Author: kannadanewsnow09

ಉತ್ತರ ಕನ್ನಡ: ನೌಕಾನೆಲೆಯ ಮಾಹಿತಿ ಸೋರಿಕೆ ಸಂಬಂಧ ಈಗಾಗಲೇ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ಮತ್ತೆ ನೌಕಾನೆಲೆಗೆ ಆಗಮಿಸಿದ್ದು, ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾರವಾರದ ನೌಕಾನೆಲೆಗೆ ಮತ್ತೆ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ. 2024ರ ಆಗಸ್ಟ್ ನಲ್ಲಿ ವಿಚಾರಣೆ ನಡೆಸಿದ್ದಂತ ಎನ್ಐಎ ಇಂದು ಮತ್ತೆ ಆಗಮಿಸಿದ್ದಾರೆ. ಮೂವರನ್ನು ವಿಚಾರಣೆ ನಡೆಸಿ, ನೋಟಿಸ್ ನೀಡಿದ್ದರು. ಮುದಗಾದ ವೇತನ್ ತಾಂಡೇಲ್, ತೊಡೂರು ಸುನೀಲ್ ಹಾಗೂ ಅಕ್ಷಯ್ ನಾಯ್ಕ್ ಎಂಬುವರನ್ನು ಎನ್ಐಎ ವಿಚಾರಣೆ ನಡೆಸಿತ್ತು. ಇದೀಗ ಮತ್ತೆ ತನಿಖೆ ನಡೆಸಲು ಕಾರವಾರದ ನೌಕಾನೆಲೆಗೆ ಎನ್ಐಎ ತಂಡ ಆಗಮಿಸಿದೆ. ನೌಕಾನೆಲೆಯ ಅಧಿಕಾರಿಗಳನ್ನು ಭೇಟಿಯಾಗಲಿರುವಂತ ಎನ್ಐಎ, ಮಾಹಿತಿ ಸೋರಿಕೆ ಸಂಬಂಧ ತನಿಖೆ ನಡೆಸೋ ಸಾಧ್ಯತೆ ಇದೆ. https://kannadanewsnow.com/kannada/good-news-for-arya-vaishya-community-from-state-government/ https://kannadanewsnow.com/kannada/good-news-for-tcs-employees-salary-hike-likely-to-be-4-8-in-march/

Read More

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವೆಗಳ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (Tata Consultancy Services – TCS) ಮಾರ್ಚ್ನಲ್ಲಿ ವಾರ್ಷಿಕ ವೇತನ ಹೆಚ್ಚಳವನ್ನು ಘೋಷಿಸುವ ನಿರೀಕ್ಷೆಯಿದೆ. ಏಪ್ರಿಲ್ 2025 ರಿಂದ ಜಾರಿಗೆ ಬರಲಿರುವ ಇನ್ಕ್ರಿಮೆಂಟ್ಗಳು ಶೇಕಡಾ 4 ರಿಂದ 8 ರ ನಡುವೆ ಉಳಿಯುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ವರದಿಯ ಪ್ರಕಾರ, ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಜಾಗತಿಕ ಆರ್ಥಿಕ ಸಂಕಷ್ಟಗಳ ಮಧ್ಯೆ ಹೆಚ್ಚಿನ ಉನ್ನತ ಶ್ರೇಣಿಯ ಕಂಪನಿಗಳಲ್ಲಿ ವಾರ್ಷಿಕ ಹೆಚ್ಚಳವು ಮಂದಗತಿಯನ್ನು ಕಂಡಿದೆ. ಕೋವಿಡ್ -19 ಅವಧಿಯಲ್ಲಿ, ಐಟಿ ಉದ್ಯೋಗಿಗಳು ಎರಡಂಕಿಗಳಲ್ಲಿ ವೇತನ ಹೆಚ್ಚಳವನ್ನು ಕಂಡರು. “ಹೆಚ್ಚಳವು ಶೇಕಡಾ 4-8 ರಷ್ಟಿರುತ್ತದೆ ಎಂದು ನಮಗೆ ತಿಳಿಸಲಾಗಿದೆ. ಉತ್ತಮವಾಗಿ ಕಾರ್ಯನಿರ್ವಹಿಸಿದ ವ್ಯವಹಾರ ಲಂಬಗಳು ಸಾಮಾನ್ಯವಾಗಿ ಹೆಚ್ಚಿನ ಹೆಚ್ಚಳವನ್ನು ಪಡೆಯುತ್ತವೆ ಆದರೆ ಒಟ್ಟಾರೆ ಇನ್ಕ್ರಿಮೆಂಟ್ಗಳು ತುಂಬಾ ಉತ್ತಮವಾಗಿಲ್ಲ “ಎಂದು ಉದ್ಯೋಗಿಯನ್ನು ಉಲ್ಲೇಖಿಸಿ ಇಟಿ ವರದಿ ತಿಳಿಸಿದೆ. 2022ರ ಹಣಕಾಸು ವರ್ಷದಲ್ಲಿ ಟಿಸಿಎಸ್ನಲ್ಲಿ ಸರಾಸರಿ ವೇತನ ಹೆಚ್ಚಳವು…

Read More

ಬೆಂಗಳೂರು: ರಾಜ್ಯ ಸರ್ಕಾರದಿದಂ ಆರ್ಯ ವೈಶ್ಯ ಸಮುದಾಯದವರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಿದ್ದವರಿಗೆ ಡಿಬಿಟಿ ಮೂಲಕ ವರ್ಗಾವಣೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ (ನಿಯಮಿತ) ವತಿಯಿಂದ ಪ್ರತಿ ವರ್ಷ ಹಲವಾರು ಉತ್ತಮ ಕೆಲಸಗಳನ್ನು ನಿರ್ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರಿಂದ, ಯುವ ಉದ್ಯಮಿಗಳಿಗೆ ಸೂಕ್ತ ಸಮಯದಲ್ಲಿ ಸಾಲ ಸೌಲಭ್ಯ ನೀಡುವವರೆಗೆ ಹಲವು ಮಹತ್ವದ ಯೋಜನೆಗಳನ್ನು ನಿಗಮದ ಅಡಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂದಿದ್ದಾರೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ನಿಗಮದ ಅಡಿಯಲ್ಲಿ ಸಮಾಜದ ಜನರಿಗೆ ಸಹಾಯ ಹಸ್ತ ಚಾಚುತ್ತಿರುವ ಪ್ರಮುಖ ಯೋಜನೆಯಾಗಿದ್ದು, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಸಾಲ ಪಡೆದು ಸಕಾಲದಲ್ಲಿ ಸಾಲ ತೀರಿಸಿದಂತಹ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ ವಾರದೊಳಗಾಗಿ ವರದಿ ನೀಡಲು ಸೂಚಿಸಲಾಗಿದೆ ಎಂದರು. ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಸಂಬಂಧಿಸಿದಂರೆ ಎಲ್ಲಾ ವಲಯಗಳಲ್ಲಿ ಟೆಂಡರ್ ಕರೆದು ಗುತ್ತಿಗೆದಾರರನ್ನು ನಿಯೋಜಿಸಿದ್ದು, ಅವರ ಮೂಲಕ ಘಟಕಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ-ಗತಿಗಳ ಕುರಿತು ವರದಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು. ನಗರದಲ್ಲಿ ಕಾವೇರಿ 5 ಹಂತವು ಈಗಾಗಲೇ ಚಾಲ್ತಿಯಲ್ಲಿರುವುದರಿಂದ, 1ನೇ ಏಪ್ರಿಲ್ 2025 ರಿಂದ ಕುಡಿಯುವ ನೀರಿನ ಸಂಪೂರ್ಣ ಜವಾಬ್ದಾರಿ…

Read More

ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ ಎಷ್ಟು ದಿನದವರೆಗೆ ನಡೆಸಬೇಕೆಂದು ವ್ಯವಹಾರ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಲಾಗುವುದು ಎಂದರು. ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಇಂದು ರೈತ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿದ್ದು, ಅವರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ತಯಾರಿಸುವಾಗ ಇತಿಮಿತಿಯೊಳಗೆ ಸಲಹೆಗಳನ್ನು ಸೇರ್ಪಡೆ ಮಾಡಲಾಗುವುದು. ಕರ್ನಾಟಕ ಸರ್ಕಾರ ರೈತರ ಹಿತವನ್ನು ಕಾಪಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಯಾವತ್ತೂ ರೈತರ…

Read More

ಬೆಂಗಳೂರು: ಮುಂಬರುವಂತ ಮೇ ಅಂತ್ಯದಲ್ಲಿ ಮೀಸಲಾತಿ ಪಟ್ಟಿ ನೀಡಲಾಗುತ್ತದೆ. ಜೂನ್, ಜುಲೈ ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿ ಅಂತ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಅಂತ್ಯಕ್ಕೆ ಮೀಸಲಾತಿ ಪಟ್ಟಿಯನ್ನು ನೀಡಲಾಗುತ್ತದೆ. ಆ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ. ಇಂದು ಮೂರು ವರ್ಷಗಳಾದರೂ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸದೇ ಇರುವ ಸಂಬಂಧ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ವೇಳೆಯಲ್ಲಿ ಈ ಮಾಹಿತಿಯನ್ನು ಅಡ್ವೋಕೇಟ್ ಜನರಲ್ ಹೈಕೋರ್ಟ್ ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಎನ್.ಕೆ ಫಣೀಂದ್ರ ಅವರು ಸರ್ಕಾರವು ಮೀಸಲಾತಿ ಪಟ್ಟಿಯನ್ನು ನೀಡಿದರೇ ವೇಳಾಪಟ್ಟಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಶಾಸಕ ಬಿ ಆರ್ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಬಿ.ಆರ್.ಪಾಟೀಲ, ಮಾನ್ಯ ಶಾಸಕರು, ಆಳಂದ ವಿಧಾನಸಭಾ ಕ್ಷೇತ್ರ ಇವರನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ (ಯೋಜನ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ) ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ. https://kannadanewsnow.com/kannada/our-metro-ticket-prices-should-be-reduced-by-sunday-otherwise-there-will-be-a-boycott-passenger-forum/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದರವನ್ನು ದುಪ್ಪಟ್ಟು ಮಾಡಿದ್ದರ ವಿರುದ್ಧ ಪ್ರಯಾಣಿಕರ ವೇದಿಕೆ ಸಿಡಿದೆದ್ದಿದೆ. ನಮ್ಮ ಮೆಟ್ರೋ ಪ್ರಯಾಣದ ದರವನ್ನು ಭಾನುವಾರದೊಳಗೆ ಇಳಿಕೆ ಮಾಡಬೇಕು. ಇಲ್ಲದೇ ಹೋದರೇ ಪ್ರಯಾಣವನ್ನೇ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಮಾತನಾಡಿರುವಂತ ಮೆಟ್ರೋ ಪ್ರಯಾಣಿಕರ ವೇದಿಕೆಯ ಸದಸ್ಯ ರಾಜೇಶ್ ಭಟ್ ಎಂಬುವರು, ಟಿಕೆಟ್ ದರ ಇಳಿಸಲು ಭಾನುವಾರದ ವರೆಗೆ ಡೆಡ್ ಲೈನ್ ನೀಡಲಾಗುತ್ತಿದೆ. ಒಂದು ವೇಳೆ ಇಳಿಕೆ ಮಾಡದಿದ್ದರೇ 1 ವಾರದವರೆಗೆ ನಮ್ಮ ಮೆಟ್ರೋವನ್ನೇ ಬಹಿಷ್ಕರಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಇಳಿಕೆ ಸಂಬಂಧ ಬೆಂಗಳೂರಿನ ನಾಗರೀಕರನ್ನು ಸೇರಿಸಿ ಸಮಾವೇಶ ಮಾಡಲಾಗುತ್ತದೆ. ಆ ಮೂಲಕವೂ ಮೆಟ್ರೋ ಪ್ರಯಾಣ ದರ ಇಳಿಕೆಗೆ ಆಗ್ರಹಿಸಲಾಗುತ್ತದೆ. ಬುಧವಾರ ಸುದ್ದಿಗೋಷ್ಠಿ ನಡೆಸಿ, ಭಾನುವಾರ ಪ್ರಯಾಣದ ದರ ಇಳಿಕೆಯ ಡೆಡ್ ಲೈನ್ ನೀಡುವುದಾಗಿ ಹೇಳಿದರು. https://kannadanewsnow.com/kannada/escoms-submit-proposal-to-govt-to-hike-power-tariff-soon/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/

Read More

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತಂತ ಪತ್ನಿಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದ್ದು, ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಶೃತಿ (33) ತನ್ನ 5 ವರ್ಷದ ರೋಶಿಣಿಯನ್ನು ಫ್ಯಾನಿಗೆ ನೇಣು ಹಾಕಿ, ತಾನು ಅದೇ ಫ್ಯಾನಿಗೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಹಾಗೇ ಪಾವಗಡದ ಗುಂಡಾರಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷೆಯಾಗಿರುವಂತ ಶೃತಿ ಮತ್ತು ಮಗಳು ಬೆಂಗಳೂರಿನ ಬಾಗಲಗುಂಟೆಯಲ್ಲಿ ವಾಸವಿದ್ದರು. ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು, ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/hubballi-rameswaram-hubballi-weekly-special-express-cancelled/ https://kannadanewsnow.com/kannada/escoms-submit-proposal-to-govt-to-hike-power-tariff-soon/ https://kannadanewsnow.com/kannada/centre-to-take-major-steps-for-crowd-control-at-railway-stations-ai-technology-to-be-used-report/

Read More

ಬೆಂಗಳೂರು: ರಾಜ್ಯದ ಜನತೆಗೆ ಶೀಘ್ರವೇ ಕರೆಂಟ್ ಶಾಕ್ ಸಿಗಲಿದೆ. ವಿದ್ಯುತ್ ದರ ಹೆಚ್ಚಳಕ್ಕಾಗಿ ಕೆ ಇ ಆರ್ ಸಿಗೆ ಎಸ್ಕಾಂಗಳು ಪ್ರಸ್ತಾವನೆಯನ್ನು ಸಲ್ಲಿಸಿವೆ ಎಂಬುದಾಗಿ ತಿಳಿದು ಬಂದಿದೆ. ಹೌದು. ಹಾಲು,  ಬಸ್, ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ, ಈಗ ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಎಸ್ಕಾಂಗಳು ಪ್ರಸ್ತಾವನೆಯನ್ನು ಸಲ್ಲಿಸಿದ್ದಾವೆ. ವಿದ್ಯುತ್ ಖರೀದಿಗೆ ತಗಲುವ ವೆಚ್ಚ ಹಾಗೂ ಪೂರೈಕೆ, ಕಲ್ಲಿದ್ದಲು ಸಂಗ್ರಹಣೆಗೆ ತಗಲುವ ವೆಚ್ಚ ಸೇರಿದಂತೆ ಇತರೆ ಖರ್ಚುಗಳು ಹೆಚ್ಚಾಗಿದ್ದು, ಆರ್ಥಿಕ ಒತ್ತಡವನ್ನು ಸರಿ ದೂಗಿಸಲು ವಿದ್ಯುತ್ ದರ ಹೆಚ್ಚಳ ಎಂಬುದು ಎಸ್ಕಾಂಗಳ ನಿಲುವಾಗಿದೆ. ಈ ಹಿನ್ನಲೆಯಲ್ಲಿ ಪ್ರತಿ ಯೂನಿಟ್ ಗೆ 1 ರೂಪಾಯಿ 50 ಪೈಸೆ ಏರಿಕೆ ಮಾಡುವಂತೆ ಕೆ ಇ ಆರ್ ಸಿಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಲಾಗಿದೆ. ಒಂದು ವೇಳೆ ಸರ್ಕಾರ ಒಪ್ಪಿಗೆ ಸೂಚಿಸಿದ್ದೇ ಆದಲ್ಲಿ ಶೀಘ್ರವೇ ವಿದ್ಯುತ್ ದರ ಹೆಚ್ಚಳ ಆಗಲಿದೆ. ಅಂದಹಾಗೇ 2009ರಲ್ಲಿ ಪ್ರತಿ ಯೂನಿಟ್ ಗೆ…

Read More