Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ಜಿಲ್ಲೆಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದಂತ ಖಾಸಗಿ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮುಂಜಾನೆ 4 ಗಂಟೆಗೆ ನಿದ್ದೆ ಮಂಪರಿನಲ್ಲಿ ಇದ್ದಂತ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾಸಗಿ ಬಸ್ ಪಲ್ಟಿಯಾದ ಘಟನೆಯಲ್ಲಿ ಅದರಲ್ಲಿದ್ದಂತ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/uniform-question-paper-for-sslc-half-yearly-exam-slated-to-begin-from-september-24/ https://kannadanewsnow.com/kannada/9-killed-more-than-2800-injured-in-pager-blasts-in-lebanon-syria/
ಬೆಂಗಳೂರು: ಪ್ರಸಕ್ತ ಸಾಲಿನಂದ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ( SSLC Students ) ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನೀಡುವ ಏಕರೂಪದ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಬೇಕಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೂ ( SSLC Exam ) ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಮಂಡಳಿ ನೀಡುತ್ತಿದೆ. ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ, ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೇ ಈ ವರ್ಷ ಅದಕ್ಕೆ ಬ್ರೇಕ್ ಹಾಕಿದೆ. ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾಧ್ಯಂತ ಏಕರೂಪದ ಪ್ರಶ್ನೆಪತ್ರಿಕೆ ನೀಡಲು ಮಂಡಳಿ ತೀರ್ಮಾನಿಸಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್.24ರಿಂದ ಅಕ್ಟೋಬರ್ 1ರವರೆಗೆ ಎಸ್ ಎಸ್ ಎಲ್ ಸಿ ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ…
ಬೆಳಗಾವಿ: ನಿನ್ನೆ ರಾತ್ರಿ ನಗರದಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಾಲು ತಾಗಿದಂತ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಿರಿಕ್ ಉಂಟಾಗಿ, ಮೂವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದು, ಗಾಯಗೊಳಿಸಿರುವಂತ ಘಟನೆ ನಡೆದಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳೇ ಚಾಕುವಿನಿಂದ ಹಲ್ಲೆಗೆ ಒಳಗಾದಂತವರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗೆ ತೆರಳಿದ್ದಂತ ಮೂವರು ವಿದ್ಯಾರ್ಥಿಗಳು, ಡ್ಯಾನ್ಸ್ ಮಾಡುವಂತ ವೇಳೆಯಲ್ಲಿ ಕಾಲು ತಾಗಿದ್ದಕ್ಕೆ ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರು ಕಿರಿಕ್ ತೆಗೆದಿದ್ದಾರೆ. ಇದೇ ವಿಚಾರ ತಾರಕಕ್ಕೇರಿದಾಗ ಮೂವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದಿರುವುದಾಗಿ ತಿಳಿದು ಬಂದಿದೆ. ಚಾಕು ಇರಿತದಿಂದ ಗಾಯಗೊಂಡಿದ್ದಂತ ಪ್ರವೀಣ್ ಗುಂಡ್ಯಾಗೋಳ ಎಂಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಇನ್ನಿಬ್ಬರು ದರ್ಶನ್ ಪಾಟೀಲ್, ಸತೀಶ್ ಪೂಜಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/bbmp-closes-6000-potholes-in-bengaluru/ https://kannadanewsnow.com/kannada/9-killed-more-than-2800-injured-in-pager-blasts-in-lebanon-syria/
ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದು ಹಾಗೂ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 18-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಸೆ.18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಗಬ್ಬಲಾಳ, ಉತ್ತರಹಳ್ಳಿ, ಇಸ್ಟೋ ಲೇಔಟ್ ಕೈಗಾರಿಕಾ ಪ್ರದೇಶ, ಆದರ್ಶ ಅಪಾರ್ಟಮೆಂಟ್ 1 ಮತ್ತು 2. ಮಂತ್ರಿ ಟ್ರಾನ್ಕ್ವಿಲ್ ಅಪಾರ್ಟ್ ಮೆಂಟ್, ಮಾರುತಿ ಲೇಔಟ್, ಭಾರತ್ ಲೇಔಟ್, ದೊಡ್ಡಕಲ್ಲಸಂದ್ರ ಕೈಗಾರಿಕಾ ಪ್ರದೇಶ, ವಿಟಲಾ ನಗರ, ಯಾವಳಾಂ ನಗರ, ಮಾರುತಿ ನಗರ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ದಿನಾಂಕ 19.09.2024(ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “220/66/11ಕೆ.ವಿ ಎನ್.ಆರ್.ಎಸ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್…
ಬೆಂಗಳೂರು: ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಲಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಹಗಲು-ರಾತ್ರಿ ಕಾರ್ಯನಿರ್ವಹಿಸಿ ರಸ್ತೆ ಗುಂಡಿಗಳನ್ನು ಮುಚ್ಚುಲಾಗುತ್ತಿದೆ ಹಾಗೂ ಇನ್ನುಳಿದ ರಸ್ತೆ ಗುಂಡಿಗಳನ್ನು ಹಗಲು ರಾತ್ರಿ ಕೆಲಸ ನಿರ್ವಹಿಸಿ ಮುಚ್ಚಲಾಗುವುದೆಂದು ವಲಯ ಆಯುಕ್ತರಾದ ರಮ್ಯಾ, ಐಎಎಸ್ ಅವರು ತಿಳಿಸಿದರು. ಉಪ ಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ನಗರದ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಜೆಪಿ ನಗರದ ನಂದಿನಿ ಹೋಟೆಲ್ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಸಾಕಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ಬಾರದಿರುವ ಹಿನ್ನೆಲೆ ನಿರಂತರವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಇದೀಗ ವಾರ್ಡ್ ರಸ್ತೆಗಳಲ್ಲಿ ಎಲ್ಲೆಲ್ಲಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯವನ್ನು ಸರಿಯಾಗಿ ನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಗುತ್ತಿಗೆದಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ತರಬೇತಿ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಿಭಾಗದ ಅಭಿಯಂತರರು ಹಾಗೂ ಗುತ್ತಿಗೆದಾರರ ಜೊತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಹಲವು ಕಡೆ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಗಮನಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿರುವಂತೆ ನೋಡಿಕೋಳ್ಳಲು ಸೂಚನೆ ನೀಡಲಾಯಿತು. ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಎಲ್ಲೆಲ್ಲಿ ವಿದ್ಯುತ್ ಕಂಬಗಳು ಹಾಳಾಗಿವೆ ಎಂಬುದನ್ನು ಪರಿಶೀಲಿಸಿ ಜಿಯೋ ಲೊಕೇಶನ್ ಮೂಲಕ ಪಟ್ಟಿ ಸಿದ್ದಪಡಿಸಬೇಕು. ಅನಂತರ ತ್ವರಿತಗತಿಯಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಹೊರ ವರ್ತುಲ ರಸ್ತೆ, ಪ್ರಮುಖ ರಸ್ತೆಗಳು ಹಾಗೂ ಮೇಲುಸೇತುವೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಅಧಿಕಾರಿಗಳು ಖುದ್ದು…
ಬೈರುತ್: ಲೆಬನಾನ್ ನಲ್ಲಿ ಅಮೆರಿಕ ನಿಯೋಜಿತ ಭಯೋತ್ಪಾದಕ ಗುಂಪು ಹಿಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 2,800 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಲೆಬನಾನ್ ನಲ್ಲಿರುವ ಇರಾನ್ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಲೆಬನಾನ್ ನಲ್ಲಿ ಸ್ಥಳೀಯ ಕಾಲಮಾನ ಮಧ್ಯಾಹ್ನ 3:30ರ ಸುಮಾರಿಗೆ (ಭಾರತೀಯ ಕಾಲಮಾನ ಸಂಜೆ 6 ಗಂಟೆ) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 2,800 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವ ಫಿರಾಸ್ ಅಬಿಯಾದ್ ದೃಢಪಡಿಸಿದ್ದಾರೆ. ಟೆಲಿವಿಷನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸ್ಫೋಟದಲ್ಲಿ “ಬಾಲಕಿ ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ” ಎಂದು ಹೇಳಿದರು, “ಸುಮಾರು 2,800 ಜನರು ಗಾಯಗೊಂಡಿದ್ದಾರೆ ಮತ್ತು ಅವರಲ್ಲಿ 200 ಕ್ಕೂ ಹೆಚ್ಚು ಜನರು ಗಂಭೀರವಾಗಿದ್ದಾರೆ” ಎಂದು ಹೇಳಿದರು. ಗಾಯಗಳು ಹೆಚ್ಚಾಗಿ ಮುಖ, ಕೈ ಮತ್ತು ಹೊಟ್ಟೆಯ ಮೇಲೆ ಇದ್ದವು…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಅಕ್ಟೋಬರ್.3ರಂದು ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಬಗ್ಗೆ ಕೆಇಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಕ್ಟೋಬರ್.3ರಂದು ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದಿದೆ. ಅಂದಹಾಗೇ ಸೆಪ್ಟೆಂಬರ್.22ರಂದು ಪಿಎಸ್ಐ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಆದರೇ ಅದೇ ದಿನಾಂಕದಂದು ಯುಪಿಎಸ್ಸಿ ಮುಖ್ಯ ಪರೀಕ್ಷೆ ಇದ್ದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಮತ್ತು ಬಿ ಹುದ್ದೆಗಳಿಗೆ 3 ವರ್ಷ ವಯೋಮಿತಿಯನ್ನು ಸಡಿಲಿಸಿ ಆದೇಶ ಮಾಡಿದ ಕಾರಣ, ಮುಂದೂಡಲಾಗಿದೆ. ಇನ್ನೂ ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಪಿಎಸ್ಸಿಯಿಂದ ಸೆಪ್ಟೆಂಬರ್.19ರ ನಾಳೆಯಿಂದ 28ರವರೆಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ. https://kannadanewsnow.com/kannada/here-are-the-highlights-of-the-cabinet-meeting-chaired-by-cm-siddaramaiah-in-kalaburagi/ https://kannadanewsnow.com/kannada/mini-vidhana-soudha-to-be-renamed-as-praja-soudha-deputy-cm-dk-shivakumar/
ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha
ಕಲಬುರ್ಗಿ: ಕಲಬುರ್ಗಿ ಸೇರಿದಂತೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರನ್ನು ಪ್ರಜಾ ಸೌಧ ಎಂಬುದಾಗಿ ಮರುನಾಮಕರಣ ಮಾಡಲಾಗುತ್ತಿರುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದರು. ಮಂಗಳವಾರದಂದು ಕಲಬುರ್ಗಿಯಲ್ಲಿ ನಡೆದಂತ ಕಲ್ಯಾಣ ಕರ್ನಾಟಕ ಭಾಗದಲ್ಲಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು. ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. https://kannadanewsnow.com/kannada/here-are-the-highlights-of-the-cabinet-meeting-chaired-by-cm-siddaramaiah-in-kalaburagi/ https://kannadanewsnow.com/kannada/good-news-for-job-seekers-247-pdo-posts-extended-age-relaxation-of-3-years/
ಕಲಬುರ್ಗಿ: 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಂಗಳವಾರದಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಪ್ರಮುಖ ಮುಖ್ಯಾಂಶಗಳನ್ನು ಮುಂದಿದೆ ಓದಿ. ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಯನ್ನಾಗಿ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ಬೀದರ್ ಮತ್ತು ಗುಲಬರ್ಗಾದಲ್ಲಿ ಬರುವಂತ ಎಲ್ಲಾ ಜನವಸತಿಗಳಿಗೆ ಕುಡಿಯುವ ನೀರು ಒದಗಿಸಲು 7200 ಕೋಟಿ ರೂಪಾಯಿಗಳನ್ನು ಅನುದಾನ ನೀಡಲಾಗಿದೆ. ನಾರಾಯಣಪುರದಿಂದ ನೀರು ತಂದು, ಕುಡಿಯುವ ನೀರು ಒದಗಿಸಿ ಕೊಡುವಂತ ಯೋಜನೆಯಾಗಿದೆ. ರಾಜ್ಯ ಸರ್ಕಾರ ಅರ್ಧ, ಕೇಂದ್ರ ಸರ್ಕಾರ ಅರ್ಧ ಹಣವನ್ನು ಭರಿಸಲಿದೆ. 7200 ಕೋಟಿಯಲ್ಲಿ ಬೀದರ್, ಗುಲಬರ್ಗ ಜಿಲ್ಲೆಯ ಪ್ರತಿ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವಂತ ಕಾರ್ಯ ಮಾಡಲಾಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಸಚಿವಾಲಯ ಮಾಡಬೇಕು ಎನ್ನುವಂತ ಒತ್ತಾಯವಿತ್ತು. ಇದಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಪ್ರತ್ಯೇಕ ಸಚಿವಾಲಯ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.…