Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿಯಲ್ಲೇ 5,000 ರೈತರಿಗೆ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಎಡಿಎಲ್‌ಆರ್ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು. ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ: ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ…
ಬೆಂಗಳೂರು : ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಎಡಿಎಲ್‌ಆರ್ ಗಳಿಗೆ ಸೂಚಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಎಡಿಎಲ್‌ಆರ್ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು. “ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮಂಡಳಿಯು, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ “ಅಂತಿಮ ವೇಳಾಪಟ್ಟಿ” ಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:10-01-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ದಿನಾಂಕ 01-03-2025ರ ಶನಿವಾರದಿಂದ ಆರಂಭಗೊಂಡು, ದಿನಾಂಕ 20-03-2025ರ ಗುರುವಾರದವರೆಗೆ ನಡೆಯಲಿವೆ. ಆ ವಿಷಯವಾರು ಅಂತಿಮ ವೇಳಾಪಟ್ಟಿ ಈ ಕೆಳಗಿನಂತಿದೆ. ಇನ್ನೂ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 21-03-2025ರ ಶುಕ್ರವಾರದಿಂದ ಆರಂಭಗೊಳ್ಳಲಿದೆ. ದಿನಾಂಕ 04-04-2025ರ ಶುಕ್ರವಾರದಂದು ಮುಕ್ತಾಯಗೊಳ್ಳಲಿದೆ. ಆ ಎಸ್…
ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8 ರಲ್ಲಿ ಭೂಗತ ಕೇಬಲ್ ಕಾಮಗಾರಿ ನಡೆಯತ್ತಿರುವುದರಿಂದ ಜ.12 ರಂದು ಬೆಳ್ಳಿಗೆ 9 ಗಂಟೆಯಿಂದ ಸಂಜೆ 5.30 ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಲಕ್ಷ್ಮೀಪುರ ಬಡಾವಣೆ, ಎನ್‌ಎಂಸಿ ಕಾಂಪೌAಡ್, ಎಸ್‌ಆರ್‌ಎಸ್ ಶಾಮಿಯಾನ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ಪೊಲೀಸ್ ಚೌಕಿ, ವಿನೋಬನಗರ ಮುಖ್ಯ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರ ಉಪ ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. https://kannadanewsnow.com/kannada/sslc-ii-puc-exam-1-final-schedule-announced-heres-all-you-need-to-know/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ತುಮಕೂರು: ಸ್ನೇಹಿತರೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಆಡಿಕೊಂಡು 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ತುಮಕೂರಲ್ಲಿ ನಡೆದಿದೆ. ತುಮಕೂರಿನ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿರುವಂತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬುವರ ಪುತ್ರ ತ್ರಿಶಾಲ್(13) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿಯಾಗಿದ್ದಾನೆ. ತ್ರಿಶಾಲ್ ಅವರು ವಿಶಾಲ್ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ತಾಯಿ ಶಕುಂತಲಾ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ತ್ರಿಶಾಲ್ ನೇಣಿಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ಪಾರಿವಾಳ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿತ್ತು. ಅದೇ ವಿಚಾರಕ್ಕೆ ತಾನು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾನೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/sslc-ii-puc-exam-1-final-schedule-announced-heres-all-you-need-to-know/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಬೆಂಗಳೂರು: ಈಗಾಗಲೇ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ( SSLC and PUC Exam-1 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ಇನ್ನೂ ದಿನಾಂಕ 10-01-2025ರ ಇಂದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಹೀಗಿದೆ…
ಬೆಂಗಳೂರು: ಸರ್ಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಅತ್ತಿಬೆಲೆ ಹೋಬಳಿ, ಹೆಬ್ಬಗೋಡಿ ಗ್ರಾಮದ ಸರ್ವೇ ನಂ.159 ರ 32 ಎಕರೆ 13 ಗುಂಟೆ ಸರ್ಕಾರಿ ಕೆರೆಯ ಜಮೀನನ್ನು ಆರೋಪಿಗಳಾದ ಎ1- ಕೃಷ್ಣಪ್ಪ, ಎ2- ನಂಜಪ್ಪ, ಎ3- ರಾಮಯ್ಯ, ಎ4- ಎಂ.ವೆಂಕಟೇಶ್, ಎ5- ಹೆಚ್.ಎಂ.ಸುಬ್ಬಣ್ಣ, ಎ6- ಲಕ್ಷ್ಮೀದೇವಿ, ಎ7- ಪಿಳ್ಳಪ್ಪ ರವರುಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಶೌಚಾಲಯ ಮತ್ತು ವಾಸದ ಮನೆಗಳನ್ನು ನಿರ್ಮಾಣ ಮಾಡಿದ್ದು, ಸದರಿ ರವರ ವಿರುದ್ಧ ಬಿಎಂಟಿಎಫ್ ಪೊಲೀಸ್ ಠಾಣೆ ಮೊ.ಸಂ: 19/2012 : 192(ಎ) ಕೆ.ಎಲ್.ಆರ್ ಆಕ್ಟ್ ರೀತ್ಯಾ ದಿನಾಂಕ: 22-02-2012 ಪ್ರಕರಣ ದಾಖಲಾಗಿ ಬಿಎಂಟಿಎಫ್ ಪೊಲೀಸ್ ಠಾಣೆಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಸದರಿ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಸಾಕ್ಷಾಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ…
ಬೆಂಗಳೂರು : ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ದಕ್ಷಿಣ ಭಾರತದಲ್ಲಿ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು (BMC&RI) ಆಯ್ಕೆ ಮಾಡಿದೆ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಈ ರೀತಿಯ ಕೇಂದ್ರ ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಇದರಿಂದ ರಾಜ್ಯದಲ್ಲಿ ಸಂಶೋಧನೆ ಕ್ಷೇತ್ರಕ್ಕೆ ನೆರವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಯೋಗಾಲಯದ ಪ್ರಯೋಜನಗಳು ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಮುಂದಾಗಿದೆ. ಬ್ಯಾಕ್ಟೀರಿಯಾಲಜಿ, ಮೈಕಾಲಜಿ ಮತ್ತು ಪ್ಯಾರಾಸಿಟಾಲಜಿಗೆ ಸಂಬಂಧಿಸಿದಂತೆ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ (VRDLs) ಆದ್ಯತೆ ನೀಡಲಾಗುತ್ತಿದೆ. ರೋಗ ನಿರ್ಣಯದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲು ಇದರಿಂದ ಸಾಧ್ಯವಾಗಲಿದೆ, ಈ ನಿಟ್ಟಿನಲ್ಲಿ ನಮ್ಮಲಿನ ಸಾಮರ್ಥ್ಯಗಳನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು…
ಬೆಂಗಳೂರು: ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಂತ ಸಾರಿಗೆ ನೌಕರರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರು ಅಂತರ ನಿಗಮ ಸಾಮಾನ್ಯ ವರ್ಗಾವಣೆಗೆ ಕೋರಿಕೆ ಮೇರೆಗೆ 1,252 ನೌಕರರು ಅಂತರ ನಿಗಮ ವರ್ಗಾವಣೆಗೊಂಡಿರುತ್ತಾರೆ. ಸದರಿ ಅಂತರ ನಿಗಮ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ದಿನಾಂಕ:30.12.2024 ರಂದು ಪ್ರಕಟಿಸಲಾಗಿದೆ ಎಂದಿದ್ದಾರೆ. ಸದರಿ ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲಾಗಿದ್ದು, ವರ್ಗಾವಣೆಯಾಗಿರುವ ನಿಗಮ/ಸಂಸ್ಥೆಗಳಲ್ಲಿನ ಸೇವಾ ಜೇಷ್ಠತೆ ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಕೌನ್ಸಲಿಂಗ್ ಮೂಲಕ ವಿಭಾಗಗಳಿಗೆ ಹಂಚಿಕೆ ಮಾಡಲಾಗುವುದು. ಕೌನ್ಸಲಿಂಗ್ ದಿನಾಂಕ: 15.01.2025 ರಿಂದ 25.01.2025 ರವರೆಗೆ ವೆಬ್‌ಸೈಟ್ www.ksrtc.org/transfer ನಲ್ಲಿ ನಡೆಸಲಾಗುವುದು. ಒಮ್ಮೆ ಆದ್ಯತೆ ಸಲ್ಲಿಸಿದ ನಂತರ ಯಾವುದೇ…
ಬೆಳಗಾವಿ: ಆ ಗ್ರಾಮಸ್ಥರಿಗಿದ್ದಂತ ಕಂದಾಯ ಭೂಮಿಯನ್ನು 11ಎ ನಕ್ಷೆ ಮಂಜೂರಾತಿಯ ನಿಯಮವನ್ನು ಉಲ್ಲಂಘಿಸಿ, ಸರಿಯಾಗಿ ಮಂಜೂರಾತಿ ಪರಿಶೀಲಿಸದೇ ನಿರ್ಲಕ್ಷ್ಯವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದ್ದರು. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ಆಯುಕ್ತರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಆದೇಶಿಸಿದ್ದಾರೆ. ಬೆಳಗಾವಿಯ ಹುನಗುಂದ ಗ್ರಾಮದ ಸರ್ವೆ ನಂ.3ರಲ್ಲಿ 508 ಎಕರೆ 20 ಗುಂಜೆ ಜಮೀನಿಗೆ 11ಎ ನಕ್ಷೆ ಮಾಡಿಕೊಡಲು ನಿರ್ಲಕ್ಷ್ಯವನ್ನು ವಹಿಸಿದ್ದ ಬಗ್ಗೆ ದೂರು ನೀಡಲಾಗಿತ್ತು. ಹುನಗುಂದ ಗ್ರಾಮಸ್ಥರು ಕಂದಾಯ ಇಲಾಖೆಯ ಆಯುಕ್ತರಿಗೆ ದೂರು ನೀಡಿದ್ದರು. 11ಎ ನಕ್ಷೆ ಮಂಜೂರಾತಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದಂತ ನಿರ್ಲಕ್ಷ್ಯದಿಂದ ಭೂಮಿಯನ್ನು ಕಳೆದುಕೊಳ್ಳುವ ಹಂತಕ್ಕೆ ಹುನಗುಂದ ಗ್ರಾಮಸ್ಥರು ಬಂದು ನಿಂತಿದ್ದರು. ಹೀಗಾಗಿ ನಕಲಿ ದಾಖಲೆ ಸೃಷ್ಠಿಸಿ ನೀಡಿದ್ದರೂ ಕಂದಾಯ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಸೂಕ್ತ ರೀತಿಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಮನವಿಯನ್ನು ಕಂದಾಯ ಇಲಾಖೆ ಆಯುಕ್ತರಿಗೆ ಮಾಡಿದ್ದರು.…