Author: kannadanewsnow09

ಬೆಂಗಳೂರು : “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ರಾಜ್ಯದಲ್ಲಿ 78 ಲಕ್ಷ ಪಕ್ಷದ ಸದಸ್ಯತ್ವ ನೀಡಿ ಪ್ರತಿಯೊಬ್ಬರಿಂದ 10 ರೂ. ಸಂಗ್ರಹಿಸಿ ಎಐಸಿಸಿಗೆ ನೀಡಿದೆವು. ಇನ್ನು ಯುವ ಕಾಂಗ್ರೆಸ್ ಸದಸ್ಯತ್ವದಿಂದ 90 ಕೋಟಿ ಸಂಗ್ರಹವಾಗಿತ್ತು. ಇನ್ನು ವಿಧಾನಸಭೆ ಚುನಾವಣೆ ಸಮಯದಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ತಲಾ 2 ಲಕ್ಷ ಸಂಗ್ರಹಿಸಿ ಸುಮಾರು 20 ಕೋಟಿ ಸಂಗ್ರಹಿಸಲಾಯಿತು. ಈ ಬಾರಿ ಲೋಕಸಭೆ ಚುನಾವಣೆ ಸಮಯದಲ್ಲೂ ದೇಣಿಗೆ ಸಂಗ್ರಹಿಸಲು ಮುಂದಾಗಿದ್ದೆ. ಎಐಸಿಸಿ ನಾಯಕರು ಬೇಡ ಎಂದು ತಿಳಿಸಿದರು.…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇದರೊಟ್ಟಿಗೆ ಮಾದರಿ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಅನೇಕ ಕಡೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗುತ್ತಿವೆ. ಹಾಗಾದ್ರೇ ಲೋಕಸಭಾ ಚುನಾವಣೆ ಹೊತ್ತಲ್ಲೇ ನಿಮಗೊಂದು ಉಪಯುಕ್ತ ಮಾಹಿತಿ ಎನ್ನುವಂತೆ, ನೀತಿ ಸಂಹಿತೆ ಕಾಯ್ದೆ ಮತ್ತು ಕಲಂಗಳು ಏನೆಲ್ಲಾ ಅಂತ ಮುಂದೆ ಓದಿ. ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆದು, ಜೂನ್.4ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಅಕ್ರಮ ತಡೆಗೆ ಚುನಾವಣಾ ಆಯೋಗವು ಮಹತ್ವದ ಕ್ರಮ ಕೈಗೊಂಡಿದೆ. ಹೀಗಿದ್ದೂ ಇದನ್ನು ಮೀರಿ ಅಕ್ರಮ ಎಸಗೋದಕ್ಕೆ ಪ್ರಯತ್ನ ಪಟ್ಟವರ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ಮಾಹಿತಿಯಂತೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ವಿವಿಧ ಕಾಯ್ದೆ ಮತ್ತು ಕಲಂಗಳಿದ್ದಾವೆ. 125 ಆರ್.ಡಿ ಆಕ್ಟ್ ಮತ್ತು 153(ಎ), 295, 505 ಐಪಿಸಿ ಕಾಯ್ದೆಯಂತೆ ಧರ್ಮ, ಜಾತಿ, ಭಾಷೆ ಆಧಾರದ ಮೇಲೆ ಗುಂಪು ಗುಂಪುಗಳ ಮದ್ಯೆ ದ್ವೇಷ ಭಾವನೆ ಉಂಟು ಮಾಡೋದಾಗಿದೆ. 125…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ಷೇಪಾರ್ಹ ವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದಂತ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ನಿಯೋಗದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರರಾದ ಹೆಚ್. ವೆಂಕಟೇಶ ದೊಡ್ಡೇರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ವಸಂತ್ ಕುಮಾರ್ ಅವರು ಇಂದು ಸಂಜೆ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ನೀಡಿದ್ದಾರೆ. ಬಿಜೆಪಿ ಸಲ್ಲಿಸಿರುವಂತ ದೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಆಕ್ಷೇಪಾರ್ಹ ಟ್ವಿಟ್ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. https://kannadanewsnow.com/kannada/breaking-court-dismisses-plea-challenging-income-tax-re-assessment/ https://kannadanewsnow.com/kannada/state-government-orders-formation-of-investigation-team-to-probe-foeticide-case/

Read More

ಬೆಂಗಳೂರು: ಹೊಸಕೋಟೆ ಹಾಗೂ ನೆಲಮಂಗಲ ಪಟ್ಟಣಗಳಲ್ಲಿ ನಡೆದಿದ್ದಂತ ಭ್ರೂಣ ಹತ್ಯೆ ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಹೊಸಕೋಟೆ ನಗರದ (1) ಎಸ್.ಪಿ.ಜಿ. ಆಸ್ಪತ್ರೆ, (2) ಓವಮ್ ಆಸ್ಪತ್ರೆ, ಹೊಸಕೋಟೆ (3) ನೆಲಮಂಗಲದ ಅಸರಾ ಆಸ್ಪತ್ರೆ, ಈ ಖಾಸಗಿ ಆಸ್ಪತ್ರೆಗಳು ಪಿಸಿ & ಪಿಎನ್‌ಡಿಟಿ ಮತ್ತು ಎಂ.ಟಿ.ಪಿ. ಕಾಯ್ದೆ ಉಲ್ಲಂಘಿಸಿ, ಪರವಾನಗಿ ಪಡೆಯದೇ ಗರ್ಭಪಾತಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತಾದ ತಪಾಸಣೆ ಮಾಡಲು ಜಿಲ್ಲಾ ಸಕ್ಷಮ ಪ್ರಾಧಿಕಾರ ಪ್ರತ್ಯಾಯೋಜಿತ ಅಧಿಕಾರ ಪಡೆದು ಹಾಗೂ ಈ ಖಾಸಗಿ ಆಸ್ಪತ್ರೆಗಳ ಅನಧಿಕೃತ ಕಾರ್ಯಗಳ ಬಗ್ಗೆ ಮಾಹಿತಿ ಒದಗಿಸಿರುತ್ತೇನೆಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯು ವರದಿ ಸಲ್ಲಿಸುತ್ತಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಂದ ತಮ್ಮ ಕರ್ತವ್ಯಕ್ಕೆ ಅಡಚಣೆ ಯುಂಟಾಗುತ್ತಿರುವುದರಿಂದ ತಮಗೆ ರಜೆ ಮೇಲೆ ತೆರಳಲು ಅನುಮತಿ ನೀಡುವಂತೆ ಹಾಗೂ ಜಿಲ್ಲಾ ಆಕುಕ ಅಧಿಕಾರಿಗಳ ಒತ್ತಡ ತಾಳದೆ ತಾವು…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನುಗೌಡ ಅವರಿಗೆ ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ 4 ದಿನ ಪೊಲೀಸ್ ಕಷ್ಟಡಿಗೆ ಕೋರ್ಟ್ ನೀಡಿ ಆದೇಶಿಸಿದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆ್ಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಲಾಗಿತ್ತು. ಈ ಬಳಿಕ ಅವರನ್ನು ನ್ಯಾಯಾಲಯದ…

Read More

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿನ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಹಾಗೂ ರಾಮೇಶ್ವರಂ ಕೆಫೆ ಸ್ಪೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿದಂತ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರು ಹನುಮಾನ್ ಜಾಲೀಸ್ ಹಾಕಿದ್ದಕ್ಕೆ ಅವರ ಮೇಲೆ ನಡೆದಿದ್ದ ಹಲ್ಲೆಸಲಾಗಿತ್ತು. ಈ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಸೇರಿ 41 ಮಂದಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ಇಂದು ಮಧ್ಯಂತರ ತಡೆಯನ್ನು ನೀಡಿ ಆದೇಶಿಸಿದೆ. ಇನ್ನೂ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಬಾಂಬರ್ ತಮಿಳುನಾಡಿನ ವ್ಯಕ್ತಿಯ ಬಗ್ಗೆ…

Read More

ಬೆಂಗಳೂರು: ನಗರದಲ್ಲಿ ಬಿಡದಿ ಹಾಫ್ ಮ್ಯಾರಥಾನ್, ಐಪಿಎಲ್ ಪಂದ್ಯಾವಳಿಯ ಕಾರಣದಿಂದಾಗಿ ಮೆಟ್ರೋ ಸಂಚಾರದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ದಿನಾಂಕ 24ನೇ ಮಾರ್ಚ್ 2024 (ಭಾನುವಾರ) ದಂದು ನಿಗದಿಯಾಗಿರುವ ಬಿಡದಿ ಹಾಫ್ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲಕ್ಕಾಗಿ, BMRCL ತನ್ನ ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ಇಂಟರ್‌ಚಿಂಜ್ ಸ್ಟೇಷನ್ ನಾಡಪ್ರಭು ಕೆಂಪೇಗೌಡ ಮೆಟ್ರೋ ಸ್ಟೇಷನ್-ಮೆಜೆಸ್ಟಿಕ್‌ನಿಂದ ಬೆಳಿಗ್ಗೆ 07:00 ಗಂಟೆ ಬದಲಾಗಿ 04:30 ಗಂಟೆಯಿಂದ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭಿಸುತ್ತದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, BMRCL ದಿನಾಂಕ 25,29 ಮಾರ್ಚ್ ಮತ್ತು 02 ಏಪ್ರಿಲ್ 2024 ರಂದು ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30 ಕ್ಕೆ ವಿಸ್ತರಿಸಲಾಗಿದೆ ಎಂದು ಹೇಳಿದೆ. ಈ ಪಂದ್ಯದ ದಿನಗಳಲ್ಲಿ ಎಲ್ಲಾ…

Read More

ಕಲಬುರ್ಗಿ: ಜಿಲ್ಲೆಯಲ್ಲಿ ಬಡ್ಡಿ ಹಣ ಕೊಡದ ಕಾರಣ, ವ್ಯಕ್ತಿಯೊಬ್ಬರ ಮೇಲೆ ಆಸಿಡ್ ಎರಚಿ ಅಮಾನವೀಯ ಕೃತ್ಯ ವೆಸಗಿರೋ ಘಟನೆ ನಡೆದಿದೆ. ಕಲಬುರ್ಗಿಯ ಖರ್ಗೆ ಪೆಟ್ರೋಲ್ ಬಂಕ್ ಬಳಿಯಲ್ಲಿ ಮೀನು ವ್ಯಾಪಾರಿಯಾಗಿದ್ದಂತ ಜುಬೇರ್ ಅಹ್ಮದ್ ಎಂಬುವರು ಅರ್ಷದ್, ಪರ್ವೇಜ್ ಎಂಬುವರಿದೆ 35 ಲಕ್ ಸಾಲವನ್ನು ಪಡೆದಿದ್ದರು. ಈ ಹಣಕ್ಕೆ ಬಡ್ಡಿ, ಚಕ್ರಹಡ್ಡಿ ಅಂತ 90 ಲಕ್ಷ ಕೊಡುವಂತೆ ಅರ್ಷದ್ ಗ್ಯಾಂಗ್ ಜುಬೇರ್ ಅಹ್ಮದ್ ಪೀಡಿಸುತ್ತಿತ್ತು. ಇತ್ತೀಚೆಗೆ ಜುಬೇರ್ ನನ್ನು ಕರೆಸಿಕೊಂಡಂತ ಇಮ್ರಾನ್ ಖಾನ್ ಎಂಬ ವ್ಯಕ್ತಿ, ಆತನನ್ನು ಕೂಡಿ ಹಾಕಿ ಹಲ್ಲೆ ಕೂಡ ನಡೆಸಲಾಗಿದೆ. ಅಲ್ಲದೇ ಕಲಬುರ್ಗಿಯ ಖರ್ಗೆ ಪೆಟ್ರೋಲ್ ಬಂಕ್ ಬಳಿಯಲ್ಲಿ ಆಸಿಡ್ ದಾಳಿ ಕೂಡ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಕಲಬುರ್ಗಿಯ ಎಂ.ಬಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/bjp-offered-rs-50-crore-to-one-mla-siddaramaiah/ https://kannadanewsnow.com/kannada/nia-unearths-vital-clues-about-accused-in-rameswaram-cafe-blast-in-bengaluru/

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲೇ ಆಮಿಷದ ಆಫರ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕನಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದರು. ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು. https://kannadanewsnow.com/kannada/nia-unearths-vital-clues-about-accused-in-rameswaram-cafe-blast-in-bengaluru/ https://kannadanewsnow.com/kannada/breaking-delhi-cm-arvind-kejriwal-unwell-bp-low-officials-brought-out-of-court/

Read More

ಬೆಂಗಳೂರು: ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದಂತ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ಈ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು, ಹೈಕೋರ್ಟ್ ಗೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ಇಡೀ ಊರಲ್ಲಿ ಪ್ರತಿಭಟನೆ ನಡೆಸಿದ್ರೇ ಜನ ಓಡಾಡಬೇಡವೇ ಎಂದು ಪ್ರಶ್ನಿಸಿದರು. ಆಗ ನ್ಯಾಯಪೀಠಕ್ಕೆ ಸಂಸದ ತೇಜಸ್ವಿ ಸೂರ್ಯ ಪರ ವಕೀಲ ಪ್ರಸನ್ನ ಕುಮಾರ್ ಅವರು ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾನೂನು ಬಾಹಿರ ಕೃತ್ಯವನ್ನು ನಡೆಸಿಲ್ಲ ಎಂಬುದಾಗಿ ವಾದಿಸಿದರು. ಸಿಎಂ ಸಿದ್ಧರಾಮಯ್ಯ ವಿರುದ್ಧದ ಇಂತದ್ದೇ ಕೇಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೀಗಾಗಿ ಆ ತೀರ್ಪು ಈ ಪ್ರಕರಣಕ್ಕೂ…

Read More