Subscribe to Updates
Get the latest creative news from FooBar about art, design and business.
Author: kannadanewsnow09
ಚನ್ನಪಟ್ಟಣ : ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಂಗಲ್ ಆಂಜನೇಯ ದೇವಾಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು; “ರಾಮನ ಭಂಟ ಆಂಜನೇಯ ಸೇವೆಯ ಪ್ರತೀಕ. ಅದೇ ರೀತಿ ನಾನು ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಬಂದಿದ್ದೇನೆ. ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಡಣದ ಮಹಾಜನತೆಯ ಆಶೀರ್ವಾದ ನಮಗೆ ಬೇಕಾಗಿದೆ. ಜನರು ಪಕ್ಷಬೇಧವನ್ನು ಮರೆತು ಸರ್ಕಾರದ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನನ್ನ ಅಧಿಕಾರವನ್ನು ಚನ್ನಪಟ್ಟಣದ ಬದಲಾವಣೆಗೆ ಉಪಯೋಗಿಸಿಕೊಳ್ಳಬೇಕು. ನನಗೆ ಬುದ್ಧಿವಾದ ಹೇಳಲು ಜನರು ಸೋಲಿಸಿದ್ದಾರೆ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೂ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು…
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಶಸ್ತ್ರ ಸೀಮಾ ಬಲ್ (ಎಸ್ಎಸ್ಎಫ್) ಸೈನಿಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ವಾಸ್ತವವಾಗಿ, ಎಸ್ಎಸ್ಎಫ್ ಜವಾನ್ಗೆ ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಗುಂಡು ಹಾರಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ತಲುಪಿ ಶವವನ್ನು ವಶಪಡಿಸಿಕೊಂಡರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ಪ್ರಕರಣವು ಅಯೋಧ್ಯೆಯಲ್ಲಿ ತಡರಾತ್ರಿ ನಡೆದಿದೆ. ಅಂಬೇಡ್ಕರ್ ನಗರದ ನಿವಾಸಿ ಎಸ್ಎಸ್ಎಫ್ ಜವಾನ್ ಶತ್ರುಘ್ನ ವಿಶ್ವಕರ್ಮ ಅವರನ್ನು ರಾಮ ಜನ್ಮಭೂಮಿಯ ಭದ್ರತೆಗೆ ನಿಯೋಜಿಸಲಾಗಿತ್ತು. ತಡರಾತ್ರಿ ಆಯುಧವನ್ನು ಸರಿಯಾಗಿ ನಿರ್ವಹಿಸದ ಕಾರಣ, ಹೇಗೋ ಹಠಾತ್ ಗುಂಡಿನ ದಾಳಿ ನಡೆಯಿತು, ಅದು ಎಸ್ಎಸ್ಎಫ್ ಜವಾನ್ಗೆ ಅಪ್ಪಳಿಸಿತು ಎಂದು ಅಧಿಕಾರಿಗಳು ಹೇಳುತ್ತಾರೆ. ಗುಂಡಿನ ಶಬ್ದ ಕೇಳಿ ಹತ್ತಿರದಲ್ಲಿದ್ದ ಇತರ ಭದ್ರತಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಯುವಕ ಶತ್ರುಘ್ನ ವಿಶ್ವಕರ್ಮ ಗಾಯಗೊಂಡಿರುವುದನ್ನು ನೋಡಿದರು. ಗಾಯಗೊಂಡ ಸ್ಥಿತಿಯಲ್ಲಿದ್ದ ಯೋಧನನ್ನು ಭದ್ರತಾ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ…
ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರಲ್ಲದೆ, ಆಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದರು. ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು. ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, “ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ…
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Delhi Chief Minister Arvind Kejriwal ) ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿದೆ. ನಿಯಮಿತ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಈಗ ಹಿಂತೆಗೆದುಕೊಂಡ ಮದ್ಯ ನೀತಿ ಪ್ರಕರಣದಲ್ಲಿ ( Dehli Liquor Policy Case ) ಅರವಿಂದ್ ಕೇಜ್ರಿವಾಲ್ 100 ಕೋಟಿ ರೂ.ಗಳ ಕಿಕ್ಬ್ಯಾಕ್ಗೆ ಬೇಡಿಕೆ ಇಟ್ಟಿರುವುದಕ್ಕೆ ಪುರಾವೆಗಳಿವೆ ಎಂದು ಜಾರಿ ನಿರ್ದೇಶನಾಲಯವು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಲ್ಲಿಸಲಾದ ಚಾರ್ಜ್ಶೀಟ್ ಅನ್ನು ನ್ಯಾಯಾಲಯವು ಪರಿಗಣಿಸಿದೆ ಎಂದು ಹೇಳಿದರು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಸಹ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವುದು ನ್ಯಾಯಾಲಯವು ಮನಿ ಲಾಂಡರಿಂಗ್ ಆರೋಪವನ್ನು ಸ್ವೀಕರಿಸುತ್ತಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು…
ನವದೆಹಲಿ: ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ HD ಕುಮಾರಸ್ವಾಮಿ ಅವರು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ರೈಲ್ವೆ ಭವನದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ಮಾನ್ಯ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ. ರೈಲ್ವೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು. ಅಲ್ಲದೆ; ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು…
ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡೋದಕ್ಕೆ ಮುಂದಾಗಿದೆ. ಅದೇ ಶೀಘ್ರದಲ್ಲೇ ನೀರಿನ ದರ ಏರಿಕೆಯನ್ನು ಮಾಡುವಂತ ಸುಳಿವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂ ಎಸ್ ಎಸ್ ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಗಳು ಮುಂದೆ ಬರುತ್ತಿಲ್ಲ. ಸಧ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ ಎಂದರು. ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನವನ್ನು ಕೇಳುತ್ತಿವೆ ಎಂದು ಹೇಳಿದರು. ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ. ಹೀಗಾಗಿ ನೀರಿನ ದರ ಪರಿಷ್ಕರಣೆ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ…
ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು…
ಬೆಂಗಳೂರು: ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳ ರಕ್ತ, ಕೂಲದಿನ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ. https://kannadanewsnow.com/kannada/nehas-father-niranjans-pa-vinay-kidnapped-by-three-men-in-hubballi/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/
ಹುಬ್ಬಳ್ಳಿ: ಇಂದು ಮುಂಜಾಗನೇ ಮೃತ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಅವರ ಆಪ್ತ ಸಹಾಯಕ ಆಗಿರುವಂತ ವಿನಯ್ ಎಂಬಾತನನ್ನು ಮೂವರು ಅಪರಿಚಿತರು ಕಿಡ್ನ್ಯಾಪ್ ಮಾಡೋದಕ್ಕೆ ಯತ್ನಿಸಿರುವಂತ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಇಂದು ಮುಂಜಾಗನೆ ವಾಲ್ವೇಕರ್ ಗಲ್ಲಿಯಲ್ಲಿನ ಗಜಾನನ ಬ್ಯಾಂಕ್ ಎದುರು ಮೂವರು ನಿರಂಜನ್ ಅವರ ಪಿಎ ವಿನಯ್ ಆಲಿಯಾಸ್ ಈರಣ್ಣ ಎಂಬುವರನ್ನು ಕಾರನ್ನು ಹತ್ತುವಂತೆ ಬೆದರಿಸಿ, ಕಿಡ್ನ್ಯಾಪ್ ಮಾಡೋದಕ್ಕೆ ಯತ್ನಿಸಿದ್ದಾರೆ. ಈ ವೇಳೆಯಲ್ಲಿ ಕೂಡಲೇ ಅಲರ್ಟ್ ಆದಂತೆ ನಿರಂಜನ್ ಪಿಎ ವಿನಯ್ ತಮ್ಮ ಮೊಬೈಲ್ ತೆಗೆದುಕೊಂಡು ವೀಡಿಯೋ ಮಾಡೋದಕ್ಕೆ ಶುರು ಮಾಡಿದ್ದಾರೆ. ಇದರಿಂದ ಹೆದರಿದಂತ ಮೂವರು ಅಪರಿಚಿತರು ಅಲ್ಲಿಂದ ಪರಾರಿಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಘಟನೆಯ ಬಳಿಕ ನಿರಂಜನ್ ಪಿಎ ವಿನಯ್ 112ಗೆ ಕರೆ ಮಾಡಿ, ಪೊಲೀಸರಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ದೂರು ದಾಖಲಿಸಿದ್ದು, ಕಿಡ್ನ್ಯಾಪ್ ಗೆ ಯತ್ನಿಸಿದಂತ ಮೂವರ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. https://kannadanewsnow.com/kannada/neet-pg-2024-admit-card-released/ https://kannadanewsnow.com/kannada/breaking-wife-vijayalakshmi-arrives-at-police-station-to-see-darshan-9-days-after-his-arrest-vijayalakshmi/
ನವದೆಹಲಿ: ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (ಎನ್ಬಿಇಎಂಎಸ್) ನೀಟ್ ಪಿಜಿ 2024 ಪ್ರವೇಶ ಪತ್ರವನ್ನು ಜೂನ್ 19, 2024 ರಂದು ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ಈಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಸ್ನಾತಕೋತ್ತರ 2024 ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ – natboard.edu.in ರಿಂದ ಡೌನ್ಲೋಡ್ ಮಾಡಬಹುದು. ನೀಟ್ ಪಿಜಿ 2024 ಪರೀಕ್ಷೆಯನ್ನು ಜೂನ್ 23 ರಂದು ನಡೆಸಲಾಗುವುದು. ರಾಷ್ಟ್ರವ್ಯಾಪಿ ಸ್ನಾತಕೋತ್ತರ ವೈದ್ಯಕೀಯ ಕಾರ್ಯಕ್ರಮಗಳ ಪ್ರವೇಶಕ್ಕೆ ಈ ಸಿಬಿಟಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ. ಎನ್ಬಿಇ ಅಧಿಸೂಚನೆಯಲ್ಲಿ, “ಪ್ರವೇಶ ಪತ್ರಗಳನ್ನು ಇಂದಿನಿಂದ “ಬ್ಯಾಚ್ವಾರು” ನೀಡಲಾಗುವುದು. ನೀಟ್-ಪಿಜಿ 2024 ರ ಅರ್ಜಿದಾರರು ತಮ್ಮ ಅರ್ಜಿದಾರರ ಲಾಗಿನ್ ಖಾತೆಗಳನ್ನು ಎನ್ಬಿಇಎಂಎಸ್ ವೆಬ್ಸೈಟ್ನಲ್ಲಿ ನೀಟ್-ಪಿಜಿ 2024 ಸೂಚ್ಯಂಕ ಪುಟದಲ್ಲಿ https://natboard.edu.in ಪ್ರವೇಶ ಪತ್ರಕ್ಕಾಗಿ ನಿಯತಕಾಲಿಕವಾಗಿ ಪರಿಶೀಲಿಸಲು ಸೂಚಿಸಲಾಗಿದೆ. ನೀಟ್ ಪಿಜಿ 2024 ಫಲಿತಾಂಶವು ಜುಲೈ 15, 2024 ರಂದು ಪ್ರಕಟವಾಗಲಿದೆ. ನೀಟ್ ಪಿಜಿ 2024 ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು…