Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು; ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದರು. ಈ ಮಸೂದೆಯು ವಕ್ಫ್ ಮಂಡಳಿಗಳ ಅಡಿಯಲ್ಲಿರುವ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುತ್ತದೆ. ಇದು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ಇರುವ ಒಟ್ಟು 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ ಹಾಗೂ ಅದರ ಮೌಲ್ಯ ₹1.2 ಲಕ್ಷ ಕೋಟಿ. ಆದರೆ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಈ ಆಸ್ತಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ನಾವು ಜಾತ್ಯತೀತ ಎಂದು ಹೇಳಿಕೊಂಡವರು ಮುಸ್ಲಿಮರಿಗೆ ಕಳೆದ ಎಪ್ಪತ್ತೈದು ವರ್ಷಗಳಿಂದ…
ನವದೆಹಲಿ: ಜನತಾ ದಳ (ಯುನೈಟೆಡ್) ಪಕ್ಷದ ಹಿರಿಯ ನಾಯಕರಾದ ಮೊಹಮ್ಮದ್ ಖಾಸಿಮ್ ಅನ್ಸಾರಿ ಮತ್ತು ಮೊಹಮ್ಮದ್ ನವಾಜ್ ಮಲಿಕ್ ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುವ ಬಗ್ಗೆ ಭಿನ್ನಾಭಿಪ್ರಾಯವಿದೆ ಎಂದು ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ತಡರಾತ್ರಿ ಮಸೂದೆಯನ್ನು ಅಂಗೀಕರಿಸಲಾಯಿತು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಮಿತ್ರ ಪಕ್ಷವಾದ ಜೆಡಿ(ಯು) ಹಲವಾರು ಕಡೆಗಳಿಂದ ವಿರೋಧದ ಹೊರತಾಗಿಯೂ ಅದನ್ನು ಬೆಂಬಲಿಸಿತು. ಜೆಡಿ(ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ, ಅನ್ಸಾರಿ ಪಕ್ಷದ ನಿರ್ಧಾರದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಇದು ಜೆಡಿ(ಯು) ಅನ್ನು ಜಾತ್ಯತೀತ ಮೌಲ್ಯಗಳ ರಕ್ಷಕ ಎಂದು ನೋಡಿದ ಅನೇಕ ಭಾರತೀಯ ಮುಸ್ಲಿಮರ ನಂಬಿಕೆಯನ್ನು ಮುರಿದಿದೆ ಎಂದು ಅವರು ಹೇಳಿದರು. “ನನ್ನ ಜೀವನದ ಹಲವಾರು ವರ್ಷಗಳನ್ನು ಪಕ್ಷಕ್ಕೆ ನೀಡಿದ್ದಕ್ಕಾಗಿ ನಾನು ನಿರಾಶೆಗೊಂಡಿದ್ದೇನೆ” ಎಂದು ಅವರು ಹಿಂದಿಯಲ್ಲಿ ಬರೆದಿದ್ದಾರೆ. “ನಮ್ಮಂತಹ ಲಕ್ಷಾಂತರ ಭಾರತೀಯ ಮುಸ್ಲಿಮರು ನೀವು ಸಂಪೂರ್ಣವಾಗಿ ಜಾತ್ಯತೀತ ಸಿದ್ಧಾಂತದ ಧ್ವಜಧಾರಕರು ಎಂದು ಅಚಲ ನಂಬಿಕೆಯನ್ನು ಹೊಂದಿದ್ದರು…
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಈ ಬೇಡಿಕೆ ಈಡೇರಿಸಿದಂತ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್ ಸಂತೋಷ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಹಾಗೂ ಸಮಗ್ರ ವೇತನ ಪ್ಯಾಕೇಜ್ ಎಂಬಂತ ಎರಡು ಪ್ರಮುಖ ಬೇಡಿಕೆಯನ್ನು ಈಡೇರಿಸಿದೆ ಎಂದರು. ರಾಜ್ಯ ಸರ್ಕಾರದ ಸಮಗ್ರ ವೇತನ ಪ್ಯಾಕೇಜ್ ಕಾರಣದಿಂದ ಸರ್ಕಾರಿ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. ಬ್ಯಾಂಕುಗಳ ಜೊತೆಗಿನ ಒಡಂಬಡಿಕೆಯಿಂದ ಸರ್ಕಾರಿ ನೌಕರರಿಗೆ ಕ್ಷಣಾರ್ಧದಲ್ಲಿ ಗೃಹ, ವಾಹನ, ಉನ್ನತ ಶಿಕ್ಷಣ ಸಾಲ ಸೇರಿದಂತೆ ಇತರೆ ಸೌಲಭ್ಯಗಳು ದೊರೆಯುವಂತೆ ಆಗಲಿದೆ ಎಂದರು. ರಾಜ್ಯ ಸರ್ಕಾರಿ ನೌಕರರು ಸೇವೆಯಲ್ಲಿದ್ದಾಗಲೇ ಅಕಾಲಿಕ ಮರಣಹೊಂದಿದರೇ ಅವರ ಅವಲಂಭಿತರಿಗೆ ನೀಡಲಾಗುತ್ತಿದ್ದಂತ ಪರಿಹಾರವನ್ನು 50 ಲಕ್ಷದಿಂದ 1 ಕೋಟಿಗೆ…
ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ನವದೆಹಲಿ: ಭಾರತದ ಕರಾವಳಿ ಜಲಪ್ರದೇಶದಲ್ಲಿ ವ್ಯಾಪಾರದಲ್ಲಿ ತೊಡಗಿರುವ ಹಡಗುಗಳನ್ನು ನಿಯಂತ್ರಿಸಲು ಪ್ರಯತ್ನಿಸುವ ಮಸೂದೆಯನ್ನು ಲೋಕಸಭೆ ಗುರುವಾರ ಅಂಗೀಕರಿಸಿದೆ. ಕರಾವಳಿ ಹಡಗು ಮಸೂದೆ, 2024 ಅನ್ನು ಕೆಳಮನೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್, ಕರಾವಳಿ ಹಡಗುಗಳಲ್ಲಿ ರಾಷ್ಟ್ರದ ಅಗಾಧವಾದ, ಬಳಕೆಯಾಗದ ಸಾಮರ್ಥ್ಯದ ಗರಿಷ್ಠ ಬಳಕೆಗಾಗಿ ಹೆಚ್ಚು ಅಗತ್ಯವಿರುವ ವಿಶೇಷ, ಕಾರ್ಯತಂತ್ರದ ಮತ್ತು ಭವಿಷ್ಯದ ಕಾನೂನನ್ನು ಒದಗಿಸುವ ಅತ್ಯಂತ ಪ್ರಮುಖ ಶಾಸನ ಎಂದು ಬಣ್ಣಿಸಿದರು. ಸಚಿವರು ಮಂಗಳವಾರ ಲೋಕಸಭೆಯಲ್ಲಿ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಸೂದೆಯನ್ನು ಮಂಡಿಸಿದ್ದರು. ಕರಾವಳಿ ಹಡಗು ಮಸೂದೆ, 2024 ರ ಅಡಿಯಲ್ಲಿ, ಕರಾವಳಿ ನೀರು ಎಂದರೆ ಪಕ್ಕದ ಕಡಲ ವಲಯಗಳೊಂದಿಗೆ ಭಾರತದ ಪ್ರಾದೇಶಿಕ ಜಲಪ್ರದೇಶ ಎಂದಾಗಿದೆ. https://kannadanewsnow.com/kannada/bjp-workers-have-the-power-to-reduce-the-arrogance-of-power-by-vijayendra/ https://kannadanewsnow.com/kannada/bmrcl-shocks-violators-in-namma-metro-27000-cases-registered-in-6-months/
ಬೆಂಗಳೂರು: ಈ ಸರಕಾರಕ್ಕೆ ಬಡವರೂ ಬೇಡ; ರೈತರೂ ಬೇಡ. ರಾಜ್ಯದಲ್ಲಿ ಯಾವ ಸಮಾಜಕ್ಕೂ ನ್ಯಾಯ ಕೊಡುವ ಕಾಳಜಿ ಇಲ್ಲದ ಸರಕಾರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ ಎಂದು ಅವರು ಆಕ್ಷೇಪಿಸಿದರು. ಜನಪರ ಕಾಳಜಿ ಇದ್ದಲ್ಲಿ ಈ ರೀತಿ ಬೆಲೆ ಏರಿಕೆ ಮಾಡುತ್ತಿರಲಿಲ್ಲ ಎಂದು ತಿಳಿಸಿದರು. ಸಿದ್ದರಾಮಯ್ಯನವರೇ ನಿಮ್ಮ ಸರಕಾರ ಅಧಿಕಾರದ ಅಮಲಿನಲ್ಲಿದೆ. ಈ ಅಧಿಕಾರದ ದರ್ಪ- ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ ಎಂದು ಎಚ್ಚರಿಸಿದರು. ನಿಮ್ಮ ಅಧಿಕಾರದ ಸೊಕ್ಕನ್ನು ಇಳಿಸುವ ಶಕ್ತಿ ಬಿಜೆಪಿಗೆ ಇದೆ. ನಿಮ್ಮ ದರ್ಪ ಇಳಿಸುವ ಶಕ್ತಿ ಈ ನಾಡಿನ ಮತದಾರರಿಗೆ ಇದೆ ಎಂದು ತಿಳಿಸಿದರು. ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಸುವ ಪ್ರಶ್ನೆಯೇ ಇಲ್ಲ;…
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ರೂಪಿಸಲಾಗಿದೆ. ಈ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಯನ್ನು ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸಲು ಮೇಲೆ ಕ್ರ.ಸಂ.(1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ. ಮುಂದುವರೆದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನೊಂದಿಗೆ ಚರ್ಚಿಸಿ, ಈ…
ಬೆಂಗಳೂರು : ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ ದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋದ ಭದ್ರತಾ ದಳವು ನಡೆಸಿದ ವಾಡಿಕೆಯ ಭದ್ರತಾ ತಪಾಸಣೆಯ ಪ್ರಕಾರ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡುವ ಹಾಗೂ ಮೆಟ್ರೋ ನಿಯಮಗಳ ಉಲಂಘನೆ ಮಾಡಿದ ಸುಮಾರು 27,000 ಕ್ಕೂ ಹೆಚ್ಚು ಘಟನೆಗಳು ಬಹಿರಂಗವಾಗಿದೆ. ಪ್ರಯಾಣಿಕರಿಂದ ಜೋರಾಗಿ ಸಂಗೀತವನ್ನು ಮೊಬೈಲ್ ನಲ್ಲಿ ಹಾಕಿ ಕೊಂಡು ಕೇಳುತ್ತಿರುವುದು ಒಟ್ಟು 11,922 ಪ್ರಕರಣಗಳು ದಾಖಲಾಗಿವೆ. ವಿಕಲಾಂಗ ವ್ಯಕ್ತಿಗಳು (PwD), ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಶಿಶುಗಳೊಂದಿಗೆ ಪ್ರಯಾಣಿಸುವವರಿಗೆ ಆದ್ಯತೆಯ ಆಸನಗಳನ್ನು ನೀಡದಿರುವುದು 14,162 ಪ್ರಕರಣಗಳು ಹಾಗೂ ರೈಲಿನಲ್ಲಿ ಪ್ರಯಾಣ ಮಾಡುವಾಗ ಪದಾರ್ಥಗಳ ಸೇವನೆಯ 554 ಪ್ರಕರಣಗಳು ಕಂಡುಬಂದಿವೆ. ಅಲ್ಲದೆ, 474 ಘಟನೆಗಳು ದೊಡ್ಡ ಗಾತ್ರದ ಲಗೇಜ್ ಗಳನ್ನು ಸಾಗಿಸುವ ಪ್ರಯಾಣಿಕರನ್ನು ಒಳಗೊಂಡಿವೆ. ಈ ಕ್ರಮಗಳಿಗೆ ಯಾವುದೇ ದಂಡವನ್ನು ವಿಧಿಸಲಾಗಿಲ್ಲವಾದರೂ, ಅಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣಕ್ಕಾಗಿ ನಮ್ಮ ಮೆಟ್ರೋ ಮಾರ್ಗಸೂಚಿಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು…
ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. https://twitter.com/KarnatakaVarthe/status/1907692248252494284 ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ…
ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2025 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದಿದೆ. ಪುಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತ ನಿಗದಿಪಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು…













