Author: kannadanewsnow09

ಕಲಬುರ್ಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರದ ಬಳಿಯಲ್ಲಿ ಇಂದು ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರಾಗಿದ್ದಂತ ವಿಶ್ವನಾಥ ಜಮಾದಾರ್ (50) ಎಂಬುವರನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಬಾರಿ ಗುಂಡಿನ ದಾಳಿಯಿಂದಾಗಿ ವಿಶ್ವನಾಥ ಅವರು ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಡಸಾವಳಿಯಿಂದ ಅಳಂದ ಪಟ್ಟಣಕ್ಕೆ ವಿಶ್ವನಾಥ ತೆರಳುತ್ತಿದ್ದಾಗ ಈ ಹತ್ಯೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಕಲಬುರ್ಗಿ ಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-govt-to-take-major-steps-to-reduce-gram-panchayat-power-burden-installation-of-solar-street-lights/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/ https://kannadanewsnow.com/kannada/cm-siddaramaiah-announces-hike-in-nandini-milk-prices-soon/

Read More

ದಿನವೂ ಈ ಸಮಯದಲ್ಲಿ ಕಸಗುಡಿಸುವುದರಿಂದ ಎಲ್ಲಕ್ಕಿಂತ ಅಧಿಕ ಲಾಭ ಸಿಗುತ್ತದೆ ಲಕ್ಷ್ಮೀದೇವಿ ಆಶೀರ್ವಾದ ನಿಮಗೆ ಸಿಗುತ್ತದೆ ನಮ್ಮ ಜೀವನದಲ್ಲಿ ತಿಳಿಯದೇಯೊ ತಿಳಿದೊ ಕೆಲವೊಂದು ತಪ್ಪುಗಳು ಆಗಿ ಹೋಗುತ್ತದೆ. ಅವುಗಳ ಪ್ರಭಾವ ನಮ್ಮ ಮನೆಯವರ ಮೇಲೆ ಕುಟುಂಬದ ಮೇಲೆ ಬೀಳುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ಹೊಂಬೆಳಕು ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದ್ದು, ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್‌ ವೆಚ್ಚದ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. ಅಳವಡಿಸಲಾಗುತ್ತಿರುವ ಸೌರ ಬೀದಿ ದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು ದೀರ್ಘ ಕಾಲ ಬಾಳಿಕೆ ಬರಬಹುದೆಂದು ನಿರೀಕ್ಷಿಸಲಾಗಿದೆ, ಈ ವರ್ಷ ಸುಮಾರು 16,500 ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ, ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್‌ ವೆಚ್ಚದ ಮಿತವ್ಯಯದಿಂದ…

Read More

ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ 3ನೇ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಬರೋಬ್ಬರಿ 1691 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಸದಸ್ಯ ದೂರಿನ ಪ್ರಕರಣದ ಸಂಬಂಧಿಸಿದಂತ ಚಾರ್ಜ್ ಶೀಟ್ ಇದಾಗಿದೆ. ಈ ಚಾರ್ಜ್ ಶೀಟ್ ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಎಸ್ಐಟಿ ಅಧಿಕಾರಿಗಳು ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/port-blair-renamed-sri-vijaya-puram/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/

Read More

ನವದೆಹಲಿ: ಪೋರ್ಟ್ ಬ್ಲೇರ್ ಹೆಸರನ್ನು ‘ಶ್ರೀ ವಿಜಯ ಪುರಂ’ ಎಂದು ಮರುನಾಮಕರಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರಕಟಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿಯನ್ನು ಮರುನಾಮಕರಣ ಮಾಡುವ ನಿರ್ಧಾರವು ಭಾರತವನ್ನು “ವಸಾಹತುಶಾಹಿ ಮುದ್ರೆಗಳಿಂದ” ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದರು. “ಪ್ರಧಾನಿ ನರೇಂದ್ರ ಮೋದಿ ಜಿ ಅವರ ದೃಷ್ಟಿಕೋನದಿಂದ ಪ್ರೇರಿತರಾಗಿ, ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು, ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದು ಶಾ ಟ್ವೀಟ್ ಮಾಡಿದ್ದಾರೆ. https://twitter.com/AmitShah/status/1834555334490554789 https://kannadanewsnow.com/kannada/mla-munirathna-threatens-contractor-what-happened-to-renukaswamy/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/

Read More

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗಲಿದೆ ಎಂಬುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುತ್ತಿಗೆದಾರರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದಂತ ಬಿ.ದಯಾನಂದ ಅವರನ್ನು ಭೇಟಿಯಾಗಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಕಮೀಷನ್ ಕೇಳಿದ್ದಾರೆ. ನಾನು ನನ್ನ ಬಳಿಯಲ್ಲಿ 1 ಲಕ್ಷವಿದೆ ತಗೊಳ್ಳಿ ಅಂತ ಕೊಡೋಕೆ ಹೋದ್ರೆ ಎಲ್ಲಾ ಒಟ್ಟಿಗೆ ಕೊಡು ಅಂತ ಅವಾಜ್ ಹಾಕಿದರು ಎಂದರು. ನನಗೆ ಶಾಸಕ ಮುನಿರತ್ನ ಬೆದರಿಕೆ ಹಾಕಿದ್ದಾರೆ. 20 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಹಣ ಕೊಡದೇ ಇದ್ದರೇ ರೇಣುಕಾಸ್ವಾಮಿಗೆ ಆದಂತ ಗತಿಯೇ ನಿನಗೆ ಆಗಲಿದೆ ಎಂಬುದಾಗಿ ಬೆದರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ್ದೇ ನನ್ನ ಅಕ್ಕನ ಮಗ ಎಂಬುದಾಗಿಯೂ ಎಚ್ಚರಿಸಿದ್ದಾರೆ ಎಂಬುದಾಗಿ…

Read More

ಬೆಂಗಳೂರು; ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಸಭೆ ನಡೆಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಟೌನ್ ಶಿಪ್ ನಿರ್ಮಾಣ ಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ ಮುಂದಿನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಯಿತು. ದಾಬಸ್ ಪೇಟೆ, ಸೋಲೂರು, ಹೊಸಕೋಟೆ, ಬಿಡದಿ, ರಾಮನಗರ ಭಾಗದಲ್ಲಿ ಜಮೀನು ಲಭ್ಯತೆ ಆಧಾರದಲ್ಲಿ ಟೌನ್ ಶಿಪ್ ನಿರ್ಮಾಣ ಕ್ಕೆ ತೀರ್ಮಾನ ಮಾಡಲಾಗಿದ್ದು, ಪೂರ್ವಭಾವಿಯಾಗಿ ರೈತರ ಅದಾಲತ್ ನಡೆಸೋಣ ನಂತರ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳೋಣ ಎಂದು ತಿಳಿಸಿದರು. ಸಭೆಯಲ್ಲಿ ಹಾಜರಿದ್ದ ಶಾಸಕರಾದ ಶರತ್ ಬಚ್ಚೆಗೌಡ, ಮಾಗಡಿ ಬಾಲಕೃಷ್ಣ, ನೆಲಮಂಗಲ ಶ್ರೀನಿವಾಸ್, ದೊಡ್ಡಬಳ್ಳಾಪುರ ಧೀರಜ್ ಮುನಿರಾಜು, ರೈತರು ಜಮೀನು ಕೊಡಲು ಸ್ವಯಂ ಪ್ರೇರಿತ ರಾಗಿ…

Read More

ಬೆಂಗಳೂರು: ದಲಿತರನ್ನು ಮತ್ತು ಹಿಂದೂಗಳನ್ನು ಹತ್ತಿಕ್ಕುವ ಸರಕಾರ ರಾಜ್ಯದಲ್ಲಿದೆ; ಈ ಸರಕಾರದ ನಡೆನುಡಿ ಬಗ್ಗೆ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಡಾ.ಅಶ್ವತ್ಥನಾರಾಯಣ್ ಅವರ ನೇತೃತ್ವದಲ್ಲಿ ಬೈರತಿ ಬಸವರಾಜ್, ಭಾಸ್ಕರ ರಾವ್, ನಾರಾಯಣಗೌಡರನ್ನು ಒಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ. ನಿನ್ನೆ ನಮ್ಮ ಅಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್ ಅವರು ನಾಗಮಂಗಲಕ್ಕೆ ತೆರಳಿ ನೋಡಿಕೊಂಡು ಬಂದಿದ್ದಾರೆ ಎಂದರು. ಹಿಂದೂಗಳಿಗೆ ಅನ್ಯಾಯ ಮಾಡುವ ಸರಕಾರ ಇದೆಂದು ಆಕ್ಷೇಪಿಸಿದರು. ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಗೆ ತೆರಳುವ ಮೆರವಣಿಗೆಯ ಮೇಲೆ ಮುಸಲ್ಮಾನರು ಕಲ್ಲುಗಳನ್ನು ಎಸೆದಿದ್ದಾರೆ. ನೂರಾರು ಕಲ್ಲುಗಳನ್ನು ಎಸೆದಿದ್ದಾರೆ. ಮಸೀದಿಯಲ್ಲಿ ಕಲ್ಲುಗಳು ಹೇಗೆ ಬಂದವು? ಲಾಂಗುಗಳು, ಪೆಟ್ರೋಲ್ ಬಾಂಬ್ ಹೇಗೆ ಬಂದವು? ಎಂದು ಕೇಳಿದರು. ಪೆಟ್ರೋಲ್ ಬಾಂಬ್ ಎಸೆದು ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಅಂಗಡಿಗಳು…

Read More

ಮಾಗಡಿ : ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು. ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಗ್ಯಾರಂಟಿ ಯೋಜನೆಗಳನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಎನ್ನುವಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಎತ್ತಂಗಡಿ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದಲ್ಲದೆ  ಕೆ.ವಿ.ಶರತ್ ಚಂದ್ರ, ಐಪಿಎಸ್ (ಕೆಎನ್ -1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಇದಲ್ಲದೆ, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್-1998) ಅವರು ಬೆಂಗಳೂರು…

Read More