Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯಾಧ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಆ ನಿಯಮ ಪಾಲನೆ ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ…
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವ ಆರೋಪ ಮಾಡಿದ್ದಾರೆ. ಅಲ್ಲದೇ ಅವರ ವಿರುದ್ಧ ಎಸ್ಐಟಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೊಸ ದೂರುದಾರನೊಬ್ಬ ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅಕ್ರಮವಾಗಿ ಶವ ಹೂತ ಬಗ್ಗೆ ಎಸ್ಐಟಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಎಂಬುವರು ಬೆಳ್ತಂಗಡಿ ಎಸ್ಐಟಿ ಪೊಲೀಸ್ ಠಾಣೆಗೆ ತೆರಳಿ ಹೊಸ ದೂರು ಸಲ್ಲಿಸಿದ್ದಾರೆ. 2018ರಲ್ಲಿ ಉಜಿರೆಯಲ್ಲಿ ಬಿಲ್ಲರೋಡಿ ಎಂಬಲ್ಲಿ ಶವ ಹೂತ ಆರೋಪ ಮಾಡಿದ್ದಾರೆ. ಸೋಂಪ ಯಾನೆ ಬಾಲಕೃಷ್ಣಗೌಡ ಎಂಬುವರ ಶವ ಹೂತ ಬಗ್ಗೆ ದೂರಿನಲ್ಲಿ ಆರೋಪಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಕೊಲೆ ಮಾಡಿ ಶವ ಹೂತಿರುವ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದು, ಜೆಸಿಬಿ…
ಬೆಂಗಳೂರು : “ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾವಣೆ ಮಾಡಲು ತುಂಗಭದ್ರಾ ಮಂಡಳಿಯವರು ಟೆಂಡರ್ ಕರೆದಿದ್ದಾರೆ. ಈಗಾಗಲೇ ಅಹಮದಾಬಾದ್ ಸಂಸ್ಥೆಯವರಿಗೆ ಗುತ್ತಿಗೆ ನೀಡಲಾಗಿದೆ. ಆರು ಗೇಟ್ ಗಳ ತಯಾರಿ ಕೆಲಸ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದರು. “ಈಗಾಗಲೇ ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ಎಂಜಿನಿಯರ್ ಅವರಿಗೆ ಕೆಲಸವನ್ನು ಇನ್ನೂ ವೇಗಗೊಳಿಸಿ ಎಂದು ಸೂಚನೆ ನೀಡಿದ್ದೇನೆ. ಗೇಟ್ ತಯಾರಿಸಲು ಬೇರೆಯವರಿಗೂ ಅವಕಾಶ ನೀಡಿ, ಇದರಿಂದ ಕೆಲಸ ಬೇಗ ಆಗುತ್ತದೆ ಎಂದು ಹೇಳಿದ್ದೇನೆ” ಎಂದು ತಿಳಿಸಿದರು. ಎರಡನೇ ಬೆಳೆಗೆ ನೀರಿಲ್ಲ “ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹ ಮಾಡಬೇಕಾದ ಕಾರಣಕ್ಕೆ ಎರಡನೇ ಬೆಳೆಗೆ ಈ ವರ್ಷ ನೀರು ನೀಡಲು ಸಾಧ್ಯವಾಗುತ್ತಿಲ್ಲ. ನೀರು ಕೊಟ್ಟರೆ…
ವಿಧಾನಪರಿಷತ್: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‌ನಲ್ಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ. ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನ ಪರಿಷತ್‌ನಲ್ಲಿ ಈ ಎರಡೂ ಕಾಯ್ದೆಗಳ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆಸಲಾಯಿತು. ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ಇದುವರೆಗೂ ಸಂಪೂರ್ಣ ತಡೆ ಸಾಧ್ಯವಾಗಿಲ್ಲ. ಬಾಲ್ಯವಿವಾಹವನ್ನು ಬೇರು ಸಮೇತ ಕಿತ್ತೊಗೆಯಬೇಕು. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಹೊಸ ಕಾಯ್ದೆ ನಿಯಮ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ನೀಡಲಾಗುವುದು. ಜೊತೆಗೆ ಬಾಲ್ಯವಿವಾಹ ಮುಕ್ತ ಗ್ರಾಮ…
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ. ಲಭ್ಯ ಸೀಟುಗಳ ವಿವರಗಳನ್ನು ಕೂಡ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಗುರುವಾರದಿಂದ (ಆ.21) ಇಚ್ಛೆ/ಆಯ್ಕೆಗಳನ್ನು ಬದಲಿಸುವ/ತೆಗೆಯುವ ಕೆಲಸವನ್ನೂ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಆ.25ರವರೆಗೆ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆ.29ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರ್ಯುವೇದ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಕೂಡ ಪ್ರಕಟಿಸಿದ್ದು, ಈ ಕೋರ್ಸ್ ಗೆ ಮಾತ್ರ ಇಚ್ಚೆ/ಆಯ್ಕೆಗಳನ್ನು ದಾಖಲು ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಚಾಯ್ಸ್-1 ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದಿರುವವರನ್ನು ಹೊರತುಪಡಿಸಿ, ಛಾಯ್ಸ್- 2 ಹಾಗೂ 3 ಆಯ್ಕೆ ಮಾಡಿದವರಿಗೂ ಆಯುರ್ವೇದ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದುವರೆಗೂ ಸೀಟು ಹಂಚಿಕೆಯಾಗದಿರುವವರು…
ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಎ, ಬಿ, ಸಿ ಎಂದು ಮಾಡಿದ್ದಾರೆ ಎಂದು ಆರೋಪಿಸಿದರು. ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು ಎಂದು ಕೇಳಿದರು. ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ,…
ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಮಾಡಲಾಗಿದ್ದು, ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಿದೆ. ಡಿಜಿ ಮತ್ತು ಐಜಿಪಿ ಆದೇಶದ ಮೇರೆಗೆ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. 2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಂತ ಅನನ್ಯ ಭಟ್ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ಎಸ್ಐಟಿಗೆ ರಾಜ್ಯ ಸರ್ಕಾರ ಹಸ್ತಾಂತರಿ ಅಧಿಕೃತ ಆದೇಶ ಮಾಡಿದೆ. ನಿನ್ನೆ ಫೋಟೋದಲ್ಲಿರುವವಳೇ ನನ್ನ ಮಗಳು ಎಂದಿದ್ದ ಸುಜಾತ ಭಟ್ ದೂರುದಾರೆ ಸುಜಾತ ಭಟ್ ಅವರು, ಎಲ್ಲರೂ ಒಂದೊಂದು ರೀತಿ ತೇಜೋವಧೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ. ನನ್ನ ನೋವು ನನಗೆ…
ಬೆಂಗಳೂರು : ‘ಬೊನ್ ಮ್ಯಾರೋ ಟ್ರಾನ್ಸ್ ಪಲೆಂಟ್ ‘ ಕಾಯಿಲೆ ಯಿಂದ ಬಳಲುತ್ತಿದ್ದ ಎಚ್. ಡಿ. ಕೋಟೆಯ ಹಿರೇಹಳ್ಳಿಯ ಎನ್. ಚೆಲುವಪ್ಪ ಪುತ್ರ ಗಗನ್ ಗೌಡ ಎಂಬ ಒಂಬತ್ತು ವರ್ಷದ ಬಾಲಕ ನಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ವೈಯಕ್ತಿಕವಾಗಿ ಐದು ಲಕ್ಷ ರೂ. ವೈದ್ಯಕೀಯ ನೆರವು ನೀಡಿದರು. ಬಾಲಕನ ವೈದ್ಯಕೀಯ ಚಿಕಿತ್ಸೆಗೆ 35 ಲಕ್ಷ ರೂ. ಅಗತ್ಯವಿದ್ದು,ಎಚ್. ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮೂಲಕ ನೆರವಿಗಾಗಿ ಬೆಂಗಳೂರಿಗೆ ಬಂದಿದ್ದ ಬಾಲಕ ಗಗನ್ ಗೌಡ ಹಾಗೂ ಆತನ ತಂದೆ ಚೆಲುವಪ್ಪ ಅವರನ್ನು ವಿಕಾಸ ಸೌಧ ಕಚೇರಿಗೆ ಕರೆಸಿಕೊಂಡ ಸಚಿವರು ಐದು ಲಕ್ಷ ರೂ. ನೀಡಿದರು. ಶಾಸಕರಾದ ಗಣೇಶ್, ಅಸೀಫ್ ಸೇಠ್, ಭರತ್ ರೆಡ್ಡಿ, ಕೆ ಎಂ ಎಫ್ ಮಾಜಿ ಅಧ್ಯಕ್ಷ ಭೀಮಾ ನಾಯ್ಕ್ ಉಪಸ್ಥಿತರಿದ್ದರು. https://kannadanewsnow.com/kannada/from-september-1-the-basava-culture-campaign-closing-ceremony-on-october-5-at-the-palace-grounds-minister-m-b-patil/ https://kannadanewsnow.com/kannada/shocking-incident-in-the-state-a-woman-murdered-by-pushing-a-car-into-a-lake-in-a-cinematic-style-in-hassan/
ಬೆಂಗಳೂರು: ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಒಕ್ಕೂಟದ ಹಲವು ಸ್ವಾಮೀಜಿಗಳು ಅಭಿಯಾನ ಮತ್ತು ಸಮಾರೋಪ ಕಾರ್ಯಕ್ರಮದ ರೂಪುರೇಷೆ ಕುರಿತು ಸಚಿವರನ್ನು ಅವರ ಇಲ್ಲಿನ ಅಧಿಕೃತ ನಿವಾಸದಲ್ಲಿ ಬುಧವಾರ ಭೇಟಿಯಾಗಿ, ಎರಡನೇ ಸುತ್ತಿನ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಬಸವಣ್ಣನ ಹುಟ್ಟೂರಾದ ಬಸವನ ಬಾಗೇವಾಡಿಯಲ್ಲಿ ಸೆ.1ರಂದು ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ಅದ್ಧೂರಿ ಸಮಾರೋಪ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಗದಗಿನ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸಿದ್ಧರಾಮ ಮಹಾಸ್ವಾಮಿ, ಸಾಣೇಹಳ್ಳಿ ಮಠದ…
ಹಾಸನ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆಯನ್ನು ಹತ್ಯೆಗೈದು, ಕಿಡಿಗೇಡಿಗಳು ಕತೆ ಕಟ್ಟಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಸಿನಿಮೀಯ ರೀತಿಯಲ್ಲಿ ಕಾರು ಕೆರೆಗೆ ತಳ್ಳಿ ಮಹಿಳೆ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಚಂದನಹಳ್ಳಿ ಸಮೀಪದ ಬೇಲೂರಿನ ಶ್ವೇತಾ(32) ಕೊಲೆ ಮಾಡಲಾಗಿದೆ. ಗಂಡನಿಂದ ದೂರಾಗಿ ತವರು ಮನೆಯನ್ನು ಮೃತ ಶ್ವೇತಾ ಸೇರಿದ್ದರು. ಇಂತಹ ಶ್ವೇತಾಗೆ ಹಾಸನದಲ್ಲಿ ಕೆಲಸ ಮಾಡುವಾಗ ರವಿ ಎಂಬಾತ ಪರಿಚಯವಾಗಿದ್ದನು. ನಾನು ಪತ್ನಿ ಬಿಟ್ಟು ಬರ್ತೀನಿ, ನೀನು ಬಾ ಎಂದು ರವಿ ಎಂಬಾತ ಶ್ವೇತಾ ಪೀಡಿಸಿದ್ದನಂತೆ. ಆದರೇ ಶ್ವೇತ ಮಾತ್ರ ರವಿಯ ಪ್ರಸ್ತಾಪವನ್ನು ನಿರಾಕರಿಸಿದ್ದರು. ಇದೇ ಕಾರಣಕ್ಕೆ ರವಿ ಶ್ವೇತಾಳನ್ನು ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ನಿನ್ನೆ ಹಾಸನದಿಂದ ತನ್ನ ಕಾರಿನಲ್ಲಿ ಶ್ವೇತಾಳನ್ನು ರವಿ ಕರೆತಂದಿದ್ದನು. ಆದರೇ ಚಂದನಹಳ್ಳಿ ಕೆರೆಗೆ ಕಾರು ಬೀಳಿಸಿ ಕತೆಯನ್ನು ಆರೋಪಿ ರವಿ…














