Author: kannadanewsnow09

ಬೆಂಗಳೂರು: ಪೊಲೀಸ್ ಠಾಣೆಯಲ್ಲೇ ಪಿಸ್ತೂಲ್ ಪರಿಶೀಲನೆ ವೇಳೆಯಲ್ಲಿ ಮಿಸ್ ಫೈರಿಂಗ್ ಉಂಟಾಗಿ, ಠಾಣೆಯ ರೈಟರ್ ಕಾಲಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಇಂದು ಎಸ್ ಬಿ ಕಾನ್ಸ್ ಟೇಬಲ್ ವೆಂಕಣ್ಣ ಎಂಬುವರು ಪಿಸ್ತೂಲ್ ಪರಿಶೀಲನೆ ವೇಳೆಯಲ್ಲಿ ಟ್ರಿಗರ್ ಪ್ರೆಸ್ ಮಾಡಿದ್ದರಿಂದ ಮಿಸ್ ಫೈರಿಂಗ್ ಉಂಟಾಗಿದೆ. ಪಿಸ್ತೂಲ್ ನಿಂದ ಹಾರಿದಂತ ಗುಂಡು, ಬೇಗೂರು ಪೊಲೀಸ್ ಠಾಣೆಯ ರೈಟರ್ ಅಂಬುದಾಸ್ ಎಂಬುವರ ಎಡಗಾಲಿಗೆ ಬಿದ್ದಿದ್ದು, ಅವರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಮಿಸ್ ಫೈರಿಂಗ್ ನಿಂದ ಗಾಯಗೊಂಡಿರುವಂತ ರೈಟರ್ ಅಂಬುದಾಸ್ ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bjp-has-strangled-democracy-siddaramaiah/ https://kannadanewsnow.com/kannada/madhya-pradesh-archaeological-survey-of-india-conducts-survey-at-disputed-bhojshala-kamal-maula-mosque-complex/

Read More

ಬೆಂಗಳೂರು: ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.‌ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ.‌ ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ ಎಂದರು. ಮನುಸ್ಮೃತಿಯ ಮಾರಕ‌ ಮನಸ್ಥಿತಿ ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ.…

Read More

ತುಮಕೂರು: ಜಿಲ್ಲೆಯಲ್ಲಿ ಕುಚ್ಚಂಗಿ ಕೆರೆಯ ಬಳಿಯಲ್ಲಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ತುಮಕೂರು ತಾಲೂಕಿನ ಕುಚ್ಚಂಗಿಯ ಕೆರೆಯ ಬಳಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ನಿನ್ನೆ ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರ ಬೇಕೋ ಅಥವಾ ಬೇರೆಯವರು ಹತ್ಯೆ ಮಾಡಿರಬೇಕೋ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋರಾ ಠಾಣೆಯ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/madhya-pradesh-archaeological-survey-of-india-conducts-survey-at-disputed-bhojshala-kamal-maula-mosque-complex/ https://kannadanewsnow.com/kannada/nia-unearths-vital-clues-about-accused-in-rameswaram-cafe-blast-in-bengaluru/

Read More

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು,  2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ. ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ – 1 ರ ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ F 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ . ಈ ಬಗ್ಗೆ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯಸ್ಥರಿಗೆ…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ. ತನ್ನ ತನಿಖೆಯನ್ನು ಚುರುಕುಗೊಳಿಸಿರುವಂತ ಎನ್ಐಎ ಅಧಿಕಾರಿಗಳಿಗೆ ಬಾಂಬರ್ ಬಗ್ಗೆ ಮಹತ್ವದ ಸುಳಿವು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್.1ರಂದು ಬಾಂಬ್ ಸ್ಪೋಟಗೊಂಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಿತ್ತು. ಶಂಕಿತ ಬಾಂಬರ್ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಹಲವು ಹಂತಗಳಲ್ಲಿ ಬಂಧನಕ್ಕೆ ಬಲೆ ಬೀಸಲಾಗಿದೆ. ಇದೀಗ ಶಂಕಿತದ್ದ ಬೇಸ್ ಬಾಲ್ ಕ್ಯಾಪ್ ನ ಜಾಡು ಹಿಡಿದು ತನಿಖೆ ನಡೆಸುತ್ತಿರುವಂತ ಎನ್ಐಎ ಅಧಿಕಾರಿಗಳು, ಶಂಕಿತನ ಪ್ರಮುಖ ಸುಳಿಪು ಪತ್ತೆ ಮಾಡಿದ್ದಾರೆ. ಕ್ಯಾಪ್ ಖರೀದಿಸಿದಂತ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಚೈನ್ನೈ ಸೆಂಟ್ರಲ್ ನಲ್ಲಿ ಜನವರಿ ತಿಂಗಳ ಅಂತ್ಯದಲ್ಲಿ ಬ್ರ್ಯಾಂಡೆಡ್ ಚಿಲ್ಲರೆ ಅಂಗಡಿಯಿಂದ ಇಬ್ಬರು ಈ ಕ್ಯಾಪ್ ಗಳನ್ನು ಖರಿದಿಸಿರೋ ಸಿಸಿಟಿವಿ ದೃಶ್ಯಾವಳಿಯನ್ನು ಸಂಗ್ರಹಿಸಿದ್ದಾರೆ. ಆ ದೃಶ್ಯಾವಳಿ ಆಧರಿಸಿ ತನಿಖೆಗೆ ಈಗ ಇಳಿಸಿದ್ದಾರೆ. https://kannadanewsnow.com/kannada/no-relief-for-brs-leader-k-kavita-as-sc-refuses-to-grant-bail-in-delhi-excise-policy-case/ https://kannadanewsnow.com/kannada/madhya-pradesh-archaeological-survey-of-india-conducts-survey-at-disputed-bhojshala-kamal-maula-mosque-complex/

Read More

ನವದಹಲಿ: ಬಿಜೆಪಿಯಿಂದ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಂದು ಬಿಡುಗಡೆ ಮಾಡಿರುವಂತ ಬಿಜೆಪಿ 4ನೇ ಪಟ್ಟಿಯಲ್ಲಿ ನಟ ಶರತ್ ಕುಮಾರ್ ಪತ್ನಿ ರಾಧಿಕಾಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಬಿಜೆಪಿಯಿಂದ ಲೋಕಸಭಾ ಚುನಾವಣೆಗಾಗಿ ತಮಿಳುನಾಡು, ಪುದುಚೇರಿಯ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಾಗಿದೆ. ತಮಿಳು ನಟ ಶರತ್ ಕುಮಾರ್ ಅವರ ಪತ್ನಿ ರಾಧಿಕಾಗೆ ವಿಧುರಾ ನಗರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಇಂದು ಬಿಡುಗಡೆ ಮಾಡಿರುವಂತ 4ನೇ ಪಟ್ಟಿಯಲ್ಲಿ ತಮಿಳುನಾಡು, ಪುದುಚೇರಿ ಲೋಕಸಭೆಯ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹೀಗಿದೆ ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ

Read More

ಬೆಂಗಳೂರು: ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ನಟ ಶಿವರಾಜ್ ಕುಮಾರ್ ಅಭಿನಯದ ಚಿತ್ರಗಳು, ಜಾಹೀರಾತು ತಡೆಯುವಂತೆ ದೂರಿನಲ್ಲಿ ಮನವಿ ಮಾಡಿದೆ. ನಟ ಶಿವರಾಜ್ ಕುಮಾರ್ ಅವರು ಪತ್ನಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಕಣದಲ್ಲಿ ಇದ್ದಾರೆ. ಅವರ ಪರವಾಗಿ ನಟ ಶಿವರಾಜ್ ಕುಮಾರ್ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂಬುದಾಗಿ ತಿಳಿಸಲಾಗಿದೆ. ಇನ್ನೂ ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಜೊತೆಗೆ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿರೋ ಕಾರಣ, ಅವರ ಅಭಿನಯದ ಚಲನಚಿತ್ರ, ಜಾಹೀರಾತುಗಳಿಗೆ ತಡೆ ನೀಡುವಂತೆ ಚುನಾವಣಾ ಆಯೋಗಕ್ಕೆ ಕೋರಲಾಗಿದೆ. ಇದೀಗ ಚುನಾವಣಾ ಆಯೋಗವು ನಟ ಶಿವರಾಜ್ ಕುಮಾರ್ ನಟನೆಯ ಚಲನಚಿತ್ರ, ಜಾಹೀರಾತುಗಳಿಗೆ ತಡೆ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Read More

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಬಿಗ್ ಶಾಕ್ ನೀಡಲಾಗಿದೆ. ದಳಪತಿಗಳಿಗೆ ಶಾಕ್ ಮೇಲೆ ಶಾಕ್ ಎನ್ನುವಂತೆ JDS ಪಕ್ಷ ತೊರೆದು ಅಧಿಕೃತವಾಗಿ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಎಂ.ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು, ಮಾಜಿ ಪರಿಷತ್ ಸದಸ್ಯ ಅಪ್ಪಾಜಿಗೌಡ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನೀಡಿರುವಂತ ಮರಿತಿಬ್ಬೇಗೌಡ ಹಾಗೂ ಮಂಡ್ಯದ ಮಾಜಿ ಶಾಸಕ ಎಂ.ಶ್ರೀನಿವಾಸ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಇತರೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು, ಪಕ್ಷದ ಶಾಲು ಧರಿಸಿ ಸೇರ್ಪಡೆಯಾದರು. https://kannadanewsnow.com/kannada/attempt-to-burn-dalit-man-alive-in-vijayapura-case-registered/

Read More

ವಿಜಯಪುರ: ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬನನ್ನು ಜೀವಂತವಾಗಿ ಬೆಂಕಿ ಹಚ್ಚಿ, ಕೊಲ್ಲೋದಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ದಲಿತ ದುಂಡಪ್ಪ(70) ಹಾಗೂ ಗ್ರಾಮದ ಕೆಲವರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿದೆ. ಈ ಸಂದರ್ಭದಲ್ಲಿ ದುಂಡಪ್ಪನನ್ನು ಕಬ್ಬಿನ ಬಣವೆಯ ಮೇಲೆ ಎತ್ತಿಹಾಕಿ, ಅದಕ್ಕೆ ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಹಾಕೋದಕ್ಕೆ ಪ್ರಯತ್ನಿಸಲಾಗಿದೆ. ಆದ್ರೇ ಈ ವೇಳೆಯಲ್ಲಿ ಜೀವ ಉಳಿಸಿಕೊಳ್ಳೋದಕ್ಕಾಗಿ ಅಲ್ಲಿಂದ ದುಂಡಪ್ಪ ತಪ್ಪಿಸಿಕೊಂಡು ಬಂದಿದ್ದಾರೆ. ಕಬ್ಬಿನ ಬಣವೆಗೆ ಬೆಂಕಿ ಹಚ್ಚಿದ್ದರಿಂದ ದುಂಡಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಂಡಪ್ಪ ನೀಡಿದಂತ ದೂರಿನ ಆಧಾರದ ಮೇಲೆ ಪೊಲೀಸರು ದಸ್ತಗಿರಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತಷ್ಟು ಜನರನ್ನು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/arvind-kejriwals-family-under-house-arrest-alleges-aap/ https://kannadanewsnow.com/kannada/no-relief-for-brs-leader-k-kavita-as-sc-refuses-to-grant-bail-in-delhi-excise-policy-case/

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಒಂದು ದಿನದ ನಂತರ, ಅವರ ಕುಟುಂಬಕ್ಕೆ ಯಾರನ್ನೂ ಭೇಟಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಆರೋಪಿಸಿದೆ. ಇದು ಚುನಾಯಿತ ಮುಖ್ಯಮಂತ್ರಿಯ ವಯಸ್ಸಾದ ಪೋಷಕರೊಂದಿಗೆ ಕೇಂದ್ರ ಸರ್ಕಾರ ಆಡುತ್ತಿರುವ ಮಾನಸಿಕ ಆಟವಾಗಿದೆ. ಬ್ರಿಟಿಷರು ಸಹ ಇಂತಹ ನಾಚಿಕೆಗೇಡಿನ ನಡವಳಿಕೆಯನ್ನು ಆಶ್ರಯಿಸುತ್ತಿರಲಿಲ್ಲ” ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದರು. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸ್ಥೆ ನೀಡಿದ ಒಂಬತ್ತನೇ ಸಮನ್ಸ್ ಅನ್ನು ತಪ್ಪಿಸಿಕೊಂಡ ನಂತರ ಕೇಜ್ರಿವಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಯಿತು. “ನೀವು ಅರವಿಂದ್ ಜಿ ಅವರನ್ನು ಬಂಧಿಸಿದ್ದೀರಿ, ಅವರ ಕುಟುಂಬ ಮನೆಯಲ್ಲಿದೆ. ಮೂಲಭೂತ ಮಾನವೀಯತೆ ಎಂದರೆ ಪಕ್ಷದ ಜನರು, ಅವರ ಸಂಬಂಧಿಕರು… ಅವರ ಕುಟುಂಬವನ್ನು ಭೇಟಿ ಮಾಡಲು ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ನಿನ್ನೆಯಿಂದ ಅವರ ಕುಟುಂಬವನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡಿಲ್ಲ” ಎಂದು ಭಾರದ್ವಾಜ್ ಶುಕ್ರವಾರ…

Read More