Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲೇ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾಗಿದ್ದಾರೆ. ಈ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಳೆಹೊನ್ನೂರಿನಿಂದ ಹಾಸನ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಚನ್ನರಾಯಪ್ಪಟ್ಟಣ, ಹಿರಿಸಾವೆ ಮೂಲಕ ಬೆಂಗಳೂರಿಗೆ ಶರಣಾಗತಿ ಘೋಷಿಸಿದ್ದಂತ 6 ನಕ್ಸಲರನ್ನು ಕರೆದುಕೊಂಡು ಬರಲಾಗಿತ್ತು. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾಗೆ ಸಂಜೆ.6 ಗಂಟೆಗೆ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಗೂ ಬೇಕಿದ್ದಂತ ಮೋಸ್ಟ್ ವಾಂಟೆಂಡ್ 6 ನಕ್ಸಲರು ಆಗಮಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದಂತ ನಕ್ಸಲರು, ಆ ಬಳಿಕ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಸಿಎಂ ಸಿದ್ಧರಾಮಯ್ಯ ಅವರು ಶರಣಾಗತಿಯಾದಂತ 6 ನಕ್ಸಲರಿಗೆ ಹೂ ಗುಚ್ಚ ನೀಡಿ, ಸಾರ್ವಜನಿಕ ಬದುಕಿಗೆ ಬರ ಮಾಡಿಕೊಂಡರು. ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ ರಾಜ್ಯ ಸರ್ಕಾರದಿಂದ ಶರಣಾಗಿಯಾದಂತ 6 ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಮೂರು ಕೆಟಗರಿಯಲ್ಲಿ ಪ್ಯಾಕೇಜ್…
ಬೆಂಗಳೂರು: ಜನವರಿ 17 ರಿಂದ ಏಪ್ರಿಲ್ 16, 2025 ರವರೆಗೆ 90 ದಿನಗಳ ಕಾಲ, ಕ್ಯಾಸಲ್ ರಾಕ್-ಕುಲೆಮ್ ಭಾಗದಲ್ಲಿ ಹಳಿ ನಿರ್ವಹಣೆ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಹಿನ್ನಲೆ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದತಿ ಮತ್ತು ಬೇರೆ ಮಾರ್ಗದ ಮೂಲಕ ಚಲಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲುಗಳ ಸಂಚಾರ ಭಾಗಶಃ ರದ್ದು: 1. ಜನವರಿ 16 ರಿಂದ ಏಪ್ರಿಲ್ 15, 2025 ರವರೆಗೆ ಶಾಲಿಮಾರ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 18047 ಶಾಲಿಮಾರ್-ವಾಸ್ಕೋ ಡ ಗಾಮಾ ಎಕ್ಸ್ ಪ್ರೆಸ್ ರೈಲು ಹುಬ್ಬಳ್ಳಿ ನಿಲ್ದಾಣದವರೆಗೂ ಮಾತ್ರ ಸಂಚರಿಸಲಿದೆ. ಹುಬ್ಬಳ್ಳಿ ಮತ್ತು ವಾಸ್ಕೋ ಡ ಗಾಮಾ ನಿಲ್ದಾಣಗಳ ನಡುವಿನ ಸಂಚಾರ ಭಾಗಶಃ ರದ್ದಾಗಿದೆ. ಈ ರೈಲು ಹುಬ್ಬಳ್ಳಿಯಲ್ಲಿ ಕೊನೆಗೊಳ್ಳಲಿದೆ. 2. ರೈಲು ಸಂಖ್ಯೆ 18048 ವಾಸ್ಕೋ ಡ ಗಾಮಾ-ಶಾಲಿಮಾರ್ ಎಕ್ಸ್ ಪ್ರೆಸ್ ರೈಲು ಜನವರಿ 19 ರಿಂದ ಏಪ್ರಿಲ್ 18, 2025 ರವರೆಗೆ ವಾಸ್ಕೋ ಡ ಗಾಮಾ ನಿಲ್ದಾಣದ ಬದಲು ಎಸ್ಎಸ್ಎಸ್ ಹುಬ್ಬಳ್ಳಿಯಿಂದ…
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೋಸ್ಟ್ ವಾಂಟೆಂಡ್ 6 ನಕ್ಸಲರನ್ನು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ, ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಿಂದ ರಸ್ತೆ ಮಾರ್ಗದ ಮೂಲಕ ಹಾಸನ, ಹಿರಿಸಾವೆಯಿಂದ ಬೆಂಗಳೂರಿಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡಿಗೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರನ್ನು ಕರೆತರಲಾಗಿದೆ. ಈಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆರು ನಕ್ಸಲರು ಆಗಮಿಸಿದ್ದಾರೆ. ಸಿಎಂ ಗೃಹ ಕಚೇರಿಗೆ ಆಗಮಿಸಿರುವಂತ ಆರು ನಕ್ಸಲರು ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಮ್ಮುಖದಲ್ಲಿ ಕೆಲವೇ ಕ್ಷಣಗಳಲ್ಲಿ ಶರಣಾಗತಿ ಆಗಲಿದ್ದಾರೆ. ಆ ಬಳಿಕ ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸೋ ಸಾಧ್ಯತೆ ಇದೆ. https://kannadanewsnow.com/kannada/bengaluru-power-outage-in-these-areas-on-january-10/ https://kannadanewsnow.com/kannada/first-hmpv-virus-case-detected-in-mumbai-number-of-infected-people-in-maharashtra-rises-to-3/
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಜನವರಿ.10, 2025ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ. ಜನವರಿ.10ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್…
ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರೊಂದಿಗೆ ಕುಂದು ಕೊರತೆ ಸಭೆ ನಡೆಸಿದರು. ಈ ಸಭೆಯಲ್ಲಿ ಗ್ಯಾಚ್ಯುಟಿ ಸೌಲಭ್ಯ, ಗೌರವಧನ ಹೆಚ್ಚಳ, ಮುಂಬಡ್ತಿ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತ ಕಾರ್ಯಕರ್ತೆ, ಸಹಾಯಕಿಯರಿಗೆ ಸ್ವಯಂ ನಿವೃತ್ತಿಯಂತ ಯೋಜನೆ ಕಲ್ಪಿಸುವ ಕುರಿತಂತೆ ಚರ್ಚೆ ನಡೆಸಲಾಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಯಾವಾಗಲೂ ಅಂಗನವಾಡಿ ಕಾರ್ಯಕರ್ತೆಯರ ಪರ ಇದ್ದೇನೆ. ಇಡೀ ದೇಶಕ್ಕೆ ನಮ್ಮ ರಾಜ್ಯದಲ್ಲಿರುವಂತ ಅಂಗನವಾಡಿ ಮಾದರಿಯಾಗಿದ್ದಾವೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು. ಅಲ್ಲದೇ ಗೌರವಧನ ಹೆಚ್ಚಿಸೋ ಸಂಬಂಧವೂ ಚರ್ಚಿಸುವುದಾಗಿ ಹೇಳಿದರು. https://kannadanewsnow.com/kannada/do-you-know-what-is-the-cost-of-hmpv-test-heres-the-details/ https://kannadanewsnow.com/kannada/first-hmpv-virus-case-detected-in-mumbai-number-of-infected-people-in-maharashtra-rises-to-3/
ಬೆಂಗಳೂರು: ರಾಜ್ಯದ ಅರ್ಹ ಮತದಾರರಿಗೆ ಗುಡ್ ನ್ಯೂಸ್ ಎನ್ನುವಂತೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೇ ಅಥವಾ ಹೊಸದಾಗಿ ಸೇರ್ಪಡೆ ಮಾಡುವುದಿದ್ದರೇ ಈ ದಿನಾಂಕಗಳಂದು ಸೇರ್ಪಡೆಗೆ ಅವಕಾಶವನ್ನು ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕಾಗಿ ಏಪ್ರಿಲ್ 1, ಜುಲೈ 1, ಅಕ್ಟೋಬರ್ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. https://twitter.com/KarnatakaVarthe/status/1876920868028445081 ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ…
ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲು ನಿರ್ಧರಿಸಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಇಂದು ಸಂಜೆ 6 ಗಂಟೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಕ್ಸಲರು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾಗತಿ ಆಗಲಿದ್ದಾರೆ ಎಂದು ತಿಳಿಸಿದೆ. ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ ರಾಜ್ಯ ಸರ್ಕಾರದಿಂದ ಶರಣಾಗುತ್ತಿರುವಂತ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಮೂರು ಕೆಟಗರಿಯಲ್ಲಿ ಪ್ಯಾಕೇಜ್ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಕೆಟಗರಿ ಎ ವರ್ಗದಡಿ ನಮ್ಮ ರಾಜ್ಯದವರೇ ಆಗಿದ್ದು, ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ, ಕೇಸ್ ಇದ್ದು ಶರಣಾಗುತ್ತಿರುವವರಿಗೆ 7.50 ಲಕ್ಷ ಹಣ ನೀಡುತ್ತಿದೆ. ಕೆಟಗರಿ ಬಿ ವರ್ಗದಡಿ ಹೊರ ರಾಜ್ಯದ ನಕ್ಸಲರಿಗೆ ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೇ 4 ಲಕ್ಷ ಪ್ಯಾಕೇಜ್ ನೀಡುವುದಾಗಿ ತಿಳಿಸಿದೆ. ಕೆಟಗರಿ ಸಿ ವರ್ಗದಡಿ ನಕ್ಸಲ್ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದು, ಪ್ರಕರಣಗಳು ಇದ್ದರೂ 2…
ಮಹಾರಾಷ್ಟ್ರ: ಮುಂಬೈನ ಪೊವಾಯಿ ಪ್ರದೇಶದ ಹಿರಾನಂದಾನಿ ಆಸ್ಪತ್ರೆಯಲ್ಲಿ ಆರು ತಿಂಗಳ ಶಿಶುವಿನಲ್ಲಿ ಪತ್ತೆಯಾದ ಹ್ಯೂಮನ್ ಮೆಟಾಪ್ನ್ಯುಮೋವೈರಸ್ (ಎಚ್ಎಂಪಿವಿ) ಪ್ರಕರಣದ ಮೊದಲ ಪ್ರಕರಣ ವರದಿಯಾಗಿದೆ. ಇತ್ತೀಚಿನ ಪ್ರಕರಣವು ಮಹಾರಾಷ್ಟ್ರದಲ್ಲಿ ಎಚ್ಎಂಪಿವಿ ಪ್ರಕರಣಗಳ ಸಂಖ್ಯೆಯನ್ನು ದೇಶಾದ್ಯಂತ 3 ಮತ್ತು 9 ಕ್ಕೆ ಕೊಂಡೊಯ್ದಿದೆ. ಕೆಮ್ಮು ಮತ್ತು ದಟ್ಟಣೆಯ ನಡುವೆ ಆಮ್ಲಜನಕದ ಮಟ್ಟವು ಶೇಕಡಾ 84 ಕ್ಕೆ ಇಳಿದ ನಂತರ ಸೋಂಕಿತ ಶಿಶುವನ್ನು ಜನವರಿ 1 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಹೊಸ ಕ್ಷಿಪ್ರ ಪಿಸಿಆರ್ ಪರೀಕ್ಷೆಯನ್ನು ನಡೆಸಿದರು, ಅದು ಸಕಾರಾತ್ಮಕ ಫಲಿತಾಂಶವನ್ನು ನೀಡಿತು. ಈ ವೈರಸ್ಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲದ ಕಾರಣ ಬಾಲಕಿಗೆ ಐಸಿಯುನಲ್ಲಿ ಬ್ರಾಂಕೊಡೈಲೇಟರ್ಗಳಂತಹ ಔಷಧಿಗಳೊಂದಿಗೆ ರೋಗಲಕ್ಷಣಗಳ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಐದು ದಿನಗಳ ಕಾಲ ಆಸ್ಪತ್ರೆಗೆ ದಾಖಲಾದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಏತನ್ಮಧ್ಯೆ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ನ ಆರೋಗ್ಯ ಇಲಾಖೆ ಈ ಪ್ರಕರಣದ ಯಾವುದೇ ವರದಿಯನ್ನು ಸ್ವೀಕರಿಸಿಲ್ಲ ಆದರೆ ಇನ್ಫ್ಲುಯೆನ್ಸ ಮತ್ತು ತೀವ್ರ ಉಸಿರಾಟದ…
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರ ಮನವಿಯ ಮೇರೆಗೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಬೆಂಗಳೂರಲ್ಲಿ ಶರಣಾಗುತ್ತಿದ್ದಾರೆ. ಇಂತಹ ನಕ್ಸಲರಿಗೆ ರಾಜ್ಯ ಸರ್ಕಾರವು ಪ್ಯಾಕೇಜ್ ಘೋಷಣೆ ಮಾಡಿದೆ. ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದರು. ಆದರೇ ದಿಢೀರ್ ಬದಲಾವಣೆಯಲ್ಲಿ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲೇ ಶರಣಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ 6 ನಕ್ಸಲರು ಶರಣಾಗಲಿದ್ದಾರೆ. ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ ರಾಜ್ಯ ಸರ್ಕಾರದಿಂದ ಶರಣಾಗುತ್ತಿರುವಂತ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಮೂರು ಕೆಟಗರಿಯಲ್ಲಿ ಪ್ಯಾಕೇಜ್ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಕೆಟಗರಿ ಎ ವರ್ಗದಡಿ ನಮ್ಮ ರಾಜ್ಯದವರೇ ಆಗಿದ್ದು, ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ, ಕೇಸ್ ಇದ್ದು ಶರಣಾಗುತ್ತಿರುವವರಿಗೆ 7.50 ಲಕ್ಷ ಹಣ ನೀಡುತ್ತಿದೆ. ಕೆಟಗರಿ ಬಿ ವರ್ಗದಡಿ ಹೊರ ರಾಜ್ಯದ ನಕ್ಸಲರಿಗೆ ಶಸ್ತ್ರಸಜ್ಜಿತ ನಕ್ಸಲ್ ಗುಂಪಿನ ಸದಸ್ಯನಾಗಿದ್ದು, ಒಂದಕ್ಕಿಂತ ಹೆಚ್ಚು ಸದಸ್ಯರಾಗಿದ್ದರೇ 4 ಲಕ್ಷ ಪ್ಯಾಕೇಜ್…
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್ ಐಎಲ್ ಮೊದಲಿನಿಂದಲೂ ಗುಣಮಟ್ಟ ಮತ್ತು ವಿಶ್ವಾಸಾರ್ಹತೆಗೆ ಹೆಸರಾಗಿದೆ. ಈಗ ಟೂರ್ ಪ್ಯಾಕೇಜುಗಳ ಮೂಲಕ ಸಂಸ್ಥೆಯು ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಈ ಪ್ಯಾಕೇಜುಗಳ ಅಡಿಯಲ್ಲಿ ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆದಿಕೈಲಾಸ ಮತ್ತು ವಾರಣಾಸಿಗೆ ಪ್ರವಾಸ ಆಯೋಜಿಸಲಾಗುವುದು. ಮುಖ್ಯವಾಗಿ ನಾವು ಆಫ್-ಲೈನ್ ಪ್ರವಾಸಿಗರಿಗೆ ಆದ್ಯತೆ ಕೊಡುತ್ತಿದ್ದೇವೆ,ʼ ಎಂದಿದ್ದಾರೆ. ಈ ಪ್ಯಾಕೇಜುಗಳಲ್ಲಿ ಸುರಕ್ಷತೆ, ಶುಚಿರುಚಿಯಾದ ಆಹಾರ, ಮನೆ ಬಾಗಿಲಿನಿಂದಲೇ ಕರೆದುಕೊಂಡು ಹೋಗಿ ವಾಪಸ್ ಅಲ್ಲಿಗೇ ಬಿಡುವುದು, ಸಹಾಯಕರ ನೆರವು, ಮಾಸಿಕ…