Author: kannadanewsnow09

ನವದೆಹಲಿ: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು. ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು. ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಸಂಬಂಧಿತ ಸಂಸ್ಥೆಗಳಿಂದ ಶೇ5 ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ…

Read More

ಶಿವಮೊಗ್ಗ: ಸಾಗರ ನಗರದಲ್ಲಿ ದಿನೇ ದಿನೇ ಸೇಲ್ಸ್ ಸರ್ಟಿಫಿಕೇಟ್ ಹಗರಣಗಳು ಹೆಚ್ಚಾಗುತ್ತಿವೆ. ಈ ಕಾರಣದಿಂದಲೇ ಸಾಗರ ನಗರದ ಕೋಟ್ಯಂತರ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗುತ್ತಿದೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ತಪ್ಪಿ ತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪೌರಾಡಳಿತ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಉಪ ಲೋಕಾಯುಕ್ತರಿಗೆ ಪತ್ರ ಬರೆದಿರುವಂತ ಅವರು, ಸಾಗರ ನಗರಸಭೆಯ ಸೇಲ್ ದಿನದಿಂದ ದಿನಕ್ಕೆ ಸರ್ಟಿಫಿಕೇಟ್ ಹಾಗೂ ನಕಲಿ ಹಕ್ಕುಪತ್ರ ಪತ್ರದ ಹಗರಣ ಸುದ್ದಿಯಾಗುತ್ತಿದೆ. ಬೇಲಿಯೇ ಎದ್ದು ಹೊಲ ಮೇಯ್ದ ಹಾಗೆ ಸರ್ಕಾರಿ ನಿವೇಶನಗಳನ್ನು ಹಾಗೂ ಜಾಗವನ್ನು ಸಂರಕ್ಷಣೆ ಮಾಡಬೇಕಿದ್ದ ಸರ್ಕಾರಿ ಅಧಿಕಾರಿಗಳ ಸೇಲ್ ಸರ್ಟಿಫಿಕೇಟ್‌ ಹೆಸರಿನಲ್ಲಿ ಕೋಟ್ಯಾಂತರ ಹಣದ ಹಗರಣ ಮಾಡಿರುವ ಬಗ್ಗೆ ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿರುತ್ತದೆ ಎಂದಿದ್ದಾರೆ. ಬಹಿರಂಗ ಹರಾಜು ನಿವೇಶನ ಸೇಲ್ ಸರ್ಟಿಫಿಕೇಟ್ ಎನ್ನುವ ಉಲ್ಲೇಖದೊಂದಿಗೆ ಯಾವುದೋ…

Read More

ಬೆಂಗಳೂರು: ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ವಾಟ್ಸ್‌ ಪ್‌ ಸಹಾಯವಾಣಿ ವಿವರ ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ : 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016. ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ…

Read More

ದೆಹಲಿ : “ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದರು. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಬೆಲೆಏರಿಕೆ ಬಗ್ಗೆ ಬಿಜೆಪಿ ಧರಣಿ ಹಾಗೂ ರಸ್ತೆತಡೆ ಮಾಡುತ್ತಿರುವುದರ ಬಗ್ಗೆ ಕೇಳಿದಾಗ, “ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ?. ಊರುಗಳಿಗೆ ನಾವುಗಳು ಹೋದಾಗ ರೈತರು ನಮ್ಮನ್ನು ಹೊಡೆಯಲು ಬಂದಿಲ್ಲ ಅದೇ ನಮ್ಮ ಪುಣ್ಯ. ಅನೇಕ ರೈತರು ಹಸುಗಳನ್ನು ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ಹಿಂದೆ ಬೆಲೆ ಹೆಚ್ಚಳವಾದಾಗ ಅವರುಗಳೂ ಜನಪ್ರತಿನಿಧಿಗಳಾಗಿದ್ದರು ಅಲ್ಲವೇ?”ಎಂದು ಕುಟುಕಿದರು. ಪ್ರತಿಭಟನೆ ವಿಚಾರವಾಗಿ ಜೆಡಿಎಸ್ ಹಾಗೂ ಬಿಜೆಪಿ ಮಧ್ಯೆ ಒಡಕು ಮೂಡಿರುವ…

Read More

ನವದೆಹಲಿ: 12 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯ ನಂತರ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈಗ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ಇದೀಗ ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗೆ ತೆಗೆದುಕೊಳ್ಳಲಾಗಿದೆ. ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪರವಾಗಿ 288 ಮತಗಳು ಬಿದ್ದರೆ, ವಿರುದ್ಧವಾಗಿ 232 ಮತಗಳು ಬಿದ್ದವು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬುಧವಾರ ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿ ಮುಗಿದ ನಂತರ ಮಸೂದೆಯನ್ನು ಮಂಡಿಸಿದರು. ಮಧ್ಯಾಹ್ನ 12 ರಿಂದ 1 ರವರೆಗೆ ನಡೆಯುವ ಪ್ರಶ್ನೋತ್ತರ ಅವಧಿಯ ನಂತರ ಮಸೂದೆಯನ್ನು ರಾಜ್ಯಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಯಿತು. ಈ ಬಳಿಕ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕರಾರಗೊಂಡಿತು. ಇಂದು ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಇದೀಗ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯ ಬಳಿಕ ರಾಜ್ಯ ಸಭೆಯಲ್ಲಿ ಪರ-ವಿರೋಧದ ಚರ್ಚೆ ನಡೆಸಲಾಗುತ್ತಿದೆ. ಸಂಸತ್ತಿನ ಬಜೆಟ್ ಅಧಿವೇಶನ ಏಪ್ರಿಲ್ 4 ರಂದು ಕೊನೆಗೊಳ್ಳುವ ಮೊದಲು ಅಂಗೀಕಾರಗೊಳ್ಳುವ…

Read More

ಬೆಂಗಳೂರು: 2025-26ನೇ ಸಾಲಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿಗಳ ಆಯ್ಕೆ ಸಮಿತಿಗೆ ಪತ್ರದಲ್ಲಿ ಸೂಚಿಸಲಾಗಿದೆ. 2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಪ್ರರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು, ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿದೆ ದಿನಾಂಕ 15-04-2025ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-05-2025 ಆಗಿದೆ. ಅರ್ಜಿಗಳ ಪರಿಶೀಲನೆ ದಿನಾಂಕ 05-05-2025ರಂದು ನಡೆಯಲಿದೆ. ಪ್ರವೇಶ ಪರೀಕ್ಷೆಯು ದಿನಾಂಕ 09-05-2025ರಂದು ನಿಗದಿ ಪಡಿಸಲಾಗಿದೆ. ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 13-05-2025ರಂದು ಮಾಡಲಾಗುತ್ತದೆ. ಇನ್ನೂ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ದಿನಾಂಕ 17-05-2025ರಂದು…

Read More

ಬೆಂಗಳೂರು: ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಬನಾರಸ್ ವಿಶೇಷ ಎಕ್ಸ್ಪ್ರೆಸ್ ಏಪ್ರಿಲ್ (5,12,19,26) ಮೇ (3,10) ರಂದು ಬೆಳಿಗ್ಗೆ 9:00 ಗಂಟೆಗೆ (ಶನಿವಾರ) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಸೋಮವಾರ ಮಧ್ಯಾಹ್ನ 01:15 ಕ್ಕೆ ಉತ್ತರ ಪ್ರದೇಶದ ಬನಾರಸ್ ತಲುಪಲಿದೆ. ಪುನಃ ರೈಲು ಸಂಖ್ಯೆ 07324 ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ (8,15,22,29) ಮೇ (6,13) ರಂದು ಬೆಳಿಗ್ಗೆ 9:00 ಗಂಟೆಗೆ ಬನಾರಸ್ ನಿಂದ ಹೊರಟು ಗುರುವಾರ ಬೆಳಿಗ್ಗೆ 10:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯನ್ನು ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತುಮಕೂರು, ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರಸ್ತೆ, ರಾಯಚೂರು, ಕೃಷ್ಣ, ಬೇಗಂಪೇಟೆ, ಸಿಕಂದರಾಬಾದ್, ಕಾಜಿಪೇಟ್, ಜಮಿಕುಂಟಾ, ರಾಮಗುಂಡಂ, ಮಂಚಿರಿಯಾಲ್, ಬೆಲಂಪಲ್ಲಿ, ಬಲ್ಹಾರ್ಷಾ, ಚಂದ್ರಾಪುರ, ನಾಗ್ಪುರ, ಆಮ್ಲಾ, ಬೆತುಲ್, ಇಟಾರ್ಸಿ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್ಪುರ್, ಪ್ರಯಾಗ್ರಾಜ್ ಚಿಯೋಕಿ ಮತ್ತು ಮಿರ್ಜಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.…

Read More

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 30 ಕೋಟಿ ಹವಾಲಾ ಹಣವನ್ನು ದುಬೈಗೆ ರವಾನಿ, ಅದರಲ್ಲಿ 49.6 ಕೆಜಿ ಚಿನ್ನವನ್ನು ಖರೀದಿಸಿದ್ದಾಗೆ ಕೋರ್ಟ್ ಗೆ ಡಿಆರ್ ಐ ಅಧಿಕಾರಿಗಳು ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲುಪಾಲಾಗಿದ್ದಾರೆ. ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವಂತ ಡಿ ಆರ್ ಐ ತನ್ನ ವರದಿಯನ್ನು ಕೋರ್ಟ್ ಗೆ ಸಲ್ಲಿಸಿದೆ. ಡಿ ಆರ್ ಐ ಸಲ್ಲಿಸಿದಂತ ವರದಿಯಲ್ಲಿ ಶಾಕಿಂಗ್ ಮಾಹಿತಿಯನ್ನು ಬಿಚ್ಚಿಡಲಾಗಿದೆ. ಕಳೆದ ಮೂರು ತಿಂಗಳಿನಿಂದ ದುಬೈನಿಂದ ನಟಿ ರನ್ಯಾ ರಾವ್ ಅವರು 49.6 ಕೆಜಿ ಚಿನ್ನವನ್ನು ಖರೀದಿಸಿದ್ದಾರೆ. ಅದು 30 ಕೋಟಿ ಹವಾಲ ಹಣದ ಮೂಲಕವಾಗಿದೆ. ದುಬೈಗೆ ಹವಾಲಾ ಹಣ ಕಳುಹಿಸಿರುವಂತ ನಟಿ ರನ್ಯಾ ರಾವ್ ಅವರು, ಅದರಿಂದಲೇ 49.6 ಕೆಜಿ ಚಿನ್ನ ಖರೀದಿಸಿದ್ದಾಗಿ ವರದಿಯನ್ನು ಸಲ್ಲಿಸಿದೆ. ಭಾರತ ಸೇರಿದಂತೆ ವಿವಿಡೆ ಅಕ್ರಮವಾಗಿ ದುಬೈನಿಂದ ತಂದಿದ್ದಂತ ಚಿನ್ನವನ್ನು…

Read More

ಉತ್ತರ ಪ್ರದೇಶ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಎನ್ಆರ್ಇಜಿಎ) ಯಲ್ಲಿ ನಡೆದಿದೆ ಎನ್ನಲಾದ ವಂಚನೆಯ ಬಗ್ಗೆ ಜಿಲ್ಲಾ ಮಟ್ಟದ ತನಿಖೆಯು ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಸಂಬಂಧಿಕರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಸಿಲುಕಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಎಂಎನ್ಆರ್ಇಜಿಎ ವೇತನ ವಿತರಣೆಯಲ್ಲಿ ಮೋಸದ ಆರೋಪಗಳು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನಿಧಿ ಗುಪ್ತಾ ವತ್ಸ್ ಬುಧವಾರ ಸಂಜೆ ಘೋಷಿಸಿದರು. ಇದರ ಪರಿಣಾಮವಾಗಿ, ಎಂಎನ್ಆರ್ಇಜಿಎ ಕಾರ್ಮಿಕರೆಂದು ಪಟ್ಟಿ ಮಾಡಲಾದ ಕಾರ್ಮಿಕರನ್ನು ಅಮಾನತುಗೊಳಿಸಲು, ಔಪಚಾರಿಕ ಪೊಲೀಸ್ ವರದಿಯನ್ನು ದಾಖಲಿಸಲು ಮತ್ತು ಪಂಚಾಯತ್ ರಾಜ್ ಕಾಯ್ದೆಯಡಿ ಇಲಾಖಾ ಕ್ರಮವನ್ನು ಪ್ರಾರಂಭಿಸಲು ಆದೇಶಗಳನ್ನು ಹೊರಡಿಸಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಧಿ ಗುಪ್ತಾ ವತ್ಸ್ ಹೇಳಿಕೆ “ಸ್ಥಳೀಯ ಅಧಿಕಾರಿಗಳ ತನಿಖೆಯಲ್ಲಿ 18 ವ್ಯಕ್ತಿಗಳು ಯಾವುದೇ ಕೆಲಸ ಮಾಡದೆ MNREGA ವೇತನವನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಮೊಹಮ್ಮದ್ ಶಮಿ ಅವರ ಸಹೋದರಿ ಶಬಿನಾ, ಶಬಿನಾ ಅವರ ಪತಿ ಘಜ್ನವಿ,…

Read More

ಬೆಂಗಳೂರು: ರಾಜ್ಯದ ಭಂಡ ಸರಕಾರ, ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಹೋರಾಟ ನಿನ್ನೆಯಿಂದ ಆರಂಭವಾಗಿದೆ. ಇವತ್ತು ಮುಕ್ತಾಯವಾಗಿಲ್ಲ; ಇದು ಪ್ರಾರಂಭ ಅಷ್ಟೇ ಎಂದು ತಿಳಿಸಿದರು. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ ಎಂದು ನುಡಿದರು. ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್‍ಗೆ ಮೊನ್ನೆ ರಾತ್ರಿ 2 ರೂ. ಹೆಚ್ಚಿಸಿದ ದುಷ್ಟರಿವರು ಎಂದು ಖಂಡಿಸಿದರು. ಇದು ಅಧಿಕಾರದ ಮದ ಎಂದು ಟೀಕಿಸಿದರು. ಅಹೋರಾತ್ರಿ ಧರಣಿಯು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಉತ್ಸಾಹ ತಂದು ಕೊಟ್ಟಿದೆ. ರೈತ ನಾಯಕ, ಹೋರಾಟಗಾರ ಯಡಿಯೂರಪ್ಪ ಅವರು ಸಹ ಹೋರಾಟದ ನೇತೃತ್ವ ವಹಿಸಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನಕ್ಕೆ ಒಳಪಟ್ಟಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು, ತಾಯಂದಿರೂ ಪಾಲ್ಗೊಂಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಮೂಲಕ…

Read More