Author: kannadanewsnow09

ಬೆಂಗಳೂರು: ನಗರದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ 22-02-2025ರಂದು ಬೆಂಗಳೂರಿನ ವಿದ್ಯಾಮಾನ್ಯನಗರದಲ್ಲಿ ಉಚಿತ ಆರೋಗ್ಯ ತಪಾಸಣೆ, ವೈದ್ಯಕೀಯ ಶಿಬಿರ ಮತ್ತು ಔಷಧ ವಿತರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕುರಿತಂತೆ ಸಮೃದ್ಧಿ ಸೇವಾ ಚಾರಿಟೇಬಲ್ ಫೌಂಡೇಶನ್ (ರಿ.)ಯ ಲಕ್ಷ್ಮಿಕಾಂತ್ ಅವರು ಮಾಹಿತಿ ಹಂಚಿಕೊಂಡಿದ್ದು, ಫೆಬ್ರವರಿ 22ರಂದು ಉಚಿತ ಆರೋಗ್ಯ ತಪಾಸಣೆ ವೈದ್ಯಕೀಯ ಶಿಬಿರ & ಔಷದಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಯಾವೆಲ್ಲ ಉಚಿತ ಆರೋಗ್ಯ ತಪಾಸಣೆ.? 1 ಕಣ್ಣಿನ ತಪಾಸಣೆ 2 ದಂತ ತಪಾಸಣೆ ಮತ್ತು ಚಿಕಿತ್ಸೆ 3 ಕನ್ಸಲ್ಟಿoಗ್ ಮತ್ತು ಮೂಲಭೂತ ದೇಹ ತಪಾಸಣೆ ಎಷ್ಟು ಹೊತ್ತಿಂದ ಎಷ್ಟು ಹೊತ್ತಿನವರೆಗೆ.? ಶನಿವಾರ 22 ಫ್ರೆಬ್ರವರಿ 2025 ಬೆಳಗ್ಗೆ 9.30 ರಿಂದ ಸಂಜೆ 5.00ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಬೆಂಗಳೂರಿನ ಎಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ.? 123 ಮಂಜುನಾಥ ದೇವಸ್ಥಾನ ಎದುರು ಅಂದ್ರಹಳ್ಳಿ ಮುಖ್ಯರಸ್ತೆ ಕಾಳಿಕಾ ನಗರ. ವಿದ್ಯಾಮಾನ್ಯನಗರ ಬೆಂಗಳೂರು 560058. ಈ ಬಗ್ಗೆ ಹೆಚ್ಚಿನ…

Read More

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ ನೀರಾವರಿ ಫೀಡರ್ ಗಳ ಮೂಲಕ ತೋಟದ ಮನೆಗಳಿಗೆ ಗೃಹೊಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿ ಯನ್ನು ಗಮನದಲ್ಲಿರಿಸಿಕೊಂಡು ಸಿಂಗಲ್ ಫೇಸ್ ವಿದ್ಯುತ್ ಅನ್ನು ಸಂಜೆ 6 ರಿಂದ ಬೆಳಗ್ಗೆ 6ರವರೆಗೆ (ಮೂರು ಗಂಟೆಗಳ ಮೂರು ಫೇಸ್ ವಿದ್ಯುತ್ ಹೊರತಾಗಿ ) ಫೀಡರ್ ಗಳಿಗೆ ಓಪನ್ ಡೆಲ್ಟಾ ಮೂಲಕ ನೀಡಲಾಗುವುದು. ಆದರೆ ರಾತ್ರಿ ವೇಳೆ ಕೆಲವರು ಸಿಂಗಲ್ ಫೇಸ್ ಕೃಷಿ ಪಂಪ್ ಸೆಟ್ ಗಳನ್ನು ನೀರಾವರಿ ಫೀಡರ್ ಗಳ ಮೂಲಕ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ಈ ಸಮಯದಲ್ಲಿ…

Read More

ನವದೆಹಲಿ: ಆಡಳಿತಾರೂಡ ಎಎಪಿ ಮೂಲೆ ಕಚ್ಚಿ, ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ದೆಹಲಿಯ ಮುಖ್ಯಮಂತ್ರಿ ಹೆಸರು ಘೋಷಣೆ ಸಂಬಂಧ ನಾಳೆ ಮಹತ್ವದ ಸಭೆ ನಡೆಯಲಿದೆ. ಆ ಬಳಿಕ ಫೆಬ್ರಬರಿ.18ರಂದು ದೆಹಲಿಯ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಹೌದು. ನಾಳೆ ದೆಹಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಬಿಜೆಪಿಯ ಹಿರಿಯ ನಾಯಕರಿಂದ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ದೆಹಲಿಯ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸಲಾಗುತ್ತಿದೆ. ಆ ಬಳಿಕ ಘೋಷಣೆ ಕೂಡ ಮಾಡಲಾಗುತ್ತದೆ. ಇನ್ನೂ ಈ ಘೋಷಣೆಯ ಬಳಿಕ, ಫೆಬ್ರವರಿ 18 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನೂತನ ದೆಹಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/delhi-stampede-no-platform-change-no-train-cancellation-says-indian-railways/ https://kannadanewsnow.com/kannada/another-diabolical-act-in-the-state-unidentified-woman-raped-brutally-murdered/

Read More

ಹಾಸನ: ನಗರದ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಿರ್ಮಾಣ ಹಂತದ ಕಟ್ಟದಲ್ಲೇ ಅಪರಿಚಿತ ಮಹಿಳ ಮೇಲೆ ಅತ್ಯಾಚಾರ ಎಸಗಿರುವಂತ ಕೀಚಕರು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಫೆ.13ರಂದು ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ರೈಲು ನಿಲ್ದಾಣದ ಸಮೀಪದ ರೈಲ್ವೆ ಇಲಾಖೆಯ ನಿರ್ಮಾಣ ಹಂತದ ಕಟ್ಟಡದಲ್ಲೇ ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ರೈಲ್ವೆ ಎಸ್ಪಿ ಸೌಮ್ಯಲತಾ ಅವರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದಂತ ಮಹಿಳೆಗೆ 40 ವರ್ಷವಿರಬಹುದು ಎಂಬುದಾಗಿ ಅಂದಾಜಿಸಲಾಗಿದೆ. ಕೊಲೆಯ ಆರೋಪಿಗಳ ಬಗ್ಗೆ ತನಿಖೆಯ ನಂತ್ರ ಮಾಹಿತಿ ಹೊರಬೀಳಬೇಕಿದೆ. https://kannadanewsnow.com/kannada/delhi-stampede-no-platform-change-no-train-cancellation-says-indian-railways/ https://kannadanewsnow.com/kannada/will-get-reply-on-karnataka-bjp-state-presidents-post-by-feb-20-by-vijayendra/

Read More

ನವದೆಹಲಿ: ಶನಿವಾರ ಸಂಜೆ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 18 ಪ್ರಯಾಣಿಕರು ಸಾವನ್ನಪ್ಪಿದ್ದು, ಡಜನ್ಗಟ್ಟಲೆ ಜನರು ಗಾಯಗೊಂಡಾಗ ಯಾವುದೇ ರೈಲುಗಳನ್ನು ರದ್ದುಗೊಳಿಸಲಾಗಿಲ್ಲ ಅಥವಾ ಯಾವುದೇ ಪ್ಲಾಟ್ಫಾರ್ಮ್ ಬದಲಾವಣೆಯನ್ನು ಘೋಷಿಸಲಾಗಿಲ್ಲ ಎಂದು ಭಾರತೀಯ ರೈಲ್ವೆ ಭಾನುವಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್ಒ) ಹಿಮಾಂಶು ಶೇಖರ್ ಉಪಾಧ್ಯಾಯ, ಪ್ರಯಾಗ್ರಾಜ್ ಎಕ್ಸ್ಪ್ರೆಸ್ ಹತ್ತಲು ಪ್ಲಾಟ್ಫಾರ್ಮ್ 14 ರಲ್ಲಿ ಅಭೂತಪೂರ್ವ ಸಂಖ್ಯೆಯ ಮಹಾ ಕುಂಭ ಭಕ್ತರು ಜಮಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಿದರು. “ಯಾವುದೇ ನಿಗದಿತ ರೈಲಿನ ಪ್ಲಾಟ್ಫಾರ್ಮ್ ಅನ್ನು ಬದಲಾಯಿಸಲಾಗಿಲ್ಲ ಮತ್ತು ಯಾವುದೇ ರೈಲನ್ನು ರದ್ದುಗೊಳಿಸಲಾಗಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ವಾಸ್ತವವಾಗಿ, ದಟ್ಟಣೆಯನ್ನು ನಿರ್ವಹಿಸಲು ಸಂಜೆ ಐದರಿಂದ ಆರು ವಿಶೇಷ ರೈಲುಗಳನ್ನು ಪರಿಚಯಿಸಲಾಯಿತು” ಎಂದು ಉಪಾಧ್ಯಾಯ ಹೇಳಿದರು. “ನವದೆಹಲಿ ರೈಲ್ವೆ ನಿಲ್ದಾಣವು ಅಭೂತಪೂರ್ವ ಸಂಖ್ಯೆಯ ಯಾತ್ರಾರ್ಥಿಗಳನ್ನು ನಿರ್ವಹಿಸುತ್ತಿದೆ, ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಮತ್ತು ಅಲ್ಲಿಂದ 350 ರಿಂದ 400…

Read More

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯವೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನುಡಿದರು. ಕೇಂದ್ರದ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ; ಏನಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. ಯತ್ನಾಳ್‍ರಿಗೆ ನೋಟಿಸ್ ಕೊಡಲು ತಾಕತ್ತಿಲ್ಲ ಎಂಬ ರಾಜಣ್ಣನವರ ಹೇಳಿಕೆ ಕುರಿತು ಗಮನ ಸೆಳೆದಾಗ, ರಾಜಣ್ಣನವರು ನಮ್ಮ ಪಕ್ಷದವರೇ? ಅವರು ಕಾಂಗ್ರೆಸ್ ಪಕ್ಷದವರು. ಅವರ…

Read More

ನವದೆಹಲಿ: ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ 2025ರ ( TATA Indian Premier League 2025- IPL) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India – BCCI) ಪ್ರಕಟಿಸಿದೆ. ಪ್ರತಿಷ್ಠಿತ ಪಂದ್ಯಾವಳಿಯ 18 ನೇ ಆವೃತ್ತಿಯು ಮಾರ್ಚ್ 22, 2025 ರಂದು ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯವು ಮೇ 25, 2025 ರಂದು ನಡೆಯಲಿದೆ. ಒಟ್ಟು 13 ಸ್ಥಳಗಳಲ್ಲಿ 74 ಪಂದ್ಯಗಳು ನಡೆಯಲಿದ್ದು, 12 ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಮಧ್ಯಾಹ್ನದ ಪಂದ್ಯಗಳು ಮಧ್ಯಾಹ್ನ 03.30 ಕ್ಕೆ ಪ್ರಾರಂಭವಾಗಲಿದ್ದು, ಸಂಜೆ ಪಂದ್ಯಗಳು ಸಂಜೆ 07.30 ಕ್ಕೆ ಪ್ರಾರಂಭವಾಗಲಿವೆ. ಮಾರ್ಚ್ 22, 2025 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders -KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru – RCB) ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 23, 2025 ರಂದು ಹೈದರಾಬಾದ್ನಲ್ಲಿ…

Read More

ಬೆಂಗಳೂರು: ದಿನಾಂಕ 18.02.2025 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿOದ ಮದ್ಯಾಹ್ನ 01:00 ಗಂಟೆಯವರೆಗೆ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ ಟೆಂಟ್, ಜೆಜೆಆರ್ ನಗರ, ಹರ‍್ಗೆ ಆಸ್ಪತ್ರೆ, ಸಂಗಮ್ ರ‍್ಕಲ್, ಓಬಳೇಶ್ ಕಾಲೋನಿ, ವಿಎಸ್ ಗರ‍್ಡನ್, ರಾಯಾಪುರ, ಬಿನ್ನಿ ಪೇಟ್, ಪಾದರಾಯನಪುರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಮನ ಗರ‍್ಡನ್, ರ‍್ಫತ್ ನಗರ, ರಂಗನಾಥ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಪರ‍್ಕ್ ವೆಸ್ಟ್ ಅಪರ‍್ಟ್‌ಮೆಂಟ್ ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನದ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ,…

Read More

ನವದೆಹಲಿ: 27 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ನಾಳೆಯ ಸೋಮವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ತನ್ನ ಮುಖ್ಯಮಂತ್ರಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರದ ನೇತೃತ್ವ ವಹಿಸುವ ನಾಯಕನನ್ನು ಅಂತಿಮಗೊಳಿಸಲು ದೆಹಲಿಯಲ್ಲಿ ಉನ್ನತ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಆದಾಗ್ಯೂ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಸೇರಿದಂತೆ ಹಲವಾರು ಹೆಸರುಗಳು ಊಹಾಪೋಹಗಳಾಗಿದ್ದರೂ ಪಕ್ಷದ ನಾಯಕತ್ವವು ಮೌನವಹಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಿಂದ ಹಿಂದಿರುಗಿದ ನಂತರ ದೆಹಲಿಯಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವುದಾಗಿ ಪಕ್ಷ ಘೋಷಿಸಿತ್ತು. ಹೀಗಾಗಿ ನಾಳೆ ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಅಂತ ಹೆಸರನ್ನು ಅಂತಿಮಗೊಳಿಸೋ ಸಾಧ್ಯತೆ ಇದೆ. https://kannadanewsnow.com/kannada/ipl-2025-schedule-announced-kkr-vs-rcb-on-march-22-final-on-may-25/ https://kannadanewsnow.com/kannada/shocking-young-girls-fight-for-a-young-man-by-tearing-their-clothes-in-the-middle-of-the-road-video-viral/

Read More

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ಆಸ್ತಿಯನ್ನು ತಮಿಳುನಾಡು ಸರ್ಕಾರ ಅಧಿಕೃತವಾಗಿ ಸ್ವಾಧೀನಪಡಿಸಿಕೊಂಡಿದೆ. ಇದರಲ್ಲಿ 27 ಕೆಜಿ ಚಿನ್ನದ ಆಭರಣಗಳು, 1,116 ಕೆಜಿ ಬೆಳ್ಳಿ ಮತ್ತು 1,526 ಎಕರೆ ಭೂಮಿಗೆ ಸಂಬಂಧಿಸಿದ ಮಾಲೀಕತ್ವದ ದಾಖಲೆಗಳು ಸೇರಿವೆ. ಈ ಹಿಂದೆ ಕರ್ನಾಟಕ ವಿಧಾನಸೌಧದ ಖಜಾನೆಯಲ್ಲಿ ಸಂಗ್ರಹವಾಗಿದ್ದ ಈ ಆಸ್ತಿಯನ್ನು ಬೆಂಗಳೂರು ನ್ಯಾಯಾಲಯದ ಆದೇಶದ ಮೇರೆಗೆ ಹಸ್ತಾಂತರಿಸಲಾಗಿದೆ. ನ್ಯಾಯಾಲಯದ ಆದೇಶದ ನಂತರ, ಬಿಗಿ ಭದ್ರತೆಯ ನಡುವೆ ಶುಕ್ರವಾರ ಔಪಚಾರಿಕ ವರ್ಗಾವಣೆ ಪ್ರಕ್ರಿಯೆಗಳನ್ನು ನಡೆಸಲಾಯಿತು. 20-22 ಕೋಟಿ ರೂಪಾಯಿ ಮೌಲ್ಯದ ಈ ನಿಧಿಯನ್ನು ಆರು ಸೀಲ್ ಮಾಡಿದ ಪೆಟ್ಟಿಗೆಗಳಲ್ಲಿ ಚೆನ್ನೈಗೆ ಸಾಗಿಸಲಾಗಿದೆ. ಆರು ಪೊಲೀಸ್ ವಾಹನಗಳಲ್ಲಿ ಸುಮಾರು 40 ಪೊಲೀಸ್ ಅಧಿಕಾರಿಗಳು ಬೆಂಗಾವಲು ಪಡೆಯಲ್ಲಿ ಕೊಂಡೊಯ್ಯಲಾಗಿದೆ. ಮಧ್ಯದಲ್ಲಿ “ಚಿನ್ನದ ಟ್ರಕ್” ಇತ್ತು. 20 ವರ್ಷಗಳ ನಂತರ ತಮಿಳುನಾಡು ಸರ್ಕಾರದ ವಶದಲ್ಲಿರುವ ಆಸ್ತಿಗಳೊಂದಿಗೆ, ರಾಜ್ಯ ಸರ್ಕಾರವು ಚಿನ್ನವನ್ನು ಆರ್ಬಿಐನಲ್ಲಿ ಠೇವಣಿ ಇಡಬಹುದು ಅಥವಾ ಆಭರಣಗಳ ಮೌಲ್ಯಮಾಪನದ ನಂತರ ಸಾರ್ವಜನಿಕ ಹರಾಜು…

Read More