Author: kannadanewsnow09

ಬೆಂಗಳೂರು : ಕನ್ನಡ ಚಲನಚಿತ್ರಗಳ ಬೆಳವಣಿಗೆಗೆ ಸರ್ಕಾರ ಮೊದಲಿನಿಂದಲೂ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಾ ಬಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚಲನಚಿತ್ರ ನಿರ್ಮಾಪಕರಿಗೆ ಇಲ್ಲಿಯವರೆಗೆ ಸ್ವಂತ ಕಟ್ಟಡ ಇರಲಿಲ್ಲ. ಸ್ವಂತ ಕಟ್ಟಡ ನಿರ್ಮಾಣವಾಗಿದ್ದು , ಅದರ ಉದ್ಘಾಟನೆಯನ್ನು ನೆರವೇರಿಸಿದ್ದೇನೆ ಎಂದರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ 8.00 ಗಂಟೆಗೆ ಸಮಾಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ ತಪ್ಪಿಸಬಾರದೆಂದು ಆಗಮಿಸಿದ್ದೇನೆ ಎಂದರು. 1972 ರಿಂದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದವರು ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹಳ ಕಷ್ಟದ ದಿನಗಳಿದ್ದರೂ ಕೂಡ ಚಲನಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿರ್ಮಾಪಕರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು. ಆರ್ಥಿಕ ಸಹಾಯವನ್ನು ಸಂಘ ಕೇಳಿಯೇ ಇಲ್ಲ. ಸರ್ಕಾರದಿಂದ ಆರ್ಥಿಕ ಸಹಾಯ ಮಾಡಿಯೇ ಮಾಡುತ್ತದೆ ಎಂದರು. ಓಟಿಟಿ…

Read More

ಬೆಂಗಳೂರು : ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ ಅನಿವಾಸಿ ಭಾರತೀಯ (NRI) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‍ಎಂಸಿ) ಅಧ್ಯಕ್ಷರಿಗೆ ಈಕುರಿತು ಪತ್ರ ಬರೆದಿದ್ದು, ರಾಜ್ಯದಲ್ಲಿರುವ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಕ್ಕಾಗಿ 508 ಹೆಚ್ಚುವರಿ ಸೂಪರ್ ನ್ಯೂಮರರಿ (supernumerary) ಎಂಬಿಬಿಎಸ್ ಸೀಟುಗಳನ್ನು ಸೃಷ್ಟಿಸುವ ಮೂಲಕ ಶೇ 15ರಷ್ಟು ಎನ್ಆರ್ ಐ ಕೋಟಾ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಯುಜಿ-ಎಂಬಿಬಿಎಸ್ ವಾರ್ಷಿಕ ಮಂಜೂರಾದ ಸೀಟುಗಳ ಮೇಲೆ ಹೆಚ್ಚುವರಿ ಸೀಟುಗಳನ್ನು ರಚಿಸುವುದು ಸೂಪರ್ ನ್ಯೂಮರರಿ ಉದ್ದೇಶವಾಗಿದೆ. ಪ್ರಸ್ತಕ ವೈದ್ಯಕೀಯ ಶಿಕ್ಷಣಇಲಾಖೆಯಡಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳು 2023-24ನೇ ಸಾಲಿನಲ್ಲಿ 3,450 ಸೀಟುಗಳ ಸಾಮಥ್ರ್ಯವನ್ನು ಹೊಂದಿದ್ದು ಅದರಲ್ಲಿ 85% (2929 ಸೀಟುಗಳು) ಕರ್ನಾಟಕ ಕೋಟಾ ಮತ್ತು 521…

Read More

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ವಿಧಿವಶರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅಂದಹಾಗೇ ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿಯನ್ನು ಪಡೆದಿದ್ದರು. ಇದಲ್ಲದೇ ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ಶೃಂಗಾರಂನಲ್ಲಿ ಕೂಡ ಅಭಿನಯಿಸಿ ನಟಿ ಅಂತನೂ ಕರೆಸಿಕೊಂಡಿದ್ದರು. ಇಂತಹ ಅವರು ಇಂದು ನಿಧನರಾಗಿದ್ದಾರೆ. ಪುತ್ರಿಯ ನಿಧನದ ಸುದ್ದಿ ತಿಳಿದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/avalanche-hits-gandhi-sarovar-in-uttarakhands-kedarnath/ https://kannadanewsnow.com/kannada/darshan-attacked-renukaswamy-in-front-of-me-pavithra-gowda/

Read More

ಉತ್ತರಾಖಂಡ: ಕೇದಾರನಾಥದ ಗಾಂಧಿ ಸರೋವರದಲ್ಲಿ ಭಾರಿ ಹಿಮಪಾತ ಸಂಭವಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ. ಉತ್ತರಾಖಂಡದ  ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಪಾತ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/PTI_News/status/1807341098999669067 https://kannadanewsnow.com/kannada/darshan-attacked-renukaswamy-in-front-of-me-pavithra-gowda/ https://kannadanewsnow.com/kannada/good-news-for-pilgrims-from-state-government-simplification-of-subsidy-payment-system/

Read More

ಬೆಂಗಳೂರು: ರಾಜ್ಯದ ಮುಜುರಾಯಿ ಇಲಾಖೆಯಿಂದ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಅದೇ ವಿವಿಧ ಯಾತ್ರೆಗಳಿಗೆ ತೆರಳುವಂತ ಯಾತ್ರಾರ್ಥಿಗಳಿಗೆ ನೀಡುವಂತ ಸಹಾಯಧನ ಪಾವತಿ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಕರ್ನಾಟಕ ಸರ್ಕಾರದ , ಮುಜರಾಯಿ ಇಲಾಖೆಯಿಂದ ಕೈಗೊಳ್ಳುವ ಚಾರ್ ಧಾಮ್ ಯಾತ್ರೆ ರೂ. 30,000, ಕೈಲಾಸ ಮಾನಸ ಸರೋವರ ಯಾತ್ರೆ ರೂ‌20,000 ಮತ್ತು ಕಾಶಿ ಯಾತ್ರೆಯಲ್ಲಿ ಗಯಾ ಸೇರಿಸಿ ರೂ.5,000 ( ಒಟ್ಟು 30000 ಯಾತ್ರಾರ್ಥಿಗಳಿಗೆ) ಹಾಗೂ ರೈಲ್ ಮೂಲಕ ಯಾತ್ರೆ ಕೈಗೊಳುವ ಯಾತ್ರಾರ್ಥಿಗಳಿಗೆ ರೂ.5000 ದಿಂದ ರೂ 7500 ಕ್ಕೆ ಸಹಾಯಧನ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರವು ಪಾವತಿಸುವ ಸಹಾಯಧನ ಪಡೆಯಲು ಹತ್ತು ಹಲವು ನಿಭಂದನೆ ಹಾಗೂ ಕಛೇರಿಗಳಿಗೆ ತಡಕಾಡುವ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ಸಹಾಯಧನ ಪಾವತಿಸುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಮೊಬೈಲ್ ಆಪ್ ಮೂಲಕ ನೋಂದಣಿ ಮಾಡಿಕೊಂಡು, ಜಿಯೋಲೊಕೇಶನ್‌ ‌ (Geo Location) ಮಾಹಿತಿಯನ್ನು ಪೂರ್ಣಗೊಳಿಸಿ, ಸೆಲ್ಸಿ ಒಳಗೊಂಡಿರುವ ಫೋಟೋವನ್ನು ಅಪ್‌ಲೋಡ್ ಮಾಡುವ…

Read More

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ರಾಜ್ಯಾಧ್ಯಂತ ನಾಳೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಮೂಲಕ ರಣಕಹಳೆ ಮೊಳಗಿಸಲಿದೆ. ನಾಳೆ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅಲ್ಲದೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ನಾಳೆ ಏಕಕಾಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂಕ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಅವರು, ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕನ್ನಡ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಾಳೆ ನಡೆಸಲಾಗುತ್ತಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಖಾಸಗಿ ವಲಯದಲ್ಲೂ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ ಎಂದರು. ಕನ್ನಡಿಗರಿಗೆ ಕರ್ನಾಟಕದಲ್ಲಿ ಆಗುತ್ತಿರುವಂತ ಅನ್ಯಾಯ ತಪ್ಪಬೇಕು. ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳನ್ನು ಶೇ.100ರಷ್ಟು ಕನ್ನಡಿಗರಿಗೇ ಮೀಸಲಿರಿಸಬೇಕು ಅಂತ ಆಗ್ರಹಿಸಿ ನಾಳೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕದಿಂದ ಕೈಲಾಸ ಮಾನಸ ಸರೋವರ, ಚಾರ್ ಧಾಮ್ ಮತ್ತು ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ನೀಡೋದಕ್ಕೆ ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಅಂತ ತಿಳಿಸಿದೆ.  2019-20ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ ಎಂದಿದೆ. 2019-20ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ವತಿಯಿಂದ ಚಾರಧಾಮ್(ಬದರಿನಾಥ್, ಕೇದಾರನಾಥ್, ಗಂಗೋತ್ರಿ, ಯಮುನೋತ್ರಿ) ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. 2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-366ರಲ್ಲಿನ ಘೋಷಣೆಯಂತೆ ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದ ವತಿಯಿಂದ ಸಹಾಯಧನವನ್ನು ಪಾವತಿಸಲು ಅನುಸರಿಸಬೇಕಾದ…

Read More

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆಗುತ್ತಿದೆ. ಹೀಗಾಗಿ ಕಾವೇರಿ ನದಿ ನೀರು ಬಳಕೆದಾರರಿಗೆ ಸಂತಸದ ಸುದ್ದಿ ಎನ್ನುವಂತೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆ ಕಂಡಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಡ್ಯಾಂಗೆ 12,867 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. ನಿನ್ನೆ 18,644 ಕ್ಯೂಸೆಕ್ ಇದ್ದ ಒಳಹರಿವಿನ ಪ್ರಮಾಣವಾಗಿದೆ. ಕೊಡಗು ಭಾಗದಲ್ಲಿ ಮಳೆ ಅಲ್ಪ ತಗ್ಗಿದ ಹಿನ್ನಲೆ ನಿನ್ನೆಗಿಂತಲೂ ಇಂದು ಒಳಹರಿವು ಇಳಿಕೆ ಕಂಡಿದೆ. 94.40 ಅಡಿಗೆ ಏರಿಕೆ ಕಂಡ ಡ್ಯಾಂನ ನೀರಿನ ಮಟ್ಟ. 124.80 ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 94.40 ಅಡಿ ನೀರು ಸಂಗ್ರಹವಾಗಿದೆ. ನಿನ್ನೆ 92.80 ಅಡಿ ನೀರು ಸಂಗ್ರಹವಾಗಿತ್ತು. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 18.733 ಟಿಎಂಸಿ ನೀರು ಸಂಗ್ರಹವಿದೆ. ಇಂದಿನ ಕೆಆರ್‌ಎಸ್ ನೀರಿನ ಮಟ್ಟ ಗರಿಷ್ಠ ಮಟ್ಟ – 124.80 ಅಡಿ. ಇಂದಿನ ಮಟ್ಟ – 94.40 ಅಡಿ. ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ ಇಂದಿನ ಸಾಮರ್ಥ್ಯ -…

Read More

ಐಸಿಸಿ ಟಿ 20 ವಿಶ್ವಕಪ್ ಫೈನಲ್ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ಮತ್ತು ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಮನೆಗೆ ತಂದಿತು ಮತ್ತು 2011 ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ಟಿ20 ಕಪ್ ಅನ್ನು “ತಮ್ಮದೇ ಶೈಲಿಯಲ್ಲಿ” ಮನೆಗೆ ತಂದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಂಡವನ್ನು ಅಭಿನಂದಿಸಿದರು. ಚಾಂಪಿಯನ್ಸ್! ನಮ್ಮ ತಂಡವು ಟಿ 20 ವಿಶ್ವಕಪ್ ಅನ್ನು ಶೈಲಿಯಲ್ಲಿ ಮನೆಗೆ ತಂದಿದೆ! ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ತಂಡವನ್ನು ಅಭಿನಂದಿಸಿದ ವೀಡಿಯೊ ಸಂದೇಶದಲ್ಲಿ ಪಿಎಂ ಮೋದಿ, ತಂಡವು ವಿಶ್ವಕಪ್ ಗೆದ್ದಿದೆ ಮತ್ತು “ಕೋಟ್ಯಂತರ ಭಾರತೀಯರ ಹೃದಯವಾಗಿದೆ” ಎಂದು ಹೇಳಿದರು. “ಅದು ಒಂದೇ ಒಂದು ಪಂದ್ಯವನ್ನು ಸೋಲಲಿಲ್ಲ ಎಂಬುದು ಸಣ್ಣ ಸಾಧನೆಯಲ್ಲ” ಎಂದು ಅವರು ಹೇಳಿದರು. https://twitter.com/narendramodi/status/1807114429667975428

Read More

ನವದೆಹಲಿ: ಬಾರ್ಬಡೋಸ್ನಲ್ಲಿ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ಗಳ ಜಯ ಸಾಧಿಸಿದ ನಂತರ 2024 ರ ಆವೃತ್ತಿಯ ಟಿ 20 ವಿಶ್ವಕಪ್ ಆಟಗಾರನಾಗಿ ತನ್ನ ಕೊನೆಯ ಆವೃತ್ತಿಯಾಗಿದೆ ಎಂದು ಭಾರತದ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಘೋಷಿಸಿದರು. ಈ ಮೂಲಕ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಗೆಲುವಿನಲ್ಲಿ 76 ರನ್ ಗಳಿಸಿದ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ವಲ್ಪ ಸಮಯದ ನಂತರ ಈ ವಿಷಯವನ್ನು ಬಹಿರಂಗಪಡಿಸಿದರು. “ಇದು ನನ್ನ ಕೊನೆಯ ಟಿ 20 ವಿಶ್ವಕಪ್, ಇದನ್ನು ನಾವು ಸಾಧಿಸಲು ಬಯಸಿದ್ದೆವು. ಒಂದು ದಿನ ನೀವು ರನ್ ಗಳಿಸಲು ಸಾಧ್ಯವಿಲ್ಲ ಎಂದು ನಿಮಗೆ ಅನಿಸುತ್ತದೆ ಮತ್ತು ಇದು ಸಂಭವಿಸುತ್ತದೆ, ದೇವರು ದೊಡ್ಡವನು. ಕೇವಲ ಸಂದರ್ಭ, ಈಗ ಅಥವಾ ಎಂದಿಗೂ ರೀತಿಯ ಪರಿಸ್ಥಿತಿ. ಇದು ಭಾರತಕ್ಕಾಗಿ ಆಡುವ ನನ್ನ ಕೊನೆಯ ಟಿ 20 ಪಂದ್ಯವಾಗಿತ್ತು. ನಾವು ಆ ಕಪ್ ಅನ್ನು ಎತ್ತಲು ಬಯಸಿದ್ದೆವು ಎಂದು ತಿಳಿಸಿದ್ದಾರೆ.

Read More