Author: kannadanewsnow09

ಬೆಂಗಳೂರು: ನಗರದ ಸೌತ್ ಎಂಡ್ ಸರ್ಕಲ್ ಬಳಿಯಲ್ಲಿರುವಂತ ಬಿಬಿಎಂಪಿ ಕಚೇರಿಗೆ ಇಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿಯ ವೇಳೆಯಲ್ಲಿ ಬಹುದೊಡ್ಡ ಕರ್ಮಕಾಂಡವೇ ಬಯಲಾಗಿದೆ. ನಿಯಮ ಉಲ್ಲಂಘಿಸಿ ಅಮ್ಮನ ಬದಲು ಮಗ ಕೆಲಸಕ್ಕೆ ಬಂದಿರುವಂತ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿರುವಂತ ಬಿಬಿಎಂಪಿ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿದರು. ಈ ವೇಳೆಯಲ್ಲಿ ಕೇಸ್ ವರ್ಕರ್ ಕವಿತಾ ಬದಲಾಗಿ ಮಗ ನವೀನ್ ಎಂಬಾತ ಕೆಲಸ ಮಾಡುತ್ತಿರೋದು ಗಮನಕ್ಕೆ ಬಂದಿದೆ. ಕಚೇರಿಗೆ ದಿಢೀರ್ ಭೇಟಿಯ ಸಂದರ್ಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ನೀನ್ಯಾರು ಅಂತ ನವೀನ್ ಪ್ರಶ್ನಿಸಿದ್ದಾರೆ. ಈ ವೇಳೆಯಲ್ಲಿ ತಾನು ಕೇಸ್ ವರ್ಕರ್ ಕವಿತಾ ಅವರ ಪುತ್ರ ಎಂಬುದಾಗಿ ನವೀನ್ ತಿಳಿಸಿದ್ದಾನೆ. ನಿಮ್ಮ ಅಮ್ಮ ಎಲ್ಲಿ ಅಂದಾಗ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾರೆ ಅಂತ ಉತ್ತರಿಸಿದ್ದಾನೆ. ಕೂಡಲೇ ಸ್ಥಳದಲ್ಲೇ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಬಿಬಿಎಂಪಿ ಕೇಸ್…

Read More

ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇವರನ್ನು ಬಂಧಿಸಲಾಗಿದೆ. ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ಸಿಐಡಿ ನೋಟಿಸ್ ಹಿನ್ನಲೆಯಲ್ಲಿ ಇಂದು ಬೀದರ್ ನ ರೈಲ್ವೆ ಇಲಾಖೆಯ ಕಚೇರಿಯಲ್ಲಿನ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಆ ಮೂಲಕ ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಜು ಕಪನೂರು, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು. ಈ ಬಳಿಕ ಐವರು ಆರೋಪಿಗಳನ್ನು ಸಿಐಟಿ ಅಧಿಕಾರಿಗಳು ವಿಚಾರಣೆಯ ಬಳಿಕ ಬಂಧಿಸಿರುವುದಾಗಿ ತಿಳಿದು…

Read More

ಬೆಂಗಳೂರು: ನಗರದ ಬಿಬಿಎಂಪಿ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ, ಆಫೀಸಿನಲ್ಲಿ ಇಲ್ಲದಂತ ಸಿಬ್ಬಂದಿಗಳಿಗೆ ಚಳಿ ಬಿಡಿಸಿದಂತ ಘಟನೆ ಇಂದು ನಡೆದಿದೆ. ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಬಿಬಿಎಂಪಿ ಕಚೇರಿಗೆ ದಿಢೀರ್ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಭೇಟಿ ನೀಡಿದರು. ಅವರು ಭೇಟಿ ನೀಡಿದಂತ ಸಂದರ್ಭದಲ್ಲಿ ಕಚೇರಿಯಲ್ಲಿ ಯಾರು ಇರದೇ ಇದ್ದದ್ದು ಕಂಡು ಕೆಂಡಾಮಂಡಲರಾದರು. ಕಚೇರಿಯಲ್ಲೇ ಇದ್ದಂತ ಸಿಬ್ಬಂದಿಯೊಬ್ಬರು ವೈಕುಂಠ ಏಕಾದಶಿ ಪ್ರಯುಕ್ತ ದೇವಸ್ಥಾನಕ್ಕೆ ಅಧಿಕಾರಿ, ಸಿಬ್ಬಂದಿಗಳು ತೆರಳಿರುವಂತ ಮಾಹಿತಿ ನೀಡಿದರು. ಇದರಿಂದ ಕೋಪಗೊಂಡಂತ ಅವರು ಅಧಿಕಾರಿಗಳು ದೇಗುಲಕ್ಕೆ ಹೋದ್ರೆ ಇಲ್ಲಿ ಕೆಲಸ ಮಾಡೋರು ಯಾರು ಅಂತ ಪ್ರಶ್ನಿಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. https://kannadanewsnow.com/kannada/bengaluru-power-outages-in-these-areas-on-january-13/ https://kannadanewsnow.com/kannada/cm-siddaramaiah-agrees-to-hike-honorarium-of-asha-workers-calls-off-strike/

Read More

ಬೆಂಗಳೂರು: ಕಳೆದ ಕೆಲ ದಿನಗಳಿಂದ ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸುತ್ತಿದ್ದಾರೆ. ಇವರ ಬೇಡಿಕೆಯಲ್ಲಿ ಒಂದಾಗಿರುವಂತ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಇಂದು ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಿದ್ಧರಾಮಯ್ಯ ನಡೆಸಿದಂತ ಸಂಧಾನ ಯಶಸ್ವಿಯಾಗಿದೆ. ಅವರ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಪಡೆಯಲು ನಿರ್ಧಾರಿಸಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/bengaluru-power-outages-in-these-areas-on-january-13/

Read More

ಬೆಂಗಳೂರು : 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಚ್.ಎಸ್.ಆರ್. ವಿಭಾಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 13.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. https://kannadanewsnow.com/kannada/former-cm-bs-yediyurappa-announces-state-tour-with-leaders-next-week/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಬೆಂಗಳೂರು: ಮುಂದಿನ ವಾರ ಮುಖಂಡರ ಜೊತೆ ಸೇರಿ ರಾಜ್ಯ ಪ್ರವಾಸ ಮಾಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂದಿನ ವಾರ ಮುಖಂಡರ ಜೊತೆಗೆ ಸೇರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. 2 ಜಿಲ್ಲೆಯಂತೆ ಪ್ರಮುಖ ಕಾರ್ಯಕರ್ತರ ಜೊತೆಗೆ ಪ್ರವಾಸ ಮಾಡುವುದಾಗಿ ತಿಳಿಸಿದರು. ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಮಾಡಲು ನಾನು ನಿರ್ಧರಿಸಿದ್ದೇನೆ. ಮುಂದಿನ ವಾರ ದಿನಾಂಕ ನಿಶ್ಚಯ ಮಾಡಿ ಪ್ರವಾಸ ಮಾಡುತ್ತೇನೆ. ಒಂದು ದಿನಕ್ಕೆ ಎರಡು ಜಿಲ್ಲೆಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸಿದರು. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/good-news-for-bagar-hukum-cultivators-in-the-state-5000-people-get-cultivation-cards/

Read More

ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಐದು ವರ್ಷದ ದೂರದೃಷ್ಟಿ ಯೋಜನೆಯನ್ನು ಗ್ರಾಮ ಯೋಜನಾ ಸಮಿತಿ ಮತ್ತು ಗ್ರಾಮ ಪಂಚಾಯಿತಿ ಯೋಜನಾ ಸಮಿತಿಗಳ ಸಹಕಾರದೊಂದಿಗೆ ಸಿದ್ದಪಡಿಸಿದೆ. ದೂರದೃಷ್ಟಿ ಯೋಜನೆಯಲ್ಲಿ 9 ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು ಅದಕ್ಕೆ ಪೂರಕವಾದ ಎಲ್ಲಾ ಚಟುವಟಿಕೆಗಳನ್ನು ಯೋಜನೆಯಲ್ಲಿ ಗುರುತಿಸಿ 2023-24ನೇ ಸಾಲಿನಿಂದ 2028-29ನೇ ಸಾಲಿನವರೆಗೆ ದೂರದೃಷ್ಟಿ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಈ ದೂರದೃಷ್ಟಿ ಯೋಜನೆ ಆಧರಿಸಿ ಗ್ರಾಮ ಪಂಚಾಯಿತಿಗಳು ಸಮಗ್ರ ಭಾಗವಹಿಸುವಿಕೆಯನ್ನು ಒಳಗೊಂಡ ವಾರ್ಷಿಕ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು, ಅದಕ್ಕೂ ಮುನ್ನ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವ ಸಲುವಾಗಿ ಸರಣಿ ಚಟುವಟಿಕೆಗಳನ್ನು ಅಭಿಯಾನದ…

Read More

ಬೆಂಗಳೂರು: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿಯಲ್ಲೇ 5,000 ರೈತರಿಗೆ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.  ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು. ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ: ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ…

Read More

ಬೆಂಗಳೂರು : ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು. “ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮಂಡಳಿಯು, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ “ಅಂತಿಮ ವೇಳಾಪಟ್ಟಿ” ಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:10-01-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ದಿನಾಂಕ 01-03-2025ರ ಶನಿವಾರದಿಂದ ಆರಂಭಗೊಂಡು, ದಿನಾಂಕ 20-03-2025ರ ಗುರುವಾರದವರೆಗೆ ನಡೆಯಲಿವೆ. ಆ ವಿಷಯವಾರು ಅಂತಿಮ ವೇಳಾಪಟ್ಟಿ ಈ ಕೆಳಗಿನಂತಿದೆ. ಇನ್ನೂ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 21-03-2025ರ ಶುಕ್ರವಾರದಿಂದ ಆರಂಭಗೊಳ್ಳಲಿದೆ. ದಿನಾಂಕ 04-04-2025ರ ಶುಕ್ರವಾರದಂದು ಮುಕ್ತಾಯಗೊಳ್ಳಲಿದೆ. ಆ ಎಸ್…

Read More