Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ 13 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ ಕೆಲವು ಗಂಟೆಗಳಲ್ಲಿ ಸುಮಾರು 30 ರಿಂದ 40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಮಳೆ ಸುರಿಯಲಿದೆ. ಈಗಾಗಲೇ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ, ಮೆಜೆಸ್ಟಿಕ್, ವಿಧಾನಸೌಧ ಮತ್ತು ಕಾರ್ಪೊರೇಷನ್ ಸೇರಿದಂತೆ ಹಲವು ಭಾಗಗಳಲ್ಲಿ ತುಂತುರು ಮಳೆ ಆರಂಭವಾಗಿದೆ. ಯೆಲ್ಲೋ ಅಲರ್ಟ್ ಘೋಷಿಸಲಾದ ಜಿಲ್ಲೆಗಳು: ಈ ಕೆಳಗಿನ 13 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ: ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ ರಾಮನಗರ ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಕೋಲಾರ ಬೆಳಗಾವಿ ಧಾರವಾಡ (ಗಮನಿಸಿ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಈ ಪಟ್ಟಿಯಲ್ಲಿ ಇನ್ನು…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿದೆ. 15 ವರ್ಷಗಳ ತೃಣಮೂಲ ಕಾಂಗ್ರೆಸ್ (TMC) ಆಡಳಿತವನ್ನು ಅಂತ್ಯಗೊಳಿಸಿರುವ ಬಿಜೆಪಿ, ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ, ಈ ಸೋಲನ್ನು ಒಪ್ಪದ ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. “ನಾನು ಸೋತಿಲ್ಲ, ರಾಜೀನಾಮೆ ನೀಡುವುದಿಲ್ಲ” ಚುನಾವಣಾ ಫಲಿತಾಂಶ ಪ್ರಕಟವಾದ ನಂತರವೂ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. “ನಾನು ಚುನಾವಣೆಯಲ್ಲಿ ಸೋತಿಲ್ಲ, ಈ ಫಲಿತಾಂಶವು ಒಂದು ದೊಡ್ಡ ಪಿತೂರಿ. ಒತ್ತಡಕ್ಕೆ ಮಣಿದು ನಾನು ಅಧಿಕಾರದಿಂದ ಕೆಳಗಿಳಿಯುವುದಿಲ್ಲ,” ಎಂದು ಅವರು ಗುಡುಗಿದ್ದಾರೆ. ಅಲ್ಲದೆ, ನೈತಿಕವಾಗಿ ತಮ್ಮ ಪಕ್ಷವೇ ಗೆದ್ದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. https://twitter.com/ians_india/status/2051622568122368035 ಐತಿಹಾಸಿಕ ಜಯ ಸಾಧಿಸಿದ ಬಿಜೆಪಿ ಸೋಮವಾರ ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಪಡೆದುಕೊಂಡಿದೆ. ಈ ಮೂಲಕ…

Read More

ಚಂಡೀಗಢ: ಹೈದರಾಬಾದ್‌ನಿಂದ ಚಂಡೀಗಢಕ್ಕೆ ಆಗಮಿಸಿದ ಇಂಡಿಗೋ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಎಲೆಕ್ಟ್ರಾನಿಕ್ ಸಾಧನದಲ್ಲಿ (ಪವರ್ ಬ್ಯಾಂಕ್) ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ವಿವರ: ವಿಮಾನವು ಚಂಡೀಗಢ ರನ್‌ವೇನಲ್ಲಿ ಇಳಿದು ನಿಂತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಪ್ರಯಾಣಿಕರೊಬ್ಬರ ಕೈಚೀಲದಲ್ಲಿದ್ದ (Hand Baggage) ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಈ ಅವಾಂತರಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಲಿಥಿಯಂ-ಐಯಾನ್ ಬ್ಯಾಟರಿಗಳಲ್ಲಿ ಉಂಟಾಗುವ ‘ಥರ್ಮಲ್ ರನ್‌ಅವೇ’ (Thermal Runaway) ಪ್ರಕ್ರಿಯೆಯಿಂದಾಗಿ ಈ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ತಕ್ಷಣದ ಕ್ರಮ: ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಸಿಬ್ಬಂದಿ ಕೂಡಲೇ ತುರ್ತು ನಿರ್ಗಮನ ಪ್ರಕ್ರಿಯೆಯನ್ನು ಕೈಗೊಂಡರು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾದ ವರದಿಯಾಗಿಲ್ಲ. ಡಿಜಿಸಿಎ ನಿಯಮಗಳು: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (DGCA) ನಿಯಮಗಳ ಪ್ರಕಾರ, ಪವರ್ ಬ್ಯಾಂಕ್‌ಗಳನ್ನು ವಿಮಾನದ ‘ಚೆಕ್-ಇನ್’ ಬ್ಯಾಗೇಜ್‌ಗಳಲ್ಲಿ ಕೊಂಡೊಯ್ಯುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇವುಗಳನ್ನು ಕೇವಲ ‘ಕ್ಯಾಬಿನ್…

Read More

ಬೆಂಗಳೂರು : ಕರ್ನಾಟಕದ ನಾವೀನ್ಯತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಹಾಗೂ ಸ್ಟಾರ್ಟ್‌ಅಪ್‌ಗಳ ಸಂಶೋಧನೆಗಳಿಗೆ ಜಾಗತಿಕ ಮಾನ್ಯತೆ ಒದಗಿಸುವ ಉದ್ದೇಶದಿಂದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್ (𝗕𝗕𝗖) ಮತ್ತು ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ಮಾನ್ಯತಾ ಮಂಡಳಿ NABL (QCI) ಜತೆಗೆ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದಕ್ಕೆ ರಾಜ್ಯ ಸರ್ಕಾರದ (ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ) ಕಾರ್ಯದರ್ಶಿ ಹಾಗೂ 𝗕𝗕𝗖 ಅಧ್ಯಕ್ಷೆ ಡಾ. ಎನ್. ಮಂಜುಳಾ ಅವರ ಸಮ್ಮುಖದಲ್ಲಿ, 𝗕𝗕𝗖 ಯ ವ್ಯವಸ್ಥಾಪಕ ನಿರ್ದೇಶಕ ಡಾ. ಮೊಹಮ್ಮದ್ ಆದಿಲ್ ಎ.ಎ. ಮತ್ತು 𝗡𝗔𝗕𝗟 (ಕ್ವಾಲಿಟಿ ಕಂಟ್ರೋಲ್ ಆಫ್ ಇಂಡಿಯಾ) ಸಿಇಒ ಡಾ. ರಮಾನಂದ್ ಶುಕ್ಲಾ ಅವರು ಸಹಿ ಹಾಕಿದರು. ಬಳಿಕ ಮಾತನಾಡಿದ ಸರ್ಕಾರದ ಕಾರ್ಯದರ್ಶಿ ಡಾ. ಎನ್. ಮಂಜುಳಾ, “ಜೀವ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವನ್ನು ಜಾಗತಿಕ ಹಬ್ ಆಗಿ ಗುರುತಿಸಿಕೊಳ್ಳುವುದಕ್ಕೆ ಈ ಒಪ್ಪಂದ ಬಹಳ ಸಹಕಾರಿಯಾಗಲಿದೆ. ನಾವು ಈಗಾಗಲೇ 512 ಕ್ಕೂ ಹೆಚ್ಚಿನ ನಾವೀನ್ಯತಾ ಪ್ರಾಜೆಕ್ಟ್‌ಗಳಿಗೆ ಬೆಂಬಲ ನೀಡಿದ್ದೇವೆ.…

Read More

ಚೆನ್ನೈ: ದಶಕಗಳ ಕಾಲ ಬೆಳ್ಳಿಪರದೆಯ ಮೇಲೆ ಮಿಂಚಿದ್ದ ನಟ ವಿಜಯ್, ಈಗ ತಮಿಳುನಾಡಿನ ರಾಜಕೀಯ ಅಖಾಡದಲ್ಲಿ ‘ಕಿಂಗ್’ ಆಗಿ ಹೊರಹೊಮ್ಮಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವರ ನೇತೃತ್ವದ TVK ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸಂಭ್ರಮದ ಸಮಾರಂಭ ಸ್ಥಿರವಲ್ಲದ ವರದಿಗಳ ಪ್ರಕಾರ, ವಿಜಯ್ ಅವರು ಮೇ 7, ಗುರುವಾರದಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭವು ಈ ಹಿಂದೆ ಅವರ ಚಲನಚಿತ್ರಗಳ ಆಡಿಯೋ ಬಿಡುಗಡೆ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳು ನಡೆಯುತ್ತಿದ್ದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಯಿದೆ. ಆದರೂ, ಪಕ್ಷದ ವತಿಯಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸರ್ಕಾರ ರಚನೆಯ ಲೆಕ್ಕಾಚಾರ: ಕಾಂಗ್ರೆಸ್ ಬೆಂಬಲ? 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 108 ಸ್ಥಾನಗಳನ್ನು ಹೊಂದಿರುವ TVK ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಇನ್ನೂ 10 ಸ್ಥಾನಗಳ ಕೊರತೆಯಿದೆ. ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ…

Read More

ಚೆನ್ನೈ: ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದಶಕಗಳಿಂದ ತಮಿಳುನಾಡನ್ನು ಆಳುತ್ತಿದ್ದ ದ್ರಾವಿದ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ವಿರುದ್ಧ ವಿಜಯ್ ಸಾಧಿಸಿರುವ ಈ ಗೆಲುವು ಅಭೂತಪೂರ್ವ ಮತ್ತು ಐತಿಹಾಸಿಕವಾಗಿದೆ. ಚುನಾವಣಾ ಫಲಿತಾಂಶದ ಮರುದಿನವಾದ ಮಂಗಳವಾರ, ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಪತ್ರ ಬರೆದು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದು, ವಿಧಾನಸಭೆಯಲ್ಲಿ ತಮ್ಮ ಬಹುಮತ ಸಾಬೀತುಪಡಿಸಲು ಅವಕಾಶ ನೀಡುವಂತೆ ಕೋರಿದ್ದಾರೆ. ದೆಹಲಿಯ 2013ರ ಚುನಾವಣೆಯೊಂದಿಗೆ ಹೋಲಿಕೆ ವಿಜಯ್ ಅವರ ಈ ಅನಿರೀಕ್ಷಿತ ಗೆಲುವು 2013ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ (AAP) ಸಾಧನೆಯನ್ನು ನೆನಪಿಸುತ್ತಿದೆ. ಇವರಿಬ್ಬರ ರಾಜಕೀಯ ಪ್ರವೇಶದ ನಡುವಿನ ಪ್ರಮುಖ ಸಾಮ್ಯತೆಗಳು ಈ ಕೆಳಗಿನಂತಿವೆ: ಅದ್ಭುತ ಚೊಚ್ಚಲ ಪ್ರವೇಶ: ಕೇಜ್ರಿವಾಲ್ ಅವರ ಎಎಪಿ 2013ರ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿಗೆ ಅನ್ವಯವಾಗುವಂತೆ ಬೋಧಕೇತರ ನೌಕರರ (ಗುಂಪು ‘ಸಿ’ ಮತ್ತು ‘ಡಿ’) ಸಾರ್ವತ್ರಿಕ ವರ್ಗಾವಣೆಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್ ಮೂಲಕ ಪಾರದರ್ಶಕವಾಗಿ ನಡೆಯಲಿದ್ದು, ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ವರ್ಗಾವಣೆ ಮಿತಿ ಮತ್ತು ಅರ್ಹತೆ ವರ್ಗಾವಣೆ ಮಿತಿ: ಆಯಾ ವೃಂದದ ಕಾರ್ಯನಿರತ ಬಲದ ಗರಿಷ್ಠ ಶೇಕಡಾ 6 ರಷ್ಟು ನೌಕರರನ್ನು ಮಾತ್ರ ವರ್ಗಾಯಿಸಲು ಅವಕಾಶವಿದೆ. ಕನಿಷ್ಠ ಸೇವಾ ಅವಧಿ: ಒಂದು ಸ್ಥಳದಲ್ಲಿ ವರ್ಗಾವಣೆ ಪಡೆಯಲು ಗುಂಪು ‘ಸಿ’ ನೌಕರರು ಕನಿಷ್ಠ 4 ವರ್ಷ ಮತ್ತು ಗುಂಪು ‘ಡಿ’ ನೌಕರರು ಕನಿಷ್ಠ 7 ವರ್ಷಗಳ ಸೇವೆಯನ್ನು ಪೂರೈಸಿರಬೇಕು. ಆದ್ಯತೆಗಳು: ಕೋರಿಕೆ ವರ್ಗಾವಣೆಯಲ್ಲಿ ಗಂಭೀರ ಕಾಯಿಲೆ ಇರುವವರು, ಅಂಗವಿಕಲರು, ವಿಧವೆಯರು, ಪತಿ-ಪತ್ನಿ ಪ್ರಕರಣಗಳು, ಅವಿವಾಹಿತ ಮಹಿಳೆಯರು ಮತ್ತು ನಿವೃತ್ತಿಯ ಅಂಚಿನಲ್ಲಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಗ್ರೇಸ್ ಅಂಕಗಳ ಹಂಚಿಕೆ (Seniority) ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸುವಾಗ ಸೇವಾವಧಿಯ ಆಧಾರದ ಮೇಲೆ ಗ್ರೇಸ್…

Read More

ಚಾಮರಾಜನಗರ: ಬೇಸಿಗೆ ರಜೆಯ ಮಜಾ ಸವಿಯಲು ತಾತನ ಮನೆಗೆ ಬಂದಿದ್ದ ಬಾಲಕನೊಬ್ಬ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಹರಳೆ – ಅಣಗಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಘಟನೆಯ ವಿವರ: ಮೃತ ಬಾಲಕನನ್ನು ಬೆಂಗಳೂರು ನಿವಾಸಿ ಆನಂದ್ ರಾಜ್ ಎಂಬುವವರ ಪುತ್ರ ಯಶವಂತ್ (11) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ ಇದ್ದ ಕಾರಣ ಯಶವಂತ್ ಅಣಗಳ್ಳಿ ಗ್ರಾಮದಲ್ಲಿರುವ ತನ್ನ ತಾತ ಶಿವಲಿಂಗಯ್ಯ ಅವರ ಮನೆಗೆ ಬಂದಿದ್ದ. ಮೊಮ್ಮಗ ರಜೆಯಲ್ಲಿ ಆಟವಾಡಲಿ ಎಂದು ಕುಟುಂಬಸ್ಥರು ಆತನಿಗೆ ಹೊಸ ಸೈಕಲ್ ಕೊಡಿಸಿದ್ದರು. ಅಪಘಾತ ನಡೆದಿದ್ದು ಹೇಗೆ? ಮಂಗಳವಾರ ಬೆಳಿಗ್ಗೆ ಯಶವಂತ್ ತನ್ನ ಹೊಸ ಸೈಕಲ್ ಏರಿ ರಸ್ತೆಯಲ್ಲಿ ಸವಾರಿ ಮಾಡುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಬಾಲಕ ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಕಣ್ಣೆದುರೇ ಮಗು ಪ್ರಾಣಬಿಟ್ಟಿದ್ದನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸ್ ಭೇಟಿ ಮತ್ತು ತನಿಖೆ: ವಿಷಯ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ…

Read More

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಹಾಗೂ ಮಠದ ಟ್ರಸ್ಟಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಮಠದ ಆವರಣದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಡೀ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಬಿಎನ್​​ಎಸ್ 163 ಅಡಿ ನಿಷೇಧಾಜ್ಞೆ ಮಠದಲ್ಲಿ ನಡೆಯುತ್ತಿರುವ ಸರಣಿ ಗಲಾಟೆಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುವ ಸಂಭವವಿರುವ ಕಾರಣ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮೇ 1 ರಿಂದ ಮೇ 30ರ ವರೆಗೆ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬಿಎನ್​​ಎಸ್ (BNS) ಸೆಕ್ಷನ್ 163ರ ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಯಾವುದೇ ಸಭೆ, ಸಮಾರಂಭ ಅಥವಾ ಸುದ್ದಿಗೋಷ್ಠಿ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ವಿವಾದಕ್ಕೆ ಕಾರಣವೇನು? ವಚನಾನಂದ ಸ್ವಾಮೀಜಿಯವರನ್ನು ಟ್ರಸ್ಟ್‌ನಿಂದ ಉಚ್ಚಾಟಿಸಿದಾಗಿನಿಂದ ಮಠದಲ್ಲಿ ಅಶಾಂತಿ ಮನೆಮಾಡಿದೆ. ಪ್ರಮುಖವಾಗಿ ಮಠದ ಹಣಕಾಸಿನ ವಿಚಾರದಲ್ಲಿ ಭಾರಿ ಆರೋಪ-ಪ್ರತ್ಯಾರೋಪಗಳು ಕೇಳಿಬರುತ್ತಿವೆ: ಲೆಕ್ಕ ಕೊಡಿ ಅಭಿಯಾನ: ಸ್ವಾಮೀಜಿ ಬೆಂಬಲಿಗರು ಟ್ರಸ್ಟಿಗಳ ವಿರುದ್ಧ ‘ಲೆಕ್ಕ ಕೊಡಿ’ ಅಭಿಯಾನ ಆರಂಭಿಸಿದ್ದಾರೆ.…

Read More

ಬೆಂಗಳೂರು: ಸರನಂ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಮಲ್ಲೇಶ್ವರಂ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾಲಿಯೇಟಿವ್ ಕೇರ್ ಯುನಿಟ್ ಉದ್ಘಾಟನೆಯನ್ನುು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಮಾಡಿದರು. ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ. ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕವಾಗಿ ಐದು ಬೆಡ್ ಗಳ ಒಂದು ವಾರ್ಡ್ ನಿರ್ಮಾಣ ಮಾಡಿದ್ದೇವೆ. ಮಾರಣಾಂತಿಕ ಅಥವಾ ತೀವ್ರವಾದ ಕಾಯಿಲೆಗಳಿಂದ ಬಳಲುತ್ತ, ಅಂತಿಮ ಹಂತದಲ್ಲಿರುವ ರೋಗಿಗಳಿಗೆ ಇದು ವಿಶೇಷ ಯೂನಿಟ್ ಆಗಿದೆ. ಕ್ಯಾನ್ಸರ್, ಕಿಡ್ನಿ ವೈಫಲ್ಯ ಸೇರಿದಂತೆ ಇತರ ರೋಗಿಗಳ ಆರೈಕೆಗೆ ಈ ವಾರ್ಡ್ ಸಹಾಯಕ. ತೀವ್ರವಾದ ನೋವು, ಉಸಿರಾಟ ತೊಂದರೆ,ನರ ಸಂಬಂಧಿ ಕಾಯಿಲೆಯಿಂದ ಬಳಲುವವರು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರಿಗೆ ಈ ಕೇಂದ್ರ ಅನುಕೂಲ. ರೋಗವನ್ನು ಗುಣಪಡಿಸುವುದಕ್ಕೆ ಸಾಧ್ಯವಿಲ್ಲದ ಹಂತದಲ್ಲಿ ರೋಗಿಯ ದೈಹಿಕ ನೋವು &…

Read More