Author: kannadanewsnow09

ಬೆಂಗಳೂರು : ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಯೋಜನೆ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಕು ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಘಟಕವನ್ನು ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಒಟ್ಟು 370.05 ಮೆಗಾ ವ್ಯಾಟ್ ಸಾಮರ್ಥ್ಯದ ಈ ಘಟಕದಲ್ಲಿ ಗ್ಯಾಸ್ ಟರ್ಬೈನ್ ಜನರೇಟರ್ ಔಟ್ ಪುಟ್ ಮೂಲಕ 236.825 ಮೆಗಾವ್ಯಾಟ್ ಮತ್ತು ಸ್ಟೀಮ್ ಟರ್ಬೈನ್ ಜನರೇಟರ್ ಔಟ್ ಪುಟ್ ಮೂಲಕ 133.225 ಮೆಗ್ಯಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಈಗಾಗಲೇ ಸಂಯೋಜಿತ ಆವರ್ತದದಲ್ಲಿ ಪ್ರಾಯೋಗಿಕ ಉತ್ಪಾದನಾ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ.…

Read More

ಬೆಂಗಳೂರು: ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರ ಹೊರತಾಗಿ ನನ್ನನ್ನು ಯಾರು ಹನಿಟ್ರ್ಯಾಪ್ ಮಾಡಿಲ್ಲ ಅಂತ ಶಾಸಕ ಹರೀಶ್ ಗೌಡ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹನಿಟ್ರ್ಯಾಪ್ ಪ್ರಕರಣ ನನಗೆ ಮಾಡಿಲ್ಲ. ನನ್ನ ಪರಿಚಿತರಿಗೆ ಮಾಡಿದ್ದರಿಂದ ದೂರು ನೀಡಲಾಗಿತ್ತು. ಈ ಸಂಬಂಧ ತನಿಖೆ ನಡೆಸಿದಂತ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದರು. ಸಿಸಿಬಿ ಪೊಲೀಸರು ಹನಿಟ್ರ್ಯಾಪ್, ಬ್ಲಾಕ್ ಮೇಲ್ ಸಂಬಂಧ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಈ ಜಾಲದ ಹಿಂದೆ ಯಾರಿದ್ದಾರೆ ಅನ್ನೋದನ್ನು ನೋಡಬೇಕು. ನನಗೆ ಯಾವುದೇ ಬ್ಲಾಕ್ ಮೇಲ್, ಹನಿಟ್ರ್ಯಾಪ್ ಮಾಡಿಲ್ಲ. ನನ್ನ ಕ್ಷೇತ್ರದ ಕೆಲವರಿಗೆ ಮಾಡಿದ್ದರು ಎಂಬುದಾಗಿ ತಿಳಿಸಿದರು. ಅಂದಹಾಗೇ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಈ ಬೆನ್ನಲ್ಲೇ ಡಿ ಗ್ಯಾಂಗ್ ಸಿನಿಮಾ ಮಾಡೋದಕ್ಕಾಗಿ ನಿರ್ಮಾಪಕರು ಟೈಟಲ್ ನೋಂದಣಿಗೆ ಮುಗಿ ಬಿದ್ದಿದ್ದರು. ಆದ್ರೇ ಆ ಟೈಟಲ್ ನೀಡಲಾಗಿರಲಿಲ್ಲ. ಈಗ ಖೈದಿ ನಂ.6106 ಟೈಟಲ್ ಗೆ ಪುಲ್ ಡಿಮ್ಯಾಂಡ್ ಹೆಚ್ಚಾಗಿದೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಡಿ ಗ್ಯಾಂಗ್ ಟೈಟಲ್ ನೀಡುವಂತೆ ನಿರ್ದೇಶಕ ರಾಕಿ ಸೋಮ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ದರ್ಶನ್ ಪ್ರಕರಣ ಕೋರ್ಟ್ ನಲ್ಲಿರುವ ಕಾರಣ, ಪೆಂಡಿಂಗ್ ನಲ್ಲಿ ಇರಿಸಲಾಗಿದೆ. ಈ ಮೂಲಕ ಡಿ ಗ್ಯಾಂಗ್ ಟೈಟಲ್ ನೀಡಿಲ್ಲ. ಇದೀಗ ಡಿ ಗ್ಯಾಂಗ್ ಟೈಟಲ್ ಬಳಿಕ ಖೈದಿ ನಂ.6106 ಗೆ ನಿರ್ಮಾಪಕ ಭದ್ರಾವತಿಯ ಕುಮಾರ್ ಎಂಬುವರು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದ್ರೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾತ್ರ ಈ ಟೈಟಲ್ ಗೂ ಅನುಮತಿ ನೀಡಿಲ್ಲ. ಹೀಗಾಗಿ ಡಿ ಗ್ಯಾಂಗ್, ಹಾಗೂ ಖೈದಿ ನಂ.6106 ಟೈಟಲ್ ಗೆ ಪುಲ್ ಡಿಮ್ಯಾಂಡ್…

Read More

ಬೆಂಗಳೂರು: ಅಶ್ಲೀಲ ಪ್ರಕರಣ, ಅತ್ಯಾಚಾರ ಕೇಸ್, ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಅವರು ಇಂದು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅತ್ಯಾಚಾರ ಆರೋಪಿಗೆ ಬಿಗ್ ಶಾಕ್ ನೀಡಿದೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಂತ ಅವರನ್ನು, ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದೆ. ಅಲ್ಲದೇ ಪ್ರಕರಣ ಸಂಬಂಧ ಸ್ಥಳಮಹಜರ್ ಕೂಡ ನಡೆಸಲಾಗುತ್ತಿದೆ. ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆಯ ಬಳಿಕ ವಜಾಗೊಳಿಸಿದ್ದಾರೆ. ಹೀಗಾಗಿ ಎಸ್ಐಟಿ ವಶದಲ್ಲಿರುವಂತ ಪ್ರಜ್ವಲ್ ರೇವಣ್ಣಗೆ…

Read More

ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮಾಡಿದ ಸಂಬಂಧ ಪೊಲೀಸರಿ ದೂರು ನೀಡಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ ನಂತ್ರ, ಬ್ಲಾಕ್ ಮೇಲ್ ಮಾಡಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎಂಬುವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಬ್ಬರೂ ಪ್ರಭಾವಿಗಳನ್ನು ಸಂಪರ್ಕಿಸಿ, ಅವರನ್ನು ಹಿಂಬಾಲಿಸುತ್ತಿದ್ದರು. ಆ ಬಳಿಕ ಅವರ ಮೊಬೈಲ್ ನಂಬರ್ ಪಡೆದು, ಅವರು ಉಳಿದುಕೊಂಡಿದ್ದಂತ ಹೋಟೆಲ್ ನಲ್ಲೇ ಉಳಿದುಕೊಳ್ಳುತ್ತಿದ್ದರು. ಇದಾದ ನಂತ್ರ ವಿಐಪಿಗಳು ಖಾಲಿ ಮಾಡಿದ ರೂಂ ಬಾಡಿಗೆಗೆ ಪಡೆದು ಯುವತಿಯನ್ನು ಬಳಸಿಕೊಂಡು ಅದೇ ರೂಂನಲ್ಲಿ ಹಿಡನ್ ಕ್ಯಾಮರಾ ಬಳಸಿ, ವೀಡಿಯೋ ಚಿತ್ರೀಕರಿಸಿ, ಪ್ರಭಾವಿಗಳಿಗೆ ತಮ್ಮದೇ ವೀಡಿಯೋ ಎಂದು ಹಣಕ್ಕಾಗಿ ಪೀಡಿಸುತ್ತಿದ್ದಾಗೆ ತನಿಖೆಯ ವೇಳೆ ತಿಳಿದು ಬಂದಿದೆ. https://kannadanewsnow.com/kannada/holenarasipura-police-first-case-prajwal-revannas-bail-plea-rejected/…

Read More

ಬೆಂಗಳೂರು: “ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ ಎಂದರು. ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು…

Read More

ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರಕರಮ ಸಂಬಂಧ ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದಂತ ಮೊದಲ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿಯನ್ನು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದರ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಹೊಳೆನರಸೀಪುರ ಠಾಣೆಯ ಮೊದಲ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. https://kannadanewsnow.com/kannada/bigg-boss-contestant-varthur-santhosh-faces-another-trouble-complaint-filed-against-him-for-unsafe-animal-trafficking/ https://kannadanewsnow.com/kannada/we-have-information-about-who-shared-prajwals-obscene-video-g-parameshwara/

Read More

ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿ, ಸಂಕಷ್ಟಕ್ಕೆ ಸಿಲುಕಿ, ಜೈಲು ಪಾಲಾಗಿದ್ದಂತ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದೇ ಪ್ರಾಣಿಗಳನ್ನು ಅಸುರಕ್ಷಿತವಾಗಿ ಸಾಗಾಟ ಮಾಡಿದ ಆರೋಪದಲ್ಲಿ ಅಧಿಕಾರಿಯೊಬ್ಬರು ಅವರ ವಿರುದ್ಧ ದೂರು ನೀಡಿದ್ದಾರೆ. ಹೌದು ಬಿಗ್ ಬಾಸ್ ಸೆಲೆಬ್ರೆಟಿ ವರ್ತೂರು ಸಂತೋಷ್ ಅವರು ಪ್ರಾಣಿಗಳ ಸಾಗಾಟ ನಿಯಮವನ್ನು ಮೀರಿ, ಪ್ರಾಣಿಗಳನ್ನು ಅಸುರಕ್ಷಿತವಾಗಿ ಸಾಗಾಟ ಮಾಡಿದ್ದಾರೆ ಅಂತ ಪ್ರಾಣಿ ಕಲ್ಯಾಣಾಧಿಕಾರಿ ಹರೀಶ್ ಎಂಬುವರು ಪೊಲೀಸರಿಗೆ ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ. ಪ್ರಾಣಿ ಕಲ್ಯಾಣಾಧಿಕಾರಿ ಹರೀಶ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ವರ್ತೂರು ಠಾಣೆಯ ಪೊಲೀಸರು ವರ್ತೂರು ಸಂತೋಷ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹಳ್ಳಿಕಾರ್ ರೇಸ್ ಮಾಡಲು ಟ್ರಕ್ ಒಂದರಲ್ಲಿ ಒಂಭತ್ತು ಹೋರಿಗಳನ್ನು ತುಂಬಿಕೊಂಡು ಸಾಟ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಟ್ರಕ್ ನಲ್ಲಿ ಕೆಲ ವಸ್ತುಗಳನ್ನು ಸಹ ತುಂಬಲಾಗಿತ್ತು. ಇವುಗಳೊಂದಿಗೆ…

Read More

ಬನ್ನೇರುಘಟ್ಟ :  ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8  ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್…

Read More

ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿಂದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಅತಿ ದೊಡ್ಡ ಚಿರತೆ ಸಫಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು. ಸಂದರ್ಶಕರಿಗೊಂದು ಸಸಿ ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಿ, ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ…

Read More