Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ ಮಾತನಾಡಿದರು. ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು. ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು. ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್…
ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು, ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು ಹಾಗೂ ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. https://twitter.com/KarnatakaVarthe/status/1882800304246415471 https://kannadanewsnow.com/kannada/it-is-mandatory-for-government-employees-to-follow-these-rules-during-office-hours-state-government/ https://kannadanewsnow.com/kannada/cnn-to-lay-off-200-jobs-cnn-layoffs/
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಳಕಂಡ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ. 1. ನಿಯಮಗಳ ಪುಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು. 2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು. 3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾವು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದಂತ ಡಾ.ಶಿವ ಶಂಕರ್.ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಕೂಡಲೇ ಜಾರಿಗೆ ಬರುವಂತೆ ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್, ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಮಹಾಂತೇಶ್ ಬಿಳಗಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಹಾಂತೇಶ್ ಬಿಳಗಿ ಅವರನ್ನು ಬಿಇಎಸ್ ಸಿ ಎಲ್ ನ ಎಂಡಿ ಹುದ್ದೆಯಿಂದ ವರ್ಗಾವಣೆ ಮಾಡಿ ಮ್ಯಾನೇಜಿಂಗ್ ಡೈರೆಕ್ಟರ್, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್, ಬೆಂಗಳೂರು ಇಲ್ಲಿಗೆ ನೇಮಿಸಲಾಗಿದೆ. ಇಲ್ಲಿದ್ದಂತ ಜಯವಿಭವಸ್ವಾಮಿ ಅವರನ್ನು ವರ್ಗಾವಣೆ ಮಾಡಿದೆ. ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ., ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ…
ಬೆಂಗಳೂರು: ಬಿಜೆಪಿ ಪಕ್ಷದ್ದು, ಮನೆಯೊಂದು ಮೂರು ಬಾಗಿಲಲ್ಲ, ಬದಲಿಗೆ ಆರು ಬಾಗಿಲು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವ್ಯಂಗ್ಯವಾಡಿದ್ದಾರೆ. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾಜಿ ಸಚಿವ ಶ್ರೀರಾಮುಲು ಅವರು ನಮ್ಮ ಪಕ್ಷಕ್ಕೆ ಬಂದರೆ, ಅವರನ್ನು ಪಕ್ಷಕ್ಕೆ ಸ್ವಾಗತಿಸುವುದು ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ, ವೈಯಕ್ತಿಕವಾಗಿ ರಾಮುಲು ಕಾಂಗ್ರೆಸ್ ಗೆ ಸೇರ್ಪಡೆಗೊಂಡರೆ ಸ್ವಾಗತ ಎಂದರು. ಜನಾರ್ದನ್ ರೆಡ್ಡಿ ಅವರು ಸುಳ್ಳಿನ ಮನೆಯನ್ನು ಕಟ್ಟುತ್ತಿದ್ದಾರೆ ಎಂದು ಈ ಹಿಂದೆ ಹಲವು ಬಾರಿ ನಾನು ಹೇಳಿದ್ದೆ. ಇದೀಗ ಶ್ರೀರಾಮುಲು ಅವರು ಅವರ ಸುಳ್ಳಿತನ ಕಂತೆ ಬಗ್ಗೆ ಎಳೆ- ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ್ ರೆಡ್ಡಿ ಅವರು ಹಲವು ವರ್ಷಗಳ ಸ್ನೇಹಿತರು. ಇದೀಗ ಅವರವರ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿನ ವಾಸ್ತವ ಸತ್ಯ ಎಲ್ಲರಿಗೂ ಇದೀಗ ತಿಳಿಯುತ್ತಿದೆ ಎಂದು ತೀಕ್ಷ್ಣ ವಾಗಿ ಹೇಳಿದರು. ಶೈಕ್ಷಣಿಕ, ಆರ್ಥಿಕ ಹಾಗೂ…
ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ. ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಮೇಲಿನ ಮಾಹಿತಿ ನೀಡಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಮಾಧ್ಯಮದ ಮೂಲಕ ಮನವಿ ಮಾಡಿದರು. ಪ್ರತಿಮೆಯ ವೈಶಿಷ್ಟ್ಯ…
ಬೆಂಗಳೂರು ಗ್ರಾಮಾಂತರ: ಜಮೀನು ಖಾತೆ ಸಂಬಂಧ ರೈತನಿಂದ 20,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬೇಗೂರು ಗ್ರಾಮ ಪಂಚಾಯ್ತಿ ಪಿಡಿಓ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯ್ತಿ ಪಿಡಿಓ ಶೋಭಾರಾಣಿ ಎಂಬುವರು ಜಮೀನು ಖಾತೆ ಮಾಡಿಕೊಡಲು ರಮೇಶ್ ಎಂಬುವರಿಂದ 20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 20,000 ಲಂಚದ ಹಣವನ್ನು ಬ್ರೋಕರ್ ರುದ್ರಪ್ಪ ಮೂಲಕ ಪಿಡಿಓ ಶೋಭಾರಾಣಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. ಇದೀಗ ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/central-board-of-secondary-education-cbse-approves-cbse-accreditation-for-mount-carmel-school-in-shivamogga/ https://kannadanewsnow.com/kannada/more-than-500-illegal-immigrants-detained-since-trump-took-office/
ಶಿವಮೊಗ್ಗ: ಜಿಲ್ಲೆಯ ಜ್ಞಾನ ವಿಹಾರ್ ಎಕ್ಟೆನ್ಷನ್ ನಲ್ಲಿರುವಂತ ಮೌಂಟ್ ಕಾರ್ಮೆಲ್ ಶಾಲೆಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಿಂದ ಸಿಬಿಎಸ್ಸಿ ಮಾನ್ಯತೆ ದೊರೆತಿದೆ. ಶಿವಮೊಗ್ಗದ ಜ್ಞಾನ ವೈಭವ ಎಕ್ಸಸ್ಟೆನ್ಷನ್ ನಲ್ಲಿ ಇರುವಂತ ಮೌಂಟ್ ಕಾರ್ಮಲ್ ಶಾಲೆಗೆ ಸಿಬಿಎಸ್ಸಿ ಮಾನ್ಯತೆಗಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಕಾರ್ಮೆಲ್ ಜ್ಞಾನ ಎಜುಕೇಷನಲ್ ಟ್ರಸ್ಟ್ ನಿಂದ ಸಲ್ಲಿಸಲಾಗಿದ್ದಂತ ಸಿಬಿಎಸ್ಸಿ ಮಾನ್ಯತೆಯ ಅರ್ಜಿಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ( Central Board of Secondary Education – CBSE )ಅನುಮತಿಸಿದೆ. https://kannadanewsnow.com/kannada/namma-metro-to-start-from-6-am-on-january-26/ https://kannadanewsnow.com/kannada/cnn-to-lay-off-200-jobs-cnn-layoffs/
ಬೆಂಗಳೂರು: ರಾಜ್ಯದಲ್ಲೇ ಮೊದಲು ಎನ್ನುವಂತೆ ಫೆಬ್ರವರಿ 1 ಮತ್ತು 2ರಂದು 50 ತಂಡಗಳಿಂದ ಅರಣ್ಯ ಪಕ್ಷಿಗಣತಿಯನ್ನು ಅರಣ್ಯ ಇಲಾಖೆಯಿಂದ ನಡೆಸಲಾಗುತ್ತಿದೆ. ಈ ಮೂಲಕ ಅರಣ್ಯದಲ್ಲಿರುವಂತ ಪಕ್ಷಿಗಳ ಗಣತಿಯನ್ನು ನಡೆಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಫೆಬ್ರವರಿ 1 ಮತ್ತು 2 ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. 2 ದಿನ ನಡೆಯುವ ಸಮೀಕ್ಷೆಗಾಗಿ 50 ತಂಡಗಳನ್ನು ರಚಿಸಲಾಗುತ್ತಿದೆ. ಈ ತಂಡಗಳು 2 ದಿನವೂ ಬೆಳಗಿನ ಜಾವ 3 ರಿಂದ 4 ಗಂಟೆಯವರೆಗೆ ಹಾಗೂ ಸಂಜೆ ವೇಳೆ ಕಾಡಿನಲ್ಲಿ ಸಂಚರಿಸಿ ಪಕ್ಷಿಗಳ ಇರುವಿಕೆಯನ್ನು ದಾಖಲಿಸಲಿವೆ ಎಂಬುದಾಗಿ ತಿಳಿಸಿದೆ. https://twitter.com/KarnatakaVarthe/status/1882673539834425850 https://kannadanewsnow.com/kannada/namma-metro-to-start-from-6-am-on-january-26/ https://kannadanewsnow.com/kannada/more-than-500-illegal-immigrants-detained-since-trump-took-office/
ಬೆಂಗಳೂರು: ನಗರದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ನಮ್ಮ ಮೆಟ್ರೋ ( Namma Metro ) ಸಂಚಾರವನ್ನು ಬೆಳಿಗ್ಗೆ 6 ಗಂಟೆಯಿಂದಲೇ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ತಿಳಿಸಿದ್ದು,ಗಣರಾಜ್ಯೋತ್ಸವದ ಅಂಗವಾಗಿ, ಜನವರಿ 26, 2025ರ ಭಾನುವಾರದಂದು, ಮೆಟ್ರೋ ರೈಲು ಸೇವೆಗಳು ಬೆಳಿಗ್ಗೆ 07:00 ಗಂಟೆಯ ಬದಲಿಗೆ 06:00 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನನಿಂದ ಪ್ರಾರಂಭವಾಗಲಿದೆ ಎಂಬುದಾಗಿ ತಿಳಿಸಿದೆ. ಲಾಲ್‌ಬಾಗ್ ಪುಷ್ಪ ಪ್ರದರ್ಶನ ಮತ್ತು ಮಾದಾವರದ ಬಿಐಇಸಿನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಕ್ಕೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಟೋ ನಿಗಮವು ಈ ದಿನ ಹಸಿರು ಮತ್ತು ನೇರಳೆ ಮಾರ್ಗಗಳಲ್ಲಿ 20 ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಾಗುತ್ತದೆ ಎಂದಿದೆ. ಸಾರ್ವಜನಿಕರು ಲಾಲ್‌ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್‌ಗಳು, ಸ್ಮಾರ್ಟ್ ಕಾರ್ಡ್ (ಸಿಎಸ್‌ಸಿ), ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (ಎನ್‌ಸಿಎಂಸಿ) ಮತ್ತು ಕ್ಯೂಆರ್ ಟಿಕೆಟ್‌ಗಳನ್ನು ಬಳಸಿ ಹಿಂತಿರುಗಬಹುದು. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ, ನಿಗಮವು ಟೋಕನ್‌ಗಳ ಬದಲಿಗೆ…