Subscribe to Updates
Get the latest creative news from FooBar about art, design and business.
Author: kannadanewsnow09
ಮಹಾರಾಷ್ಟ್ರ: ನಾಗ್ಪುರದ ಕಟೋಲ್ ತಹಸಿಲ್ನ ಕೊತ್ವಾಲ್ಬುಡಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ನಾಗಪುರದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಉಂಟಾಗಿದೆ. ಈ ದುರ್ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/PTI_News/status/1891055191081759163 https://kannadanewsnow.com/kannada/former-mauritius-pm-jugnauth-arrested-in-money-laundering-case/ https://kannadanewsnow.com/kannada/shocking-young-girls-fight-for-a-young-man-by-tearing-their-clothes-in-the-middle-of-the-road-video-viral/
ಮಾರಿಷನ್: ಮನಿ ಲಾಂಡರಿಂಗ್ ಆರೋಪದ ಮೇಲೆ ಮಾರಿಷಸ್ ಮಾಜಿ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್ ಅವರನ್ನು ಬಂಧಿಸಲಾಗಿದ್ದು, ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಜುಗ್ನೌತ್ ಈ ಆರೋಪವನ್ನು ನಿರಾಕರಿಸಿದ್ದಾರೆ ಎಂದು ವಕೀಲ ರವೂಫ್ ಗುಲ್ಬುಲ್ ಡಿಫಿಮೀಡಿಯಾ.ಇನ್ಫೋದ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹಣಕಾಸು ಅಪರಾಧಗಳ ಆಯೋಗದ ತನಿಖೆಯ ಭಾಗವಾಗಿ ಮಾಜಿ ಪ್ರಧಾನಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ವೆಬ್ಸೈಟ್ ವರದಿ ಮಾಡಿದೆ. ನವೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಹೊಸ ಸರ್ಕಾರ ಭರ್ಜರಿ ಗೆಲುವು ಸಾಧಿಸಿದ ನಂತರ ಬಂಧಿಸಲ್ಪಟ್ಟ ಮತ್ತು ಬಂಧನಕ್ಕೊಳಗಾದ ಹಿಂದಿನ ಆಡಳಿತದ ಎರಡನೇ ಉನ್ನತ ಸದಸ್ಯರಾಗಿದ್ದಾರೆ. ಬ್ಯಾಂಕ್ ಆಫ್ ಮಾರಿಷಸ್ನ ಮಾಜಿ ಗವರ್ನರ್ ಹರ್ವೇಶ್ ಸೀಗೋಲಂ ಅವರನ್ನು ಕಳೆದ ತಿಂಗಳು ದುಬೈನಿಂದ ಹಿಂದೂ ಮಹಾಸಾಗರ ದ್ವೀಪ ರಾಷ್ಟ್ರಕ್ಕೆ ಹಿಂದಿರುಗಿದಾಗ ಬಂಧಿಸಲಾಗಿತ್ತು. ವಂಚನೆಯ ಪಿತೂರಿಯ ತಾತ್ಕಾಲಿಕ ಆರೋಪವನ್ನು ನ್ಯಾಯಾಲಯದಲ್ಲಿ ದಾಖಲಿಸಿದ ನಂತರ ಅವರಿಗೆ ಜಾಮೀನು ನೀಡಲಾಯಿತು. ಪ್ರಧಾನಿ ನವೀನ್ಚಂದ್ರ ರಾಮ್ಗೂಲಮ್ ನೇತೃತ್ವದ ಸರ್ಕಾರವು ಜುಗ್ನೌತ್ ಆಡಳಿತವು…
ಬೆಂಗಳೂರು : “ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು” ಎಂದರು. “ಈ ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು ವಿಭಾಗವಾರು ಸಮಿತಿ ರಚಿಸಲಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು. ಎಲ್ಲೆಲ್ಲಿ ನಾಯಕರ ಮಧ್ಯೆ ಹೊಂದಾಣಿಕೆ ಸಾಧಿಸಿ, 50% ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು” ಎಂದು…
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಪತಿಯೊಬ್ಬ ತನ್ನ ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಹತ್ಯೆಗೈದಿದ್ದಾರೆ. ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಚೌಡದೇನಹಳ್ಳಿಯಲ್ಲಿ ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಪಾಪಿ ಪತಿಯೊಬ್ಬ ಹತ್ಯೆಗೈದಿರುವಂತ ಘಟನೆ ನಡೆದಿದೆ. ಪತಿ-ಪತ್ನಿಯರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಉಂಟಾಗಿತ್ತು. ಈ ಜಗಳ ತಾರಕಕ್ಕೆ ಏರಿದಾಗ ಪತಿ, ಪತ್ನಿಯನ್ನು ಕಟ್ಟಡದ ಮೇಲಿನಿಂದ ಕೆಳಗೆ ತಳ್ಳಿದ್ದಾನೆ. ಈ ಘಟನೆಯಲ್ಲಿ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಸರ್ಜಾಪುರ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/two-arrested-in-murder-case-after-deporting-us-to-amritsar/ https://kannadanewsnow.com/kannada/shocking-young-girls-fight-for-a-young-man-by-tearing-their-clothes-in-the-middle-of-the-road-video-viral/
ಪಟಿಯಾಲ: ಶನಿವಾರ ರಾತ್ರಿ ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿದ ಸಿ -17 ವಿಮಾನದಲ್ಲಿ ಯುಎಸ್ ಗಡೀಪಾರು ಮಾಡಿದ 116 ಜನರಲ್ಲಿ ಪಟಿಯಾಲ ಜಿಲ್ಲೆಯ ರಾಜ್ಪುರದ ಇಬ್ಬರು ಯುವಕರನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಗಳಾದ ಸಂದೀಪ್ ಸಿಂಗ್ ಅಲಿಯಾಸ್ ಸನ್ನಿ ಮತ್ತು ಪ್ರದೀಪ್ ಸಿಂಗ್ 2023 ರಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ನಾನಕ್ ಸಿಂಗ್ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂಧನವನ್ನು ದೃಢಪಡಿಸಿದರು. ಸಂದೀಪ್ ಮತ್ತು ಇತರ ನಾಲ್ವರ ವಿರುದ್ಧ 2023 ರ ಜೂನ್ನಲ್ಲಿ ರಾಜ್ಪುರದಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ಸಮಯದಲ್ಲಿ, ಸಂದೀಪ್ ಅವರ ಇನ್ನೊಬ್ಬ ಸಹಚರ ಪ್ರದೀಪ್ ಹೆಸರನ್ನು ಎಫ್ಐಆರ್ಗೆ ಸೇರಿಸಲಾಗಿದೆ. ಇವರಿಬ್ಬರನ್ನು ಬಂಧಿಸಲು ರಾಜ್ಪುರ ಪೊಲೀಸ್ ಠಾಣೆಯ ಎಸ್ಎಚ್ಒ ನೇತೃತ್ವದ ತಂಡವನ್ನು ಶನಿವಾರ ಅಮೃತಸರ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗಿದೆ. ಪಂಜಾಬ್ನ 65 ಮಂದಿ ಸೇರಿದಂತೆ 116 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನ…
ನವದೆಹಲಿ: ಭಾರತದ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಪಾದದ ಗಾಯದಿಂದಾಗಿ ಮುಂಬರುವ ವಿದರ್ಭ ವಿರುದ್ಧದ ರಣಜಿ ಟ್ರೋಫಿ ಸೆಮಿಫೈನಲ್ನಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ. ಭಾರತದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಅವರನ್ನು ಕೈಬಿಟ್ಟ ಕೆಲವೇ ದಿನಗಳಲ್ಲಿ ಈ ಹಿನ್ನಡೆಯಾಗಿದ್ದು, ಇದು ಯುವ ಕ್ರಿಕೆಟಿಗನಿಗೆ ಡಬಲ್ ಹೊಡೆತವಾಗಿದೆ. ವರದಿಗಳ ಪ್ರಕಾರ, ವಾರಾಂತ್ಯದಲ್ಲಿ ತರಬೇತಿ ಅವಧಿಯಲ್ಲಿ ಜೈಸ್ವಾಲ್ ಅವರ ಬಲ ಪಾದಕ್ಕೆ ಗಾಯವಾಗಿದ್ದು, ಫೆಬ್ರವರಿ 16 ರಂದು ನಿಗದಿಯಾಗಿರುವ ನಿರ್ಣಾಯಕ ನಾಕೌಟ್ ಪಂದ್ಯಕ್ಕೆ ಅವರು ಅನರ್ಹರಾಗಿದ್ದಾರೆ. ಗಾಯವು ಅವರನ್ನು ಮುಂಬೈನ ಉನ್ನತ ಮಟ್ಟದ ಪಂದ್ಯದಿಂದ ಹೊರಗಿಡುವುದಲ್ಲದೆ, ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಗುಳಿದ ನಂತರ ತ್ವರಿತ ಪುನರಾಗಮನದ ಅವಕಾಶವನ್ನು ನಿರಾಕರಿಸುತ್ತದೆ. ಭಾರತದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಜೈಸ್ವಾಲ್ ಅವರನ್ನು ಕೈಬಿಟ್ಟಿರುವುದು ಕೊನೆಯ ಕ್ಷಣದ ನಿರ್ಧಾರವಾಗಿದ್ದು, ಅವರ ಬದಲಿಗೆ ಸ್ಪಿನ್ ತಜ್ಞ ವರುಣ್ ಚಕ್ರವರ್ತಿ ಅವರನ್ನು ಕರೆತರಲು ಆಯ್ಕೆದಾರರು ನಿರ್ಧರಿಸಿದ್ದಾರೆ. ನಾಗ್ಪುರದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯ ಆರಂಭಿಕ ಪಂದ್ಯದಲ್ಲಿ ಜೈಸ್ವಾಲ್ ಅವರ ಏಕದಿನ ಚೊಚ್ಚಲ ಪಂದ್ಯವನ್ನು ಅನುಸರಿಸಿ ಈ…
ಹುಬ್ಬಳ್ಳಿ: ನಗರದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನ ನಡೆದಿದೆ. ಹುಬ್ಬಳ್ಳಿಯ ವಿದ್ಯಾನಗರದ ಬಳಿಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸುಜಿತ್(21) ಹಾಗೂ ವಿಕಾಸ್(17) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಅಪಘಾತದ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿರೋದು ಕಂಡು ಬಂದಿದೆ. ಅಂದಹಾಗೇ ಸುಜಿತ್ ಹಾಗೂ ವಿಕಾಸ್ ಅಜ್ಜಿಯ ತಿಥಿ ಕಾರ್ಯ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. https://kannadanewsnow.com/kannada/state-govt-has-recommended-metro-fare-hike-basavaraj-bommai/ https://kannadanewsnow.com/kannada/shocking-young-girls-fight-for-a-young-man-by-tearing-their-clothes-in-the-middle-of-the-road-video-viral/
ಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ…
ಬೆಂಗಳೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ಹಾಗೂ ಹೊಸದಾಗಿ ಸಮಿತಿ ರಚನೆ ಸಂಬಂಧ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸಭೆ ನಡೆಸಿದರು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3 ಜನ ಸದಸ್ಯರುಗಳನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. ದಿನಾಂಕ:15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ ಕೆಳಕಂಡ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಆಯುಕ್ತರು, ಮುಜರಾಯಿ ಇಲಾಖೆ ಅವರು ಅಧ್ಯಕ್ಷರಾಗಿರುತ್ತಾರೆ 1.ದೇವಳದ ಸುತ್ತು ಗೋಪುರ (ಸುತ್ತುಪೌಳಿ) ನಿರ್ಮಾಣ. ಇದನ್ನು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯದ ಕಟ್ಟಡದ ವಿನ್ಯಾಸಕ್ಕೆ ಸರಿ…
ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದು ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುವುದು. ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಶಾಂತಕುಮಾರ್ ಅವರಿಗೆ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/alert-state-workers-beware-if-you-receive-fraudulent-calls-bring-them-to-the-notice-of-the-authorities-immediately/ https://kannadanewsnow.com/kannada/hdk-objects-to-renaming-bengaluru-south-district-dk-shivakumar/