Author: kannadanewsnow09

ಬೆಂಗಳೂರು: ಇಂದು ಕೂಡ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ವರುಣ ಆರ್ಭಟಿಸಿದ್ದಾರೆ. ನಗರದ ವಿವಿಧೆಡೆ ಇಂದು ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಹೀಗಾಗಿ ಸಿಲಿಕಾನ್ ಸಿಟಿ ಜನತೆ ಮನೆಯಲ್ಲಿ ಮಿಂದು ಚಿಲ್ ಆಗಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಲ್ಲಿ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದಂತ ಬೆಂಗಳೂರು ಜನತೆ ಮಳೆಯಿಂದಾಗಿ ಕೂಲ್ ಕೂಲ್ ಆಗಿದ್ದಾರೆ. ಇಂದು ಕೂಡ ವರುಣ ಆರ್ಭಟಿಸಿದ್ದಾನೆ. ನಗರದ ವಿವಿಧೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನ ಮತ್ತಿಕೆರೆ, ಹೆಬ್ಬಾಳ, ಸುಬ್ಬಯ್ಯ ಸರ್ಕಲ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆ ಆರ್ ಮಾರ್ಕೆಟ್, ಕಾರ್ಪೋರೇಷನ್, ಯಶವಂತಪುರ, ಕಮ್ಮನಹಳ್ಳಿ, ಜೆಪಿ ನಗರ, ಟ್ಯಾನರಿ ರಸ್ತೆ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಮಳೆಯಿಂದಾಗಿ ಕೆಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದ್ದು ಕಂಡು ಬಂದಿದೆ. https://kannadanewsnow.com/kannada/people-of-bengaluru-note-bbmp-electricity-department-officials-staff-change-working-hours/ https://kannadanewsnow.com/kannada/mlc-mtb-nagaraj-alleges-illegal-voting-in-chikkaballapur-constituency/

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯುತ್ ವಿಭಾಗದ ಎಲ್ಲಾ ಅಭಿಯಂತರರು/ಅಧಿಕಾರಿಗಳಿಗೆ ಕಾರ್ಯನಿರ್ವಹಿಸುವ ಅವಧಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಮುಖ್ಯ ಆಯುಕ್ತರು ಮಾಹಿತಿ ನೀಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ವಿಭಾಗಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರ ವಲಯದಿಂದ ಹಲವಾರು ಬೀದಿ ದೀಪಗಳು ಹುರಿಯದೇ ಇರುವ ಬಗ್ಗೆ ದೂರುಗಳು ಬಂದಿರುತ್ತದೆ ಎಂದಿದ್ದಾರೆ. ಸದರಿ ದೂರುಗಳು ಹೆಚ್ಚಾಗಿ ರಾತ್ರಿ ಹೊತ್ತಿನಲ್ಲಿ ಅಂದರೆ ಸಂಜೆ 6.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೂ ಬರುತ್ತಿದ್ದು, ಬೀದಿ ದೀಪಗಳ ನಿರ್ವಹಣೆಗೆ ನಿಯೋಜಿಸಲ್ಪಟ್ಟ ಗುತ್ತಿಗೆದಾರರು ನಿಗದಿಪಡಿಸಲಾದ ಸಮಯಕ್ಕೆ ಸರಿಪಡಿಸದಿರುವುದು ಕಂಡುಬಂದಿದ್ದು, ಸದರಿ ಕಾರ್ಯಕ್ಷಮತೆಯ ಕೊರತೆಯು ಬಿಬಿಎಂಪಿ ವಿದ್ಯುತ್ ವಿಭಾಗದ ಮೇಲು ಉಸ್ತುವಾರಿಯು ನಡೆಯದೇ ಇರುವುದು ಸಹ ಒಂದು ಕಾರಣವಾಗಿರುತ್ತದೆ ಎಂದು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ನಿರ್ದೇಶನದಂತೆ ವಿದ್ಯುತ್ ಇಲಾಖೆಯ ಎಲ್ಲಾ ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ/ಕಿರಿಯ ಅಭಿಯಂತರರು, ಗುತ್ತಿಗೆ ಅಭಿಯಂತರರು ದಿನಾಂಕ:07.05.2024ರಿಂದ ಪ್ರಾರಂಭಿಸಿದಂತೆ ಬೆಳಗ್ಗೆ…

Read More

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು ಎಂಬುದಾಗಿ ವಕೀಲ ದೇವರಾಜೇಗೌಡ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪೆನ್‌ಡ್ರೈವ್ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬೆಂಬಲಿಗರ ಮೂಲಕ ‌ನನಗೆ ದೊಡ್ಡ ‌ಮಟ್ಟದಲ್ಲಿ ಆಫರ್ ಕೊಟ್ಟಿದ್ದರು. ಕ್ಯಾಬಿನೆಟ್ ಮಟ್ಟದ ಹುದ್ದೆ ಕೊಡುವುದಾಗಿ ಆಫರ್ ಕೊಟ್ಟಿದ್ದರು ಎಂಬುದಾಗಿ ಗಂಭೀರ ಆರೋಪ ಮಾಡಿದರು. ಅದಲ್ಲೇ ಮೊದಲು ನನ್ನನ್ನ ಯಾರು ಭೇಟಿ ಮಾಡಿದರು ಅನ್ನೋದನ್ನ ಅದರ ಅಡಿಯೋವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗ ಎಲ್.ಆರ್. ಶಿವರಾಮೇಗೌಡ ಮೂಲಕ ನನಗೆ ಆಫರ್ ನೀಡಿದ್ರು. ನಾನು ಎಲ್ ಆರ್ ಶಿವರಾಮೇಗೌಡ ಮಾತನಾಡಿರೋ ಆಡಿಯೋ ಕೂಡ ರಿಲೀಸ್ ಮಾಡ್ತಿದ್ದೇನೆ. ನೀವು ಕೇಳಿ ಎಂಬುದಾಗಿ ಹೇಳಿದರು. ಅಲ್ಲದೇ ನನಗೆ ಎಸ್ಐಟಿ ತನಿಖೆಯ ಮೇಲೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನಂಬಿಕೆ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಕೀಲ ದೇವರಾಜೇಗೌಡ ಅವರಿಗೆ ಆಮಿಷ ಮಾಡಿರೋ ಆಡಿಯೋವನ್ನು ರಿಲೀಸ್ ಮಾಡಿ, ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಕೊಡಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಸೂತ್ರಧಾರಿಗಳು ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮಗೆ ಆಮಿಷವೊಡ್ಡಿದ ಸಂಭಾಷಣೆಯ ಆಡಿಯೋವನ್ನು ರಿಲೀಸ್ ಮಾಡಿದರು. ಇದಷ್ಟೇ ಅಲ್ಲದೇ ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಗೌಪ್ಯ ಸಭೆ ಮಾಡಲಾಗುತ್ತಿದೆ. ಗೌಪ್ಯ ಸಭೆ ನಡೆಸಿ ಯಾರು ಯಾರನ್ನ ಆರೋಪಿಗಳನ್ನ ಮಾಡಬೇಕು ಅನ್ನೋದನ್ನ ಸೂಚನೆ ಕೊಟ್ಟಿದ್ದಾರೆ. ನನ್ನ ಜೀವನದ ಹೋರಾಟ ಇದ್ದಿದ್ದು ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿ…

Read More

ಕೊಡಗು: ಒಂದು ಶುಭ ಕಾರ್ಯವಾಗುತ್ತಿದೆ ಅಂದ್ರೆ ಅದು ನಿರ್ವಿಘ್ನವಾಗಿ ನಡೆಯಲಪ್ಪ ಅಂತ ಬೇಡಿಕೊಳ್ತಾರೆ. ಮದುವೆ ಆದ್ರೇ ಸಾಕು ಒಳ್ಳೇದಾದ್ರೆ ಸಾಕು ಅನ್ನೋರೇ ಹೆಚ್ಚು. ಆದ್ರೇ ಇಲ್ಲೊಂದು ಮದುವೆ ವರನ ಸ್ನೇಹಿತರಿಗೆ ಊಟದಲ್ಲಿ ಸ್ವೀಟ್ ಸಿಗಲಿಲ್ಲ ಅನ್ನೋ ಒಂದೇ ಒಂದು ಕಾರಣಕ್ಕೆ ಮುರಿದು ಬಿದ್ದಿದೆ. ಆ ಬಗ್ಗೆ ಮುಂದೆ ಓದಿ. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಶನಿವಾರದಂದು ಹಾನಗಲ್ ಯುವತಿ ಹಾಗೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡ್ತಿರೋ ತುಮಕೂರಿನ ಹರ್ಷಿತ್ ಎಂಬಾತನೊಂದಿಗೆ ಮದುವೆ ನಿಶ್ಚಿತಾರ್ಥ ಕಾರ್ಯ ನಡೆಯಿತು. ಈ ವಧು ವರರಿಬ್ಬರೂ ಮ್ಯಾಟ್ರಿಮೋನಿಯಲ್ಲಿ ಪರಿಚಿತರಾಗಿ, ಮದುವೆಯವರೆಗೆ ಬಂದಿದ್ದರು. ಮ್ಯಾಟ್ರಿಮೋನಿಯಲ್ಲಿ ಯುವತಿಯನ್ನು ನೋಡಿದ್ದಂತ ಹರ್ಷಿತ್ ಆಕೆಯನ್ನು ಮದುವೆಯಾಗೋದಕ್ಕೆ ಒಪ್ಪಿಕೊಂಡಿದ್ದರು. ಅಲ್ಲದೇ ಕುಟುಂಬಸ್ಥರನ್ನು ಒಪ್ಪಿಸಿ, ರಿಸೆಪ್ಷನ್ ಅನ್ನು ಸೋಮವಾರಪೇಟೆಯಲ್ಲಿ ಶನಿವಾರ ರಾತ್ರಿ ಸೋಮವಾರಪೇಟೆಯ ಜಾನಕಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ವರನ ಕಡೆಯವರು ಜಾನಕಿ ಕನ್ವೆನ್ಷನ್ ಹಾಲಿಗೆ 2 ಗಂಟೆಗೆ ಬಂದಿದ್ರೇ, ವಧು ಮತ್ತು ಅವರ ಕುಟುಂಬದವರು 2 ಗಂಟೆ ತಡವಾಗಿ…

Read More

ಶಿವಮೊಗ್ಗ: ಮೇ 07 ರಂದು ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಸೋಮವಾರ ಮತಗಟ್ಟೆಗಳಿಗೆ ಅಗತ್ಯವಾದ ಎಲ್ಲ ಪರಿಕರಗಳೊಂದಿಗೆ ಮಸ್ಟರಿಂಗ್ ಕೇಂದ್ರಗಳಲ್ಲಿ ಸಿದ್ದತೆಗಳನ್ನು ಮಾಡಿಕೊಂಡು ಹೊರಡುವ ದೃಶ್ಯ ಸಾಮಾನ್ಯವಾಗಿತ್ತು. ಮಸ್ಟರಿಂಗ್ ಕೇಂದ್ರಗಳು : 111-ಶಿವಮೊಗ್ಗ ಗ್ರಾಮಾಂತರ ಮತಕ್ಷೇತ್ರಕ್ಕೆ ಹೆಚ್‍ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಶಿವಮೊಗ್ಗ, 112-ಭದ್ರಾವತಿ ಮತಕ್ಷೇತ್ರಕ್ಕೆ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಭದ್ರಾವರಿ, 113-ಶಿವಮೊಗ್ಗ ಮತಕ್ಷೇತ್ರಕ್ಕೆ ಸಹ್ಯಾದ್ರಿ ಕಾಮರ್ಸ್ ಆಂಡ್ ಮ್ಯಾನೇಜ್‍ಮೆಂಟ್ ಕಾಲೇಜು, 114-ತೀರ್ಥಹಳ್ಳಿಗೆ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜ್ ತೀರ್ಥಹಳ್ಳಿ, 115- ಶಿಕಾರಿಪುರ ಮತಕ್ಷೇತ್ರಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ, 116-ಸೊರಬ ಮತಕ್ಷೇತ್ರಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೊರಬ ಹಾಗೂ 117-ಸಾಗರ ಮತಕ್ಷೇತ್ರಕ್ಕೆ ಸರ್ಕಾರಿ ಜ್ಯೂನಿಯರ್ ಪಿಯು ಕಾಲೇಜು, ಸಾಗರ ಮಸ್ಟರಿಂಗ್ ಕೇಂದ್ರಗಳಾಗಿವೆ. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ದಿನಗಳಂದು ಕರ್ತವ್ಯಕ್ಕೆ ನಿಯೋಜಿಸಿದ ಚುನಾವಣಾ ಸಿಬ್ಬಂದಿಗಳನ್ನು ಸಂಬಂಧಿಸಿದ ಮತಗಟ್ಟೆ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಅನುಕೂಲವಾಗುವಂತೆ 269…

Read More

ಬೆಂಗಳೂರು: ನಾಳೆ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ 2ನೇ ಹಂತದ ಮತದಾನ 14 ಜಿಲ್ಲೆಗಳಲ್ಲಿ ನಡೆಯಲಿದೆ. ನಾಳೆ ನಡೆಯಲಿರುವಂತ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಅದರಲ್ಲಿ ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ:26.04.2024ರ ಶುಕ್ರವಾರದಂದು ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತ ಹಾಗೂ ಶೋರಾಪುರ-36 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದಿನಾಂಕ:07.05.2024ರ ಮಂಗಳವಾರದಂದು ನಡೆಸುತ್ತಿದೆ ಎಂದಿದ್ದಾರೆ. ಸದರಿ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ದಿನಾಂಕ:26.04.2024 ಮತ್ತು ದಿನಾಂಕ:07.05.2024ರಂದು…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಡಿನ ಮಹಿಳೆಯರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಹಾಗಾದ್ರೇ ಏನು ಬರೆದಿದ್ದಾರೆ ಅಂತ ಮುಂದೆ ಓದಿ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ ಎಂದಿದ್ದಾರೆ. ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ನ ಸಿದ್ಧಾಂತ ಮತ್ತು ನಡವಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾದುದು. ಗುಜರಾತ್ ನಿಂದ ಮಣಿಪುರದ ವರೆಗೆ ಇದಕ್ಕೆ ನಿದರ್ಶನಗಳನ್ನು ಕಾಣಬಹುದು. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ.…

Read More

ನವದೆಹಲಿ: ಜೀ ಮೀಡಿಯಾ ಕಾರ್ಪೊರೇಷನ್ ಲಿಮಿಟೆಡ್ ತನ್ನ ಸಿಇಒ ಅಭಯ್ ಓಜಾ ಅವರನ್ನು ಮೇ 4, 2024 ರಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ ಎಂದು ಸೋಮವಾರ ತಿಳಿಸಿದೆ. ಸೋಮವಾರ ನಡೆದ ನಿರ್ದೇಶಕರ ಮಂಡಳಿಯು ಓಜಾ ಅವರನ್ನು ಸಂಸ್ಥೆಯಿಂದ ಉದ್ಯೋಗವನ್ನು ನಿಲ್ಲಿಸಲು ಮತ್ತು ಅದರ ಪರಿಣಾಮವಾಗಿ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅವರನ್ನು ಮೇ 4, 2024 ರಿಂದ ನಿಲ್ಲಿಸಲು ಅನುಮೋದನೆ ನೀಡಿದೆ ಮತ್ತು ದೃಢಪಡಿಸಿದೆ ಎಂದು ಕಂಪನಿಯು ನಿಯಂತ್ರಕ ಫೈಲಿಂಗ್ನಲ್ಲಿ ತಿಳಿಸಿದೆ. “ಉದ್ಯೋಗವನ್ನು ಕೊನೆಗೊಳಿಸಿದ ಕಾರಣ, ಅಭಯ್ ಓಜಾ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯನ್ನು ಕಳೆದುಕೊಂಡಿದ್ದಾರೆ” ಎಂದು ಫೈಲಿಂಗ್ನಲ್ಲಿ ತಿಳಿಸಲಾಗಿದೆ. ಆದಾಗ್ಯೂ, ಕಂಪನಿಯು ಅವರನ್ನು ವಜಾಗೊಳಿಸಲು ಕಾರಣಗಳನ್ನು ವಿವರಿಸಿಲ್ಲ. ಓಜಾ ಅವರನ್ನು ಕಳೆದ ವರ್ಷ ಕಂಪನಿಯ ಸಿಇಒ ಆಗಿ ಬಡ್ತಿ ನೀಡಲಾಯಿತು. ಅವರು 2022 ರಲ್ಲಿ ವಿಯಾನ್ ಮತ್ತು ಜೀ ಬಿಸಿನೆಸ್ ಹೊರತುಪಡಿಸಿ ಜೀ ಮೀಡಿಯಾಕ್ಕೆ ಮುಖ್ಯ ವ್ಯವಹಾರ ಅಧಿಕಾರಿ ಮತ್ತು ಲೀನಿಯರ್ ಚಾನೆಲ್ಗಳ ಪಿ &ಎಲ್ ಮುಖ್ಯಸ್ಥರಾಗಿ ಸೇರಿದ್ದರು.…

Read More

ಬೆಂಗಳೂರು: ರಾಜ್ಯದಲ್ಲಿ ಶೈಕ್ಷಣಿ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ತಮ್ಮ ಮಕ್ಕಳನ್ನು ಉತ್ತಮ ಶಾಲೆಗೆ ಸೇರಿಸೋದಕ್ಕೆ ಪೋಷಕರು ಹುಡುಕಾಡುತ್ತಿದ್ದಾರೆ. ಯಾವ ಶಾಲೆಗಳು ಅನಧಿಕೃತ, ಯಾವುವು ಅಧಿಕೃತ ಎನ್ನುವ ಮಾಹಿತಿಯನ್ನು ಪ್ರಕಟಿಸುವಂತೆ ಬಿಇಓಗಳಿಗೆ ಸೂಚಿಸಿದ್ದರೂ ಈವರೆಗೆ ಪ್ರಕಟಿಸಿಲ್ಲ. ಈ ಕೂಡಲೇ ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವಂತ ಅವರು, ರಾಜ್ಯದಲ್ಲಿರುವ 17,329 ಖಾಸಗಿ ಶಾಲೆಗಳ ಪೈಕಿ 1,695 ಅನಧಿಕೃತ ಶಾಲೆಗಳಿವೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. ಅನೇಕ ಪಾಲಕರಿಗೆ ತಮ್ಮ ಮಕ್ಕಳು ಕಲಿಯುತ್ತಿರುವ ಶಾಲೆ ಅಧಿಕೃತವೇ ಅಥವಾ ಅನಧಿಕೃತವೇ ಎಂಬುದರ ಬಗ್ಗೆ ಖಚಿತ ಮಾಹಿತಿಯೇ ಇರುವುದಿಲ್ಲ ಎಂದಿದ್ದಾರೆ. ಈಗಾಗಲೇ 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಸಹಜವಾಗಿ ಪಾಲಕರಿಗೆ ತಮ್ಮ ಮಕ್ಕಳನ್ನು ಉತ್ತಮ ಶಾಲೆಗಳಿಗೆ ಸೇರಿಸುವ ಧಾವಂತ. ಆದರೆ, ಈ ಪಾಲಕರ ನಂಬಿಕೆಗೆ ಅನುಗುಣವಾಗಿ ಇರುವ ಶಾಲೆಗಳೆಷ್ಟು? ಎಂದು ಪ್ರಶ್ನಿಸಿದ್ದಾರೆ. ಶಾಲಾ ನೋಂದಣಿ…

Read More