Author: kannadanewsnow09

ಬೆಂಗಳೂರು: ಡಿಸೆಂಬರ್.29ರಂದು ಕೆಪಿಎಸ್ಸಿಯಿಂದ 384 ಕೆಎಎಸ್ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಹೆಚ್ಚುವರಿ ಕೆ ಎಸ್ ಆರ್ ಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು, ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ…

Read More

ಬೆಂಗಳೂರು: ನಗರದ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದು ಕಡ್ಡಾಯ. ಹಲವಾರು ಗೊಂದಲಗಳ ನಡುವೆ ಈಗಾಗಲೇ ಕೆಲವರು ಪಡೆದಿದ್ದರೇ, ಮತ್ತೆ ಕೆಲವರು ಪಡೆಯೋ ಪ್ರಯತ್ನದಲ್ಲಿ ಇದ್ದಾರೆ. ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಜಸ್ಟ್ ಐದು ದಾಖಲೆಗಳನ್ನು ಅಪ್ ಲೋಡ್ ಮಾಡಿದ್ರೆ, ಅಂತಿಮ ಇ-ಖಾತಾವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಮಾಲೀಕರ ಆಧಾರ್‌ ಕಾರ್ಡ್‌, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್‌ ಡೀಡ್‌ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದಿದೆ. ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯುವಂತೆ ತಿಳಿಸಿದೆ. https://twitter.com/KarnatakaVarthe/status/1872262419860591082 ಬಿಬಿಎಂಪಿ ಇ-ಖಾತಾ…

Read More

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಇಂದಿನಿಂದ 7 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ 7 ದಿನ ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ಸರ್ಕಾರಿ ಸಭೆ, ಸಮಾರಂಭಗಳನ್ನು ಶೋಕಾಚರಣೆ ಸಂದರ್ಭದಲ್ಲಿ ನಡೆಸುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

Read More

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಸರ್ಕಾರಿ ರಜೆಯನ್ನು ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಅಲ್ಲದೇ ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.

Read More

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೇ ನಾಳೆ ರಾಜ್ಯಾದ್ಯಂತ ದಿನಾಂಕ 27.12.2024ರ ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ನಾಳೆಯಿಂದ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ನಾಳೆ ಸರ್ಕಾರಿ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

Read More

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, “ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ದುಃಖವಾಗಿದೆ ಎಂದಿದ್ದಾರೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ರಾಷ್ಟ್ರಕ್ಕೆ ನಿಮ್ಮ ಸೇವೆಗಾಗಿ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿ ಮತ್ತು ನೀವು ದೇಶಕ್ಕೆ ತಂದ ಪ್ರಗತಿಪರ ಬದಲಾವಣೆಗಳಿಗಾಗಿ ನಿಮ್ಮನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ ಎಂದು ವಾದ್ರಾ ಹೇಳಿದರು. ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಾದ ನಂತರ ಈ ಬೆಳವಣಿಗೆ ನಡೆದಿದೆ. ಮಾಜಿ ಪ್ರಧಾನಿಯನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. https://kannadanewsnow.com/kannada/bjp-demands-resignation-of-priyank-kharge-for-contractor-sachins-suicide/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/

Read More

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆಸ್ಪತ್ರೆಯ ಉನ್ನತ ಮೂಲಗಳ ಮಾಹಿತಿಯಂತೆ ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣದಿಂದ ಬೆಳಗಾವಿಯಿಂದ ವಿಶೇಷ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ಗಣ್ಯರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಇನ್ನೂ ದೆಹಲಿಯ ಏಮ್ಸ್ ಆಸ್ಪತ್ರೆಯ ಉನ್ನತ ಮೂಲಗಳ ಮಾಹಿತಿಯಂತೆ ಮಾಜಿ ಪ್ರಧಾನಿ  ಮನಮೋಹನ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಏಮ್ಸ್ ಆಸ್ಪತ್ರೆಯಿಂದ ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. https://kannadanewsnow.com/kannada/bjp-demands-resignation-of-priyank-kharge-for-contractor-sachins-suicide/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/

Read More

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಕರ್ನಾಟಕ ಬಿಜೆಪಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸನ್ಮಾನ್ಯ TrollMinister ಪ್ರಿಯಾಂಕ್ ಖರ್ಗೆ ಅವರೆ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌, ಟೆಂಡರ್‌ ಕೆಲಸಕ್ಕಾಗಿ ಬೆಂಗಳೂರಿನಲ್ಲಿ ನಿಮ್ಮ ಆಪ್ತ ರಾಜು ಕಪನೂರ್‌ ಜೊತೆ ನಿಮ್ಮನ್ನು ಭೇಟಿಯಾಗಿದ್ದೇನೆ ಎಂದು ಡೆತ್‌ ನೋಟ್‌ ನಲ್ಲಿ ಬರೆದಿದ್ದಾರೆ ಎಂದಿದೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಆಗ್ರಹಿಸಿದೆ. https://twitter.com/BJP4Karnataka/status/1872310367306867103 https://kannadanewsnow.com/kannada/good-news-for-property-owners-in-bengaluru-upload-these-five-documents-get-e-khata/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/ https://kannadanewsnow.com/kannada/breaking-big-relief-for-employees-aadhaar-linking-deadline-with-uan-extended-uan-aadhaar-linking/

Read More

ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಡಿಸೆಂಬರ್ 26, 2024) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಹಾಗೂ ವಿಶೇಷ ಸಾಧನೆಗಳಿಗಾಗಿ ಏಳು ವಿಭಾಗಗಳಲ್ಲಿ ಒಟ್ಟು 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು.  ಈ ಸಂದರ್ಭದಲ್ಲಿ, ಎಲ್ಲಾ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿಯವರು ಅಭಿನಂದಿಸಿದರು ಮತ್ತು ಸಾಧಕ ಮಕ್ಕಳ ಕುರಿತಾಗಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ “ಇಡೀ ದೇಶ ಮತ್ತು ಸಮಾಜವು ಇವರ ಬಗ್ಗೆ ಹೆಮ್ಮೆಪಡುತ್ತದೆ, ದೇಶದ ಇತರ ಬಾಲಕರುಗಳಿಗೆ ಇವರು ಮಾದರಿಯಾಗಿದ್ದಾರೆ. ಇವರು ಅಸಾಧಾರಣ ಕೆಲಸವನ್ನು ಮಾಡಿದ್ದಾರೆ, ಅದ್ಭುತ ಸಾಧನೆಗಳನ್ನು ಸಾಧಿಸಿದ್ದಾರೆ, ಅಪಾರ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಮತ್ತು ಅತುಲ್ಯ ಗುಣಗಳನ್ನು ಹೊಂದಿದ್ದಾರೆ” ಎಂದು ಹೇಳಿದರು. “ಮಕ್ಕಳ ಪ್ರತಿಭೆ ಗುರುತಿಸಿ ಅವಕಾಶ ಕಲ್ಪಿಸಿಕೊಡುವುದು ನಮ್ಮ ಪರಂಪರೆಯಲ್ಲಿಯೇ ಬಂದಿದೆ. ಈ ಸಂಪ್ರದಾಯವನ್ನು ಮತ್ತಷ್ಟು ಬಲಪಡಿಸಬೇಕು. 2047ರಲ್ಲಿ ನಾವು ಭಾರತದ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತೇವೆ. ಈ ಪ್ರಶಸ್ತಿ ವಿಜೇತರು ಆ ಕಾಲಘಟ್ಟದಲ್ಲಿ ದೇಶದ ಪ್ರಬುದ್ಧ ನಾಗರಿಕರಾಗುತ್ತಾರೆ. ಅಂತಹ…

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಡಿ.28 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಎನ್‌ಜೆವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು.…

Read More