Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕೈಗಾರಿಕೆ ಇಲಾಖೆ ವ್ಯಾಪ್ತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಸಾಂಸ್ಥಿಕ ಜವಾಬ್ದಾರಿ ನೆರವಿನಿಂದ ಮೈಸೂರು ವಿಭಾಗದ ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ತಡೆಯುವಲ್ಲಿ, ಕಾಡ್ಗಿಚ್ಚು ನಂದಿಸುವಲ್ಲಿ ಹಾಗೂ ವನ್ಯಜೀವಿಗಳ ಕಳ್ಳಬೇಟೆ ತಡೆಯುವಲ್ಲಿ ಮುಂಚೂಣಿ ಸಿಬ್ಬಂದಿ ಮಾಡುತ್ತಿರುವ ಕಾರ್ಯ ಶ್ಲಾಘನಾರ್ಹವಾದದ್ದು ಎಂದರು. ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಆರ್. ಹಿತೇಂದ್ರ, ಐಪಿಎಸ್ (ಕೆಎನ್ 1996) ಬೆಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಏಕಕಾಲದಲ್ಲಿ ವಹಿಸಲಾಗಿದೆ. ಎಸ್. ಮುರುಗನ್, ಐಪಿಎಸ್ (ಕೆಎನ್ 1997) ಬೆಂಗಳೂರಿನ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ನೇಮಕಾತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಏಕಕಾಲದಲ್ಲಿ ವಹಿಸಲಾಗಿದೆ. ಕೆ.ವಿ. ಶರತ್ ಚಂದ್ರ, ಐಪಿಎಸ್ (ಕೆಎನ್ 1997) ನೇಮಕಾತಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಿಸಿಎಎಸ್)…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿದ್ದಂತ ವೇಳೆಯಲ್ಲಿ ಗಾಯಗೊಂಡಿದ್ದಂತ ಬಿಕಾಂ ವಿದ್ಯಾರ್ಥಿ ಸಿ.ವೇಣು ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆರ್ ಸಿ ಬಿ ಜಾಹೀರಾತು ನೋಡಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದೆ. ಆರ್ ಸಿ ಬಿ ವಿಜಯೋತ್ಸವ ವೀಕ್ಷಣೆಗೆ ಉಚಿತ ಟಿಕೆಟ್ ಎಂದು ಬಂದಿದ್ದೆ. ಕ್ರೀಡಾಂಗಣದ ಗೇಟ್ ನಂ.6ರ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಬಲಗಾಲಿನ ಮೇಲೆ ಬ್ಯಾರಿಕೇಡ್ ಬಿದ್ದಿತ್ತು. ಹೀಗಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ವಿದ್ಯಾರ್ಥಿ ಸಿ ವೇಣು ನೀಡಿದಂತ ದೂರಿನ ಹಿನ್ನಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ ಸಿ ಬಿ, ಕೆ ಎಸ್ ಸಿಎ, ಡಿಎನ್ ಎ ಕಂಪನಿಯ ವಿರುದ್ಧ 3ನೇ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/bmtc-bus-collides-with-metro-pillar-in-bengaluru-more-than-10-passengers-injured/ https://kannadanewsnow.com/kannada/bengaluru-land-corruption-disaster-case-cm-dc-demanded-resignation-from-union-minister-h-d-kumaraswamy/
ಬೆಂಗಳೂರು: ನಗರದಲ್ಲಿ ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ 10ಕ್ಕೂ ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ 607ಕ್ಕೆ ಬಸ್ ಡಿಕ್ಕಿಯಾಗಿ ಅಪಘಾತವಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/why-are-you-conspiring-against-me-it-is-known-what-anyone-is-doing-in-the-spotlight-deputy-chief-minister-dk-shivakumar/ https://kannadanewsnow.com/kannada/bengaluru-land-corruption-disaster-case-cm-dc-demanded-resignation-from-union-minister-h-d-kumaraswamy/
ಬೆಂಗಳೂರು: “ಬೇರೆಯವರು ಯಾವಾಗ ಕಣ್ಣೀರು ಹಾಕಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಹಾಕಿಸಿದ್ದಾರೆ, ಎಷ್ಟು ಕುಟುಂಬಗಳ ಕಣ್ಣೀರು ಒರೆಸಿದ್ದಾರೆ ಎಂದು ಅಧಿವೇಶನದಲ್ಲಿ ಚರ್ಚೆ ಮಾಡೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ನೆಹರೂ ತಾರಾಲಯ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಇಮೇಜ್ ಪಡೆಯಲು ಹೋಗಿ ಡ್ಯಾಮೇಜ್ ಮಾಡಿದ್ದಾರೆ” ಎಂಬ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ನನಗೆ ಯಾವುದೇ ಇಮೇಜ್ ಅವಶ್ಯಕತೆ ಇಲ್ಲ. ಜನರು ಕೊಟ್ಟಿರುವ ಇಮೇಜ್ ನಮಗೆ ಬೇಕಾದಷ್ಟಿದೆ. ಆರ್ ಸಿಬಿ ಗೆದ್ದ ಖುಷಿಯಲ್ಲಿ ಯುವ ಅಭಿಮಾನಿಗಳು ಸಂಭ್ರಮಾಚರಣೆ ಮಾಡಲು ಬಯಸಿದ್ದರು. ಅದಕ್ಕೆ ಬಿಜೆಪಿ, ಜೆಡಿಎಸ್ ಏನೆಲ್ಲಾ ಟ್ವೀಟ್ ಮಾಡಿದ್ದರು, ಆಮೇಲೆ ಹೆಂಗೆ ಉಲ್ಟಾ ಹೊಡೆದರು ಎಂಬುದನ್ನು ಬಿಚ್ಚಿಡಲಿ. ಅವರು ಹೆಣದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ. ನಾವು ಅಂತ ಹೀನ ರಾಜಕಾರಣ ಮಾಡುವುದಿಲ್ಲ. ನಮಗೆ ಪ್ರಾಮಾಣಿಕತೆ ಇದೆ” ಎಂದು ತಿರುಗೇಟು ನೀಡಿದರು. “ನಾನು ಭಾವುಕನಾಗಿದ್ದಕ್ಕೆ ಕಣ್ಣಲ್ಲಿ ನೀರು ಬಂದಿತು. ಅದನ್ನು…
ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.9ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 09-06-2025 ರಿಂದ 20-06-2025 ರವರೆಗೆ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು (ಬೆಂಗಳೂರು ದಕ್ಷಿಣ-22 & ಬೆಂಗಳೂರು ಉತ್ತರ-12) ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪುದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚುವಂತೆ ಕ್ರಮ ವಹಿಸಲು ಕೋರಲಾಗಿರುತ್ತದೆ ಎಂದಿದ್ದಾರೆ. ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025ನೇ…
ನವದೆಹಲಿ: ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಹಣದ ಆಮಿಷವೊಡ್ಡಿದಂತ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೇ 1 ವಾರದಲ್ಲಿ ಕೋರ್ಟ್ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ 1 ಲಕ್ಷ ಹಣದ ಆಮಿಷವೊಡ್ಡಿದ್ದಾರೆ. ಅವರಿಗೆ ನೀಡಲಾಗಿದ್ದಂತ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಸಿಬಿಐ ಮನವಿ ಮಾಡಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ವಿನಯ್ ಕುಲಕರ್ಣಿಗೆ ನೀಡಿದ್ದಂತ ಜಾಮೀನು ರದ್ದುಗೊಳಿಸಿದೆ. ಅಲ್ಲದೇ 1 ವಾರದಲ್ಲಿ ಕೋರ್ಟ್ ಮುಂದೆ ಶರಣಾಗುವಂತೆ ಆದೇಶಿಸಿದೆ. ತಕ್ಷಣವೇ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸುವಂತೆ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಅವರು ಹಾಗೂ ಅವರ ಪತ್ನಿಗೆ ಸೇರಿದಂತ 13.91 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಮತ್ತು ಅವರ ಪತ್ನಿಗೆ ಸೇರಿದ ಪ್ರಸ್ತುತ ಮಾರುಕಟ್ಟೆ ಮೌಲ್ಯದ ರೂ. 13.91 ಕೋಟಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ಇಡಿ, ಬೆಂಗಳೂರು ವಲಯ ಕಚೇರಿಯು ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ತಿಳಿಸಿದೆ. https://twitter.com/dir_ed/status/1930953094336221505
ಚೆನ್ನೈ: ನಟ-ರಾಜಕಾರಣಿ ಕಮಲ್ ಹಾಸನ್ ಅವರು ಶುಕ್ರವಾರ ತಮಿಳುನಾಡಿನ ಅಭ್ಯರ್ಥಿಯಾಗಿ ರಾಜ್ಯಸಭಾ ಸ್ಪರ್ಧೆಗೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ. ಈ ಬೆಳವಣಿಗೆ ಅವರ ರಾಜಕೀಯ ಪ್ರಯಾಣದಲ್ಲಿ ಒಂದು ಪ್ರಮುಖ ಕ್ಷಣವಾಗಿದೆ ಮತ್ತು 2026 ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಒಂದು ಕಾರ್ಯತಂತ್ರದ ಹೆಜ್ಜೆಯಾಗಿ ಇದನ್ನು ನೋಡಲಾಗಿದೆ. ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತನ್ನ ಮಿತ್ರ ಪಕ್ಷವಾದ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಗೆ ಹಂಚಿಕೆ ಮಾಡಿದ ಸ್ಥಾನದ ಮೂಲಕ ಹಾಸನ್ ಅವರ ಉಮೇದುವಾರಿಕೆ ಬಂದಿದ್ದು, ಇದು ಎರಡೂ ಪಕ್ಷಗಳ ನಡುವಿನ ಮೈತ್ರಿಯನ್ನು ಬಲಪಡಿಸುತ್ತದೆ. ಕಮಲ್ ಹಾಸನ್ ಜೊತೆಗೆ, ಡಿಎಂಕೆ ಮೇಲ್ಮನೆಗೆ ಇತರ ಮೂವರು ನಾಮನಿರ್ದೇಶಿತರನ್ನು ಕಣಕ್ಕಿಳಿಸಿದೆ. ಹಿರಿಯ ವಕೀಲ ಮತ್ತು ಹಾಲಿ ಸಂಸದ ಪಿ ವಿಲ್ಸನ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ತಮಿಳು ಬರಹಗಾರ ಮತ್ತು ಕವಿ ಸಲ್ಮಾ ಎಂದು ವ್ಯಾಪಕವಾಗಿ ಕರೆಯಲ್ಪಡುವ ರೋಕಿಯಾ ಮಲಿಕ್ ಮತ್ತು ಮಾಜಿ ಶಾಸಕ ಶಿವಲಿಂಗಂ. ಎಲ್ಲಾ ಡಿಎಂಕೆ ಅಭ್ಯರ್ಥಿಗಳು ಸಹ ಶುಕ್ರವಾರ ಸಚಿವಾಲಯದಲ್ಲಿ ಟಿಎನ್…
ಶಿವಮೊಗ್ಗ: ಜಿಲ್ಲೆಯ ಸಾಗರದ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮರ್ಕಝ್ ಮ್ಯಾನೇಜರ್ ಶರೀಫ್ ಸಖಾಫಿ ಅವರು ಶಿಕ್ಷಣ ಪ್ರೇಮಿಯೆಂದೇ ಗುರುತಿಸಿಕೊಂಡಿದ್ದಂತವರು. ಕಳೆದ 15 ವರ್ಷಗಳಿಂದ ಮರ್ಕಝ್ ಸಂಸ್ಥೆಯ ಜವಾಬ್ದಾರಿ ಹೊತ್ತು, ಶಿಕ್ಷಣ ಸೇವೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಹಗಲು ರಾತ್ರಿಯೆನ್ನದೇ ಶಿಕ್ಷಣ ಸೇವೆಗೈಯ್ಯುತ್ತಿದ್ದಂತ ಶರೀಫ್ ಸಖಾಫಿ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಶಿಕ್ಷಣ ಪ್ರೇಮಿಯೆಂದೇ ಪ್ರಸಿದ್ಧಿ. ಇವರ ಪರಿಶ್ರಮದಿಂದಾಗಿ ಮರ್ಕಝ್ ಮೈದಾನ ಎದ್ದು ಕಾಣುವಂತೆ ಆಗಿದೆ. ಮರ್ಕಝ್ ಸಂಸ್ಥೆಯಿಂದ ಎಲ್ ಕೆಜಿಯಿಂದ ಪಿಯು ಕಾಲೇಜುವರೆಗೆ ಶಿಕ್ಷಣವನ್ನು ಸಿಗುವಂತೆ ಮಾಡಿದ್ದರು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಮರ್ಕಝ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ವ್ಯಾಸಂಗ ಮಾಡಿ, ಶೇ.100ರಷ್ಟು ಫಲಿತಾಂಶ ಶಾಲಾ-ಕಾಲೇಜಿಗೆ ಬರುತ್ತಿದ್ದರ ಹಿಂದೆ ಶರೀಫ್ ಸಖಾಫಿ ಅವರ ಪಾತ್ರವಿತ್ತು. ಇಂತಹ ಶರೀಫ್ ಸಖಾಫಿ ಅವರು ಅನಾರೋಗ್ಯದ ಕಾರಣದಿಂದ ಕೆಲ ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ…












