Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಕೆ ಎಸ್ ಆರ್ ಟಿಸಿ ಅಧಿಕಾರಿ, ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ವೈದ್ಯಕೀಯ ಚಿಕಿತ್ಸೆಯ ನಿಬಂಧನೆಗಳು -1970 ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನಿಗಮದ ಅಧಿಕಾರಿಗಳು/ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರದ ಮಾನ್ಯತೆ ಹೊಂದಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿ/ಹೊರ ರೋಗಿಯಾಗಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚವನ್ನು CGHS 2014 ರ…

Read More

ಗದಗ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಒಬ್ಬರು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಈ ಮೂಲಕ ನೇಣುಬಿಗಿದುಕೊಂಡು ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಾವಿಗೆ ಶರಣಾಗಿದ್ದಾರೆ. ಗದಗ ನಗರದ ಪಲ್ಲವಿ ಲಾಡ್ಜ್ ಗೆ ತೆರಳಿದ್ದಂತ ನಿರ್ಮಿತಿ ಕೇಂದ್ರದ ಶಂಕರಗೌಡ ಪಾಟೀಲ್ ಎಂಬುವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಇಂಜಿನಿಯರ್ ಆಗಿದ್ದಾರೆ. ಇಂದು ಬೆಳಿಗ್ಗೆ 7.30ಕ್ಕೆ ಮನೆಯಿಂದ ಹೊರ ಬಂದಿದ್ದಂತ ನಿರ್ಮಿತಿ ಕೇಂದ್ರದ ಇಂಜಿನಿಯರ್ ಶಂಕರಗೌಡ ಪಾಟೀಲ್ ಅವರು ಲಾಡ್ಜ್ ನಲ್ಲಿ ರೂಂ ಪಡೆದು ಉಳಿದುಕೊಂಡಿದ್ದರು. ಲಾಡ್ಜ್ ನ ಸರ್ವಿಸ್ ಬಾಯ್ ಗಳು ರೂಂ ಬಾಗಿಲು ಬಡಿದಾಗ ಪ್ರತ್ಯುತ್ತರ ನೀಡಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಲಾಡ್ಜ್ ನ ರೂಂ ಬಾಗಿಲು ತೆರೆದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/the-bjp-has-spent-rs-5900-crore-had-the-loan-not-been-waived-there-would-have-been-no-need-to-increase-ticket-prices-ramalinga-reddy/ https://kannadanewsnow.com/kannada/breaking-ramanagara-man-killed-thrown-into-well-during-new-year-party/

Read More

ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಎಂದೂ ಜನರಿಂದ ಬಹುಮತ ಪಡೆಯದ ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದು ಹತ್ತಾರು ಹಗರಣ ಮಾಡಿ 40 ಪರ್ಸೆಂಟ್ ಸರ್ಕಾರ ಎಂಬ ಕುಖ್ಯಾತಿ ಪಡೆದು ಜನರಿಂದ ತಿರಸ್ಕೃತ ವಾಗಿದೆ. ಪ್ರತಿ ಪಕ್ಷ ಸ್ಥಾನದ ಜವಾಬ್ದಾರಿ ಯನ್ನೂ ಸರಿಯಾಗಿ ನಿಭಾಯಿಸದೆ ವಿಫಲಗೊಂಡು ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಎಂಬ ಹೊಸ ನಾಟಕ ಆರಂಭಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಹಾಗೂ ಜನಪರ ತೀರ್ಮಾನ ಗಳನ್ನು ಬಿಜೆಪಿ ಗೆ ಸಹಿಸಲು ಆಗುತ್ತಿಲ್ಲ, ಹೀಗಾಗಿ ಅನಗತ್ಯ ವಿಷಯ ಮುಂದಿಡುತ್ತಿದೆ. ಮೊದಲಿಗೆ ಮುಡಾ ಆಯ್ತು, ನಂತರ ವಖ್ಫ್…

Read More

ಶಿವಮೊಗ್ಗ: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ. ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್‌ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟಾö್ಯಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ. https://kannadanewsnow.com/kannada/the-bjp-has-spent-rs-5900-crore-had-the-loan-not-been-waived-there-would-have-been-no-need-to-increase-ticket-prices-ramalinga-reddy/ https://kannadanewsnow.com/kannada/breaking-ramanagara-man-killed-thrown-into-well-during-new-year-party/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ ಎಂದು ಹರಿಹಾಯ್ದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಅವರು ಕಿಡಿಕಾರಿದರು. ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ ಪ್ರಯಾಣ…

Read More

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ? ಎನ್ನುವ ಬಗ್ಗೆ ಶಾಸ್ತ್ರಾನುಸಾರ ಹೇಳೋದೇನು ಅಂತ ಮುಂದೆ ಓದಿ. *ಪ್ರಾಕ್ ಶಿರಾ ಶಯನೇ ವಿಂದ್ಯಾತ್* *ಧನಮಾಯುಶ್ಚ ದಕ್ಷಿಣೇ* | *ಪಶ್ಚಿಮೇ ಪ್ರಬಲಾ ಚಿಂತಾ* *ಹಾನಿಮೃತ್ಯುರಥೋತ್ತರೇ* || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ.…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಾಗೂ ನಮ್ಮ ಕ್ಲೀನಿಕ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ ಹಾಗೂ ಟರ್ಮ್ ಇನ್ಸೂರೆನ್ಸ್ ನೀಡುವಂತೆ ಆರೋಗ್ಯ ಸಚಿವರಿಗೆ ಈ ಹಿಂದೆ KSHCOEA BMS ಸಂಘದಿಂದ ಒತ್ತಾಯಿಸಲಾಗಿತ್ತು ಎಂದಿದೆ. ಆದರೇ ರಾಜ್ಯಮಟ್ಟದಿಂದ ಜಾರಿ ಆಗದ ಕಾರಣ ಉಡುಪಿ ಜಿಲ್ಲಾ KSHCOEA ಸಂಘದಿಂದ ಅಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ನವೀನ್ ಭಟ್ ವೈ IAS ಇವರನ್ನು ಗಿರೀಶ್ ಕಡ್ಡಿಪುಡಿ, ಪ್ರೀತಮ್ ಬಿ.ಎಸ್, ಗುರುರಾಜ್ ಗಂಗಾಣಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಎನ್ ಹೆಚ್ ಎಂ ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಗಳಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ಅದೇ ಆರೋಗ್ಯ ಇಲಾಖೆಯ ಗುತ್ತಿಗೆ ಸಿಬ್ಬಂದಿಗಳಿಗೆ ಟರ್ಮ್ ಇನ್ಸೂರೆನ್ಸ್ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ( KSHCOEA) ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹಾಗೂ ನಮ್ಮ ಕ್ಲೀನಿಕ್ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆರೋಗ್ಯ ವಿಮೆ ಹಾಗೂ ಟರ್ಮ್ ಇನ್ಸೂರೆನ್ಸ್ ನೀಡುವಂತೆ ಆರೋಗ್ಯ ಸಚಿವರಿಗೆ ಈ ಹಿಂದೆ KSHCOEA BMS ಸಂಘದಿಂದ ಒತ್ತಾಯಿಸಲಾಗಿತ್ತು ಎಂದಿದೆ. ಆದರೇ ರಾಜ್ಯಮಟ್ಟದಿಂದ ಜಾರಿ ಆಗದ ಕಾರಣ ಉಡುಪಿ ಜಿಲ್ಲಾ KSHCOEA ಸಂಘದಿಂದ ಅಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಡಾ. ನವೀನ್ ಭಟ್ ವೈ IAS ಇವರನ್ನು ಗಿರೀಶ್ ಕಡ್ಡಿಪುಡಿ, ಪ್ರೀತಮ್ ಬಿ.ಎಸ್, ಗುರುರಾಜ್ ಗಂಗಾಣಿ…

Read More

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸ್ತವ್ಯ ಇರಬೇಕು. ಈ ನಿಯಮ ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶವನ್ನು ಹೊರಡಿಸಿದೆ. ಇಂದು ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ರಾಜ್ಯ ಸರ್ಕಾರವು ತನ್ನ ಆರೋಗ್ಯ ನೀತಿ ಪ್ರಕಾರ ವಿವಿಧ ಹಂತಗಳಲ್ಲಿ ಅಂದರೆ ಉಪ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು/ಜಿಲ್ಲಾ ಆಸ್ಪತ್ರೆಗಳ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಈ ದಿಶೆಯಲ್ಲಿ ಆರೋಗ್ಯ ಸೇವೆಗಳ ಕನಿಷ್ಠ ಅವಶ್ಯಕ ಕಾರ್ಯಕ್ರಮಗಳಾದ ರೋಗನಿರೋಧಕ ಸೇವೆಗಳು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಸಾಂಕ್ರಾಮಿಕ/ಅಸಾಂಕ್ರಾಮಿಕ ರೋಗಗಳ ನಿವಾರಣೆ ಮತ್ತು ನಿರ್ಮೂಲನ ಕಾರ್ಯಕ್ರಮಗಳು, ಪರಿಸರ ಸ್ವಚ್ಛತೆ, ಪೌಷ್ಠಿಕ ಆಹಾರ ಸೇವನೆ, ಆರೋಗ್ಯ ಶಿಕ್ಷಣ ಮತ್ತು ಶಾಲಾ ಆರೋಗ್ಯ ಸೇವೆಗಳು, ಪ್ರಯೋಗಾಲಯ ಸೇವೆಗಳು ಹಾಗೂ ಇನ್ನೂ ಅನೇಕ ರಾಷ್ಟ್ರೀಯ ಕಾರ್ಯಕ್ರಮಗಳನ್ನು…

Read More

ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03ರ ಇಂದಿನಿಂದರಿ ಜನವರಿ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು. ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದುದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು. ಪರೀಕ್ಷಾ ಕೇಂದ್ರದೊಳಗೆ…

Read More