Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು : “ರೈತರ ಒಳಿತಿಗಾಗಿ ಕಾವೇರಿ ಮಾತೆಯನ್ನು ಪೂಜಿಸಿ, ಪಾರ್ಥಿಸುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರೈತರ ವಿರೋಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಈ ರೀತಿ ಉತ್ತರಿಸಿದರು. ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು ಕೇಳಿದಾಗ, “ರೈತರ ವಿರೋಧ ಇದೆ ಎಂದು ಯಾರು ಹೇಳಿದರು? ಪೂಜೆ ಮಾಡಲು ಯಾರಾದರೂ ವಿರೋಧ ಮಾಡುತ್ತಾರಾ? ನೀವು ವಿರೋಧ ಮಾಡಬಹುದು” ಎಂದು ತಿಳಿಸಿದರು. “ಕೆಆರ್ ಎಸ್ ನಲ್ಲಿ ಈ ಬಾರಿ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಿದ್ದೇನೆ. ನಾವು ದೊಡ್ಡದಾಗಿ ಮಾಡಬೇಕು ಎಂದುಕೊಂಡಿದ್ದ ಜಾಗದಲ್ಲಿ ಈ ಬಾರಿ ಕಾರ್ಯಕ್ರಮ ಮಾಡುತ್ತಿಲ್ಲ” ಎಂದು ತಿಳಿಸಿದರು. ನೇರ, ನಿಷ್ಠುರ ನಡೆಯ ಕ್ರಾಂತಿಕಾರಿ ಸಾಹಿತಿ ಎಸ್.ಎಲ್. ಬೈರಪ್ಪ ಸಾಹಿತಿ ಎಸ್.ಎಲ್. ಬೈರಪ್ಪ ಅವರ ನಿಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಎಸ್.ಎಲ್. ಬೈರಪ್ಪ ಅವರು ಕ್ರಾಂತಿಕಾರಿ ಸಾಹಿತಿಗಳು. ಯಾರಿಗೂ ಹೆದರದೆ ನೇರ, ನಿಷ್ಠುರವಾಗಿ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ. ಈ ಕುರಿತಂತೆ ಶಿವಮೊಗ್ಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಸಾಗರ ತಾಲ್ಲೂಕು, ಉಳ್ಳೂರು ಗ್ರಾಮ ಪಂಚಾಯಿತಿಯ ಉಳ್ಳೂರು ಗ್ರಾಮವು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು, ಈ ವ್ಯಾಪ್ತಿಯಲ್ಲಿ ಸುಮಾರು 700 ರಿಂದ 800 ಕುಟುಂಬಗಳು ವಾಸಿಸುತ್ತಿದ್ದು, ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ರೈತಾಪಿ ವರ್ಗದವರು, ಮಹಿಳೆಯರು ವೃದ್ಧರು ಆಸ್ಪತ್ರೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ ಮಕ್ಕಳು ವಿದ್ಯಾಭ್ಯಾಸ ಸಲುವಾಗಿ ನಗರ ಪ್ರದೇಶಕ್ಕೆ ಸ್ಥಳೀಯವಾಗಿ ಮತ್ತು ಶಿವಮೊಗ್ಗ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್ ಮುಖಾಂತರವಾಗಿಯೇ ತೆರಳಬೇಕಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸಾಗರದಿಂದ ಶಿವಮೊಗ್ಗ ಮತ್ತು ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಸಾಗರ ಡಿಪೊ ವ್ಯಾಪ್ತಿಯಿಂದ ಹೊರಡುವ ಸರ್ಕಾರಿ ಬಸ್ ಗಳನ್ನು ಉಳ್ಳೂರು ಗ್ರಾಮದಲ್ಲಿ ಎಲ್ಲಿ ಸುವಂತೆ ಈ ಮೂಲಕ…
ಮಂಗಳೂರು : ಮಂಗಳೂರಿನಲ್ಲಿ ಅತಿ ದೊಡ್ಡ ಟೆಕ್ ಪಾರ್ಕ್ ನಿರ್ಮಾಣದ ಪ್ರಸ್ತಾವ ಗುರುವಾರ ಅಥವಾ ಮುಂದಿನ ವಾರ ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದ ಟಿಎಂಎ ಪೈ ಕನ್ವೆನ್ಶನ್ ಸೆಂಟರ್ ನಲ್ಲಿ ಬುಧವಾರ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ ಐದನೇ ಆವೃತ್ತಿಯ ‘ಟೆಕ್ನೋವಾಂಜಾ-2025’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮಂಗಳೂರಿನಲ್ಲಿ 3.25 ಎಕರೆ ಭೂಮಿಯಲ್ಲಿ ಟೆಕ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಇದು 3.5 ಲಕ್ಷ ಚದರ ಅಡಿ ವಿಸ್ತೀರ್ಣದ ಕಟ್ಟಡ ಮತ್ತು 3,500 ಕೋಟಿ ರೂ.ಗಳ ಕಾರ್ಯಕಾರಿ ಬಂಡವಾಳದೊಂದಿಗೆ ಟೆಕ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಮುಂದಿನ ಐದು ವರ್ಷದೊಳಗೆ ಮಂಗಳೂರನ್ನು ಐಟಿ ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರು ಆಗಿ ರೂಪಿಸಲು ಪ್ರಯತ್ನವಾಗಲಿದೆ. ಮಂಗಳೂರಿನ ಅಭಿವೃದ್ಧಿಯ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಜತೆಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಕರೆ ನೀಡಿದ ಸಚಿವ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಮುಖ ರಸ್ತೆ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರು ಹೆಚ್ಚಾಗಿದೆ. ವಾಹನ ಸವಾರರು ಓಡಾಡೋದಕ್ಕೆ ಕಷ್ಟವಾಗಿದೆ. ರಾಜ್ಯದ ಜನರಿಗೆ ಆಸೆ, ಆಮೀಷದ ಬಲಿಯೊಡ್ಡಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ ನೀತಿ ಅನುಸರಿಸುತ್ತದೆ ಎಂದು ಬಿಜೆಪಿ ಮುಖಂಡ ಡಾ.ಜ್ಞಾನೇಶ್ ಆರೋಪಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಸಾಗರ, ಉಳವಿ ಮುಖ್ಯ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಿಟ್ಟಿ ಯೋಜನೆಯಿಂದ ರಾಜ್ಯದ ಆರ್ಥಿಕತೆ ಹಳಿ ತಪ್ಪಿದೆ. ಖಜಾನೆಯಲ್ಲಿ ಹಣವಿಲ್ಲ. ಅಭಿವೃದ್ಧಿ ಕುಂಠಿತಗೊಂಡಿದೆ. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಖಜಾನೆ ಲೂಟಿ ಮಾಡಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಕೇಂದ್ರದಲ್ಲೂ ಒಂದೊಮ್ಮೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದರೆ ಇವತ್ತಿನ ದೇಶ ಸ್ಥಿತಿ ಹೇಗಿರುತಿತ್ತು ಎನ್ನುವುದನ್ನು ಜನರು ಯೋಚಿಸಬೇಕಿದೆ ಎಂದರು. ರಸ್ತೆಯಲ್ಲಿ ಗುಂಡಿಗಳು ಬಿದ್ದು…
ಜಮ್ಮು: ಪ್ರಮುಖ ಪ್ರಗತಿಯಲ್ಲಿ, ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಭದ್ರತಾ ಸಂಸ್ಥೆಗಳು ಮೊದಲ ಆರೋಪಿಯನ್ನು ಬಂಧನವನ್ನು ಮಾಡಿವೆ. ಮಾಧ್ಯಮ ವರದಿಗಳ ಪ್ರಕಾರ, ಭಯೋತ್ಪಾದಕರಿಗೆ ಸಹಾಯ ಮಾಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಮಹತ್ವದ ಪ್ರಗತಿಯೊಂದರಲ್ಲಿ, ಏಪ್ರಿಲ್ 22 ರ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈನಲ್ಲಿ ನಡೆದ ಆಪರೇಷನ್ ಮಹಾದೇವ್ ಸಮಯದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವಿಶ್ಲೇಷಣೆಯ ನಂತರ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬಂಧಿಸಲಾಗಿದೆ.
ಶಿವಮೊಗ್ಗ: ಕನ್ನಡದ ಹಿರಿಯ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಡಾ.ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕನ್ನಡ ಸಾಹಿತ್ಯ ಲೋಕದ ಅಪೂರ್ವ ಚೇತನ ಪದ್ಮಭೂಷಣ ಎಸ್. ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಪದ್ಮಭೂಷಣ ಗೌರವ ಪುರಸ್ಕೃತ ನಾಡಿನ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಅಗಲಿದ ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ. ಅವರ ಪುಸ್ತಕ ಓದುಗರಿಗೆ ಹಾಗೂ ಕುಟುಂಬ ಸದಸ್ಯರಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳುವ ಮೂಲಕ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಂತಾಪವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/…
ಇದು ಅಶ್ವಯುಜ ಮಾಸ. ಇಂದಿನ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಅಶ್ವಯುಜ ಮಾಸದ ಶಕ್ತಿಶಾಲಿ ಗುರುವಾರದಂದು ಮಾಡಬೇಕಾದ ಪೂಜೆಯ ಬಗ್ಗೆ ನಾವು ಕಲಿಯಲಿದ್ದೇವೆ. ಗುರುವಾರ ಗುರುವಿನ ದಿನ. ಕುಬೇರನ ದಿನ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ…
ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ. ಹಿರಿಯ ಸಾಹಿತಿ ಹಾಗೂ ಪದ್ಮಭೂಷಣ ಪುರಸ್ಕೃತ ಡಾ.ಎಸ್ಎಲ್ ಭೈರಪ್ಪ ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/ https://kannadanewsnow.com/kannada/bjp-protests-demanding-closure-of-road-pothole-in-sagar/
ಬೆಂಗಳೂರು: ಅತ್ಯಾಚಾರ ಪ್ರಕರಣ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮತ್ತೊಬ್ಬ ನ್ಯಾಯಾಧೀಶರ ನ್ಯಾಯಪೀಠಕ್ಕೆ ಪ್ರಕರಣ ವರ್ಗಾವಣೆ ಕೋರಿದ್ದಂತ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಇಂದು ಅತ್ಯಾಚಾರ ಕೇಸ್ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರಿದ್ದಂತ ನ್ಯಾಯಪೀಠವು ವಜಾಗೊಳಿಸಿದೆ. ಬೇರೆ ನ್ಯಾಯಾಧೀಶರಿರುವ ಕೋರ್ಟ್ ಗೆ ವರ್ಗಾವಣೆಯನ್ನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಹ ಅರ್ಜಿ ವಜಾಗೊಳಿಸಿತ್ತು.
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ಆದರೇವ ಅವರು ಬಾಲ್ಯದಲ್ಲಿ ಕಡು ಕಷ್ಟ ಅನುಭವಿಸಿದ್ದರು. ತಮ್ಮ ಒಪ್ಪೊತ್ತಿನ ಊಟ, ಶಿಕ್ಷಣಕ್ಕಾಗಿ ತಿಂಗಳಿಗೆ 5 ರೂಪಾಯಿ ಸಂಬಳಕ್ಕೆ ಸಿನಿಮಾ ಟಾಕೀಸ್ ನಲ್ಲಿ ಗೇಟ್ ಕೀಪರ್ ಆಗಿಯೂ ಕೆಲಸ ಮಾಡಿದ್ದರು. ಸಾಹಿತಿ ಎಸ್ ಎಲ್ ಭೈರಪ್ಪ ಅವರು ಬಾಲ್ಯದಲ್ಲೇ ಮಾರಕ ಪ್ಲೇಗ್ ರೋಗಕ್ಕೆ ಅಣ್ಣ-ತಂಗಿ, ಅಕ್ಕ, ತಾಯಿ, ತಮ್ಮನನ್ನು ಕಳೆದುಕೊಂಡರು. ಇದು ಅವರ ಬದುಕಿಗೆ ಬಹುದೊಡ್ಡ ಆಘಾತವನ್ನೇ ನೀಡಿತು. ಆ ಸಂದರ್ಭದಲ್ಲಿ ಅಕ್ಷರಶಃ ನಲುಗಿ ಹೋಗಿದ್ದರು. ಅಲ್ಲದೇ ಬೀದಿಗೆ ಕೂಡ ಬಿದ್ದಿದ್ದರು. ಹೀಗಾಗಿ ತಮ್ಮ ಆರಂಭದ ಶಿಕ್ಷಣವನ್ನು ಸೋದರ ಮಾವನ ಆಶ್ರಯದಲ್ಲಿ ಕಲಿತರು. ಸೋದರ ಮಾವನ ಆಶ್ರಯದಿಂದ ಪ್ರಾಥಮಿಕ ಶಾಲಾ ಶಿಕ್ಷಣ ಆರಂಭಿಸಿದಂತ ಅವರು, ಆ ಬಳಿಕ ನುಗ್ಗೆಹಳ್ಳಿಗೆ ಬಂದು ಸ್ವಾಮಿ ಮೇಷ್ಟ್ರು ಮತ್ತು ಶ್ರೀನಿವಾಸ ಅಯ್ಯಂಗರ್ ಅವರಿಂದ ಶಿಕ್ಷಣ ಮುಂದುವರೆಸುವಂತೆ ಆಯ್ತು. ಇದರ ಮಧ್ಯೆ ಸ್ವಾಮಿ ಮೇಷ್ಟ್ರು ಗೊರೂರಿಗೆ ವರ್ಗಾವಣೆಯಾದಾಗ ವಿಧಿಯಿಲ್ಲದೇ ಎಸ್ ಎಲ್ ಭೈರಪ್ಪ…