Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ಇಂದು ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ.…
ಬಳ್ಳಾರಿ: ಗೃಹಲಕ್ಷ್ಮೀ ಯೋಜನೆ ಜೂನ್ ತಿಂಗಳ ಹಣವನ್ನು ಜಮಾ ಮಾಡಲಾಗಿದೆ. ಈಗ ಜುಲೈ ತಿಂಗಳ ಹಣ ಬಾಕಿ ಇದೆ. ಇದಲ್ಲದೇ ಕೆಲ ಯಜಮಾನಿ ಮಹಿಳೆಯರ ಖಾತೆಗೆ ಇನ್ನೂ ಬಾಕಿ ಹಣ ಜಮಾ ಆಗಬೇಕಿದೆ. ಅಂತಹವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಯಜಮಾನಿಯರ ಖಾತೆಗೆ ಹಣ ಜಮೆ ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮಾ ಆಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮಾ ಆಗಲಿದೆ. ಪ್ರಸ್ತಕ ತಿಂಗಳಿನ…
ಬಳ್ಳಾರಿ : ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಹೇಳಿದ್ದಾರೆ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಅಂಗನವಾಡಿ ಉನ್ನತಿಕರಣದಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು. ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು…
ತಾರಕ ಮಂತ್ರವೆಂದರೆ ಕಷ್ಟಗಳನ್ನು ಪರಿಹರಿಸುವ ಮಂತ್ರ,…’ ತಾರಕ ‘ ಪದದ ಅರ್ಥ ಪರಿಹರಿಸುವವನು, ಎಲ್ಲ ಜೀವಿಗಳಿಗೆ ಭವ ಅಂದರೆ ಸಂಸಾರ ಸಾಗರದ ಎಲ್ಲ ಕಷ್ಟ, ತಾಪತ್ರಯಗಳನ್ನು ದಾಟಲು ಸಹಾಯ ಮಾಡುವವನು. ತಾರಕ ಮಂತ್ರವು ಜನನ ಮತ್ತು ಮರಣದ ಚಕ್ರ ಗಳನ್ನು ದಾಟಲು ನಮಗೆ ಸಹಾಯ ಮಾಡುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಒಂದು ಸಲ…
ಉತ್ತರ ಪ್ರದೇಶ: ಇಲ್ಲಿನ ಹತ್ರಾಸ್ ನಲ್ಲಿ ಸತ್ಸಂಗ ಕಾರ್ಯಕ್ರಮದ ವೇಳೆ ಉಂಟಾದಂತ ಕಾಲ್ತುಳಿದಲ್ಲಿ 121 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ನನ್ನು ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 121 ಜನರ ಸಾವಿಗೆ ಕಾರಣವಾದ ‘ಸತ್ಸಂಗ’ (ಧಾರ್ಮಿಕ ಪ್ರಾರ್ಥನಾ ಸಭೆ) ಯ ಮುಖ್ಯ ಸಂಘಟಕ ಮಧುಕರ್. ಸ್ವಯಂ ಘೋಷಿತ ದೇವಮಾನವ ಸೂರಜ್ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಹತ್ರಾಸ್ ಘಟನೆಯ ಬಗ್ಗೆ ಮೌನ ಮುರಿದಿದ್ದಾರೆ ಮತ್ತು ಗೊಂದಲವನ್ನು ಸೃಷ್ಟಿಸಿದವರನ್ನು ಬಿಡುವುದಿಲ್ಲ ಎಂದು ಸರ್ಕಾರದ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದರು. ಗುರುವಾರ, ಹತ್ರಾಸ್ ಪೊಲೀಸರು ಸತ್ಸಂಗ ಸಂಘಟನಾ ಸಮಿತಿಯ ಸದಸ್ಯರಾಗಿದ್ದ ಆರು ಸ್ವಯಂಸೇವಕರನ್ನು ಬಂಧಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ. ಪರಿಶೀಲನೆಯಲ್ಲಿರುವ ಹೆಚ್ಚುವರಿ ಶಂಕಿತರನ್ನು ಪ್ರಶ್ನಿಸಲಾಗುತ್ತಿದೆ ಮತ್ತು ಮುಖ್ಯ ಆರೋಪಿ ದೇವಪ್ರಕಾಶ್ ಮಧುಕರ್ ಗಾಗಿ ಶೋಧ ನಡೆಯುತ್ತಿದೆ ಎಂದು ಎಡಿಜಿ ಉಲ್ಲೇಖಿಸಿದ್ದಾರೆ. ಆಗ್ರಾ ವಲಯದ ಎಡಿಜಿ ಸಲ್ಲಿಸಿದ ಆರಂಭಿಕ ಎಸ್ಐಟಿ ವರದಿಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಗೋಬಿ ಮಂಚೂರಿಗೆ ಬಳಿಸುವಂತ ಬಣ್ಣ, ಆ ಬಳಿಕ ಕಬಾಬ್ ಗೆ ಬಳಸುವಂತ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿತ್ತು. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲಿದೆ ಅಂತ ತಿಳಿದು ಬಂದಿದೆ. ಹೌದು ಟೀ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವುದು ಪ್ರಾಯೋಗಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಶೀಘ್ರವೇ ಟೀ ಪುಡಿ ಬ್ಯಾನ್ಗೆ ನಿರ್ಧರಿಸಿದೆ. ಈಗಾಗಲೇ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಟೀ ಪುಡಿಯನ್ನು ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ. ಆ ಬಗ್ಗೆ ಕೆಲವೇ ದಿನಗಳವರೆಗೆ ಕಾದು ನೋಡಬೇಕಿದೆ. https://kannadanewsnow.com/kannada/assam-flood-situation-worsens-24-50-lakh-people-affected-in-30-districts/ https://kannadanewsnow.com/kannada/state-govt-appoints-district-in-charge-secretaries-heres-the-list/
ಬೆಂಗಳೂರು: ರಾಜ್ಯದಲ್ಲಿ ಮುಂಬರುವಂತ ನಾಲ್ಕು ಉಪ ಚುನಾವಣೆಗಳಿಗೆ ಕರ್ನಾಟಕ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ನಾಲ್ಕು ಒಂದು ಸ್ಥಳೀಯ ಸಂಸ್ಥೆ ಹಾಗೂ ಮೂರು ವಿಧಾನಸಭಾ ಉಪ ಚುನಾವಣೆಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ ಅಂತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ಉಸ್ತುವಾರಿಗಳನ್ನಾಗಿ ಸಂಸದ ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ ಹಾಗೂ ಪ್ರೀತಂ ಗೌಡ ನೇಮಕ ಮಾಡಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪಿ.ರಾಜೀವ್ ನೇಮಿಸಿದ್ರೇ, ಸಂಡೂರು ಕ್ಷೇತ್ರಕ್ಕೆ ಸಂಸದ ಗೋವಿಂದ ಕಾರಜೋಳ, ವಿ.ಸುನೀಲ್ ಕುಮಾರ್, ಎನ್ ರವಿಕುಮಾರ್, ಕೆಎಸ್ ನವೀನ್ ನೇಮಿಸಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿಎನ್ ಅಶ್ವತ್ಥನಾರಾಯಣ,…
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯ ಪಿಯುಬಿ ಕಟ್ಟಡದದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಯು ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಿ, ಬಿಗ್ ಶಾಕ್ ಅನ್ನು ಬಿಬಿಎಂಪಿ ನೀಡಿದೆ. ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬೀಗ ಹಾಕಲಾಗಿದೆ. ಪಿ.ಯು.ಬಿ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಮಳಿಗೆ ಸಂಖ್ಯೆ: 14/15 ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಮತ್ತು ಮಳಿಗೆ ಸಂಖ್ಯೆ: 17, ಅಂಚೆ ಕಛೇರಿ ಇಲಾಖೆಗಳಿವೆ. ಬ್ಯಾಂಕ್ ಆಫ್ ಬರೋಡಾ (ವಿಜಯಾ ಬ್ಯಾಂಕ್) ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್)ರವರು 2011 ರಿಂದ ಹಳೆಯ ಬಾಡಿಗೆಯನ್ನು ಪಾವತಿಸುತ್ತಿದ್ದು, ಪರಿಷ್ಕೃತ ಬಾಡಿಗೆಯನ್ನು ಪಾವತಿಸುತ್ತಿರುವುದಿಲ್ಲ. ಅಲ್ಲದೆ ಡಿಸೆಂಬರ್ 2022 ರಿಂದ ಯಾವುದೇ ಬಾಡಿಗೆಯನ್ನು ಪಾವತಿಸದೇ ಇದ್ದ ಕಾರಣ ಹಲವಾರು ಬಾರಿ ನೋಟೀಸ್ ಜಾರಿ ಮಾಡಿದ್ದರೂ ಕೂಡ ಬಾಡಿಗೆಯನ್ನು ಪಾವತಿಸಿರುವುದಿಲ್ಲ. ಬ್ಯಾಂಕ್ ಆಫ್ ಬರೋಡಾ…
ಹಾಸನ : ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ್ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ಮೈಸೂರು ಅಂಬಾರಿ ಹ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷಕ್ಕೆ ಏನು ಕಾರಣ ಎಂಬ ಅಧ್ಯಯನಕ್ಕೆ ಒತ್ತು ನೀಡಲಾಗುವುದು ಎಂದರು. ಆನೆ ಹಾವಳಿ ತಪ್ಪಿಸಲು ಆಗಸ್ಟ್ 12ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ…
ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಇಂತಹ ಅವರು ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರಿಗೆ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಗೌರವಾನ್ವಿತ ಶ್ರೀ ನ್ಯಾಯಾಮೂರ್ತಿ ಬಿ.ವೀರಪ್ಪ ಅವರು ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೌರವಾನ್ವಿತ ನ್ಯಾಯಾಮೂರ್ತಿ ಲೋಕಾಯುಕ್ತ ಬಿ ಎಸ್ ಪಾಟೀಲ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು. https://kannadanewsnow.com/kannada/good-news-for-ration-card-holders-state-govt-extends-date-for-linking-aadhaar-number-again/ https://kannadanewsnow.com/kannada/assam-flood-situation-worsens-24-50-lakh-people-affected-in-30-districts/