Author: kannadanewsnow09

ಹುಬ್ಬಳ್ಳಿ: ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಹುಬ್ಬಳ್ಳಿಯ ವಿಭಾಗೀಯ ನೈರುತ್ಯ ರೈಲ್ವೆಯ ವ್ಯವಸ್ಥಾಪಕರಾಗಿ ಬೇಲಾ ಮೀನಾ ಗದ್ದುಗೆಗೇರಿದ್ದಾರೆ. ಬೇಲಾ ಮೀನಾ ಅವರು ಇಂದು ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ನೂತನ ವ್ಯವಸ್ಥಾಪಕರಾಗಿ (DRM) ಅಧಿಕಾರ ಸ್ವೀಕರಿಸಿದರು. ಇವರು 1996ರ ಬ್ಯಾಚ್‌ನ ಭಾರತೀಯ ರೈಲ್ವೆ ಸಂಚಾರ ಸೇವೆಯ (IRTS) ಅಧಿಕಾರಿಯಾಗಿದ್ದು, 1997ರ ಸೆಪ್ಟೆಂಬರ್ 4ರಂದು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿ ಜೀವನ ಆರಂಭ ಮಾಡಿದರು. 1999 ರಿಂದ 2017ರ ವರೆಗೆ ಮುಂಬಯಿ ಕೇಂದ್ರಿತ ಪಶ್ಚಿಮ ರೈಲ್ವೆಯ (Western Railway) ವಿಭಾಗದಲ್ಲಿ ವಾಣಿಜ್ಯ (Commercial) ಹಾಗೂ ಪರಿಚಾಲನಾ (Operating) ವಿಭಾಗದಲ್ಲಿ ಒಟ್ಟು 6 ವರ್ಷ ಸೇವೆ ಸಲ್ಲಿಸಿ ಮಹತ್ತರ ಕಾರ್ಯ ಸಾಧನೆ ಮಾಡಿದ್ದಾರೆ. ಈ ವಿಭಾಗದ ಬೋರಿವೇಲಿ, ಖಾರ್ ಮತ್ತು ಮಾತುಂಗಾ ರೋಡ್ ನಿಲ್ದಾಣಗಳಿಗೆ ಅತ್ಯಾಧುನಿಕ ಸ್ಫರ್ಶ ನೀಡಿ, ಅವುಗಳ ಆಕರ್ಷಣೆ. ಸ್ವಚ್ಛತೆ ಹಾಗೂ ಸೌಂದರೀಕರಣದಲ್ಲಿ ಮಹತ್ವದ ಪಾತ್ರ ನಿರ್ವಹಿಸಿದರು. ಈ…

Read More

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣದರವನ್ನು ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರುವಂತೆ ಏರಿಕೆ ಮಾಡಲಾಗುತ್ತಿದೆ ಎಂಬುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,  ಅದರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪಯಾಣದ ದರ ಪರಿಷ್ಕರಣೆ ಮಾಡಲಾಗಿರುತ್ತದೆ. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಪುಸ್ತುತ ರೂ.9.56 ಕೋಟಿ ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ do.3650.00 ಕೋಟಿ ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ, ಶೇ.15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲು ಸಭೆಯು ನಿರ್ಣಯಿಸಿ, ಅದರಂತೆ ಪುಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದಿದ್ದಾರೆ. ವ್ಯವಸ್ಥಾಪಕ ನಿರ್ದೆಶಕರು, ಕರ್ನಾಟಕ ರಾಜ್ಯ ರಸ್ತೆ…

Read More

ಅಮೇರಿಕಾ: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ನಟ ಶಿವರಾಜ್ ಕುಮಾರ್ ಅವರು ಅಮೇರಿಕಾದಲ್ಲಿ ಸರ್ಜರಿಗೆ ಒಳಗಾಗಿದ್ದರು. ಇಂತಹ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಿಂದ ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದರು. ಆ ನಂತ್ರ ಸರ್ಜರಿ ಮಾಡಲಾಗಿತ್ತು. ಅವರು ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಖುಷಿಯ ವಿಚಾರವನ್ನು ಸ್ವತಹ ನಟ ಶಿವರಾಜ್ ಕುಮಾರ್ ಅವರೇ ತಿಳಿಸಿದ್ದರು. ಈಗ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯಕೀಯ ತಪಾಸಣೆಯಲ್ಲಿದ್ದಂತ ಅವರು, ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವುದಾಗಿ ತಿಳಿದು ಬಂದಿದೆ. ಇದೇ ಜನವರಿ 24ರಂದು ಬೆಂಗಳೂರಿಗೆ ಮರಳಿದ್ದು, ಆ ಬಳಿಕ ಸಿನಿಮಾ ಶೂಟಿಂಗ್ ನಲ್ಲಿ ತೊಡಗುವ ಸಾಧ್ಯತೆ ಇದೆ. https://kannadanewsnow.com/kannada/jammu-and-kashmir-army-vehicle-falls-into-gorge-two-soldiers-martyred-three-injured/ https://kannadanewsnow.com/kannada/indias-renowned-physicist-rajagopal-chidambaram-passes-away-rajagopala-chidambaram/

Read More

ಜಮ್ಮು ಮತ್ತು ಕಾಶ್ಮೀರ:  ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ್ ಜಿಲ್ಲೆಯಲ್ಲಿ ಶನಿವಾರ ಸೇನಾ ಟ್ರಕ್ ನಿಯಂತ್ರಣ ಕಳೆದುಕೊಂಡು ಬೆಟ್ಟದಿಂದ ಉರುಳಿದ ಪರಿಣಾಮ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಇತರ ಐದು ಮಂದಿ ಗಾಯಗೊಂಡಿದ್ದಾರೆ. ಜಿಲ್ಲೆಯ ಸದರ್ ಕೂಟ್ ಪಾಯೆನ್ ಪ್ರದೇಶದ ಬಳಿ ತೀಕ್ಷ್ಣವಾದ ತಿರುವು ಪಡೆಯಲು ಪ್ರಯತ್ನಿಸುತ್ತಿದ್ದಾಗ ಚಾಲಕ ಟ್ರಕ್ ನಿಯಂತ್ರಣ ಕಳೆದುಕೊಂಡಾಗ ಈ ಅಪಘಾತ ಸಂಭವಿಸಿದೆ. ಕೆಲವು ಸೈನಿಕರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ನಂತರ ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.  ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸೇನಾ ವಾಹನವನ್ನು ಒಳಗೊಂಡ ಅಪಘಾತ ಸಂಭವಿಸುತ್ತಿರುವುದು ಇದೇ ಮೊದಲಲ್ಲ. ಡಿಸೆಂಬರ್ 24, 2024 ರಂದು ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ನಿಯಂತ್ರಣ ತಪ್ಪಿ 350 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಐವರು ಸೈನಿಕರು ಸಾವನ್ನಪ್ಪಿದ್ದರು ಮತ್ತು ಇತರ ಐದು ಮಂದಿ ಗಾಯಗೊಂಡಿದ್ದರು. ಈ…

Read More

ಕಲಬುರ್ಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನ್ಯಾಯ ಒದಗಿಸುವಂತೆ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮಗೆ ಆಗ್ರಹಿಸಿ ಬಿಜೆಪಿಯಿಂದ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೂ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಯಿತು. ಇಂತಹ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯ ಬಳಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಪರಿಷತ್ ಸದಸ್ಯ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರೆ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಆ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಹೀಗೆ ಯತ್ನಿಸಿದಂತ ಪ್ರತಿಭಟನಾಕಾರರನ್ನು ಡಿಸಿ ಕಚೇರಿ ಬಳಿಯಲ್ಲಿ ಪೊಲೀಸರು ವಶಕ್ಕೆ ಪಡೆದರು. ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್ ಸೇರಿದಂತೆ ಇತರೆ ಬಿಜೆಪಿ ಮುಖಂಡರನ್ನು ಸಾರಿಗೆ ಬಸ್ಸುಗಳಲ್ಲಿ ವಶಕ್ಕೆ ಪಡೆದು, ತುಂಬಿಸಿಕೊಂಡು ಕರೆದೊಯ್ದರು. https://kannadanewsnow.com/kannada/ii-pu-exam-2025-sample-question-paper-released-heres-how-to-download-it/ https://kannadanewsnow.com/kannada/indias-renowned-physicist-rajagopal-chidambaram-passes-away-rajagopala-chidambaram/

Read More

ಬೆಂಗಳೂರು: 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪದವಿ ಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ https://dpue-exam.karnataka.gov.in/ModelQp2025/frmkmpdamodelpapers ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆ ಪತ್ರಿಕೆಗಳ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿತ್ತು. ಈ ಕಾರಣದಿಂದಾಗಿ 3 ಗಂಟೆ 15 ನಿಮಿಷ ಕಾಲಾವಕಾಶ ನೀಡಲಾಗುತ್ತಿತ್ತು. ಆದರೇ ಈಗ 70 ರಿಂದ 80 ಅಂಕಗಳ ಪ್ರಶ್ನೆ ಪತ್ರಿಕೆಗೆ ಉತ್ತರಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಅವಧಿಯನ್ನು 3 ಗಂಟೆಗೆ ಮಿತಿಗೊಳಿಸಲಾಗಿದೆ. ಈ ಕಾಲವಾಶದಲ್ಲಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿ ಕೊಳ್ಳೋದಕ್ಕೆ 15 ನಿಮಿಷ ನೀಡಿದ್ದರೇ, ಪ್ರಶ್ನೆಗಳಿಗೆ ಲಿಖಿತ ಉತ್ತರ…

Read More

ಹಾಸನ: ಜಿಲ್ಲೆಯಲ್ಲಿ ಕುಡಿದ ನಶೆಯಲ್ಲಿ ತಂದೆಯೊಂದಿಗೆ ಜಗಳವಾಡಿದಂತ ಪುತ್ರನೊಬ್ಬ, ಅದೇ ನಶೆಯಲ್ಲಿ ತಂದೆಯನ್ನೇ ಕೊಲೆಗೈದಿರುವು ಘಟನೆ ನಡೆದಿದೆ. ಕೊಲೆಗೈದ ಬಳಿಕ ಹೃದಯಾಘಾತವಾಗಿದೆ ಅಂತ ಹೇಳಿ, ಆಸ್ಪತ್ರೆಗೆ ಕೊಂಡೊಯ್ದು, ಆ ಬಳಿಕ ಅಂತ್ಯಸಂಸ್ಕಾರಕ್ಕೆ ಶವವನ್ನು ಕೊಂಡೊಯ್ದ ಸಂದರ್ಭದಲ್ಲೇ ಪುತ್ರನ ತಾಯಿ ದೂರು ನೀಡಿದ್ದಾರೆ. ಈ ಬಳಿಕ ಕೊಲೆಯ ನಾಟಕ ಬಯಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಕುಡಿದ ನಶೆಯಲ್ಲಿ ದಿನೇಶ್ ಹಾಗೂ ಆತನ ತಂದೆ ಶಶಿಧರ್(58) ಎಂಬುವರ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ತಂದೆ ಶಶಿಧರ್ ನನ್ನು ಪುತ್ರ ದಿನೇಶ್ ಕೊಲೆಗೈದಿದ್ದಾನೆ. ಈ ಘಟನೆಯನ್ನು ಕಣ್ಣೆದುರಿಗೆ ನೋಡಿದಂತ ಆತನ ತಾಯಿ ಮನೆಯಿಂದ ಸಹೋದರನ ಮನೆಗೆ ಹೋಗಿ ತಿಳಿಸಿದ್ದಾಳೆ. ಇತ್ತ ದಿನೇಶ್ ತಂದೆಯನ್ನು ಕೊಲೆಗೈದ ಬಳಿಕ ಹೃದಯಾಘಾತವಾಗಿದೆ ಅಂತ ನಾಟಕ ಮಾಡಿ, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಫಲಿಸಲಿಲ್ಲ. ಸಾವನ್ನಪ್ಪಿದ್ದಾರೆ ಅಂತ ಊರಿಗೆ ತಂದು ಶವಸಂಸ್ಕಾರಕ್ಕೆ ರೆಡಿ ಮಾಡಿದ್ದಾನೆ. ಆದರೇ ಶಶಿಧರ್ ಪತ್ನಿ ಅರೇಹಳ್ಳಿ ಠಾಣೆಗೆ ಸಹೋದರನ ಜೊತೆಗೆ ತೆರಳಿ,…

Read More

ಬೆಂಗಳೂರು: ರಾಜ್ಯ ಅಬಕಾರಿ ಇಲಾಖೆಯಿಂದ ರಾಜ್ಯಾಧ್ಯಂತ ಸಿಎಲ್-7 ಮದ್ಯದಂಗಡಿ ತೆರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನೀವು ಮದ್ಯದಂಗಡಿ ತೆರೆಯೋದಕ್ಕೆ ಇಚ್ಚಿಸಿದ್ದರೇ ಈ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಅಬಕಾರಿ ಇಲಾಖೆಯು ಮಾಹಿತಿ ಹಂಚಿಕೊಂಡಿದ್ದು, ಹೊಸದಾಗಿ ಸಿಎಲ್-7 ಸನ್ನದು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅರ್ಜಿದಾರರು ಪಾಲಿಸಬೇಕಾದ ನಿಯಮಗಳು ಹಾಗೂ ಸಲ್ಲಿಸಬೇಕಾದ ದಾಖಲಾತಿಗಳ ವಿವರವನ್ನು ನೀಡಿದೆ. ಹೀಗಿದೆ ಹೊಸದಾಗಿ ಸಿಎಲ್ -7 ಸನ್ನದು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅರ್ಜಿದಾರರು ಪಾಲಿಸಬೇಕಾದ ನಿಯಮಗಳು ಹಾಗು ಸಲ್ಲಿಸಬೇಕಾದ ದಾಖಲೆಗಳ ವಿವರ ಉದ್ದೇಶಿತ ಸನ್ನದು.ಕಟ್ಟಡವು ಸಂಬಂಧಪಟ್ಟ ಪ್ರಾಧಿಕಾರದಿಂದ ವಾಣಿಜ್ಯ ಉದ್ದೇಶಕ್ಕಾಗಿ ಅನುಮತಿ ಪಡೆದಿರುವ ಪತ್ರ ಉದ್ದೇಶಿತ ಸನ್ನದು ಕಟ್ಟಡದಲ್ಲಿ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿರುವುದು ಕಡ್ಡಾಯ. ಉದ್ದೇಶಿತ ಸನ್ನದು ಕಟ್ಟಡದಲ್ಲಿ ಅಗ್ನಿ ಶಾಮಕ ಸೌಲಭ್ಯವನ್ನು ಒದಗಿಸಿರುವ ಒಗೆ ಬೈಕ್ ಸೇಫ್ಟಿ ಪ್ರಮಾಣ ಪತ್ರ ಸಲ್ಲಿಸುವುದು. ಸರ್ಕಾರದ ಆದೇಶ ಸಂಖ್ಯೆ: ಒಡಬಲ್ಲ ಆಗ ಎಲೇಗಳೂರು, ಓ 10-1998 ರಸ್ತೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆರಿ ಹಾಗೂ ರಾಜ್ಯ ಹೆದ್ದಾರಿಯ…

Read More

ಚಿತ್ರದುರ್ಗ: ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ದೇವಸ್ಥಾನದ ಪೂಜೆ ವಿಚಾರಕ್ಕಾಗಿ ಮಾರಾಮಾರಿ ನಡೆದಿದೆ. ಕೋಲು, ದೊಣ್ಣೆಯಿಂದ ಬಡಿದಾಟವಾಗಿದ್ದು ಈ ಗಲಾಟೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಂಚಿಪುರ ವ್ಯಾಪ್ತಿಯ ಅಜ್ಜಯ್ಯನಹಟ್ಟಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಅಜ್ಜಯ್ಯನಹಟ್ಟಿಯಲ್ಲಿರುವಂತ ವೀರ ಮಾರಣ್ಣ ದೇವಾಲಯದ ಪೂಜೆ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಅಜ್ಜಯ್ಯನಹಟ್ಟಿಯ ಎರಡು ಗುಂಪುಗಳ ನಡುವೆ ಕೋಲು, ದೊಣ್ಣೆಯಿಂದ ಬಡಿದಾಡಿಕೊಂಡ ಪರಿಣಾಮ 6 ಜನರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶ್ರೀರಾಂಪುರ, ಹೊಸದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅಜ್ಜಯ್ಯನಹಟ್ಟಿಯಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/fir-filed-against-minister-priyank-kharges-close-aide/ https://kannadanewsnow.com/kannada/breaking-ramanagara-man-killed-thrown-into-well-during-new-year-party/

Read More

ಬೆಂಗಳೂರು: ರಾಜ್ಯದಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದ್ದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಕುಮಾರಕೃಪ ವಸತಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಡ್ಡಾಜೀ ಅವರು ಒಂದು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು. ನಾವು ಸಹಜವಾಗಿಯೇ ಮಾತುಕತೆ ನಡೆಸಿದ್ದೇವೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ ಎಂದು ವಿವರ ನೀಡಿದರು. ಸಂಘಟನೆಯ ಬಗ್ಗೆ ಕೇಳಿದ್ದು, ಎಲ್ಲವನ್ನೂ ಹೇಳಿದ್ದೇವೆ. ವಿರೋಧ ಪಕ್ಷ ನಾಯಕರಾಗಿ ಹೇಗೆ ಕೆಲಸ ಮಾಡ್ತಿದ್ದೀರಿ ಎಂದು ಕೇಳಿದ್ದು, ನಾವು ಮಾಡಿರುವ ಕೆಲಸಗಳ ಬಗ್ಗೆ, ಎಲ್ಲಾ ಒಟ್ಟಾಗಿ ಕೆಲಸ ಮಾಡ್ತಿದ್ದೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು. ನಾನು, ವಿಪಕ್ಷ ನಾಯಕ ಆರ್.ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಎನ್. ರವಿಕುಮಾರ್, ಲೇಹರ್ ಸಿಂಗ್, ತೇಜಸ್ವಿಸೂರ್ಯ, ಎನ್. ಮುನಿರತ್ನ, ಸಿದ್ದು ಪಾಟೀಲ್ ಸೇರಿದಂತೆ ಅನೇಕ ನಾಯಕರು ಭೇಟಿ ಮಾಡಿದ್ದೇವೆ. ಪ್ರತ್ಯೇಕವಾಗಿ…

Read More