Subscribe to Updates
Get the latest creative news from FooBar about art, design and business.
Author: kannadanewsnow09
ತೆಲಂಗಾಣ: ಸಾರಿಗೆ ಅಧಿಕಾರಿಗಳು ಲಂಚಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಲಾರಿ ಮಾಲೀಕ ಅನಿಲ್ ಗೌಡ್ ಪೆದ್ದಪಲ್ಲಿ ಆರ್ ಟಿಒ ಕಚೇರಿ ಮುಂದೆ ನಾಟಕೀಯ ಪ್ರತಿಭಟನೆ ನಡೆಸಿದರು. ಅವರು ತಮ್ಮ ಲಾರಿಯ ಮೇಲೆ ಹತ್ತಿ ಆರ್ ಟಿಒ ಕಚೇರಿಯ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಜೀವಂತ ವಿದ್ಯುತ್ ತಂತಿಗಳನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದರು. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಲಾರಿ ಚಾಲಕ ತನ್ನ ಲಾರಿಯ ಮೇಲೆ ಲೈವ್ ವೈರ್ ಗಳನ್ನು ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಅವನು ತನ್ನ ಲಾರಿಯ ಮೇಲಿನಿಂದ ಕೋಪದಿಂದ ಹಣವನ್ನು ಎಸೆಯುವುದನ್ನು ಸಹ ಕಾಣಬಹುದು. https://twitter.com/TeluguScribe/status/1890966524929708354 ಆರ್ ಟಿಒ ಅಧಿಕಾರಿಗಳ ವಿರುದ್ಧ ದೂರು ಆರ್ಟಿಒ ಅಧಿಕಾರಿಗಳು ಪ್ರತಿ ಲಾರಿ ಮಾಲೀಕರಿಂದ ಮಾಸಿಕ 8,000 ರೂ.ಗಳ ಲಂಚವನ್ನು ಕೇಳುತ್ತಿದ್ದಾರೆ ಎಂದು ಅನಿಲ್ ಗೌಡ್ ಹೇಳಿದ್ದಾರೆ. ಅವರು ಪಾವತಿಸಲು ನಿರಾಕರಿಸಿದ್ದರಿಂದ, ಅಧಿಕಾರಿಗಳು ತಮ್ಮ ವಾಹನದ ವಿರುದ್ಧ ಸುಳ್ಳು ಪ್ರಕರಣ…
ಹೈದರಾಬಾದ್: ಜನಗಾಂವ್ನ ಸೂರ್ಯಪೇಟ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ಎಂಟು ಬೈಕ್ಗಳಿಗೆ ಡಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಸಿಟಿವಿಯಲ್ಲಿ ಸೆರೆಯಾದ ಆಘಾತಕಾರಿ ಘಟನೆ ಫೆಬ್ರವರಿ 17 ರಂದು ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ, ಆರಂಭಿಕ ವರದಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ಚಾಲಕ ಮದ್ಯದ ಅಮಲಿನಲ್ಲಿದ್ದನು ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಘಟನೆಯ ನಂತರ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಕಠಿಣ ಕ್ರಮಗಳ ಕರೆಗಳು ತೀವ್ರಗೊಂಡಿವೆ. ಸೂರ್ಯಪೇಟ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು 8 ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. https://twitter.com/jsuryareddy/status/1891352646768050432 https://kannadanewsnow.com/kannada/no-more-chikki-distribution-to-school-children-only-eggs-bananas-to-be-distributed-state-govt/ https://kannadanewsnow.com/kannada/if-you-make-rd-under-this-scheme-of-sbi-a-maturity-amount-of-rs-2-5-lakh-will-be-fixed/
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಡನೆಯಾದಂತ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಚಿಕ್ಕಿ, ಮೊಟ್ಟೆ, ಇಲ್ಲವೇ ಬಾಳೆಹಣ್ಣು ವಿತರಣೆಯನ್ನು ಶಾಲೆಗಳಲ್ಲಿ ಮಾಡಲಾಗುತ್ತಿತ್ತು. ಇದೀಗ ಈ ಯೋಜನೆಯ ಅಡಿಯಲ್ಲಿ ಚಿಕ್ಕಿ ವಿತರಣೆಗೆ ಬ್ರೇಕ್ ಹಾಕಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ…
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ವ್ಯವಸ್ಥಿತವಾಗಿ ಉಳಿತಾಯ ಮಾಡಲು ಜನರನ್ನು ಉತ್ತೇಜಿಸಲು ‘ಹರ್ ಘರ್ ಲಖ್ಪತಿ’ ಆರ್ಡಿ ಯೋಜನೆಯನ್ನು ಪ್ರಾರಂಭಿಸಿದೆ. ಹೂಡಿಕೆದಾರರು ಈ ಯೋಜನೆಯಡಿ ನಿಗದಿತ ಮಾಸಿಕ ಕೊಡುಗೆಯನ್ನು ನೀಡುತ್ತಾರೆ ಮತ್ತು ಅದು ಪಕ್ವಗೊಳ್ಳುವ ಹೊತ್ತಿಗೆ, ಅವರು 1 ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ಸಂಗ್ರಹಿಸುತ್ತಾರೆ. ಈ ಯೋಜನೆಯು ಖಾತರಿಯ ಆದಾಯ ಮತ್ತು ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಈ ಯೋಜನೆಯೊಂದಿಗೆ ನೀವು 3, 5 ಮತ್ತು 7 ವರ್ಷಗಳಲ್ಲಿ ಅಂದಾಜು 2 ಲಕ್ಷ ಮತ್ತು 5 ಲಕ್ಷ ರೂ.ಗಳ ಮೆಚ್ಯೂರಿಟಿ ಮೊತ್ತವನ್ನು ಹೇಗೆ ಗಳಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಮುಂದೆ ಓದಿ. ಗ್ರಾಹಕರಿಗೆ ವೈಯಕ್ತಿಕಗೊಳಿಸಿದ ರಿಕರಿಂಗ್ ಡಿಪಾಸಿಟ್ ಪರಿಹಾರವನ್ನು ಒದಗಿಸಲು ಎಸ್ಬಿಐ “ಹರ್ ಘರ್ ಲಖ್ಪತಿ” ಯೋಜನೆಯನ್ನು ಪ್ರಾರಂಭಿಸಿದೆ. ಸಣ್ಣ ಮೊತ್ತದ ಮಾಸಿಕ ಠೇವಣಿಗಳನ್ನು ಮಾಡುವ ಮೂಲಕ, ಗ್ರಾಹಕರು ತಮ್ಮ ಖಾತೆಗಳಲ್ಲಿ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆಯಬಹುದು. ಠೇವಣಿ ಪಕ್ವವಾದಾಗ “ಲಕ್ಷಪತಿ” ಆಗಬಹುದು. ಯಾವುದೇ ನಿವಾಸಿಯು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಡನೆಯಾದಂತ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಪೂರಕ ಪೌಷ್ಠಿಕ ಆಹಾರವಾಗಿ ಚಿಕ್ಕಿ, ಮೊಟ್ಟೆ, ಇಲ್ಲವೇ ಬಾಳೆಹಣ್ಣು ವಿತರಣೆಯನ್ನು ಶಾಲೆಗಳಲ್ಲಿ ಮಾಡಲಾಗುತ್ತಿತ್ತು. ಇದೀಗ ಈ ಯೋಜನೆಯ ಅಡಿಯಲ್ಲಿ ಚಿಕ್ಕಿ ವಿತರಣೆಗೆ ಬ್ರೇಕ್ ಹಾಕಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ…
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದಂತ ಅವರು ಮಾರ್ಚ್ 7ರಂದು ಬಜೆಟ್ ಮಂಡಿಸಲಿದ್ದೇನೆ. ಮಾರ್ಚ್.3ರಿಂದ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದರು. ಮಾರ್ಚ್.3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಆ ಬಳಿಕ ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ತಿಳಿಸಿದರು.
ಮಂಡ್ಯ: ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಹಿಯನ್ನೇ ನಕಲು ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ಪೀಕಿದ್ದಂತ ವಂಚಕ ವೆಂಕಟೇಶನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವೆಂಕಟೇಶ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಲವರಿಗೆ ನಂಬಿಸಿದ್ದನು. ಅಲ್ಲದೇ ಅವರಿಂದ ಲಕ್ಷಾಂತರ ರೂ ಹಣವನ್ನು ಪಡೆದು, ನಕಲಿ ಸಹಿ ಮಾಡಿದಂತ ನೇಮಕಾತಿ ಆದೇಶ ಪತ್ರ ನೀಡಿ ವಂಚಿಸಿದ್ದನು. ವಂಚನೆಗೆ ಒಳಗಾದಂತ ಅಭ್ಯರ್ಥಿಗಳು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದಂತ ಪೊಲೀಸರು ಸಿಎಂ ಸಿದ್ಧರಾಮಯ್ಯ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನೀಡಿರುವಂತ ನಕಲಿ ಆದೇಶ ಪತ್ರವನ್ನು ಕಂಡು ಶಾಕ್ ಆಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಮಂಡ್ಯದ ಪೂರ್ವ ಠಾಣೆಯ ಪೊಲೀಸರು, ಸತತ ಮೂರು ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸಿ, ಕೊನೆಗೂ ವಂಚಕ ವೆಂಕಟೇಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಡ್ಯದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. https://kannadanewsnow.com/kannada/delhis-new-cm-likely-to-take-oath-at-ramlila-maidan-on-feb-20/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/ https://kannadanewsnow.com/kannada/centre-to-take-major-steps-for-crowd-control-at-railway-stations-ai-technology-to-be-used-report/
ನವದೆಹಲಿ: ಫೆಬ್ರವರಿ 20 ರಂದು ದೆಹಲಿಯ ಅಪ್ರತಿಮ ಮೈದಾನವಾದ ರಾಮ್ ಲೀಲಾ ಮೈದಾನದಲ್ಲಿ ಹೊಸ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಐತಿಹಾಸಿಕ ವಿಜಯವನ್ನು ಆಚರಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಭವ್ಯ ಸಮಾರಂಭವನ್ನು ಯೋಜಿಸುತ್ತಿದೆ. ಇದು ರಾಷ್ಟ್ರ ರಾಜಧಾನಿಯಲ್ಲಿ 27 ವರ್ಷಗಳ ಸುದೀರ್ಘ ಬರಗಾಲವನ್ನು ಕೊನೆಗೊಳಿಸುತ್ತದೆ. ಫೆ.19ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ದೆಹಲಿಯ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿಯ ಹೊಸದಾಗಿ ಆಯ್ಕೆಯಾದ ಶಾಸಕರು ಫೆಬ್ರವರಿ 19 ರಂದು ನವದೆಹಲಿಯಲ್ಲಿ ಸಭೆ ಸೇರುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಶಾಸಕಾಂಗ ಪಕ್ಷದ ಸಭೆಗೆ ತನ್ನ ವೀಕ್ಷಕರನ್ನು ಕಳುಹಿಸುತ್ತದೆ. ಇದರಲ್ಲಿ ದೆಹಲಿ ವಿಧಾನಸಭೆಯಲ್ಲಿ ಸದನದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸದನದ ನಾಯಕ ದೆಹಲಿಯ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. ಫೆಬ್ರವರಿ 20 ರಂದು ಮುಖ್ಯಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ…
BREAKING: ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಂದೆಯಿಂದಲೇ ‘ವಿಷ ಉಣಿಸಿ ಹತ್ಯೆ’
ಮೈಸೂರು: ನಗರದಲ್ಲಿ ನಡೆದಿದ್ದಂತ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ಚೇತನ್ ತನ್ನ ಇಬ್ಬರು ಮಕ್ಕಳಿಗೆ, ಪತ್ನಿಗೆ ವಿಷ ಉಣಿಸಿ ಹತ್ಯೆಗೈದು, ಆ ಬಳಿಕ ತಾನೂ ನೇಣಿಗೆ ಶರಣಾಗರಿವ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಚೇತನ್ ಹತ್ಯೆಗೂ ಮುನ್ನ ಅಮೇರಿಕಾದಲ್ಲಿರುವಂತ ತನ್ನ ಸಹೋದರ ಭರತ್ ಗೆ ಕರೆ ಮಾಡಿ, ತಾನೂ ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದು, ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ತಿಳಿಸಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ. ಅಂದಹಾಗೇ ಚೇನ್ ಮೊದಲು ಕುಟುಂಬಸ್ಥರಿಗೆ ವಿಷ ಉಣಿಸಿದ್ದಾರೆ. ಆದರೇ ಆಗಲೂ ಸಾಯದಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಆ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ಈ ವಿಷಯವನ್ನು ಮೃತ ಚೇತನ್ ಸಹೋದರ ಭರತ್, ಚೇತನ್ ಪತ್ನಿಯ ತಾಯಿಗೆ ತಿಳಿಸಿದ್ದಾರೆ. ಅವರು ಅಪಾರ್ಮೆಂಟ್ ಬಳಿ ತೆರಳಿ ನೋಡುವ ವೇಳೆಗೆ ಈ ದುರಂತ ನಡೆದು ಹೋಗಿದೆ. ಅಂದಹಾಗೇ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಚೇತನ್ (45), ರೂಪಾಲಿ (43), ಪ್ರಿಯಂವದ ಮತ್ತು…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪಿಂಕ್ ಲೈನ್ ಮಾರ್ಗದಲ್ಲಿ ಈ ವರ್ಷದಿಂದಲೇ ಮೆಟ್ರೋ ರೈಲು ವಾಣಿಜ್ಯ ಸಂಚಾರ ಸೇವೆ ಆರಂಭಗೊಳ್ಳಲಿದೆ ಎಂಬುದಾಗಿ ಬಿಎಂಆರ್ ಸಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ 21 ಕಿಲೋಮೀಟರ್ ಪಿಂಕ್ ಲೈನ್ ರೈಲು ಮಾರ್ಗದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಸುರಂಗ ಮಾರ್ಗದ ಕೆಲಸ ಕೂಡ ಭರದಿಂದ ಸಾಗಿದ್ದು, ಮಾರ್ಚ್ ವೇಳೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇನ್ನೂ ಕಾಳೇನ ಅಗ್ರಹಾರ ಅಂದರೆ ಗೊಟ್ಟಿಗೆರೆಯಿಂದ ನಾಗಾವರದವರೆಗೆ 21 ಕಿಲೋಮೀಟರ್ ನಮ್ಮ ಮೆಟ್ರೋ ಮಾರ್ಗವೇ ಪಿಂಕ್ ಲೈನ್ ಆಗಿದೆ. ಈ ಮಾರ್ಗದಲ್ಲಿ ರೈಲು ಸಂಚಾರವು ಈ ವರ್ಷದಲ್ಲೇ ಆರಂಭಗೊಳ್ಳುವ ನಿರೀಕ್ಷೆಯಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. https://kannadanewsnow.com/kannada/bjp-cms-ct-round-was-a-photoshoot-dk-shivakumar/ https://kannadanewsnow.com/kannada/a-woman-suffering-from-leptospira-endometriosis-a-rare-disease-was-successfully-treated-at-fortis-hospital/