಾಹಿ ಎಕ್ಸ್ ಪೋರ್ಟ್ ಪ್ರೈ ಲಿ ಹಿರಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕ ರಮೇಶ್ ಬಂಡಿ ಬುಧವಾರ ಹೇಳಿದರು. ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ಮದ್ದೂರು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ಶಾಯಿ ಎಕ್ಸ್ ಪೋರ್ಟ್ ಪ್ರೈ ಲಿ ವತಿಯಿಂದ ಸಿ.ಎಸ್.ಆರ್ ನಿಧಿ ಯೋಜನೆಯಡಿ ಅಂದಾಜು 8 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರು ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮದ್ದೂರಿನ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯೂ ಅಂದಾಜು 5 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಉದ್ಯೋಗ ನೀಡುವ ಮೂಲಕ ಅವರು ಜೀವನ ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಕಾರ್ಖಾನೆಯ ಸಿಎಸ್ಆರ್ ನಿಧಿಯಿಂದಲೂ ಕೂಡ ಕಾರ್ಮಿಕರ ಗ್ರಾಮಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ತಾಲೂಕಿನ ಮಲ್ಲನಕುಪ್ಪೆ, ಮರಕಾಡದೊಡ್ಡಿ ಹಾಗೂ ವೈದ್ಯನಾಥಪುರ ಗ್ರಾಮಗಳಲ್ಲಿ ಅಂದಾಜು 45 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ, ಸರ್ಕಾರಿ…
ಮಂಡ್ಯ :- ಕುರಿಮರಿಯೊಂದನ್ನು ಹೆಬ್ಬಾವು ದಾಳಿ ನಡೆಸಿ ಕುರಿಯನ್ನು ನುಂಗುತ್ತಿದ್ದ ವೇಳೆ ಕುರಿ ಮರಿ ಮೃತಪಟ್ಟಿದ್ದು, ಹೆಬ್ಬಾವನ್ನು ರಕ್ಷಿಸಿರುವ ಘಟನೆ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಬುಧವಾರ ಜರುಗಿದೆ. ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀ ಪಟ್ಟಲದಮ್ಮ ದೇವಾಲಯದ ಸಮೀಪ ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಬೃಹತ್ ಗಾತ್ರದ ಸುಮಾರು 11 ಅಡಿಯಷ್ಟು ಉದ್ದದ ಹೆಬ್ಬಾವು, ಕುರಿ ಮಂದೆ ಮೇಲೆ ದಾಳಿ ನಡೆಸಿ 5 ತಿಂಗಳ ಕುರಿಯನ್ನು ನುಂಗುತ್ತಿದ್ದ ವೇಳೆ ಇದನ್ನು ಗಮನಿಸಿದ ಕುರಿಗಾಯಿ ರಾಮಕೃಷ್ಣೇಗೌಡ ಉರಗ ತಜ್ಞ ರವಿ ಅವರಿಗೆ ವಿಷಯ ತಿಳಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ರವಿ ಹೆಬ್ಬಾವಿನಿಂದ ಕುರಿ ಮರಿಯನ್ನು ರಕ್ಷಿಸಿ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲು ತೆಗೆದುಕೊಂಡು ಹೋಗಿದ್ದಾರೆ ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕುರಿಮರಿ ಮೃತಪಟ್ಟಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ತಕ್ಷಣವೇ ಗ್ರಾಮಕ್ಕೆ ಧಾವಿಸಿದ ಉಪ ವಲಯ ಅರಣ್ಯಾಧಿಕಾರಿಗಳಾದ ಸವಿತಾ, ಕಾಂತರಾಜ್ ಉರಗ ತಜ್ಞ ರವಿ ಅವರ…