Author: kannadanewsnow09

ಮೈಸೂರು: ಮುಖ ತೊಳೆಯುತ್ತಿದ್ದಂತ ಸಂದರ್ಭದಲ್ಲಿಯೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೂಡ್ಲೂರು ಗ್ರಾಮದಲ್ಲಿ ಮುಖ ತೊಳೆಯುತ್ತಿದ್ದಾಗಲೇ ಪುರುಷೋತ್ತಮ್ (35) ಎಂಬಾತ ಕುಸಿದು ಬಿದ್ದಿದ್ದಾನೆ. ಎದೆ ನೋವು ಕಾಣಿಸಿಕೊಂಡಿದ್ದಂತ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಸಾವನ್ನಪ್ಪಿದ್ದಾನೆ. ಪುರುಷೋತ್ತಮ್ ಪರೀಕ್ಷಿಸಿದಂತ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಆಗಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ…

Read More

ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು ಅಮಾನತ್ತುಗೊಳಿಸಲಾಗಿದೆ. ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ರಾಮಾಂಜನೇಯಲು, ಆರ್. ಆರ್ ನಗರ ವಲಯ ಕೆಂಗೇರಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ಪ್ರವೀಣ್ ಕುಮಾರ್ ಸಿ.ಎನ್ ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಆದೇಶದಲ್ಲಿ ಏನಿದೆ.? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶ್ಚಿಮ ವಲಯದಲ್ಲಿ ನ್ಯಾಯಮೂರ್ತಿ ಡಾ.ಹೆಚ್‌.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಇವರ ಸೂಚನೆಯಂತೆ ಪರಿಶಿಷ್ಟ ಜಾತಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಸಮೀಕ್ಷೆ-2025ರ ಹಿನ್ನೆಲೆಯಲ್ಲಿ ಮನೆ ಮನೆಗೆ ತೆರಳಿ ಮನೆಯ ಗೋಡೆಗೆ ಅಥವಾ ಬಾಗಿಲಿಗೆ ಬಿತ್ತಿ ಪತ್ರವನ್ನು ಅಂಟಿಸಿ, BBMP SC Survey House Visit App ನಲ್ಲಿ ವರದಿ ಮಾಡಲು ಮಾನ್ಯ ವಿಶೇಷ ಆಯುಕ್ತರು (ಕಂದಾಯ) ರವರು ಮಾನ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 251 ರೋಗಿಗಳಲ್ಲಿ 87 ಮಂದಿಗೆ ಶುಗರ್ ಕಾಯಿಲೆ ಇರೋದಾಗಿ ತಿಳಿದು ಬಂದಿದೆ. 102 ರೋಗಿಗಳಿಗೆ ಬಿಪಿ, 35 ಮಂದಿಗೆ ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇರೋದನ್ನು ಪತ್ತೆ ಹಚ್ಚಿದೆ. 251 ಮಂದಿಯಲ್ಲಿ 111 ಜನರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಲ್ವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತೆ ಮಂಜುಳಾ ನಾಯ್ಡು ಸೇರಿದಂತೆ ನಾಲ್ವರನ್ನು ರಾಜ್ಯ ಸರ್ಕಾರ ಬಿಡಿಎ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಕಾಯ್ದೆ 1976ರ ಕಲಂ 3(3)(ಇ), 3(3)(ಹೆಚ್) ಮತ್ತು 3(3)(ಜಿಜಿ)ರಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಬೆಂಗಳೂರು ದಕ್ಷಿಣದ ಕನಕಪುರ ತಾಲ್ಲೂಕಿನ ವಾಸ್ತು ಶಿಲ್ಪಿ ವಿ ಆರ್ ಸುಜಯ್, ಸಾಮಾನ್ಯ ಕೆಟಗರಿ ಅಡಿಯಲ್ಲಿ ಬಿಎನ್ ಅಮರನಾಥ್, ಪರಿಶಿಷ್ಟ ಜಾತಿ ಅಡಿಯಲ್ಲಿ ಪಿ ಗಾಂಧಿ ಹಾಗೂ ಮಹಿಳೆ ಕೋಟಾದಡಿ ಸಂಪಿಗೆ ರಾಮನಗರದ ಮಂಜುಳ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. https://kannadanewsnow.com/kannada/ramesh-jarakiholis-son-shot-bullets-in-the-air-at-the-festival/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/

Read More

ಬೆಳಗಾವಿ: ಜಿಲ್ಲೆಯ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಅವರ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ವಿಕೃತಿ ಮೆರೆದಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/hdk-criticizes-minister-priyank-kharge-for-criticizing-rss/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/

Read More

ಮೈಸೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ, ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಸಚಿವರುಕ್ ವಾಗ್ದಾಳಿ ನಡೆಸಿದರು. https://kannadanewsnow.com/kannada/not-just-kunigal-necessary-measures-to-provide-water-to-all-taluks-of-tumkur-dkshi/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/

Read More

ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವರು ಪುನರುಚ್ಚರಿಸಿದರು. ಡಿಎಂಕೆ ಮುಲಾಜಿನಲ್ಲಿ ಕಾಂಗ್ರೆಸ್!!: ಕಾಂಗ್ರೆಸ್ ನವರಿಗೆ ಮಿತ್ರಪಕ್ಷದ ಮುಲಾಜು ಇದೆ. ಅವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಡಿಎಂಕೆ ಪಕ್ಷವನ್ನು ಎದುರು ಹಾಕಿಕೊಳ್ಳುವ ಅಥವಾ ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ. ತಮಿಳುನಾಡು ಸರ್ಕಾರವನ್ನು ದೈರ್ಯವಾಗಿ ಧಿಕ್ಕರಿಸಿ ಮೇಕೆದಾಟು ಯೋಜನೆ ಕೈಗೆತ್ತಿಗೊಂಡದರೆ ಅದು ಸಾಧ್ಯ ಆಗುತ್ತದೆ…

Read More

ಬೆಂಗಳೂರು: “ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. “ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ” ಎಂದು ತಿಳಿಸಿದರು. “ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸ್ಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ.…

Read More

ಮೈಸೂರು: ಪ್ರೀತಿಯ ವಿಚಾರಕ್ಕೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಆಕೆಯನ್ನು ಚಾಕುವಿನಿಂದ ಇರಿದು ಯುವಕನೊಬ್ಬ ಹತ್ಯೆ ಮಾಡಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರಿನ ಅಶೋಕಪುರಂನಲ್ಲಿ ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ(36) ಎಂಬಾಕೆಯನ್ನುಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಎಂಬಾತ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಅಂದಹಾಗೇ ಪೂರ್ಣಿಮಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆಕೆಯನ್ನು ಅಭಿಷೇಕ್ ಪ್ರೀತಿಸುತ್ತಿದ್ದನು. ಪ್ರೀತಿಯ ವಿಚಾರಕ್ಕಾಗಿ ಕೋಪಗೊಂಡ ಅಭಿಷೇಕ್ ಶಿಕ್ಷಕಿ ಪೂರ್ಣಿಮಾ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಆ ಬಳಿಕ ಪರಾರಿಯಾಗಿದ್ದಾನೆ. ಚಾಕು ಇರಿತಕ್ಕೆ ಒಳಗಾದಂತ ಪೂರ್ಣಿಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಅಭಿಷೇಕ್ ನನ್ನು ಬಂಧಿಸಿದ್ದಾರೆ.

Read More

ಕ್ರೊಯೇಷಿಯಾದ ಜಾಗ್ರೆಬ್‌ನಲ್ಲಿ ಶುಕ್ರವಾರ ನಡೆದ 2025 ರ ಗ್ರ್ಯಾಂಡ್ ಚೆಸ್ ಟೂರ್‌ನ ಭಾಗವಾದ ಸೂಪರ್‌ಯುನೈಟೆಡ್ ರಾಪಿಡ್ & ಬ್ಲಿಟ್ಜ್ ಪಂದ್ಯಾವಳಿಯಲ್ಲಿ ಕ್ಷಿಪ್ರ ಪ್ರಶಸ್ತಿಯನ್ನು ಗೆದ್ದುಕೊಂಡರು, ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಜಾಗತಿಕ ವೇದಿಕೆಯಲ್ಲಿ ತಮ್ಮ ಬೆಳೆಯುತ್ತಿರುವ ನಿಲುವನ್ನು ಒತ್ತಿ ಹೇಳಿದರು. 19 ವರ್ಷದ ಆಟಗಾರ ಸಂಯಮ, ಯುದ್ಧತಂತ್ರದ ನಿಖರತೆ ಮತ್ತು ಅದ್ಭುತ ಫಾರ್ಮ್ ಪ್ರದರ್ಶಿಸಿ 18 ಅಂಕಗಳಿಂದ 14 ಅಂಕಗಳನ್ನು ಗಳಿಸಿ, ಅತ್ಯುನ್ನತ ಗೌರವವನ್ನು ಗಳಿಸಿದರು. ಅವರ ಅಭಿಯಾನವು ಆರಂಭಿಕ ಎಡವಿ ಬೀಳುವಿಕೆಯೊಂದಿಗೆ ಪ್ರಾರಂಭವಾಯಿತು – ಜಾನ್-ಕ್ರಿಜ್ಟೋಫ್ ಡುಡಾ ವಿರುದ್ಧ ಮೊದಲ ಸುತ್ತಿನ ಸೋಲು. ಆದರೆ ಅದು ಗಮನಾರ್ಹ ತಿರುವು ನೀಡಿತು. ಗುಕೇಶ್ ಸತತ ಐದು ಜಯಗಳೊಂದಿಗೆ ಪ್ರತಿಕ್ರಿಯಿಸಿದರು, ಇದರಲ್ಲಿ 4 ನೇ ಸುತ್ತಿನಲ್ಲಿ ವಿಶ್ವದ ನಂ. 1 ಮ್ಯಾಗ್ನಸ್ ಕಾರ್ಲ್ಸೆನ್ ಅವರ ಕ್ಲಿನಿಕಲ್ ಡಿಸ್ಮ್ಯಾಂಡಿಂಗ್ ಸೇರಿದೆ, ಇದರ ಫಲಿತಾಂಶವು ಅವರನ್ನು ಲೀಡರ್‌ಬೋರ್ಡ್‌ನ ನಿಯಂತ್ರಣದಲ್ಲಿ ದೃಢವಾಗಿ ಇರಿಸಿತು. ಅವರು ಅಂತಿಮ ಸುತ್ತಿನಲ್ಲಿ ಯುನೈಟೆಡ್ ಸ್ಟೇಟ್ಸ್‌ನ ವೆಸ್ಲಿ ಸೋ ವಿರುದ್ಧ ಸಿಗ್ನೇಚರ್…

Read More