Author: kannadanewsnow09

ಮೈಸೂರು: ಮೂಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇಂದು ಮೈಸೂರಿನಲ್ಲಿ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಹಾಕಿದರು. ನನ್ನಂತಹವನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮೂಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ?…

Read More

ಮೈಸೂರು: ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರ ತೆಗೆದಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದೀರಿ. ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದರೂ ಈ ಕಾಂಗ್ರೆಸ್ ಅಳಿಸಲು ಆಗಲಿಲ್ಲ. ಬಡವರ ಶಕ್ತಿಯಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವನ್ನು ನೀನು ಎರಡು ಜನ್ಮ ಎತ್ತಿ ಬಂದರೂ ಅಳಿಸಲು ಸಾಧ್ಯವಿಲ್ಲ. ನೀನು ಏನೇ ಕುತಂತ್ರ ಮಾಡಿದರೂ ಕಾಂಗ್ರೆಸ್ ಅಳಿಸಲು ಸಾಧ್ಯವಿಲ್ಲ ಎಂಬುದಾಗಿ ಡಿಸಿಎಂ ಡಿಕೆಶಿ ಗುಡುಗಿದ್ದಾರೆ. ವಿಜಯೇಂದ್ರ, ಅಶೋಕ, ಕುಮಾರಸ್ವಾಮಿ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯನ ಜತೆ ಇದೆ. ಈ ಬಂಡೆ ಜತೆ 135 ಶಾಸಕರೂ ಇದ್ದಾರೆ. ಕೋಟ್ಯಂತರ ಜನ ಸಿದ್ದರಾಮಯ್ಯನವರ ಜತೆಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ. ಹೀಗಾಗಿ ನಿಮ್ಮಿಂದ ಏನೂ…

Read More

ಮೈಸೂರು: ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ನನಗೆ ಅವರ ವಿಚಾರ ಗೊತ್ತಿರಲಿಲ್ಲ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನು ಹೊರಗೆ ತರುತ್ತೇನೆ. ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತದವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ ಕುಮಾರಸ್ವಾಮಿ ಯೂಟರ್ನ್ ಮಾಡಿಕೊಂಡು ಈಗ ಬಿಜೆಪಿ ಮೊರೆ ಹೋಗಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿಯನ್ನು ನಡೆಸಿದ್ದಾರೆ. ಮೈಸೂರಿನ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ವಿಜಯೇಂದ್ರ ನಿಮ್ಮ ತಂದೆ ಎರಡು ಸಾರಿ ರಾಜೀನಾಮೆ ಕೊಟ್ಟಿದ್ದೇಕೆ? ಎಂದು ಲೆಕ್ಕ ಕೊಡು. ನಾಳೆ ನೀನು ಮೈಸೂರಿಗೆ ಬಂದು ಸಭೆ ಮಾಡುವಾಗ ಲಕ್ಷ್ಮಿ ವಿಲಾಸ್ ಬ್ಯಾಂಕ್ ನಿಂದ ವಿದೇಶಕ್ಕೆ ಆರ್ಟಿಜಿಎಸ್ ಮಾಡಿದ್ದೀಯಲ್ಲಾ, ಅದು ಯಾಕೆ? ನಿಮ್ಮ ತಂದೆ ಕಣ್ಣೀರು ಹಾಕಿದ್ದು ಏಕೆ? ಎಂದು ವಿವರಿಸು. ಇಲ್ಲಿ ಯಾರು ರಾಜೀನಾಮೆ ನೀಡಬೇಕು ಎಂದು ಕಾಲ ತೀರ್ಮಾನ ಮಾಡುತ್ತದೆ. ನಾನು ಮಂಡ್ಯದಲ್ಲಿ ನಮ್ಮ ನಾಯಕರ ಮಾತನ್ನು ನಂಬಬೇಡಿ, ಕೇವಲ ಯಡಿಯೂರಪ್ಪ, ಕುಮಾರಸ್ವಾಮಿ, ವಿಜಯೇಂದ್ರ, ಅಸ್ವತ್ಥ್ ನಾರಾಯಣ, ಯೋಗೇಶ್ವರ್,…

Read More

ಬೆಂಗಳೂರು: ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಆಗಸ್ಟ್.10ರ ನಾಳೆಯಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಸ್ಕಾಂ, ದಿನಾಂಕ 10.08.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ 66/11ಕೆ.ವಿ ‘ಸಿ’ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೇಳಿದೆ. ಈ ಪ್ರದೇಶಗಳಲ್ಲಿ ಪವರ್ ಕಟ್ “ಬ್ರಾಡ್ ವೇ ರಸ್ತೆ, ಕಾಕರ‍್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ಲರ್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶ.  ಕನ್ನಿಂಗ್ಹ್ಯಾಂಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್‌ಬಂಡ್…

Read More

ಧಾರವಾಡ: ಹೊರಗುತ್ತಿಗೆ ನೌಕರರಿಗೂ ಮಾತೃತ್ವ ರಜೆ ಅನ್ವಯವಾಗಲಿದೆ. ಮಾತೃತ್ವ ರಜೆಯ ಬಳಿಕವೂ ಉದ್ಯೋಗ ಮುಂದುವರೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಧಾರವಾಡದ ಹೈಕೋರ್ಟ್ ನ್ಯಾಪೀಠದಲ್ಲಿ ವಿಜಯಪುರ ಜಿಲ್ಲೆಯ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದ ಚಾಂದ್ವಿ ಬಳಿಗಾರ್ ಎಂಬುವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಈ ತೀರ್ಪು ನೀಡಿದ್ದಾರೆ. ಚಾಂದ್ವಿ ಬಳಿಗಾರ್ ಅವರು 2014ರಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರ ಮೇಲೆ ಅಕೌಂಟೆಂಟ್ ಆಗಿ ಕೆಲಸಕ್ಕೆ ಸೇರಿದ್ದರು. 2024ರವರೆಗೂ ಕೆಲಸ ಮಾಡಿದ್ದಂತ ಅವರು, ನಂತ್ರ ಮಾತೃತ್ವರ ರಜೆಗಾಗಿ ಅರ್ಜಿಯನ್ನು ಸಲ್ಲಿಸಿ, ತೆರಳಿದ್ದರು. ಆದರೇ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದಿಂದ ಅಕೌಟೆಂಟ್ ಹುದ್ದೆಗೆ ಚಾಂದ್ವಿ ಬಳಿಗಾರ ಮಾತೃತ್ವ ರಜೆಯಲ್ಲಿ ತೆರಳಿದ ನಂತ್ರ ಬೇರೆಯವರನ್ನು ಇಲಾಖೆ ನೇಮಕ ಮಾಡಿತ್ತು. ರಜೆ ಮುಗಿಸಿಕೊಂಡು ಬಂದಂತ ಚಾಂದ್ವಿ ಬಳಿಗಾರ ಅವರಿಗೆ ಬೇರೆಯವರನ್ನು ನೇಮಕ ಮಾಡಲಾಗಿದೆ. ನಿಮ್ಮನ್ನು ತೆಗೆದು ಹಾಕಲಾಗಿದೆ ಎಂಬುದಾಗಿ ಇಲಾಖೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಅವರು…

Read More

ಮೈಸೂರು: ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ  ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು. ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ.…

Read More

ಮೈಸೂರು: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು. ಒಟ್ಟಾರೆಯಾಗಿ ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲ್ಲ. ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. https://kannadanewsnow.com/kannada/shocking-news-this-kind-of-meat-increases-your-risk-of-dementia-explosive-information-in-study/ https://kannadanewsnow.com/kannada/bengaluru-power-outages-in-these-areas-on-august-11/

Read More

ಬೆಂಗಳೂರು: ಜಿಲ್ಲೆಯಲ್ಲಿ ವಾರ್ಷಿಕ ನಿರ್ವಹಣಾ ಕೆಲಸವನ್ನು ಬೆಸ್ಕಾಂ (BESCOM) ಅಧಿಕಾರಿಗಳು ದಿನಾಂಕ 11-08-2024ರಂದು ಕೈಗೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ.11ರಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ, 66/11 kV ಅಬ್ಬಿಗೆರೆ MUSS” 2 nd ರನ್ 11ಕೆವಿ 1000sqmm ಕೇಬಲ್ TR-1 ರಿಂದ ಬ್ಯಾಂಕ್-1 ಮತ್ತು TR-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11kv ಬ್ರೇಕರ್, ಬಸ್ GOS ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ದಿನಾಂಕ 11-08-2024ರಂದು ಬೆಳಗ್ಗೆ 10:00ಗಂಟೆಯಿಂದ ಸಂಜೆ 4:00ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆಗಸ್ಟ್.11ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ಸಿಂಗಾಪುರ ಗಾರ್ಡನ್, ಅಬ್ಬಿಗೆರೆ ಗ್ರಾಮ, ನಿಸರ್ಗ…

Read More

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿನಾ ಕಾರಣ ನೋಟಿಸ್ ನೀಡುವ ಮೂಲಕ ಪಕ್ಷಪಾತದಿಂದ ವರ್ತಿಸುತ್ತಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಈ ಕೂಡಲೇ ರಾಷ್ಟ್ರಪತಿಗಳು ವಾಪಸ್ ಕರೆಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿಂದು ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಮತ್ತು ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರ ಕೆಡವಲು ಪ್ರಯತ್ನ ಮಾಡುತ್ತಿದ್ದು, ಅವರು ಯಶಸ್ವಿಯಾಗುವುದಿಲ್ಲ ಎಂದರು. ಅಂತಹ ದುಸ್ಸಾಹಸಕ್ಕೆ ಬಿಜೆಪಿ ಅಥವಾ ಕೇಂದ್ರ ಸರ್ಕಾರ ಕೈಹಾಕಿದರೆ ಮುಂದಿನ ಪರಿಣಾಮಗಳಿಗೆ ಅವರೇ ಹೊಣೆ ಎಂದರು. ಕೇಂದ್ರದ ಎನ್.ಡಿ.ಎ. ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ಮತ್ತು 7 ಕೋಟಿ ಜನರ ಮೇಲೆ ಪ್ರಹಾರ ಮಾಡುತ್ತಿದೆ, ಮಲತಾಯಿ ಧೋರಣೆ ಅನುಸರಿಸುತ್ತಿದೆ ಮತ್ತು ಪಕ್ಷಪಾತ ಮಾಡುತ್ತಿದೆ ಎಂದು ಆರೋಪಿಸಿದರು. ಬರ ಪರಿಹಾರ, ನೆರೆ ಪರಿಹಾರ ಮತ್ತು ರಾಜ್ಯಕ್ಕೆ ಪಂಚವಾರ್ಷಿಕ ಯೋಜನೆಯಲ್ಲಿ ಬರಬೇಕಾದ ಅನುದಾನದಲ್ಲೂ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಕೀ ಉತ್ತರವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ-3 2024ರ ವಿಷಯವಾರು ಕೀ ಉತ್ತರಗಳನ್ನು ಮಂಡಳಿಯ ಜಾಲತಾಣ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ದಿನಾಂಕ 10-08-2024ರ ನಾಳೆಯವರೆಗೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಸಂಬಂಧ ಪಟ್ಟಂತ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಂಜೆ 5.30ರೊಳಗಾಗಿ ಆಕ್ಷೇಪಣೆಗಳನ್ನು ಮಂಡಳಿಯ ಚಾಲತಾಣದ ಮೂಲಕ ಸಲ್ಲಿಸುವಂತೆ ಸೂಚಿಸಿದೆ. ಇನ್ನೂ ಮಂಡಳಿಯ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಆಗಸ್ಟ್.2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಕೀ ಉತ್ತರಗಳನ್ನು ಪರಿಶೀಲಿಸಬಹುದು. ಆಕ್ಷೇಪಣೆಯನ್ನು ಸಲ್ಲಿಸಬಹುದು ಅಂತ ಹೇಳಿದೆ. https://kannadanewsnow.com/kannada/shocking-news-this-kind-of-meat-increases-your-risk-of-dementia-explosive-information-in-study/ https://kannadanewsnow.com/kannada/earthquake-threat-with-mysterious-sound-in-landslide-hit-wayanad/

Read More