Author: kannadanewsnow09

ಹೈದರಾಬಾದ್: ತಿರುಪತಿಯಲ್ಲಿ ನಿನ್ನೆ ವೈಕುಂಠ ಏಕಾದಶಿ ಪ್ರಯುಕ್ತ ದರ್ಶನದ ಟಿಕೆಟ್ ಪಡೆಯುವ ಸಂದರ್ಭದಲ್ಲಿ ಕಾಲ್ತುಳಿತ ಘಟನೆ ನಡೆದಿತ್ತು. ಈ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದರು. ಇಂತಹ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರವು ತಲಾ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಈ ಸಂಬಂಧ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತದಿಂದ ಮೃತರಾದಂತವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿರುವಂತ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ. ಇನ್ನೂ ತಿರುಪತಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಂತ 6 ಭಕ್ತಾಧಿಗಳ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಆಂಧ್ರ ಸರ್ಕಾರವು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ನೀಡಿವುದು ಕಡಿಮೆಯೇ ಆಗಿದೆ. 1 ಕೋಟಿ ಪರಿಹಾರ ಕೊಡುವಂತೆ ಕಾಂಗ್ರೆಸ್ ಪಕ್ಷವು ಆಗ್ರಹಿಸಿದೆ.

Read More

ಆಂಧ್ರಪ್ರದೇಶ: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿರುಮಲದಲ್ಲಿ ಹೆಚ್ಚು ಜನರು ಸೇರಿದ್ದರಿಂದ ಟಿಕೆಟ್ ಕೌಂಟರ್ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಹೀಗಾಗಿ ಕಾಲ್ತುಳಿತ ಉಂಟಾಗಿ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಟಿಕೆಟ್ ವಿತರಣೆ ರದ್ದುಗೊಳಿಸಲಾಗಿದೆ. ವೈಕುಂಠ ದ್ವಾರದಲ್ಲಿ ಟಿಕೆಟ್ ಗಾಗಿ ಹೆಚ್ಚು ಜನರು ಸೇರಿದ್ದರ ಪರಿಣಾಮ ತಿರುಪತಿಯಲ್ಲಿ ಕಾಲ್ತುಳಿತ ಉಂಟಾಗಿದೆ. ಈ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ವೈಕುಂಟ ಏಕಾದಶಿಯ ಟಿಕೆಟ್ ಗಾಗಿ ಕೌಂಟರ್ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಭಕ್ತರು ಸಾವನ್ನಪ್ಪಿದ ಕಾರಣ, ಟಿಕೆಟ್ ವಿತರಣೆ ರದ್ದುಗೊಳಿಸಲಾಗಿದೆ. ನಾಳೆ ಮುಂಜಾನೆಯವರೆಗೂ ಟಿಕೆಟ್ ವಿತರಣೆಯನ್ನು ಸ್ಥಗಿತಗೊಳಿಸಿರುವುದಾಗಿ ಟಿಟಿಡಿ ತಿಳಿಸಿದೆ.

Read More

ಆಂಧ್ರಪ್ರದೇಶ: ತಿರುಪತಿ ವಿಷ್ಣು ನಿವಾಸದ ಬಳಿ ಕಾಲ್ತುಳಿತದಲ್ಲಿ ಮೃತಪಟ್ಟ ಭಕ್ತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ವೈಕುಂಠ ಏಕಾದಶಿ ಸರ್ವದರ್ಶನ ಟೋಕನ್ ನೀಡುವ ಕೌಂಟರ್ ಬಳಿ ಈ ಘಟನೆ ನಡೆದಿದೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಆಂಧ್ರಪ್ರದೇಶ: ತಿರುಪತಿ ವಿಷ್ಣು ನಿವಾಸದ ಬಳಿ ಕಾಲ್ತುಳಿತಕ್ಕೆ ಮೂವರು ಭಕ್ತರು ಸಾವನ್ನಪ್ಪಿದ್ದಾರೆ. ವೈಕುಂಠ ಏಕಾದಶಿ ಸರ್ವದರ್ಶನ ಟೋಕನ್ ನೀಡುವ ಕೌಂಟರ್ ಬಳಿ ಈ ಘಟನೆ ನಡೆದಿದೆ. ವೈಕುಂಠ ಏಕಾದಶಿ ಆಚರಣೆಗಾಗಿ ಸ್ಥಾಪಿಸಲಾದ ಟೋಕನ್ ಕೌಂಟರ್ಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/shivamogga-k-siddappa-thanks-state-government-for-solving-tahsildar-layout-issue/ https://kannadanewsnow.com/kannada/first-hmpv-virus-case-detected-in-mumbai-number-of-infected-people-in-maharashtra-rises-to-3/

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತರಾಗಿದ್ದರು. ಹೀಗೆ ಶರಣಾದಂತ ಆರು ನಕ್ಸಲರಿಗೆ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ತಲಾ 3 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ನಕ್ಸಲ್ ಚಟುವಟಿಕೆಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಶರಣಾಗತರಾದವರನ್ನು ಸರ್ಕಾರದಿಂದ ಘೋಷಣೆಯಾಗಿರುವ ಸೌಲಭ್ಯಗಳನ್ನು ಒದಗಿಸಲು ಉಲ್ಲೇಖ(1) ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:6-01-2025 ರಂದು ರಾಜ್ಯದ ಭೂಗತ ನಕ್ಸಲರಾದ 1)ಮುಂಡಗಾರು ಲತಾ 2) ಸುಂದರಿ ಕುತ್ತಲೂರು 3)ವನಜಾಕ್ಷಿ ಬಾಳೆಹೊಳೆ 4) ಮಾರೆಪ್ಪ ಆರೋಟಿ 5) ಕೆ.ವಸಂತ 6) ಟಿ.ಎನ್.ಜಿಷಾ ಇವರುಗಳು ಎಡಪಂಥೀಯ ತೀವುಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯ ರಾಜ್ಯ ಮಟ್ಟದ ನಕ್ಸಲ್ ಶರಣಾಗತ ಸಮಿತಿಯ ಮುಂದೆ ಮುಖ್ಯವಾಹಿನಿಗೆ ಶರಣಾಗತರಾಗಿರುತ್ತಾರೆ. ಅದರಂತೆ ಇವರುಗಳ ಶರಣಾಗತ ಅರ್ಜಿಯನ್ನು ಅನುಮೋದಿಸಿ ಅಂಗೀಕರಿಸಲು ಹಾಗೂ…

Read More

ಶಿವಮೊಗ್ಗ: ತಹಶೀಲ್ದಾರ್ ಲೇಔಟ್ ಗಳಲ್ಲಿ ನಿವೇಶನ ಖರೀದಿಸಿದವರಿಗೆ ಎ-ಖಾತಾ, ಬಿ-ಖಾತಾ ಲಭ್ಯವಾಗದೇ ಸಮಸ್ಯೆ ಉಂಟಾಗಿತ್ತು. ತಹಶೀಲ್ದಾರ್ ಲೇಔಟ್ ಗಳಲ್ಲಿ ಸೈಟ್ ಖರೀದಿಸಿ ಸಮಸ್ಯೆಗೆ ಸಿಲುಕಿದ್ದಂತ ಜನರಿಗೆ ಬಿ-ಖಾತಾ ಒದಗಿಸಲು ರಾಜ್ಯ ಸರ್ಕಾರ ನಿರ್ದೇಶಿಸಿದೆ. ಈ ಸಮಸ್ಯೆ ಪರಿಹರಿಸಿದಂತ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಾಗರ ತಾಲ್ಲೂಕು ಅಸಂಘಟಿತ ಕಾರ್ಮಿಕ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿದ್ಧಪ್ಪ ಧನ್ಯವಾದ ತಿಳಿಸಿದ್ದಾರೆ. ಇಂದು ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸಾಗರದಲ್ಲಿ ತಹಶೀಲ್ದಾರ್ ಲೇಔಟ್ ಸಮಸ್ಯೆ ಉಂಟಾಗಿತ್ತು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆ ಸರಿ ಪಡಿಸಲು ಮನವಿ ಮಾಡಲಾಗಿತ್ತು. ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸೋದಕ್ಕೆ ಕೋರಲಾಗಿತ್ತು ಎಂದರು. ತಹಶೀಲ್ದಾರ್ ನೋಂದಾಯಿತ ಲೇಔಟ್ ಗಳಲ್ಲಿ ನಿವೇಶನ ಖರೀದಿಸಿದ, ಮನೆ ನಿರ್ಮಿಸಿದ ಮಾಲೀಕರ ಸ್ಥಿತಿ ಅತ್ಯಂತ ಶೋಚನೀಯವಾಗಿತ್ತು. ನಿವೇಶನ ಮಾರಾಟಕ್ಕೂ ಆಗದೇ, ಬ್ಯಾಂಕ್ ನಿಂದ ಸಾಲ…

Read More

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ಖಚಿತ ಗೌರವಧನ ಬದಲಾಗಿ 9500 ರೂಪಾಯಿಗಳನ್ನ ಮುಂಗಡವಾಗಿ ನೀಡಲು ಸರ್ಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವರು, ಪ್ರತಿಭಟನೆ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದರು. 15 ಸಾವಿರ ವೇತನ ಫಿಕ್ಸ್ ಮಾಡುವಂತೆ ಆಶಾ ಕಾರ್ಯಕರ್ತೆಯರು ಈ ವೇಳೆ ಸಚಿವರಿಗೆ ಒತ್ತಾಯಿಸಿದರು. ಈ ಕುರಿತಂತೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ 8 ಸಾವಿರ ಗೌರವಧನ ಖಚಿತವಾಗಿ ಸಿಗುತ್ತಿದೆ. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರ್ಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಬಿಎಂಟಿಸಿಯಿಂದ ಬಸ್ ಪಾಸ್ ದರಗಳನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಇಂದು ಮಧ್ಯ ರಾತ್ರಿಯಿಂದಲೇ ಪರಿಷ್ಕೃತ ನೂತನ ದರಗಳು ಜಾರಿಗೊಳ್ಳಲಿದ್ದಾವೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಸಾಮಾನ್ಯ ದೈನಿಕ ಪಾಸು ರೂ.70 ಇದ್ದದ್ದನ್ನು ರೂ.80ಕ್ಕೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಸಾಪ್ತಾಹಿಕ ವಾರದ ಪಾಸು ದರ ರೂ.300ರಿಂದ ರೂ.350ಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಇನ್ನೂ ಹಿರಿಯ ನಾಗರೀಕರ ಸಾಮಾನ್ಯ ಮಾಸಿಕ ಪಾಸು ದರ ರೂ.945 ಇದ್ದದ್ದನ್ನು ರೂ.1080ಕ್ಕೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಮಾಸಿಕ ಪಾಸು ದರ ರೂ.1050ರಿಂದ ರೂ.1200ಕ್ಕೆ ಹೆಚ್ಚಳವಾಗಿದೆ. ನೈಸ್ ರಸ್ತೆಯ ಸಾಮಾನ್ಯ ಮಾಸಿಕ ಪಾಸು ಟೋಲ್ ಶುಲ್ಕ ಒಳಗೊಂಡಂತೆ ರೂ.2200 ರಿಂದ ರೂ.2350ಕ್ಕೆ ಏರಿಕೆ ಮಾಡಲಾಗಿದೆ. ವಾಯು ವಜ್ರ ದೈನಿಕ ಪಾಸಿನ ದರವನ್ನು ರೂ.120 ರಿಂದ ರೂ.140ಕ್ಕೆ ಏರಿಕೆ ಮಾಡಲಾಗಿದೆ. ಮಾಸಿಕ ಪಾಸ್ ದರ ರೂ.1800ರಿಂದ…

Read More

ಮಡಿಕೇರಿ :-ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಚಾಲನೆ ನೀಡಿದರು. ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರೂ. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೆಲಮಹಡಿ ಸೇರಿ ಮೂರು ಅಂತಸ್ತಿನ ಹನ್ನೆರಡು ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಶಾಸಕರಾದ ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ ಗೌಡ ಅವರು ಸರ್ಕಾರ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಿದೆ ಎಂದರು. ಪೌರಕಾರ್ಮಿಕರು ಪ್ರತಿ ನಿತ್ಯ ನಗರ ಪಟ್ಟಣ ಪ್ರದೇಶದಲ್ಲಿ ಸ್ವಚ್ಛತೆಗೆ ದುಡಿಯುತ್ತಾರೆ. ಇವರಿಗೆ ಮೂಲಸೌಲಭ್ಯ ಕಲ್ಪಿಸುವುದು ಹೆಚ್ಚಿನ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಶೀಘ್ರ ಮನೆ ನಿರ್ಮಾಣದ ಕಾಮಗಾರಿ ಆರಂಭಿಸಿ, ಪೂರ್ಣಗೊಳಿ¸ಬೇಕು ಎಂದು ಡಾ.ಮಂತರ್ ಗೌಡ ಅವರು ತಾಕೀತು ಮಾಡಿದರು. ಸರ್ಕಾರ ಎಲ್ಲಾ ವರ್ಗದ ಜನರಿಗೆ ಕನಿಷ್ಠ ಮೂಲ…

Read More

ಬೆಂಗಳೂರು: ಇಂದು ಕರ್ನಾಟಕ, ಕೇರಳ ರಾಜ್ಯಕ್ಕೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಈ ಬಳಿಕ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. 6 ನಕ್ಸಲರು ಶರಣಾಗತಿಯ ಬಳಿಕ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮಾತಿನ ಹೈಲೈಟ್ಸ್ ಈ ಕೆಳಗಿನಂತಿದೆ. • ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. • ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು. • ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. • ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ. • ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ…

Read More