Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ರಾಜ್ಯದಲ್ಲಿ ಸಾಮಾಜಿಕ ಬಹಿಷ್ಕಾರ ಪದ್ದತಿ ಇನ್ನೂ ಜೀವಂತವಾಗಿದೆ. ಮೂರು ವರ್ಷಗಳಿಂದ ಒಂದು ಇಡೀ ಕುಟುಂಬಕ್ಕೆ ಗ್ರಾಮದ ಜನರು ಬಹಿಷ್ಕಾರ ಹಾಕಿರುವುದರಿಂದ ನೊಂದು ಹೋಗಿರುವಂತ ಘಟನೆ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮುಳಕೆರೆ ಗ್ರಾಮದಲ್ಲೇ ಇಂತದ್ದೊಂದು ಸಾಮಾಜಿಕ ಬಹಿಷ್ಕಾರ ಪದ್ದತಿ ಜೀವಂತವಾಗಿರೋದಾಗಿದೆ. ರಮೇಶ್ ಬಿನ್ ಬಂಗಾರಪ್ಪ ಎಂಬಂತ ಕುಟುಂಬವನ್ನು ಮುಳುಕೆರೆ ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರವನ್ನು ಹಾಕಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಈ ಸಂಬಂಧ ರಮೇಶ್ ಅವರು ಸಾಗರ ತಹಶೀಲ್ದಾರರಿಗೆ ಈ ಅಮಾನುಷ ಬಹಿಷ್ಕಾರದ ಪದ್ದತಿಯನ್ನು ನಿವಾರಿಸುವಂತೆ ಮನವಿ ಮಾಡಿದ್ದಾರೆ. ತಹಶೀಲ್ದಾರ್ ಇಓಗೆ, ಇಓ ಅವರು ಆನಂದಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರಿಗೆ ಪತ್ರವನ್ನು ವರ್ಗಾಯಿಸಿ ಕೈತೊಳೆದು ಕೊಂಡಿದ್ದಾರೆ. ಪೊಲೀಸರು ಶಾಂತಿ ಸಭೆ ನಡೆಸುವಂತೆ ಬರೂರು ಪಿಡಿಓಗೆ ಸೂಚಿಸಿದ್ದಾರೆ. ರಮೇಶ್ ಅವರ ಇಡೀ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರೋದನ್ನು ನಿವಾರಣೆ ಸಂಬಂಧ ಬರೂರು ಗ್ರಾಮ ಪಂಚಾಯ್ತಿಯ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ದಿನಾಂಕ 22-01-2025ರಂದು ಶಾಂತಿ ಸಭೆ…
ಗದಗ : ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು. ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ತಾವು ಪ್ರವಾಸ ಮಾಡಿದ್ದು, ಕಾರ್ಮಿಕ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು ಸಭೆ ನಡೆಸಲಾಗಿದೆ. ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ ವಿನಃ ಸಚಿವ ಸಂಪುಟ ಸರ್ಜರಿ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ ನೀಡಬೇಕು ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ…
ವಿಜಯಪುರ: ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಈ ಸಂಬಂಧ 10 ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತಮ್ಮ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದಂತ ಆರೋಪಿ ನೀಡಿದಂತ ಮಾಹಿತಿ ಆಧರಿಸಿ ಮತ್ತಷ್ಟು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಅಕ್ರಮವಾಗಿ ಅಕ್ರಮವಾಗಿ ಸಂಗ್ರಹಿಸಿದ್ದಂತ 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡುಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ಅಶೋಕ್, ಪ್ರಕಾಶ್, ಸುಜಿತ್ ರಾಠೋಡ್, ಸಾಗರ್ ರಾಥೋಡ್, ಜನಾರ್ಧನ್ ಪವಾರ್, ಪ್ರಕಾಶ್ ಭೀಮಸಿಂಗ್, ಸಂತೋಷ್ ಕಿಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. https://kannadanewsnow.com/kannada/breaking-bengaluru-6-injured-in-massive-fire-due-to-cooking-gas-leak/ https://kannadanewsnow.com/kannada/breaking-good-news-for-state-government-employees-casual-leave-granted-on-feb-20/ https://kannadanewsnow.com/kannada/good-news-for-the-people-of-the-state-puneeth-rajkumar-hridaya-jyothi-yojana-extended-to-all-taluks-2/
ಮಂಗಳೂರು: ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಿಢೀರ್ ದಾಳಿ ಮಾಡಿದ ಪರಿಣಾಮ, 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯವಾಗಿರುವಂತ ಘಟನೆ ನಡೆದಿದೆ. ಮಂಗಳೂರಿನ ಬೆಳ್ತಂಗಡಿ ತಾಲ್ಲೂಕಿನ ಕಕ್ಕಿಂಜೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಪ್ರಾರ್ಥನೆ ಮುಗಿಸಿ ಶಾಲೆ ಒಳಗೆ ಹೋಗುವಾಗ ಹೆಜ್ಜೇನು ದಾಳಿ ನಡೆಸಿವೆ. ಈ ದಾಳಿಯಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರೋದಾಗಿ ತಿಳಇದು ಬಂದಿದೆ. ಹೆಜ್ಜೇನು ದಾಳಿಗೆ ಒಳಗಾದಂತ ವಿದ್ಯಾರ್ಥಿಗಳನ್ನು ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆಯನ್ನು ಇಂದು ಘೋಷಣೆ ಮಾಡಲಾಗಿದೆ. https://kannadanewsnow.com/kannada/dks-urges-centre-to-grant-pending-clearances-grants-for-irrigation-projects-in-karnataka/ https://kannadanewsnow.com/kannada/breaking-bengaluru-6-injured-in-massive-fire-due-to-cooking-gas-leak/
ರಾಜಸ್ಥಾನ : “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆಗೆ ಡಿಪಿಆರ್ ಪರಿಗಣಿಸಿ, ಅನುಮತಿ ನೀಡುವಂತೆ ಸಿಡಬ್ಲ್ಯೂಸಿಗೆ ನಿರ್ದೇಶನ ನೀಡಬೇಕು. ಇದರಿಂದ ತಮಿಳುನಾಡಿಗೆ ಪ್ರತಿ ತಿಂಗಳ ಲೆಕ್ಕಾಚಾರದ ನೀರು ನೀಡಬಹುದು. ಜತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ” ಎಂದು ಹೇಳಿದರು. “2023-24 ರ ಕೇಂದ್ರ ಬಜೆಟ್ನಲ್ಲಿ ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ…
ಬೆಂಗಳೂರು: ರಾಜ್ಯದಲ್ಲಿ ಆಸ್ತಿಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಆ ಮೂಲಕ ಅನಧಿಕೃತ ನಿವೇಶನಗಳಿಗೆ ಬ್ರೇಕ್ ಹಾಕಲಾಗಿದೆ. ಇದೇ ಕಾರಣಕ್ಕಾಗಿ ಕರ್ನಾಟಕ ಮುನಿಸಿಪಲ್ ಕಾಯ್ದೆ ಮತ್ತು ನಿಯಮಗಳಿಗೆ ಫೆಬ್ರವರಿ 2025ರಲ್ಲಿ ತಿದ್ದುಪಡಿಯನ್ನು ತರಲಾಗಿದೆ. ಹಾಗಾದ್ರೆ ನಿಮ್ಮ ಇ-ಖಾತಾ ಸಮಸ್ಯೆಗಳಿಗೆ ಸಂಬಂಧಿಸಿದಂತ ಪ್ರಶ್ನೆಗಳಿಗೆ ಪೌರಾಡಳಿತ ಇಲಾಖೆಯ ಉತ್ತರ ಏನು ಅಂತ ಮುಂದೆ ಓದಿ. ರಾಜ್ಯ ಪೌರಾಡಳಿತ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಇ-ಖಾತಾ ಕುರಿತಂತ ಸಮಸ್ಯೆಗಳ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಾಗಿದೆ. ನಿಮ್ಮ ಪ್ರಶ್ನೆಗಳು ಹಾಗೂ ಅದಕ್ಕೆ ಸಂಬಂಧಿಸಿದಂತ ಉತ್ತರ ಈ ಕೆಳಗಿನಂತಿವೆ. 1. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಯಾವೆಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು? · ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 94 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ ವಿನಾಯಿತಿಗೊಳಪಟ್ಟ ಆಸ್ತಿಗಳನ್ನು ಹೊರತುಪಡಿಸಿ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು. 2. “ಎ” ರಿಜಿಸ್ಟರ್ ನಲ್ಲಿ ನಮೂದಿಸಬೇಕಾದ ಆಸ್ತಿಗಳು ಯಾವುವು? 110ರಲ್ಲಿ ಉಳಿದಂತಹ ಕೆಳಕಂಡ ಆಸ್ತಿಗಳನ್ನು ಅಧಿಕೃತ…
ಶಿವಮೊಗ್ಗ : ಶಿವಮೊಗ್ಗ ನಗರದ ಮೆಗ್ಗಾನ್ ವಿ ವಿ ಕೇಂದ್ರದಲ್ಲಿ ನಾಲ್ಕನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆಯಲ್ಲಿ ಕರೆಂಟ್ ಇರಲ್ಲ. ಬಿ.ಎಸ್.ಎನ್.ಎಲ್.ಭವನ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸೆಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ, ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ, ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಇ-ಖಾತಾ ವಿತರಣೆ ಸಂಬಂಧ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 3 ತಿಂಗಳ ಗಡುವು ನೀಡಲಾಗಿದೆ. ಇದಕ್ಕಾಗಿ SOP ಜಾರಿಗೊಳಿಸಿದೆ. ಈ ಮೂಲಕ ರಾಜ್ಯದ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಪ್ರಮಾಣಿಕ ಕಾರ್ಯವಿಧಾನವನ್ನು ಜಾರಿಗೊಳಿಸಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 03 ತಿಂಗಳೊಳಗಾಗಿ ನೀಡಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ, ಇ-ಖಾತಾ ನೀಡಲು ಅಭಿಯಾನ ಕೈಗೊಂಡು ಕೆಳಕಂಡ ಕಾರ್ಯವಿಧಾನವನ್ನು ಅನುಸರಿಸುವುದು ಅಂತ ಹೇಳಿದ್ದಾರೆ. 1) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡಲು ಬಾಕಿಯಿರುವ ಆಸ್ತಿಗಳ ಗುರುತಿಸುವುದು. ಇ- ಖಾತಾ ಪಡೆಯಲು ಗುರುತಿಸಲಾದ ಆಸ್ತಿಗಳ ಮಾಲೀಕರು ಇ-ಖಾತಾ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಮಾಹಿತಿ ನೀಡುವುದು. 2) ನಗರ…
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣದಲ್ಲಿ ಬ್ರಿಟಿಷ್ ಶಸ್ತ್ರಾಸ್ತ್ರ ಸಲಹೆಗಾರ ಕ್ರಿಶ್ಚಿಯನ್ ಜೇಮ್ಸ್ ಮೈಕೆಲ್ ಗೆ ಸುಪ್ರೀಂ ಕೋರ್ಟ್ ಇಂದು (ಫೆಬ್ರವರಿ 18) ಜಾಮೀನು ನೀಡಿದೆ. ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ನ ಸೆಪ್ಟೆಂಬರ್ 25, 2024 ರ ಆದೇಶದ ವಿರುದ್ಧ ಮೈಕೆಲ್ ವಿಶೇಷ ರಜೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠವು ತನ್ನ ಪಾಸ್ಪೋರ್ಟ್ ಅನ್ನು ನವೀಕರಿಸಬೇಕು ಮತ್ತು ನಂತರ ಅದನ್ನು ಒಪ್ಪಿಸಬೇಕು ಎಂಬ ಷರತ್ತಿನೊಂದಿಗೆ ಜಾಮೀನು ನೀಡಿತು. ಈ ವಿಷಯವನ್ನು ಆರಂಭದಲ್ಲಿ ಬೆಳಿಗ್ಗೆ ಕೈಗೆತ್ತಿಕೊಳ್ಳಲಾಯಿತು. ಆದರೆ, ಸಿಬಿಐ ಪರ ವಕೀಲರು ಸ್ವಲ್ಪ ಸಮಯ ಕೋರಿದರು. ನ್ಯಾಯಾಲಯವು ಜಾಮೀನು ನೀಡಲು ಒಲವು ವ್ಯಕ್ತಪಡಿಸಿದಾಗ, ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯುವ ದೃಷ್ಟಿಯಿಂದ ಮಾತ್ರ ಅರ್ಜಿ ಸಲ್ಲಿಸಲಾಗಿದೆ ಎಂದು ವಕೀಲರು ಹೇಳಿದರು. ನ್ಯಾಯಾಲಯವು ಊಟದ ನಂತರ ಈ ವಿಷಯವನ್ನು ಆಲಿಸಲು ಇಟ್ಟಿತು. ಈ ವಿಷಯ…
ಬೆಂಗಳೂರು: ಅನಧಿಕೃತ ಬಡಾವಣೆ ವಿರುದ್ಧ ಸಿಎಂ ಸಿದ್ಧರಾಮಯ್ಯ ಸಿಡಿದೆದ್ದಿದ್ದಾರೆ. ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ಮತ್ತು ಹಳ್ಳಿಗಳಲ್ಲೂ ಇದ್ದಾವೆ. ಇವುಗಳಿಗೆ ನಾವು ಅಂತ್ಯ ಹಾಡುವುದಾಗಿ ಘೋಷಿಸಿದ್ದಾರೆ. ಇಂದು ನಡೆದ ವಿಡಿಯೊ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ನೀಡಿದ ಸ್ಪಷ್ಟ ಮತ್ತು ಖಚಿತವಾದ ಸೂಚನೆಗಳು ಹೀಗಿವೆ.. ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ: ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ ಎಂದರು. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ. ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ…