Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪದ ಉಪ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಸಂತೋಷ್ ಕುಮಾರ್.ಎನ್ ಸ್ಪರ್ಧಿಸಿದ್ದಾರೆ. ನಾಳೆ ನಡೆಯಲಿರುವಂತ ಸಂಘದ ಚುನಾವಣೆಯಲ್ಲಿ ಇಲಾಖೆಯ ಅಧಿಕಾರಿ, ನೌಕರರು ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರ ತಾಲ್ಲೂಕು ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಹಿರಿಯ, ಕಿರಿಯ ನೌಕರ ಮಿತ್ರರೇ ಕರ್ನಾಟಕ ರಾಜ್ಯದ ಅತ್ಯಂತ ಪ್ರತಿಷ್ಠಿತ ಸಂಘಟನೆಯಾದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 2024-29 ನೇ ಅವಧಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ 28.10.2024ರ ನಾಳೆ ನಡೆಯಲಿದೆ ಎಂದಿದ್ದಾರೆ. ಚುನಾವಣಾ ಅಧಿಸೂಚನೆಯಂತೆ ಸಾಗರ ತಾಲೂಕು ಶಾಖೆಗೂ ಚುನಾವಣೆ ನಡೆಯಲಿದ್ದು, ಅರಣ್ಯ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ಎನ್ ಆದ ನಾನು ಸ್ಪರ್ಧಿಸಿದ್ದೇನೆ ಎಂದು ತಿಳಿಸಿದ್ದಾರೆ. ಈ…
ದಕ್ಷಿಣ ಕನ್ನಡ: ಸ್ವಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಮಾಹಿತಿ ನೀಡಿದ್ದು, ತಮ್ಮ ಸಂಸ್ಥೆಯಿಂದ 30 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ಅಕೌಂಟಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ದಿನಾಂಕ 05-11-2024ರಿಂದ 04-12-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಅಲ್ಲದೇ ಬ್ಯಾಂಕಿನಿಂದ ಸಿಗುವಂತ ಸಾಲ ಸೌಲಭ್ಯದ ಬಗ್ಗೆ ಮಾಹಿತಿಯನ್ನು ಒದಗಿಸಲಾಗುತ್ತದೆ ಎಂದಿದೆ. ಆಸಕ್ತರು 6364561982 ಗೆ ವಾಟ್ಸ್ ಆಪ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 30 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಸಂಬಂಧಿಸಿದಂತ ಹೆಚ್ಚಿನ ಮಾಹಿತಿಗೆ 9591044014, 9448348569, 9980885900, 9902594791 ಗೆ ಕರೆ ಮಾಡಿ ಪಡೆಯಬಹುದಾಗಿ ಎಂದು ತಿಳಿಸಿದೆ.
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024ರ ನಾಳೆ ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಪವರ್ ಕಟ್ ಆಗಲಿದೆ. ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ…
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಅದೇ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 2000 ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.10.2024 ರಿಂದ 01.11.2024 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 03.11.2024 ಹಾಗೂ 04.11.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ. • ಕೆಂಪೇಗೌಡ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2022 ರನ್ವಯ ಕರ್ನಾಟಕ ಸರ್ಕಾರಿ ನೌಕರರು ಪಾವತಿಸಬೇಕಾದ ಕನಿಷ್ಠ ಮಾಸಿಕ ವಿಮಾ ಕಂತಿನ ದರದ ನಿಗದಿ ಪಡಿಸಲಾಗಿದೆ. ಹಾಗಾದ್ರೇ ಎಷ್ಟು ವೇತನ ತೆಗೆದುಕೊಳ್ಳುವವರಿಗೆ ಎಷ್ಟು ವಿಮಾ ಕಂತಿನ ದರ ಕಡಿತವಾಗಲಿದೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 ರ (1990 ರ ಕರ್ನಾಟಕ ಅಧಿನಿಯಮ 14) ರ 3 ನೇ ಪ್ರಕರಣದ (2) ನೇ ಉಪ ಪ್ರಕರಣದ ಪರಂತುಕದೊಡನೆ ಓದಿಕೊಂಡು ಅದೇ 3 ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958 ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಕಂಡ ನಿಯಮಗಳನ್ನು…
ಬೆಂಗಳೂರು: ರಾಜ್ಯದ ಮಳೆಹಾನಿಯಿಂದಾಗಿ ರೈತರ ಬೆಳೆ ನಷ್ಟವಾಗಿದೆ. ಹಲವೆಡೆ ಮನೆಗಳು ಕುಸಿದು ಹೋಗಿದ್ದಾವೆ. ಇಂತಹ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು 48 ಗಂಟೆಗಳಲ್ಲಿ ಪರಿಹಾರವನ್ನು ನೀಡುವಂತೆ ಖಡಕ್ ಆದೇಶವನ್ನು ಮಾಡಿದ್ದಾರೆ. ರಾಜ್ಯದಲ್ಲಿನ ಮಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ ಎಂದರು. ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ…
ಬೆಂಗಳೂರು: ದೀಪಾವಳಿ ಹಬ್ಬದ ವೇಳೆಯಲ್ಲೇ ಸಾಲು ಸಾಲು ರಜೆಗಳಿದ್ದಾವೆ. ಈ ಕಾರಣಕ್ಕೆ ರಾಜ್ಯದ ಜನರು ತಮ್ಮ ಸ್ವ ಗ್ರಾಮಗಳಿಗೆ, ಇಲ್ಲವೇ ಪ್ರವಾಸಕ್ಕೆ ತೆರಳೋರ ಸಂಖ್ಯೆ ಹೆಚ್ಚಿದೆ. ಇಂತವರಿಗೆ ಕೆ ಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಅದೇ ಮುಂಗಡ ಬಸ್ ಟಿಕೆಟ್ ಬುಕ್ಕಿಂಗ್ ನಲ್ಲಿ ಶೇ.5, 10ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಇಂದು ಈ ಸಂಬಂಧ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿಸಿಯು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.10.2024 ರಿಂದ 01.11.2024 ರವರೆಗೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ 2000 ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಮಳೆಯಿಂದಾಗಿ ಅಕ್ಟೋಬರ್.1ರಿಂದ 25ರವರೆಗೆ ಬರೋಬ್ಬರಿ 74,993 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆ ಹಾನಿಯಾಗಿದೆ. ಅಲ್ಲದೇ 2077 ಮನೆಗಳು ಹಾನಿಗೊಂಡಿದ್ದರೇ, 25 ಜನರು ಸಾವನ್ನಪ್ಪಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಶನಿವಾರದಂದು ಮುಖ್ಯಮಂತ್ರಿ ಅವರು 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದರು. ಹೀಗಿದೆ ಸಿಎಂ ಸಿದ್ಧರಾಮಯ್ಯ ಅವರ ಮಳೆಹಾನಿ ಸಭೆಯ ಪ್ರಮುಖ ಹೈಲೈಟ್ಸ್ 1. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. 2. ಮುಂಗಾರು ಅವಧಿಯಲ್ಲಿ ಅಂದರೆ ಜೂನ್ 1ರಿಂದ ಸೆಪ್ಟಂಬರ್ 30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ…
ಶಿವಮೊಗ್ಗ: ಸಾಗರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಸ್ಥಾನಕ್ಕೆ ಸಾಗರ ಟೌನ್ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯದ ಹಾಸ್ಟೆಲ್ ಸೂಪರಿಡೆಂಟ್ ಜೈಶೀಲ.ಬಿ ಅವರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಾಗರ ತಾಲ್ಲೂಕು ಕಾರ್ಯಕಾರಿ ಸಮಿತಿ ಚುನಾವಣೆ 2024-29 ಘೋಷಣೆಯಾಗಿದೆ. ಈ ಚುನಾವಣೆಯ ಸಲುವಾಗಿ ಬಿಸಿಎಂ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದೇನೆ. ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ದಿನಾಂಕ 28-10-2024ರಂದು ನಡೆಯಲಿರುವಂತ ಮತದಾನದಲ್ಲಿ ಭಾಗಿಯಾಗಿ, ತಮಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ತಾನು ಬಿಸಿಎಂ ಇಲಾಖೆಯ ಸಮಸ್ತ ನೌಕರರ ಶ್ರೇಯೋಭಿವೃದ್ಧಿಗಾಗಿ ದುಡಿಯಲಿದ್ದೇನೆ. ಜ್ಯೋತಿ ಸಂಜೀವಿನಿ, ಉಚಿತ ವೈದ್ಯಕೀಯ ಚಿಕಿತ್ಸೆ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ಬಡ್ತಿ ಸೇರಿದಂತೆ ನೌಕರರ ಇತರೆ ಸಮಸ್ಯೆಗಳ ಯಾವುದೇ ತರಹದ ಹೋರಾಟಕ್ಕೂ ಬದ್ಧನಾಗಿರುವುದಾಗಿ ಹೇಳಿದ್ದಾರೆ. ದಿನಾಂಕ 28-10-2024ರಂದು ಸಾಗರ ನಗರದ ಕರ್ನಾಟಕ…
ಬೆಂಗಳೂರು: ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಹಿಂದೂ ಹಬ್ಬಗಳಿಗೆ ಮಾತ್ರ ಇವರ ಪೌರುಷ, ಪಟಾಕಿ ಹೊಡೆಯೋರು ಹೊಡೀತಾರೆ, ಯಾರೂ ಏನೂ ಮಾಡಕ್ಕೆ ಆಗಲ್ಲ. ಈ ಆದೇಶ ಕಾಗದದ ಹುಲಿ ಎಂಬ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ತಿರುಗೇಟು ನೀಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪನ್ನೇ ಕಾಗದದ ಹುಲಿ ಎನ್ನುವ ಜೋಶಿ ಅವರಿಗೆ ಸಚಿವರಾಗಿ ಮುಂದುವರಿಯಲು ಅರ್ಹತೆಯೇ ಇಲ್ಲ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ರಿಟ್ ಅರ್ಜಿ (ಸಿವಿಲ್) ಸಂಖ್ಯೆ 728 -2015ರಲ್ಲಿ ದೀಪಾವಳಿ ಹಬ್ಬದ ದಿನಗಳಲ್ಲಿ ಅಥವಾ ಗುರುಪೂರಬ್ ನಂತಹ ಬೇರೆ ಹಬ್ಬದ ದಿನಗಳಲ್ಲಿ ರಾತ್ರಿ 8ರಿಂದ ರಾತ್ರಿ 10ಗಂಟೆಯವರಗೆ ಮಾತ್ರವೇ ಪಟಾಕಿ ಸಿಡಿಸಬೇಕು ಎಂದು ತೀರ್ಪು ನೀಡಿದೆ. ಅದರ ಅನುಷ್ಠಾನ ಮಾಡಬೇಡಿ ಎಂದು ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ. ಕೋರ್ಟ್ 125 ಡೆಸಿಬಲ್…